Home Posts tagged V4News (Page 552)

ಪುತ್ತಿಗೆ : ನಮ್ಮೂರ ಮಸೀದಿ ನೋಡಬನ್ನಿ ಕಾರ್ಯಕ್ರಮ

ಮೂಡುಬಿದಿರೆ: ಪುತ್ತಿಗೆಯ ನವೀಕೃತ ನೂರಾನಿ ಮಸೀದಿಗೆ ಸರ್ವಧರ್ಮೀಯರು ಸಂದರ್ಶಿಸುವ `ನಮ್ಮೂರ ಮಸೀದಿ ನೋಡಬನ್ನಿ’ ಕಾರ್ಯಕ್ರಮ ನಡೆಯಿತು. ಅನಾರೋಗ್ಯಪೀಡಿತರಿಗೆ ಸಹಾಯಧನ ವಿತರಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅಲಂಗಾರು ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಈಶ್ವರ ಭಟ್ ಮಾತನಾಡಿ ವ್ಯಕ್ತಿಯನ್ನು ಆತನ ಜಾತಿ, ಧರ್ಮದ ಆಧಾರದಲ್ಲಿ

ಮುಂಡ್ಕೂರು : ಮರಳುಗಾರಿಕೆಗೆ ಅವಕಾಶ ನೀಡುವುದಿಲ್ಲವೆಂದು ಪಟ್ಟು ಹಿಡಿದ ಸ್ಥಳೀಯರು

ಮುಂಡ್ಕೂರು ಗ್ರಾಮ ಪಂಚಾಯತ್ 2022- 23ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷೆ ಸುಶೀಲಾ ಬಾಬು ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕೃಷಿ ಇಲಾಖೆಯ ಸತೀಶ್ ನೋಡಲ್ ಅಧಿಕಾರಿಯಾಗಿದ್ದರು. ಸಂಕಲಕರಿಯದ ಉಗ್ಗೆದಬೆಟ್ಟು ಹಾಗೂ ಕೃಷ್ಣ ಬೆಟ್ಟು ನಿವಾಸಿಗಳ ನಡುವೆ ಮರಳುಗಾರಿಕೆ ಹಾಗೂ ರಸ್ತೆ ಅಗೆತದ ಬಗ್ಗೆ ಭಾರಿ ಮಾತಿನ ಚಕಮಕಿ ನಡೆಯಿತು. ಪಂಚಾಯತ್ ಮಾಜಿ ಸದಸ್ಯ ಸೋಮನಾಥ್ ಪೂಜಾರಿ ಉಗ್ಗೆದಬೆಟ್ಟು ನಿವಾಸಿಗಳ ಪರವಾಗಿ ಮಾತನಾಡಿ,

ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ, ಕಾರ್ಕಳದಲ್ಲಿ ಬೃಹತ್ ಬೈಕ್ ರ್‍ಯಾಲಿ

ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಪ್ರಯುಕ್ತ ಕಾರ್ಕಳದಲ್ಲಿ ಬೃಹತ್ ಬೈಕ್ ರ್ಯಾಲಿ ಹಮ್ಮಿಕೊಂಡರು. ಕಾರ್ಕಳದ ಅನಂತಶಯನ ವೃತ್ತದಿಂದ ಅಜೇಕಾರ್ ವರೆಗೆ ಬೃಹತ್ ಬೈಕ್ ರ್‍ಯಾಲಿ ನಡೆಸಿದರು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಸುಮಾಕೇಶವ್ ರ್‍ಯಾಲಿಗೆ ಚಾಲನೆ ನೀಡಿದರು. ಸಚಿವರಾದ ವಿ. ಸುನಿಲ್ ಕುಮಾರ್ ಸೇರಿದಂತೆ ಸುಮಾರು 2000 ಬೈಕುಗಳು ಈ ರ್ಯಾಲಿಯಲ್ಲಿ ಪಾಲ್ಗೊಂಡಿದ್ದವು.

ಉಳ್ಳಾಲ ನಗರಸಭೆ ಭ್ರಷ್ಟಾಚಾರ ಲೋಕಾಯುಕ್ತ ತನಿಖೆಗೆ ಎಸ್‍ಡಿಪಿಐ ಆಗ್ರಹ

ಉಳ್ಳಾಲ: ಉಳ್ಳಾಲ ನಗರಸಭೆಯಲ್ಲಿ ಕಾಂಗ್ರೆಸ್ ನೇತೃತ್ವದ ಆಡಳಿತದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ ಕುಂಠಿತಗೊಂಡಿದ್ದು, ಉಳ್ಳಾಲ ನಗರಸಭೆಯ ಪೌರಾಯುಕ್ತೆ ತಕ್ಷಣ ಉಳ್ಳಾಲದ ಮೂಲಭೂತ ಸೌಕರ್ಯದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಮತ್ತು ಕಳೆದ ಎರಡು ವರ್ಷದ ಅವಧಿಯಲ್ಲಿ ನಡೆದ ಭೃಷ್ಟಾಚಾರದ ವಿಚಾರದಲ್ಲಿ ಕೂಲಂಕುಷ ಪರಿಶೀಲನೆ ನಡೆಸಿ ಲೋಕಾಯುಕ್ತ ತನಿಖೆಗೆ ವಹಿಸಿಕೊಡಬೇಕು ಎಂದು ನಗರಸಭೆಯ ಎಸ್‍ಡಿಪಿಐ ಸದಸ್ಯ ರಮೀಝ್ ನಗರಸಭಾ ಪೌರಾಯುಕ್ತೆಯನ್ನು ಆಗ್ರಹಿಸಿದ್ದು,

ಎರಡು ತಂಡಗಳ ಮಧ್ಯೆ ಹೊಡೆದಾಟ ದೂರು ಪ್ರತಿದೂರು

ಎರಡು ಯುವಕರ ತಂಡಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ನಡೆದ ಹೊಡೆದಾಟ ಮುಂದುವರಿದು ಒಂದು ತಂಡದಿಂದ ಜಾತಿ ನಿಂದನೆ ಪ್ರಕರಣ ದಾಖಲಾದರೆ ಮತ್ತೊಂದು ತಂಡ ಜೀವ ಬೆದರಿಕೆ ಪ್ರಕರಣ ದಾಖಲಿಸಿದೆ. ಸುಜ್ಲಾನ್ ಆರ್.ಆರ್. ಕಾಲೋನಿ ನಿವಾಸಿ ಉಮಾನಾಥ್ ಕೆ.ಆರ್. ಎಂಬವರ ಪುತ್ರ ಶಿವಪ್ರಕಾಶ್(19) ಎಂಬವರು ನೀಡಿದ ದೂರಿನಂತೆ ಆರೋಪಿಗಳಾದ ವಸಂತ್, ಬಾಲಕೃಷ್ಣ, ದಿವಾಕರ ಹಾಗೂ ರಾಕೇಶ್ ಎಂಬವರು, ಪರಿಶಿಷ್ಟ ಜಾತಿಗೆ ಸೇರಿದ ನಾನು ಪಡುಬಿದ್ರಿ ಬ್ರಹ್ಮಸ್ಥಾನದಲ್ಲಿ ನಡೆದ ಢಕ್ಕೆ ಬಲಿಗೆ

ವಿಟ್ಲ: ಪತ್ನಿ ಹಾಗೂ ಪತ್ನಿಯ ಪರಿಚಯಸ್ಥ ಸೇರಿಕೊಂಡು ಪತಿಯ ಕೊಲೆ

ವಿಟ್ಲ: ಇಡ್ಕಿದು ಕುಮೇರು ನಿವಾಸಿ ಅರವಿಂದ ಭಾಸ್ಕರ (39) ಅವರನ್ನು ಪತ್ನಿ ಹಾಗೂ ಪತ್ನಿಯ ಪರಿಚಯಸ್ಥ ಸೇರಿಕೊಂಡು ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದು ಪೊಲೀಸ್ ತನಿಖೆಯಿಂದ ದೃಢ ಪಟ್ಟಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅರವಿಂದ ಪತ್ನಿ ಆಶಾ ಹಾಗೂ ಮನೆಯ ಸೆಂಟ್ರಿಂಗ್‌ ಕೆಲಸ ನಿರ್ವಹಿಸಿದ ಯೋಗೀಶ ಗೌಡ ಆರೋಪಿಗಳಾಗಿದ್ದಾರೆ. ಅರವಿಂದ ಭಾಸ್ಕರ ಅವರು ಸುಮಾರು 2 ವರ್ಷಗಳಿಂದ ಹೊಸ ಮನೆಯನ್ನು ಕಟ್ಟಲು ಆರಂಭಿಸಿದ್ದು, ಅದರ ಸೆಂಟ್ರಿಂಗ್‌ ಕೆಲಸವನ್ನು ಯೋಗೀಶ

ಎಸ್.ಡಿ.ಎಂ. ವಿದ್ಯಾರ್ಥಿಗಳ ‘ಗತವೈಭವ’ ಸಾಕ್ಷ್ಯಚಿತ್ರಕ್ಕೆ ಅಂತರರಾಷ್ಟ್ರೀಯ ಮಟ್ಟದ ‘ಅತ್ಯುತ್ತಮ ಸಾಕ್ಷ್ಯಚಿತ್ರ ಪ್ರಶಸ್ತಿ’

ಕಾಸರಗೋಡು ಕೈಮಗ್ಗದ ಸೀರೆಗಳನ್ನು ಕುರಿತಾದ ಸಾಕ್ಷ್ಯಚಿತ್ರ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಹೊರತಂದ ಕಾಸರಗೋಡಿನ ಕೈಮಗ್ಗದ ಸೀರೆಗಳ ಕುರಿತಾದ ‘ಗತವೈಭವ’ ಸಾಕ್ಷ್ಯಚಿತ್ರವು ಬೆಂಗಳೂರಿನಲ್ಲಿ ನಡೆದ ‘ಪರಿದೃಶ್ಯ’ ಅಂತರರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರೋತ್ಸವ ಸ್ಪರ್ಧೆಯಲ್ಲಿ ‘ಅತ್ಯುತ್ತಮ ಸಾಕ್ಷ್ಯಚಿತ್ರ ಪ್ರಶಸ್ತಿ’ (ಃesಣ

ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಹಾಕಿದ ಸಚಿವ ಅಶ್ವಥ್ ನಾರಾಯಣ್ ಅವರನ್ನು ಸಂಪುಟದಿಂದ ವಜಾಗೊಳಿಸಿ ; ರಾಜ್ಯಪಾಲರಿಗೆ ಎಂ.ಎಸ್. ರಕ್ಷಾ ರಾಮಯ್ಯ ಒತ್ತಾಯ

ಬೆಂಗಳೂರು,ಫೆ,27: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬಹಿರಂಗವಾಗಿ ಜೀವ ಬೆದರಿಕೆ ಹಾಕಿರುವ ಉನ್ನತ ಶಿಕ್ಷಣ ಮತ್ತು ಐಟಿ – ಬಿಟಿ ಸಚಿವ ಸಿ.ಎನ್. ಅಶ್ವಥ್ ನಾರಾಯಣ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ‌ ಎಂ.ಎಸ್. ರಕ್ಷಾ ರಾಮಯ್ಯ ಒತ್ತಾಯಿಸಿದ್ದಾರೆ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ಜೀವ

TRUE ಲವ್ NEVER END “ಇದರ ಮೊದಲ ಪೊಸ್ಟರ್ ಬಿಡುಗಡೆ

ನವೀನ್ ನೆರೋಳ್ತಡಿ ನಿರ್ದೇಶನದಲ್ಲಿ ಸಂತೋಷ್ ಮತ್ತು ನಯನ ಸಾಲ್ಯಾನ್ ಅಭಿನಯದಲ್ಲಿ ಮೂಡಿ ಬರಲಿರುವ ತುಳು ಆಲ್ಬಮ್ ಹಾಡು” True ಲವ್ never end “ಇದರ ಮೊದಲ ಪೊಸ್ಟರ್ ಶ್ರೀ ಶ್ರೀ ಶ್ರೀ ಈಶ ವಿಠ್ಠಲದಾಸ ಸ್ವಾಮೀಜಿ ಶ್ರೀ ಕ್ಷೇತ್ರ ಕೇಮಾರು ಇವರಿಂದ ಎಲ್ಲಾ ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು.

ಬೈಂದೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ : ಅಷ್ಟಬಂಧ ಬ್ರಹ್ಮಕಲಶೋತ್ಸವ

ಇತಿಹಾಸ ಪ್ರಸಿದ್ಧ ಬೈಂದೂರು ತಾಲೂಕಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆಬ್ರವರಿ 27 ರಿಂದ ಮಾರ್ಚ್ 8 ರವರೆಗೆ ಶ್ರೀದೇವಿಯ ಸಾನಿಧ್ಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ. ಶ್ರೀ ಮನ್ಮಹಾ ರಥೋತ್ಸವದ ಪ್ರಯುಕ್ತ ಶ್ರೀ ರಾಮಚಂದ್ರಾಪುರ ಮಠದ 36ನೇ ಜಗದ್ಗುರು ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಶ್ರೀ ದೇವಳಕ್ಕೆ ಭೇಟಿ ನೀಡಿ ನಂತರ., ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ಅಷ್ಟಬಂದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿರುವ