Home Posts tagged V4News (Page 509)

ಏ.20ರಂದು ಬಿಜೆಪಿ ಕಾರ್ಯಕರ್ತರ ಸಮಾವೇಶ

ಬೈಂದೂರು: ಈಗಾಗಲೇ ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದು ಏಪ್ರಿಲ್ 20 ರಂದು ಗುರುವಾರ ಬಿಜೆಪಿ ಕಾರ್ಯಕರ್ತರ ಬ್ರಹತ್ ಸಮಾವೇಶದ ಮೂಲಕ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೈಂದೂರು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ ಎಂದು ಬೈಂದೂರು ಬಿಜೆಪಿ ಮಂಡಲದ

ಮೂಡುಬಿದಿರೆಯ ಬಿ ಶ್ರೀನಿವಾಸ ಬಾಳಿಗ ಇನ್ನಿಲ್ಲ

ಮೂಡುಬಿದಿರೆ : ಇಲ್ಲಿನ ಮೆ. ಜಿ ನಾಗೇಶ್ ಪೈ ಅಂಡ್ ಕೋಸಂಸ್ಥೆಯ ಸ್ಥಾಪಕ ಪಾಲುದಾರ ,ಹಿರಿಯ ವರ್ತಕ ಬಿ ಶ್ರೀನಿವಾಸ ಬಾಳಿಗಾ (89 )ಏಪ್ರಿಲ್ 16ರಂದು ಸ್ವರಾಜ್ಯ ಮೈದಾನ ಬಳಿ ಇರುವ ಗುರುಕೃಪಾ ನಿವಾಸದಲ್ಲಿ ಸ್ವಗೃಹದಲ್ಲಿ ನಿಧನ ಹೊಂದಿದರು. ಅವರು ಪ್ರಸ್ತುತ ವ್ಯವಹಾರವನ್ನು ಪಾಲುದಾರರಾಗಿ ಮುನ್ನಡೆಸುತ್ತಿರುವ ಬಿ ಗಣೇಶ್ ಬಾಳಿಗಾ ಸಹಿತ ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸಾತ್ವಿಕ ಮತ್ತು ಧಾರ್ಮಿಕ ಮನೋಭಾವದವರಾಗಿದ್ದ ಬಾಳಿಗ ಕ್ರಿಕೆಟ್ ಮತ್ತು

ಮೇ 18ರಂದು ಕರಾವಳಿಯಾದ್ಯಂತ ಬಹುನಿರೀಕ್ಷಿತ ಗೋಸ್ಮರಿ ಫ್ಯಾಮಿಲಿ ತುಳು ಸಿನಿಮಾ ಬಿಡುಗಡೆ

ಯೋಧ ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಾಯಿಕೃಷ್ಣ ಕುಡ್ಲ ಅವರು ಬರೆದು ನಿರ್ದೇಶಿಸಿರುವ ತುಳು ಚಿತ್ರ `ಗೋಸ್ಮರಿ ಫ್ಯಾಮಿಲಿ’ ಮೇ 18 ರಂದು ಬಿಡುಗಡೆಯಾಗಲಿದೆ. ಬಹುನಿರೀಕ್ಷಿತ ತುಳು ಸಿನಿಮಾ ಗೋಸ್ಮರಿ ಫ್ಯಾಮಿಲಿ ಬಿಡುಗಡೆಗೆ ಸಿದ್ಧಗೊಂಡಿದೆ. ಒಂದು ಅದ್ಭುತ ಕಥಾಹಂದರ ಹೊಂದಿರುವ ಸಿನಿಮಾ ಇದಾಗಿದ್ದು, ಮೇ 18ರಂದು ಕರಾವಳಿಯಾದ್ಯಂತ ಬಿಡುಗಡೆಗೊಳ್ಳಲಿದೆ. ಅದಕ್ಕಾಗಿ ಚಿತ್ರತಂಡ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಚಿತ್ರವನ್ನು ಶಕುಂತಲಾ

ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕಚೇರಿ ಉದ್ಘಾಟನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಚುನಾವಣಾ ಕಚೇರಿ ಸೋಮವಾರ ದರ್ಬೆ ರೈ ಎಸ್ಟೇಟ್ ಬಿಲ್ಡಿಂಗ್ ನಲ್ಲಿ ಉದ್ಘಾಟನೆಗೊಂಡಿತು. ಗಣಹೋಮದೊಂದಿಗೆ ಕಚೇರಿಯನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕಿ  ಶಕುಂತಳಾ ಶೆಟ್ಟಿ,  ಕಾಂಗ್ರೆಸ್ ಮುಖಂಡರಾದ ಎಂಎಸ್ ಮುಹಮ್ಮದ್, ಚಂದ್ರಹಾಸ ಶೆಟ್ಟಿ  ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಡಾ ರಾಜಾರಾಂ , ಪುತ್ತೂರು ಬ್ಲಾಕ್ ಕಾಂಗ್ರೆಸ್

ಬಿಜೆಪಿ ಆಭ್ಯರ್ಥಿ ಕುಮಾರಿ ಭಾಗೀರತಿ ಮುರುಳ್ಯರಿಂದ ಬಿರುಸಿನ ಪ್ರಚಾರ

ಬಿಜೆಪಿ ಆಭ್ಯರ್ಥಿ ಕುಮಾರಿ ಭಾಗೀರತಿ ಮುರುಳ್ಯರಿಂದ ಬಿರುಸಿನ ಪ್ರಚಾರ ಅಜ್ಜಾರವರ ಗ್ರಾಮದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ಗೆ ಭಾಜಪಾ ಸುಳ್ಯ ವತಿಯಿಂದ ಮತಪ್ರಚಾರ ನಡೆಸಲಾಯಿತು.ಕಾರ್ಯಕರ್ತರನ್ನು ಉದ್ದೇಶಿಸಿ ಕ್ಷೇತ್ರ ಚುನಾವಣಾ ಮಾದ್ಯಮ ವಕ್ತಾರ ವೆಂಕಟ್ ದಂಬೆಕೊಡಿ ಭಾರತವನ್ನು ಪರಮ ವೈಭವದಲ್ಲಿ ಕಾಣುವುದಕ್ಕಾಗಿ ಸುಳ್ಯದ ಮೆನಾಲದಿಂದ ಪ್ರಾರಂಭವಾಗಲಿ, ನಮ್ಮದು ಕಾರ್ಯಕರ್ತರ ಪಕ್ಷ ನಮ್ಮ ಕಾರ್ಯಕರ್ತರಿಗೆ ಪಕ್ಷ ಮುಖ್ಯ ವ್ಯಕ್ತಿ ಅಲ್ಲಾ ಎಂದು ತೋರಿಸಿಕೊಟ್ಟ

ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋರ ಚುನಾವಣಾ ಕಚೇರಿ ಉದ್ಘಾಟನೆ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಅವರ ಚುನಾವಣಾ ಕಚೇರಿಯಯು ಸರ್ವಧರ್ಮದ ಮುಖಂಡರಿಂದ ಉದ್ಘಾಟನೆಗೊಂಡಿತ್ತು, ನಗರದ ನಂತೂರು ರಸ್ತೆಯಲ್ಲಿರುವ ಜಿಮ್ಮಿಸ್ ಸೂಪರ್ ಮಾರ್ಕೇಟ್ ಸಂಕೀರ್ಣದಲ್ಲಿ ನೂತನ ಚುನಾವಣಾ ಕಚೇರಿ ಉದ್ಘಾಟನೆಗೊಂಡಿತ್ತು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಅವರು, ಮುಂದಿನ ದಿನಗಳಲ್ಲಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಉತ್ತಮ ಸರ್ಕಾರ ರಚನೆಗೆ ನಿಮ್ಮೆಲ್ಲರ ಸಹಕಾರ

ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಜಿಲ್ಲಾ ಕಾಂಗ್ರೆಸ್ ಪ್ರಮುಖರೊಂದಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ತಾಲೂಕು ಕಚೇರಿಯವರೆಗೂ ಪಾದಯಾತ್ರೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಸಭೆ ನಡೆಸಿ ಅನಂತರ ಅಲ್ಲಿಂದ ಪಾದಯಾತ್ರೆಯಲ್ಲಿ ಬಂದು ಬೆಳಗ್ಗೆ 11.15ಕ್ಕೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಅವರ ತಾಯಿ ಸರಳಾ ಕಾಂಚನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ

ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ನಾಮಪತ್ರ ಸಲ್ಲಿಕೆ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ಅವರು ಬೃಹತ್ ಪಾದಯಾತ್ರೆ ಮೂಲಕ ಇಂದು ನಾಮಪತ್ರ ಸಲ್ಲಿಸಿದರು. ಮೊದಲಿಗೆ ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಬೃಹತ್ ಕಾರ್ಯಕರ್ತರ ಮೆರವಣಿಗೆ ಮೂಲಕ ಸಾಗಿ ಮಂಗಳೂರಿನ ಪಾಲಿಕೆ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಡಿ ವೇದವ್ಯಾಸ ಕಾಮತ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಾಥ್ ನೀಡಿದರು.

ಪೇ ಚಾನಲ್‍ಗಳ ಗ್ರಾಹಕರ ಮಾಸಿಕ ದರ ಏರಿಕೆ

ಕೇಂದ್ರ ಸರಕಾರವು ಎನ್‍ಟಿಒ 3.0 ನಿಯಮದ ಪ್ರಕಾರ ಬ್ರಾಂಡ್ ಕ್ಯಾಸ್ಟರ್ ಪೇ ಚಾನೆಲ್‍ಗಳ ದರ ಏರಿಸಲು ಅನುಮತಿ ನೀಡಿರುವ ಪರಿಣಾಮವಾಗಿ, ಎಲ್ಲಾ ಪೇ ಚಾನೆಲ್‍ಗಳ ದರ ಏಪ್ರಿಲ್ ರಿಂದ ಏರಿಕೆಯಾಗಿರುತ್ತದೆ. ಕಳೆದ ಹಲವು ದಿನಗಳ ಹಿಂದೆ ಕೇಬಲ್ ಆಪರೇಟರ್ ಪ್ರತಿಭಟನೆ ನಡೆಸಿದ್ದು, ಆದರೂ ಪೇ ಚಾನೆಲ್‍ಗಳ ಮಾಸಿಕ ದರವನ್ನು ಏರಿಸಿರುತ್ತಾರೆ. ಹಾಗಾಗಿ ಎಲ್ಲ ಗ್ರಾಹಕರ ಮಾಸಿಕ ದರವು ಹೆಚ್ಚಾಗಿದ್ದು, ಗ್ರಾಹಕರು ಸ್ಥಳೀಯ ಕೇಬಲ್

ತೋಕೂರು ಯುವಕ ಸಂಘದ ಆಶ್ರಯದಲ್ಲಿ ಬೇಸಿಗೆ ಶಿಬಿರ

ನೆಹರು ಯುವ ಕೇಂದ್ರ ಮಂಗಳೂರು, ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ ತೋಕೂರು ಹಾಗೂ ತೋಕೂರು ಯುವಕ ಸಂಘದ ಆಶ್ರಯದಲ್ಲಿ ಬೇಸಿಗೆ ಶಿಬಿರ ಸಮಾರಂಭ ತೋಕೂರು ಯುವಕ ಸಂಘದ ಸುವರ್ಣ ಸಭಾಂಗಣದಲ್ಲಿ ನಡೆಯಿತು. ತೋಕೂರು ಸುಬ್ರಹ್ಮಣ್ಯ ಶೀಮಂತ್ರಾಯ ಕಾರ್ಯಕ್ರಮವನ್ನು ಉದ್ಘಾಟಿಸಿ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೋಕೂರು ಕ್ಲಸ್ಟರ್ ನ ವಿಶ್ವ ಬ್ಯಾಂಕ್ ನೆರವಿನ ನೀರು ಸರಬರಾಜು ಮತ್ತು ಪರಿಸರ ನೈರ್ಮಲ್ಯ ಸಮಿತಿ ಅಧ್ಯಕ್ಷರಾದ ದಿನಕರ ಸಾಲ್ಯಾನ್ ವಹಿಸಿದ್ದರು.