Home Posts tagged V4News (Page 505)

ಪಡುಬಿದ್ರಿ : ಗದ್ದೆಗೆ ಬೆಂಕಿ

ಪಡುಬಿದ್ರಿ ಸೇತುವೆ ಬಳಿ ಗದ್ದೆಗೆ ರಾತ್ರಿ ಬೆಂಕಿ ಬಿದ್ದ ಪರಿಣಾಮ ಬಹಳಷ್ಟು ತಾಳೆ ಮರಗಳು ಬೆಂಕಿಗಾಹುತಿಯಾಗಿದೆ.ಸುಮಾರು ಎರಡು ಗಂಟೆಗಳ ಕಾಲ ಬೆಂಕಿ ಉರಿಯುತ್ತಿದ್ದರೂ ಯಾವುದೇ ಅಗ್ನಿ ಶಾಮಕ ದಳವಾಗಲಿ, ಯಾವುದೇ ಅಧಿಕಾರಿಗಳಾಗಲಿ ಹತ್ತಿರ ಸುಳಿದಿಲ್ಲ. ಹೆದ್ದಾರಿ ಪ್ರಯಾಣಿಕರು ತಮ್ಮ ವಾಹನಗಳನ್ನು ಹೆದ್ದಾರಿಯಲ್ಲಿ ನಿಲ್ಲಿಸಿ ಉರಿಯುತ್ತಿರುವ ದೃಶ್ಯವನ್ನು ವಿಡಿಯೋ

ಕಾಪು ಕ್ಷೇತ್ರ ಪಕ್ಷೇತರ ಅಭ್ಯರ್ಥಿಯಾಗಿ ಅಬ್ದುಲ್ ರಹಿಮಾನ್ ನಾಮಪತ್ರ ಸಲ್ಲಿಕೆ

ಕಾಪು ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಉಚ್ಚಿಲ ಭಾಸ್ಕರ ನಗರ ನಿವಾಸಿ ಅಬ್ದುಲ್ ರಹಿಮಾನ್ ನಾಮಪತ್ರ ಸಲ್ಲಿಸಿದ್ದಾರೆ.ಅಬ್ದುಲ್ ರಹಿಮಾನ್ ಯಾನೇ ಆಸೀಫ್ ಹನಾನ್ 2018 ರ ವಿಧಾನ ಸಭಾ ಚುನಾವಣೆಯಲ್ಲಿ ಎಂಇಪಿ ಪಾರ್ಟಿ ಮೂಲಕ ಚುನಾವಣೆ ಎದುರಿಸಿ 1713 ಮತಗಳನ್ನು ಪಡೆದಿದ್ದರು. ಬಳಿಕ 2019ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಯನ್ನು ಎದುರಿಸಿ 6017 ಮತಗಳನ್ನು ಪಡೆದಿದ್ದರು

ಏ.20ರಂದು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ನಾಮಪತ್ರ ಸಲ್ಲಿಕೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಏ.20 ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಮಾಧ್ಯಮ ಪ್ರಮುಖ್ ಚಂದ್ರಶೇಖರ ರಾವ್ ಬಪ್ಪಳಿಗೆ ತಿಳಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಒಂದು ಅಭೂತಪೂರ್ವ ಕಾರ್ಯಕ್ರಮವಾಗಲಿದ್ದು, ಗ್ರಾಮ ಮಟ್ಟದಿಂದ ಸುಮಾರು 10 ರಿಂದ 15 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳಲಿದ್ದು, ನಾಮಪತ್ರ ಪ್ರಕ್ರಿಯೆಗೆ

ಸುರೇಶ್ ಶೆಟ್ಟಿ ಗುರ್ಮೆಯವರಿಂದ ದೈವಸ್ಥಾನ ಮಂದಿರಗಳ ಭೇಟಿ

ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರು ಕಾಪು ಕ್ಷೇತ್ರದ ವಿವಿಧ ಧಾರ್ಮಿಕ ಕ್ಷೇತ್ರಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.ಪ್ರಮುಖವಾಗಿ ಪಾಂಗಾಳ ಗುಡ್ಡೆ ಧೂಮಾವತಿ ದೈವಸ್ಥಾನ ಹಾಗೂ ಪಡುಬಿದ್ರಿಯ ಭಜನಾ ಮಂದಿರಗಳ ಭೇಟಿ ಹಾಗೂ ಪ್ರಮುಖರನ್ನು ಭೇಟಿ ಮಾಡಿ ಆಶಿರ್ವಾದ ಪಡೆದರು

ಪುತ್ತೂರು: ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಯಾಗಿ ಐವನ್ ಫೆರಾವೋ ನಾಮಪತ್ರ ಸಲ್ಲಿಕೆ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಯಾಗಿ ಐವನ್ ಫೆರಾವೋ ಪಿ ಅವರು ನಾಮಪತ್ರ ಸಲ್ಲಿಸಿದರು. ಪುತ್ರೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಗಿರೀಶ್ ನಂದನ್ ಎಂ ಅವರಿಗೆ ನಾಮಪತ್ರ ಸಲ್ಲಿಸಿದರು.

ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ಸುಂದರ ಕೊಯಿಲ ನಾಮಪತ್ರ ಸಲ್ಲಿಕೆ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸುಂದರ ಕೊಯಿಲ ಅವರು ನಾಮಪತ್ರ ಸಲ್ಲಿಸಿದರು. ಚುನಾವಣಾ ಅಧಿಕಾರಿ ಗಿರೀಶ್ ನಂದನ್ ಎಂ ಅವರಿಗೆ ನಾಮಪತ್ರ ಸಲ್ಲಿಸಿದರು.

ಜೈಲಿನಲ್ಲಿದ್ದೇ ಎಸ್‍ಡಿಪಿಐ ಮುಖಂಡ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಕೆ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಎಸ್.ಡಿ.ಪಿ.ಐ ಮುಖಂಡ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಆರೋಪದಲ್ಲಿ ಯುಎಪಿಎ ಕಾಯ್ದೆಯಡಿ ರಾಷ್ಟ್ರೀಯ ತನಿಖಾ ದಳದಿಂದ ಬಂಧಿಸಲ್ಪಟ್ಟು ಜೈಲಿನಲ್ಲಿರುವ ಶಾಫಿ ಬೆಳ್ಳಾರೆ ತಮ್ಮ ಪಕ್ಷದ ಏಜೆಂಟ್ ಗಳ ಮೂಲಕ ನಾಮಪತ್ರ ಸಲ್ಲಿಸಿದರು. ಪಕ್ಷದ ಕಛೇರಿಯಿಂದ ಮಿನಿ ವಿಧಾನಸೌಧದವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದ ಎಸ್.ಡಿ.ಪಿ.ಐ ಕಾರ್ಯಕರ್ತರು ಶಾಫಿ ಬೆಳ್ಳಾರೆ ಪರ ಘೋಷಣೆಗಳನ್ನು

ಕಾಸರಗೋಡು ಆರ್ಯ ಸಮುದಾಯ ಸಂಘದ ಪ್ರಥಮ ಮಹಾಸಭೆ

ಕಾಸರಗೋಡು ಆರ್ಯ ಸಮುದಾಯ ಸಂಘ ಇದರ ಪ್ರಥಮ ಮಹಾಸಭೆಯು ಮುಳ್ಳೇರಿಯ ಶ್ರೀ ಗಣೇಶ ಕಲಾ ಮಂದಿರದಲ್ಲಿ ನಡೆಯಿತು. ಆರ್ಯ ಸಮಾಜ ಸಂಘ ಮಂಗಳೂರು – ಕಾಸರಗೋಡು ಇದರ ಅಧ್ಯಕ್ಷ ವಾಮನ ರಾವ್ ಮುಳ್ಳಂಗೋಡು ನೂತನ ಸಂಘಟನೆಯನ್ನು ಉದ್ಘಾಟಿಸಿದರು. ಆರ್ಯ ಸಮುದಾಯದ ಸಂಘದ ಅಧ್ಯಕ್ಷೆ ಪ್ರೇಮಲತಾ ವೈ ರಾವ್ ಅಧ್ಯಕ್ಷತೆ ವಹಿಸಿದ್ದರು. ಯತೀಶ್ ಕುಮಾರ್ ಪರಂಗೋಡು ಪ್ರಾಸ್ತಾವಿಕ ಭಾಷಣ ಮಾಡಿದರು. ಆರ್ಯ ಸಮುದಾಯ ಸಂಘದ ಕಾರ್ಯದರ್ಶಿ ಕೃಷ್ಣೋಜಿ ಮಾಸ್ಟರ್ ವರದಿ ವಾಚಿಸಿದರು. ಕೋಶಾಧಿಕಾರಿ

ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ಮತಯಾಚನೆ

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಡಿ. ವೇದವ್ಯಾಸ್ ಕಾಮತ್ ಅವರು ಶಿವಭಾಗ್ ವಾರ್ಡಿನ ಪದವು ಮೇಗಿನಮನೆ ಹಾಗೂ ಬಿಕರ್ನಕಟ್ಟೆ ಪರಿಸರದಲ್ಲಿ ಮತಯಾಚನೆ ನಡೆಸಿದರು. ಸಂದರ್ಭದಲ್ಲಿ ಮಾತನಾಡಿದ ವೇದವ್ಯಾಸ್ ಕಾಮತ್, ರಾಜ್ಯ ಸರಕಾರದ ಜನಪರ ಯೋಜನೆಗಳನ್ನು, ನಗರದ ಅಭಿವೃದ್ಧಿಗಾಗಿ ಕೈಗೊಂಡ ಯೋಜನೆಗಳನ್ನು ತಿಳಿಸಿ ಮತ ನೀಡುವಂತೆ ಕೋರಿದರು. ಈ ಸಂದರ್ಭದಲ್ಲಿ ಬಿಜೆಪಿ ಸುಜನ್ ದಾಸ್ ಕುಡುಪು, ಕಾವ್ಯ ನಟರಾಜ್, ರಾಮಚಂದ್ರ ಚೌಟ, ಯೋಗಿಶ್ ಶೆಣೈ,

ಏ.20ರಂದು ಜೆ.ಆರ್. ಲೋಬೋ ನಾಮಪತ್ರ ಸಲ್ಲಿಕೆ

ರಾಜ್ಯ ವಿಧಾನಸಭೆ ಚುನಾವಣೆಯ ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಏ.20ರಂದು ಮಧ್ಯಾಹ್ನ 12.15ಕ್ಕೆ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದರು. ಅವರು ನಗರದ ಕಾಂಗ್ರೆಸ್‍ನ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಸಂವಿಧಾನ, ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುವ ಪಕ್ಷ, ಸರ್ವ ಜಾತಿ ಧರ್ಮವನ್ನು ಪ್ರೀತಿಸುವ ಪಕ್ಷವಾಗಿದೆ. ದೇಶವು ಅಭವೃದ್ಧಿ