Home Posts tagged V4News (Page 53)

ಪುತ್ತೂರು: ಸಿಡಿಲು ಬಡಿದು ಯುವಕ ಸಾವು

ಪುತ್ತೂರು: ತಾಲೂಕಿನಲ್ಲಿ ಶನಿವಾರ ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಸಿಡಿಲಿನ ಅಘಾತಕ್ಕೆ ಒಳಗಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ನಡೆದಿದೆ.ಆನಡ್ಕ ನಿವಾಸಿ ವಾಮನ (೪೦) ಸಾವನ್ನಪ್ಪಿದ ವ್ಯಕ್ತಿ. ಕೂಲಿ ಕಾರ್ಮಿಕರಾಗಿದ್ದ ವಾಮನ ಅವರು ಸಂಜೆ ಸುಮಾರು 5.30 ರ ವೇಳೆಗೆ ತನ್ನ ಕೆಲಸ ಮುಗಿಸಿ ಮನೆಗೆ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಪ್ರಯುಕ್ತ ನಾಟಕ ಪ್ರದರ್ಶನ

ಬೆಂಗಳೂರು:ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಬನ್ನೇರುಘಟ್ಟ ಲಯನ್ಸ್ ಕ್ಲಬ್ ವತಿಯಿಂದ ಕಿರು ನಾಟಕ ಪ್ರದರ್ಶನ ಬೆಂಗಳೂರಿನ ಟಿ.ಜಾನ್ ನರ್ಸಿಂಗ್ ಕಾಲೇಜಿನಲ್ಲಿ ಶನಿವಾರ ಆಯೋಜಿಸಲಾಯಿತು. ವೃತ್ತಿಪರ ರಂಗಭೂಮಿ ಕಲಾವಿದರು ಪ್ರದರ್ಶಿಸಿದ ಈ ನಾಟಕವು ಒತ್ತಡ, ಗಲಾಟೆ ಹಾಗೂ ಮನೋವೈಕಲ್ಯಗಳಂತಹ ವಿಷಯಗಳು ಮಾನಸಿಕ ಆರೋಗ್ಯದ ಮೇಲೆ ಬೀರುವ ಪ್ರಭಾವವನ್ನು ಮನಮುಟ್ಟುವಂತೆ ತೋರಿಸಿತು.ಸುಮಾರು 300 ವಿದ್ಯಾರ್ಥಿಗಳು, ಬೋಧಕ ವರ್ಗ ಮತ್ತು ಲಯನ್ಸ್ ಸದಸ್ಯರು

ಬಂಟ್ವಾಳ:ಜಾತಿ ಗಣತಿಗೆ ಹೋದ ಶಿಕ್ಷಕನ ಮೇಲೆ ಜೇನುನೊಣ ದಾಳಿ

ಬಂಟ್ವಾಳ: ಜಾತಿ ಗಣತಿ ಕಾರ್ಯಕ್ಕೆ ತೆರಳಿದ್ದ ಶಿಕ್ಷಕರೋರ್ವರು ಜೇನು ನೊಣದ ದಾಳಿಗೆ ಒಳಗಾಗಿ ಗಂಭೀರ ಗಾಯಗೊಂಡ ಘಟನೆ ಸಜೀಪಮುನ್ನೂರು ಗ್ರಾಮದ ಆಲಾಡಿ ಬಳಿ ಶನಿವಾರ ನಡೆದಿದೆ. ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿಜ್ಞಾನ ಶಿಕ್ಷಕ ವೆಂಕಟರಮಣ ಆಚಾರ್ ಜೇನು ನೊಣದ ದಾಳಿಗೊಳಗಾಗಿದ್ದು ಚೇತರಿಸಿಕೊಂಡಿದ್ದಾರೆ. ಶಿಕ್ಷಣ ವೆಂಕಟರಮಣ ಆಚಾರ್ ಅವರು ಸಜೀಪಮುನ್ನೂರು ಗ್ರಾಮದ ಆಲಾಡಿ, ಶಾರಾದನಗರದ ಬಳಿ ಗಣತಿ ಕಾರ್ಯಕ್ಕೆ ತೆರಳಿದ್ದ ವೇಳೆ ಅಲ್ಲಿನ

ಲೆಕ್ಕಪತ್ರ ಇಲಾಖೆ ಪ್ರಧಾನ ನಿರ್ದೇಶಕಎಸ್ ಎಮ್ ರಾಮ್ ಪ್ರಸಾದ್ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಕಾಪು:ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಇದರ ಪ್ರಧಾನ ನಿರ್ದೇಶಕರಾದ ಎಸ್ ಎಮ್ ರಾಮ್ ಪ್ರಸಾದ್ ಅವರು ಶನಿವಾರದಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀಯುತರು ಹೊಸ ಮಾರಿಗುಡಿಯ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದು ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು. ಎಸ್ ಎಮ್ ರಾಮ್ ಪ್ರಸಾದ್ಅ ವರನ್ನು ಸಮಿತಿಯ ವತಿಯಿಂದ ಗೌರವಿಸಲಾಯಿತು. ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲದ ಉಪ ನಿರ್ದೇಶಕರಾದ ಗಣೇಶ್

ಹಾಸನಾಂಬ ದರ್ಶನ: ಸಂಸದರಿಂದ ‘ಗೋಲ್ಡನ್ ಐಡಿಯಾ’ – ₹5 ಲಕ್ಷ ನೀಡಿ 1,200 ಟಿಕೆಟ್ ಖರೀದಿ, ಕಾರ್ಯಕರ್ತರಿಗೆ ವಿತರಣೆ

ಹಾಸನ: ಜಿಲ್ಲೆಯ ಹಾಸನಾಂಬ ದೇವಿಯ ದರ್ಶನ ವ್ಯವಸ್ಥೆಯಲ್ಲಿ ಸಂಸದರು ತೋರಿದ ವಿಶಿಷ್ಟ ನಡೆ ಎಲ್ಲೆಡೆ ಶ್ಲಾಘನೆಗೆ ಪಾತ್ರವಾಗಿದೆ. ಜಿಲ್ಲಾಡಳಿತದ ಪಾಸ್‌ ನಿಯಮಗಳನ್ನು ಗೌರವಿಸಿ, ಯಾವುದೇ ರಾಜಕೀಯ ಒತ್ತಡವಿಲ್ಲದೆ ಕಾರ್ಯಕರ್ತರಿಗೆ ದರ್ಶನದ ಅವಕಾಶ ಕಲ್ಪಿಸಿರುವ ಸಂಸದರ ಕ್ರಮ ‘ಗೋಲ್ಡನ್ ಐಡಿಯಾ’ ಆಗಿದೆ. ಈ ಬಾರಿ ಹಾಸನಾಂಬ ಜಾತ್ರೆಯಲ್ಲಿ ವಿಐಪಿ (ಗೋಲ್ಡನ್) ಪಾಸ್‌ಗಳಿಗೆ ಅಪಾರ ಬೇಡಿಕೆ ಕಂಡುಬಂದಿತ್ತು. ಭಾನುವಾರದಂದು ದರ್ಶನಾರ್ಥಿಗಳ ಸಂಖ್ಯೆ ತೀವ್ರ

ಮೂಡುಬಿದಿರೆಯಲ್ಲಿ ಗಾಳಿ ಮಳೆ : ಮರ ಧರೆಗೆ, ತುಂಡಾದ ವಿದ್ಯುತ್ ಕಂಬ, ವಾಹನ ಸಂಚಾರಕ್ಕೆ ತೊಂದರೆ

ಮೂಡುಬಿದಿರೆ : ತಾಲೂಕಿನಲ್ಲಿ ಶನಿವಾರ ಸಂಜೆ ಬೀಸಿದ ಗಾಳಿ ಮಳೆಗೆ ಸಮಾಜ ಮಂದಿರದ ಬಳಿ ಮರವೊಂದು ಸೀಯಾಳದ ಅಂಗಡಿ ಮೇಲೆ ಬಿದ್ದು ಜಖಂಗೊಂಡಿದೆ ಹಾಗೂ ಅಲ್ಲಿಯೇ ಪಕ್ಕದಲ್ಲಿರುವ ವಿದ್ಯುತ್ ಕಂಬವು ತುಂಡಾಗಿ ಫ್ಲೆಕ್ಸ್ ನ ಮೇಲೆ ಬಿದ್ದು ಸಿಲುಕಿಕೊಂಡಿರುವುದರಿಂದ ಸಂಭಾವ್ಯ ಅಪಾಯ ತಪ್ಪಿದ ಘಟನೆ ನಡೆದಿದೆ.ಆಲಂಗಾರು ಮತ್ತು ಉಳಿಯ ಪರಿಸರದಲ್ಲಿಯೂ ತೀವೃವಾದ ಗಾಳಿ ಬೀಸಿದ ಪರಿಣಾಮವಾಗಿ ಸಂತ ಥೋಮಸ್ ಹೈಸ್ಕೂಲ್ ನ ಮೇಲ್ಛಾವಣಿ ಹಾರಿ ಸುಮಾರು 100 ಮೀಟರ್ ದೂರದಲ್ಲಿ ಬಿದ್ದಿದ್ದು

ಅ. 12 ರಂದು ಆಳ್ವಾಸ್ ಪದವಿಪೂರ್ವ ಶೈಕ್ಷಣಿಕ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ

ಮೂಡುಬಿದಿರೆ: ಕಳೆದ ನಾಲ್ಕು ದಶಕಗಳಿಂದ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹಧನ, ವಿವಿಧ ಶಿಷ್ಯವೇತನ, ಬಹುಮಾನ, ಪುರಸ್ಕಾರಗಳ ಮೂಲಕ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ ಬಂದಿರುವ ‘ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ’ವು ಪದವಿ ಪೂರ್ವ ವಿಭಾಗದಲ್ಲಿ ದಾಖಲಾತಿ ಬಯಸುವ ವಿದ್ಯಾರ್ಥಿಗಳಿಗಾಗಿ ವಿಶೇಷ ಶೈಕ್ಷಣಿಕ ವಿದ್ಯಾರ್ಥಿ ವೇತನವನ್ನು(ಆಸೆ) ಕಳೆದ ಎರಡು ವರ್ಷಗಳಿಂದ ಆಯೋಜಿಸುತ್ತಾ

ಪುತ್ತೂರು:ಬನ್ನೂರು ಪಂಚಾಯತ್ ವ್ಯಾಪ್ತಿಯ ಸೇಡಿಯಾಪಿನಲ್ಲಿ ಹೆಜ್ಜೇನು ದಾಳಿಗೆ ವಿದ್ಯಾರ್ಥಿನಿ ಬಲಿ

ಪುತ್ತೂರು: ಪಡೂರು ಗ್ರಾಮದ ಸೇಡಿಯಾಪು ಕೂಟೇಲು ಸಮೀಪ ಹೆಚ್ಚೇನು ದಾಳಿಗೆ ಗಂಭೀರಗೊಂಡಿದ್ದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿದ್ದು, ಹೆಜ್ಜೇನು ದಾಳಿ ಸಂದರ್ಭರಕ್ಷಣೆಗೆ ಹೋದ ವ್ಯಕ್ತಿ ಚೇತರಿಕೆಯಾಗಿದ್ದಾರೆ. ಅ.10ರಂದು ಸೇಡಿಯಾಪು ಸಮೀಪದ ಕೂಟೇಲು ಎಂಬಲ್ಲಿ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ಮತ್ತು ಗಾಯಗೊಂಡ ವ್ಯಕ್ತಿಯನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅ.11ರಂದು

ಕಾರ್ಮಿಕ ಸಚಿವ ಸಂತೋಷ್ ಲಾಡ್ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ

ಉಚ್ಚಿಲ:ಕರ್ನಾಟಕ ಸರಕಾರ ಕಾರ್ಮಿಕ ಸಚಿವರಾದ ಸನ್ಮಾನ್ಯ ಸಂತೋಷ್ ಲಾಡ್ ರವರು ಇಂದು ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಸಂತೋಷ್ ಲಾಡ್ ಅವರನ್ನು ಶ್ರೀ ಕ್ಷೇತ್ರದ ವತಿಯಿಂದ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದ. ಕ. ಮೊಗವೀರ ಮಹಾಜನ ಸಂಘದ ಸದಸ್ಯರಾದ ಕಿರಣ್ ಕುಮಾರ್ ಪಿತ್ರೊಡಿ ದೇವಳದ ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ಲಾವಣ್ಯ ಬಲ್ಲಾಳ್, ಸುರೇಶ್ ಕಾಂಚನ್ ಕೋಟ, ಸೌರಭ್

ಸಂಪುಟ ತೀರ್ಮಾನ: ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡರು

ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಮಂಗಳೂರಿನ ದೇರೆಬೈಲ್ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3,285 ಎಕರೆ ಭೂಮಿಯನ್ನು ವಾಣಿಜ್ಯ ಕಛೇರಿ ಟೆಕ್ ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ ಮಾದರಿಯಲ್ಲಿ DBFOT ಆಧಾರದ ಮೇಲೆ ನಗದೀಕರಿಸಲು ಮತ್ತು ಅಭಿವೃದ್ಧಿಪಡಿಸಲು ಅನುಮೋದನೆ ನೀಡಿ ಸಂಪುಟ ಸಭೆಯಲ್ಲಿ ನಿರ್ಣಯಿಸಿದ್ದನ್ನು ಸ್ವಾಗತಿಸಿ ಕಿಯೋನಿಕ್ಸ್ ಅಧ್ಯಕ್ಷರಾದ ಶರತ್ ಬಚ್ಚೇಗೌಡರು ಮುಖ್ಯಮಂತ್ರಿ