Home Posts tagged V4News (Page 546)

ದ.ಕ. ಜಿಲ್ಲೆಯಲ್ಲಿ ಬಿಜೆಪಿಯಿಂದ ವಿಜಯ ಸಂಕಲ್ಪ ಯಾತ್ರೆ

ಮಂಗಳೂರು: ರಾಜ್ಯದಿಂದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯು ನಾಲ್ಕು ತಂಡಗಳ ನೇತೃತ್ವದಲ್ಲಿ ವಿವಿಧ ವಿಧಾನಸಭಾ ಕ್ಷೇತ್ರಗಳನ್ನು ಪ್ರವೇಶಿಸಿ ರೋಡ್ ಶೋ, ಸಭೆಗಳನ್ನು ನಡೆಸುತ್ತಿದೆ. ಆರ್.ಅಶೋಕ್ ಹಾಗೂ ಕೆ.ಎಸ್.ಈಶ್ವರಪ್ಪ ನೇತೃತ್ವದ ತಂಡವು ಮುನ್ನಡೆಸುತ್ತಿರುವ ವಿಜಯ ಸಂಕಲ್ಪ ಯಾತ್ರೆಯು ಮಾ.11-13ರವರೆಗೆ ದ.ಕ.ಜಿಲ್ಲೆಯಲ್ಲಿದ್ದು ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ

ಕನ್ನಡ ಸಾಹಿತ್ಯಕ್ಕೆ ಖಿದ್ಮಾ ಸೇವೆ ಅಪಾರ: ಡಾ: ಬಸವರಾಜ್ ಪೂಜಾರ

ಖಿದ್ಮಾ ಫೌಂಡೇಶನ್ ಕರ್ನಾಟಕ ಇದರ 4ನೇ ವಾರ್ಷಿಕೋತ್ಸವದ ಅಂಗವಾಗಿ ಧಾರವಾಡದ ರಂಗಾಯಣದಲ್ಲಿ ಆಯೋಜನೆ ಮಾಡಲಾಗಿದ್ದ ರಾಜ್ಯ ಮಟ್ಟದ ಖಿದ್ಮಾ ಕವಿ-ಕಾವ್ಯ ಸಂಗಮದ ಸರ್ವಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಡಾ: ಬಸವರಾಜ್ ಪೂಜಾರ ಕನ್ನಡ ಸಾಹಿತ್ಯ ಶ್ರೀಮಂತ ಗೊಳ್ಳುವುದರ ಹಿಂದೆ ಬಹಳಷ್ಟು ಸಂಘಟನೆಗಳ ಅವಿರತಶ್ರಮವಿದೆ. ಅದರಲ್ಲೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಖಿದ್ಮಾ ಫೌಂಡೇಶನ್ ಕರ್ನಾಟಕ ಮಾಡಿರುವಂತಹ ಸೇವೆ ಅಪಾರವಾದದ್ದು ಇನ್ನಿತರ

ಬಿಜೆಪಿ ಕಾರ್ಪೋರೇಟರ್ ಗೆ ಕೊಲೆ ಬೆದರಿಕೆ!

ಸುರತ್ಕಲ್: ಇಲ್ಲಿನ ಕಾಟಿಪಳ್ಳ 3ನೇ ಬ್ಲಾಕ್ ನಲ್ಲಿ ಬಿಜೆಪಿ ಕಾರ್ಪೋರೇಟರ್ ಒಬ್ಬರ ಮೇಲೆ ಯುವಕನೊಬ್ಬ ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆಯೊಡ್ಡಿದ ಘಟನೆ ನಡೆದಿದ್ದು ಈ ಕುರಿತು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿವರ:ಬಿಜೆಪಿ ಕಾರ್ಪೋರೇಟರ್ ಲೋಕೇಶ್ ಬೊಳ್ಳಾಜೆ ಎಂಬವರು ದೂರಿದ್ದು ಅದರಲ್ಲಿ ಸ್ಥಳೀಯ ನಿವಾಸಿ ಗಣೇಶ್ ದೇವಾಡಿಗ ಎಂಬವನನ್ನು ಆರೋಪಿ ಎಂದು ಹೆಸರಿಸಲಾಗಿದೆ. ಕಾಟಿಪಳ್ಳದಲ್ಲಿ ಸೇವಾ ಚಾರಿಟೇಬಲ್ ಟ್ರಸ್ಟ್ ಕಟ್ಟಿಕೊಂಡಿರುವ ಎ.ಪಿ.

ಅತ್ಯಾಚಾರ ಆರೋಪ , ಕೊಣಾಜೆ ವಿ.ವಿ ಸಹಪ್ರಾಧ್ಯಾಪಕ:ಡಾ| ವೇದವ ಪಿ.ಗೆ ಹೈಕೋರ್ಟಿನಿಂದ ಕ್ಲೀನ್‌ ಚಿಟ್‌

ಉಳ್ಳಾಲ: ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಸಹಪ್ರಾಧ್ಯಾಪಕ ಡಾ| ವೇದವ ಪಿ. ವಿರುದ್ಧ ಕನ್ನಡ ವಿಭಾಗದ ಕೊಡವ ಅಧ್ಯಯನ ಕೇಂದ್ರದ ಸಂಶೋಧನಾ ಸಹಾಯಕಿ ದಾಖಲಿಸಿದ್ದ ಅತ್ಯಾಚಾರ ಪ್ರಕರಣದಿಂದ ಕ್ಲೀನ್‌ ಚಿಟ್‌ ನೀಡಿ ನಿರಪರಾಧಿ ಎಂದು ಸಾಬೀತುಪಡಿಸಿದೆ. 2014ರಲ್ಲಿ ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ ಕೊಡವ ಅಧ್ಯಯನ ಕೇಂದ್ರದ ಸಂಶೋಧನಾ ಸಹಾಯಕಿ ಪೂರ್ಣಿಮಾ ಎಂಬವರು ಸಹಪ್ರಾಧ್ಯಾಪಕ ಡಾ| ವೇದವ .ಪಿ ವಿರುದ್ಧ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದರು.

ಬೈಂದೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಅಷ್ಠಬಂಧ ಬ್ರಹ್ಮಕಲಶಾಭಿಷೇಕ

ಇತಿಹಾಸ ಪ್ರಸಿದ್ಧ ಬೈಂದೂರು ತಾಲೂಕಿನ ಶ್ರೀ ದುರ್ಗಾಪರಮೇಶ್ವರಿ ಶ್ರೀದೇವಿಯ ಸಾನಿಧ್ಯದಲ್ಲಿಅಷ್ಟಬಂಧ ಬ್ರಹ್ಮಕಲಶಾಭಿಷೇಕ ಹಾಗೂ ಶ್ರೀಮನ್ಮಹಾ ರಥೋತ್ಸವವು ವಿಜೃಂಭಣೆಯಿಂದ ನಡೆಯಿತುತಂತ್ರಿಗಳಾದ ಮಂಜುನಾಥ ಅಡಿಗ ಹಾಗೂ ಪ್ರಧಾನ ಅರ್ಚಕರಾದ ಪ್ರಕಾಶ್ ಐತಾಳ್ ಇವರ ನೇತೃತ್ವದಲ್ಲಿ ಪ್ರತಿದಿನ ತಂತ್ರಿಗಳಾದ ಧಾರ್ಮಿಕ ವಿಧಿ ವಿಧಾನಗಳು ದೇವಿಯ ಸಾನಿಧ್ಯದಲ್ಲಿ ಸಂಪನ್ನಗೊಂಡಿದೆ. ಅಷ್ಟಬಂದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿರುವ ಬಿ.ಎಸ್ .ಸುರೇಶ್ ಶೆಟ್ಟಿ.ಮಾತನಾಡಿ

ಕೇಂದ್ರ ಸರ್ಕಾರದ ನಿಕ್ಷಯ ಮಿತ್ರ ಯೋಜನೆ

ಬಂಟ್ವಾಳ: ಕೇಂದ್ರ ಸರಕಾರದ ನಿಕ್ಷಯ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನ ವತಿಯಿಂದ ಕ್ಷಯ ರೋಗಿಗಳಿಗೆ ಆಹಾರ ಧವಸ ಧಾನ್ಯ ವಿತರಣ ಕಾರ್ಯಕ್ರಮ ಸೋಮವಾರ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು.ರೋಟರಿ ಕ್ಲಬ್ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಕ್ಷಯ ರೋಗ ನಿವಾರಣೆಗೆ ಔಷಧಿಯಷ್ಟೇ ಪೌಷ್ಟಿಕಾಹಾರ ಸೇವೆನೆಯೂ ಮುಖ್ಯ. ಆದ್ದರಿಂದ ಸೇವಾಂಜಲಿ ಪ್ರತಿಷ್ಠಾನವು ತಾಲೂಕಿನ ಕ್ಷಯ ರೋಗಿಗಳನ್ನು

ಮಾಣಿಲ ಕುಕ್ಕಾಜೆಯ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ:ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಧಾರ್ಮಿಕ ಸಭೆ

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಧಾರ್ಮಿಕ ಸಭೆ ನಡೆಯಿತು.ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ ಗ್ರಾಮದ ಐಕ್ಯತೆಯಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಕ್ಷೇತ್ರಗಳು ಶಾಶ್ವತವಾಗಿ ಸಮಾಜದಲ್ಲಿ ಉಳಿಯುವ ರೀತಿಯ ಕೆಲಸ ಕಾರ್ಯಗಳು ನಡೆಯಬೇಕು ಎಂದು ಹೇಳಿದರು. ಬಾಯಾರು ಚಿತ್ರಮೂಲ

ಹಳ್ಳಿಗಾಡಿನ ಯುವಕರ ಮನ ಸೆಳೆಯುತ್ತಿದೆ ಹೇ ರನ್ ಜಾಲ್

ಕುಂದಾಪುರ: ಶ್ರೀ ದುರ್ಗಾಪರಮೇಶ್ವರಿ ಮಿತ್ರಮಂಡಳಿ, ಧನುಷ್ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ರಿಯಾಲಿಟಿ ಟೂರ್ಸ್ ಎಂಡ್ ಟ್ರಾವೆಲ್ಸ್ ಮುಂಬೈ ನ ಸ್ಥಾಪಕ ಕೃಷ್ಣ ಪೂಜಾರಿಯವರು ನಡೆಸಿಕೊಂಡು ಬರುತ್ತಿರುವ ಹಳ್ಳಿಗಾಡಿನ ಯುವಕ ಯುವತಿಯರಿಗಾಗಿ ಹೇ ರನ್ ಜಾಲ್ ಆಯೋಜಿಸಿದ್ದರು ಕಳೆದ ನಾಲ್ಕು ವರ್ಷಗಳಿಂದ ಪ್ರತೀ ಪೆಬ್ರವರಿ ಅಥವಾ ಮಾರ್ಚ್ ತಿಂಗಳ ಒಂದು ಭಾನುವಾರದಂದು ಇಲ್ಲಿನ ಯುವಕ ಯುವತಿಯರಿಗೆ ಮ್ಯಾರಥಾನ್ ಓಟವನ್ನು ಆಯೋಜಿಸಿಕೊಂಡು ಬರುತ್ತಿದ್ದಾರೆ.ಮಾರ್ಚ್ 5ರ

ಅಡುಗೆ ಅನಿಲ ದರ ಏರಿಕೆ : ದೊಂದಿ ಮೆರವಣಿಗೆ

ಕಾಸರಗೋಡು ಜಿಲ್ಲೆಯ ಪೆರ್ಲದ ಬೆದ್ರಂಪಳ್ಳದಲ್ಲಿ ಡಿ.ವೈ.ಎಫ್.ಐ ನೇತೃತ್ವದಲ್ಲಿ ಅಡುಗೆ ಅನಿಲ ದರ ಏರಿಕೆಯನ್ನು ಖಂಡಿಸಿ ದೊಂದಿ ಮೆರವಣಿಗೆ ನಡೆಯಿತು. ಅಡುಗೆ ಅನಿಲ ದರ ಏರಿಕೆಯನ್ನು ವಿರೋಧಿಸಿ ಬೆದ್ರಂಪಳ್ಳದಲ್ಲಿ ನಡೆದ ದೊಂದಿ ಮೆರವಣಿಗೆಯನ್ನು ಡಿ.ವೈ.ಎಫ್.ಐ ಕಾಸರಗೋಡು ಜಿಲ್ಲಾ ಸಮಿತಿ ಸದಸ್ಯೆ ಸಚಿತಾ ಬಿ ಪೆರ್ಲ ಉದ್ಘಾಟಿಸಿದರು. ವಾಣಿಜ್ಯ ಸಿಲಿಂಡರ್ ಗೆ 350 ರೂಪಾಯಿ ಹಾಗೂ ಗೃಹ ಬಳಕೆಯ ಸಿಲಿಂಡರ್ ಗೆ 50 ರೂಪಾಯಿ ಏರಿಕೆ ಮಾಡುವ ಮೂಲಕ ಕೇಂದ್ರ ಸರಕಾರವು ಜನರ ಮೇಲೆ