ಬೆಂಗಳೂರು, ಫೆ, 25; ಯುವ ಸಬಲೀಕರಣ ಮತ್ತು ಮಹಿಳಾ ಸಬಲೀಕರಣ, ಆರ್‌ವಿಡಿ ಟ್ರಸ್ಟ್ ನಿಂದ ಬೆಂಗಳೂರಿನ ವಿವಿ ಪುರಂನ ಬಿಐಟಿ ಕಾಲೇಜಿನಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಮಂದಿಗೆ ಉದ್ಯೋಗ ನೀಡಲಾಗಿದೆ. ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದ ಲೋಕಾಯುಕ್ತ ನ್ಯಾಯಮೂರ್ತಿ ಜಸ್ಟಿಸ್ ಸಂತೋಷ್ ಹೆಗಡೆ, ಯಾರೋ ಮಹಾನುಭಾವ ವರ್ಷಕ್ಕೆ ಎರಡು ಕೋಟಿ
ಪುತ್ತೂರು: ಕರ್ನಾಟಕ ರಾಜ್ಯ ನೌಕರರ ಸಂಘದ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಮಾ.1ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಇದಕ್ಕೆ ಪುತ್ತೂರು ತಾಲೂಕು ಶಾಖೆಯಿಂದ ಬೆಂಬಲ ಸೂಚಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪುತ್ತೂರು ಅಧ್ಯಕ್ಷ ಶಿವಾನಂದ ಆಚಾರ್ಯ ಹೇಳಿದರು. ಅವರು
ಬಂಟರ ಯಾನೆ ನಾಡವರ ಅಭಿವೃದ್ಧಿ ನಿಗಮ ಸ್ಥಾಪನೆ, ಸಮುದಾಯವನ್ನು 3ಬಿ ಯಿಂದ 2ಎಗೆ ವರ್ಗಾಯಿಸುವ ಭರವಸೆ ಈಡೇರಿಸದ ರಾಜ್ಯ ಸರಕಾರಕ್ಕೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಾಗುವುದು ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟ ತಿಳಿಸಿದೆ. ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು, ಬಂಟರ ನಿಗಮ ಸ್ಥಾಪನೆ ಮಾಡಬೇಕು, ಬಂಟ ಸಮುದಾಯವನ್ನು 2ಎ ವರ್ಗಕ್ಕೆ ವರ್ಗಾಯಿಸಬೇಕು ಮೊದಲಾದ ಬೇಡಿಕೆಗಳ ಈಡೇರಿಕೆಗೆ ಹಲವು ವರ್ಷಗಳಿಂದ ಮನವಿ
ಬೆಳ್ಮಣ್ : ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಂಕಲಕರಿಯದ ಉಗ್ಗೆದಬೆಟ್ಟು ಎಂಬಲ್ಲಿ ಮರಳುಗಾರಿಕೆಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ, ಮರಳು ಸಾಗಿಸುವ ವಾಹನವನ್ನು ತಡೆಯೊಡ್ಡಿದ ಘಟನೆ ನಡೆದಿದೆ. ಇಲ್ಲಿನ ಶಾಂಭವಿ ನದಿಯಿಂದ ಮರಳು ಒಯ್ಯತ್ತಿದ್ದ ಟೆಂಪೋ ಒಂದನ್ನು ತಡೆದು ನಿಲ್ಲಿಸಿದ ಸ್ಥಳೀಯರು, ನಮ್ಮೂರ ರಸ್ತೆ, ಪರಿಸರ ಹಾಳಾಗುತ್ತದೆ ಎಂದು ಆಗ್ರಹಿಸಿ ತಕ್ಷಣ ನಿಲ್ಲಿಸುವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸ್ಥಳೀಯರು ಹಾಗೂ ಮರಳುಗಾರಿಕೆ
ಬಂಟ್ವಾಳ: ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರವನ್ನುನ ಆಗ್ರಹಿಸಿ ಮಾ. 1 ರಿಂದ ನಡೆಯುವ ಅನಿರ್ಧಿಷ್ಠಾವಧಿ ಮುಷ್ಕರದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ಶಾಖೆಯು ಬೆಂಬಲ ವ್ಯಕ್ತಪಡಿಸಿರುವುದಾಗಿ ಸಂಘದ ಅಧ್ಯಕ್ಷ ಉಮನಾಥ ರೈ ಮೇರಾವು ತಿಳಿಸಿದರು. ಬಿ.ಸಿ.ರೋಡಿನ ಪ್ರೆಸ್‍ಕ್ಲಬ್‍ನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿ, ಫೆ.21ರಂದು
ಗೃಹಿಣಿಯೊರ್ವರು ತನ್ನ ವಾಸದ ಮನೆಯ ಅಡುಗೆ ಕೋಣೆಯಲ್ಲಿ ಶಾಲಿನಿಂದ ನೇಣು ಹಾಕಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ನ್ಯಾಯಾಲಯ ಆರೋಪಿ ಗಂಡನಿಗೆ ಮಾ.10ರ ವರಗೆ ನ್ಯಾಯಾಂಗ ಬಂಧನ ವಿಧಿಸಿದೆ.ಆತ್ಮಹತ್ಯೆಗೆ ಶರಣಾದ ಗೃಹಿಣಿ ಪಡುಬಿದ್ರಿ ಕೆಳಗಿನ ಪೇಟೆ ನಿವಾಸಿ ಚೇತನ್ ಎಂಬಾತನ ಪತ್ನಿ ಮಮತ(43), ಎಂಟು ವರ್ಷದ ಒಂದು ಹೆಣ್ಣು ಮಗು ಹಾಗೂ ಹನ್ನೆರಡು ವರ್ಷದ ಗಂಡು ಮಗನನ್ನು ಹೊಂದಿದ್ದ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಅಡುಗೆ ಕೋಣೆಯಲ್ಲಿ ಪತ್ತೆಯಾಗಿದ್ದು, ಬಳಿಕ ಪೊಲೀಸ್
ಮಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಅಧಿಕಾರ ಸ್ವೀಕರಿಸಿದರು.ನಿರ್ಗಮನ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ನೂತನ ಪೊಲೀಸ್ ಆಯುಕ್ತರಿಗೆ ಅಧಿಕಾರ ಹಸ್ತಾಂತರಿಸಿದರು. ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಕುಲದೀಪ್ ಕುಮಾರ್ ಜೈನ್, ಭ್ರಷ್ಟಾಚಾರ ಸಹಿಸುವುದಿಲ್ಲ. ಎಲ್ಲ ರೀತಿಯ ಅಕ್ರಮ ಚಟುವಟಿಕೆಗಳನ್ನು ಹತ್ತಿಕ್ಕಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಎಲ್ಲರ ಸಹಕಾರದಿಂದ ಜನರಿಗೆ ಅನುಕೂಲವಾಗುವಂತೆ
ಮಂಗಳೂರು: ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ಅಭಿವಂದನೆ ಹಾಗೂ ಸವಲತ್ತುಗಳ ವಿತರಣೆ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ಬ್ಯಾಂಕ್ ಸಭಾಂಗಣದಲ್ಲಿ ಜರುಗಿತು. ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತಾನ್ನಾಡಿದ ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಅವರು, “ನವೋದಯ ಸ್ವಸಹಾಯ ಸಂಘಗಳ ಮೂಲಕ ಗ್ರಾಮೀಣ ಭಾಗದ ಮಹಿಳೆಯರಲ್ಲಿ ಶಕ್ತಿ ತುಂಬಿರುವ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಅವರು ತಮ್ಮ 74ನೇ ಹುಟ್ಟುಹಬ್ಬದ
ಮಂಗಳೂರು: ಪ್ರತಿದಿನ 800ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಊಟ ಹಾಕುವ, ತನ್ನ ಮನೆಯಲ್ಲೇ 55 ಬೀಡಾಡಿ ನಾಯಿ, 15 ಬೆಕ್ಕು, 11 ಗಿಡುಗ, ದನ, ಕಾಗೆ, ಕೋಗಿಲೆ, ಆಮೆ, ಮೊಲಗಳನ್ನು ಸಾಕಿ ಸಲಹುತ್ತಿರುವ ಮಂಗಳೂರು ಬಲ್ಲಾಳ್‌ಬಾಗ್ ನಿವಾಸಿ ರಜನಿ ಶೆಟ್ಟಿ ಅವರನ್ನು ಮಂಗಳೂರು ಪ್ರೆಸ್ ಕ್ಲಬ್‌ನ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಂಗಳೂರು ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿಯು 2022ನೇ ಸಾಲಿನ ಪ್ರಶಸ್ತಿಗೆ ರಜನಿ ಶೆಟ್ಟಿ ಅವರನ್ನು ಆಯ್ಕೆ ನಡೆಸಿದೆ. ಮಾ.5ರಂದು
ತಿರುಪತಿ ಕ್ಷೇತ್ರದ ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರಾಗಿ ಡಾ.ವಸಂತ ಕವಿತ ಅವರು ನೇಮಕಗೊಂಡಿದ್ದಾರೆ.ತಿರುಪತಿ ಕ್ಷೇತ್ರದ ಭಕ್ತಿ ಚಾನೆಲ್ ಗೆ ವಸಂತ ಕವಿತಾ ಸೇರಿದಂತೆ ನಾಲ್ಕು ಮಂದಿ ಹೊಸ ನಿರ್ದೇಶಕರ ನೇಮಕಕ್ಕೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅನುಮೋದನೆ ನೀಡಿದೆ.ಬೆಂಗಳೂರಿನವರಾಗಿರುವ ಶ್ರೀಮತಿ ವಸಂತ ಕವಿತಾ ಅವರು ಕರ್ನಾಟಕದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಮೊಮ್ಮಗಳು . ವಸಂತ ಕವಿತಾ ಅವರು ಅನೇಕ




























