Home Posts tagged V4News (Page 558)

ರಾಜ್ಯದ ಅಭಿವೃದ್ಧಿಗಳಿಗೆ ಕರ್ನಾಟಕ ಜನತಾ ಪಕ್ಷ ಬೆಂಬಲಿಸಿ : ಪಕ್ಷದ ಸಂಸ್ಥಾಪಕ ಪದ್ಮನಾಭ ಪ್ರಸನ್ನ ಕುಮಾರ್

ರಾಜ್ಯದ ಜನತೆಯು ರಾಜ್ಯದ ಅಭಿವೃದ್ಧಿಗಳಿಗೆ ಕರ್ನಾಟಕ ಜನತಾ ಪಕ್ಷವನ್ನು ಬೆಂಬಲಿಸಿ ಸುವರ್ಣ ನಾಡನ್ನು ಕಟ್ಟಲು ಕೈ ಜೋಡಿಸಬೇಕೆಂದು ಪಕ್ಷದ ಸಂಸ್ಥಾಪಕ ಅಧ್ಯಕ್ಷರಾದ ಪದ್ಮನಾಭ ಪ್ರಸನ್ನ ಕುಮಾರ್ ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.ರಾಜ್ಯದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ. ರಾಜ್ಯದ ಜನ ಬಿಜೆಪಿ,

ಫೆ.21ರಂದು ‘ನೀನೊಲಿದ ಬದುಕು’ ಕೃತಿ ಲೋಕಾರ್ಪಣೆ

ಕಲ್ಕೂರ ಪ್ರತಿಷ್ಠಾನ ಮಂಗಳೂರು, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಮತ್ತು ಸ್ನಾತಕೋತ್ತ ತುಳು ಅಧ್ಯಯನ ವಿಭಾಗ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ, ಸಾಹಿತಿ ಡಾ. ಸಿ. ಸೋಮಶೇಖರ್ ಅವರು ಬರೆದಿರುವ ಆತ್ಮಕಥನ ಕೃತಿ ನೀನೊಲಿದ ಬದುಕು ಅನಾವರಣ ಸಮಾರಂಭವು ಫೆ.21ರಂದು ನಡೆಯಲಿದೆ. ಈ ಬಗ್ಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…. ಎ. ಆರ್ ಸುಬ್ಬೆ

ತುಳು ಲಿಪಿ ನಾಮಫಲಕ ಅನಾವರಣ ಕಾರ್ಯಕ್ರಮ

ಕಾಸರಗೋಡು ಜಿಲ್ಲೆಯ ಶ್ರೀ ಮದ್ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠದಲ್ಲಿ ತುಲು ಲಿಪಿ ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು. ಶ್ರೀ ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠ ಕಾಸರಗೋಡು. ಇಲ್ಲಿನ ಶ್ರೀ ವಿಷ್ಣುಮಂಗಲ ದೇವಾಲಯದ ವಾರ್ಷಿಕೋತ್ಸವದ ಸಂಧರ್ಭದಲ್ಲಿ ಶ್ರೀ ಶ್ರೀ ಸಚ್ಚಿದಾನಂದಭಾರತೀ ಶ್ರೀಪಾದಂಗಳವರ ಹಾಗೂ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಕೇರಳದ ಮಾಜಿ ಕಂದಾಯ ಸಚಿವರಾದ ಶ್ರೀ ಇ ಚಂದ್ರಶೇಖರನ್ ಅವರು ಶ್ರೀ ಮಠದ

ಹಿಂದೂ ಸಮಾಜಕ್ಕೆ ಛತ್ರಪತಿ ಶಿವಾಜಿ ಮಹಾರಾಜರ ಕೊಡುಗೆ ಅತ್ಯಮೂಲ್ಯ: ಶಾಸಕ ವೇದವ್ಯಾಸ ಕಾಮತ್

ಭಾರತ ದೇಶ ಹಾಗೂ ಹಿಂದೂ ಸಮಾಜಕ್ಕೆ ಛತ್ರಪತಿ ಶಿವಾಜಿ ಮಹಾರಾಜರು ನೀಡಿದ ಕೊಡುಗೆ ಅತ್ಯಮೂಲ್ಯವಾದದ್ದು ಎಂದು ಶಾಸಕರಾದ ಡಿ. ವೇದವ್ಯಾಸ ಕಾಮತ್ ಅವರು ಬಣ್ಣಿಸಿದರು.ಅವರು ಫೆ. 19ರ ಭಾನುವಾರ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ದಕ್ಷಿಣ ಕನ್ನಡ ಹಾಗೂ ಜಿಲ್ಲೆಯ ಆರ್ಯ ಯಾನೆ ಮರಾಠ ಸಮಾಜ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಛತ್ರಪತಿ ಶಿವಾಜಿಯವರ 396ನೇ

ಕಲಾಪೋಷಕರಿಂದ ಯಕ್ಷಗಾನ ಉಳಿವು: ಅನಂತ ಆಸ್ರಣ್ಣ

ಮಂಗಳೂರು: ‘ಯಕ್ಷಗಾನವನ್ನು ನಿರಂತರವಾಗಿ ಉಳಿಸಿ, ಬೆಳೆಸಲು ಕಲಾಪೋಷಕರ ಪಾತ್ರ ಹಿರಿದು, ಬೊಂಡಾಲದಲ್ಲಿ ದೀರ್ಘಕಾಲ ಯಕ್ಷಗಾನವನ್ನು ಸೇವಾರೂಪದಲ್ಲಿ ಆಡಿಸುವುದಲ್ಲದೆ, ಕಲಾವಿದರನ್ನು ಸನ್ಮಾನಿಸುವ ಮೂಲಕ ಕಲಾಮಾತೆಯ ಸೇವೆಯನ್ನೂ ನಡೆಸಿಕೊಂಡು ಬರುತ್ತಿರುವುದು ಸ್ತುತ್ಯರ್ಹ’ ಎಂದು ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಹೇಳಿದ್ದಾರೆ. ಹಳೆ ತಲೆಮಾರಿನ ಅರ್ಥಧಾರಿ, ಶಿಕ್ಷಕ ಮತ್ತು ಶಂಭೂರು ಗ್ರಾಮದ ಪಟೇಲ ದಿ.ಬೊಂಡಾಲ ಜನಾರ್ಧನ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾರನ್ನು ಆತ್ಮೀಯವಾಗಿ ಸ್ವಾಗತಿಸಿದ ನಳಿನ್ ಕುಮಾರ್ ಕಟೀಲು

ಉಡುಪಿ ಜಿಲ್ಲಾ ಪ್ರವಾಸದ ನಿಮಿತ್ತ ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಇವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. , ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್, ಶಾಸಕ ರಾಜೇಶ್ ನಾಯ್ಕ್, ಭರತ್ ಶೆಟ್ಟಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ಭೇಟಿ

ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ಇಂದು ಬೆಳಗ್ಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ನಡ್ದಾ ಅವರನ್ನು ಮಠದ ದಿವಾನ ವರದರಾಜ ಆಚಾರ್ಯ ಮಾಲಾರ್ಪಣೆಗೈದು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನಿಲ್ ಕುಮಾರ್ ಮುಖಂಡರಾದ ಪ್ರದೀಪ ರಾವ್, ಸುಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಬಳಿಕ ಜೆಪಿ ನಡ್ದಾ

ಉಡುಪಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇಂದು ಬೆಳಗ್ಗೆ ಉಡುಪಿಗೆ ಆಗಮಿಸಿದ್ದು, ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ನಡ್ದಾರನ್ನು ಮಠದ ದಿವಾನ ವರದರಾಜ ಆಚಾರ್ಯ ಮಾಲಾರ್ಪಣೆಗೈದು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನಿಲ್ ಕುಮಾರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಉಡುಪಿ ಶಾಸಕ ರಘುಪತಿ ಭಟ್, ಮುಖಂಡರಾದ

ಕಡಬ : ಕಾಡಾನೆ ದಾಳಿ ಇಬ್ಬರು ಬಲಿ

ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಗೆ ಯುವತಿ ಸಹಿತ ಇಬ್ಬರು ಬಲಿಯಾದ ಘಟನೆ ಕಡಬ ಸಮೀಪದ ಮೀನಾಡಿ ಎಂಬಲ್ಲಿ ಇಂದು ನಡೆದಿದೆ. ಹಾಲಿನ ಡೈರಿಗೆ ಕೆಲಸಕ್ಕೆ ಹೋಗುತ್ತಿದ್ದ ಸಿಬ್ಬಂದಿ ರಂಜಿತಾ ಹಾಗೂ ರಮೇಶ್ ರೈ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಸ್ಥಳದಲ್ಲಿ ಆಕ್ರೋಶಿತ ಸಾರ್ವಜನಿಕರು ಗಲಾಟೆ ಮಾಡಿದ್ದು ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ವಾರದ ಹಿಂದೆ ಮರ್ದಾಳದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಕಾಡಾನೆ ದಾಳಿ ಬಗ್ಗೆ ವಿಡಿಯೋ

ಉಳ್ಳಾಲ: ಕೆ ಎಸ್ ಆರ್ ಪಿ ಪೇದೆ ಆತ್ಮಹತ್ಯೆ

ಅಸೈಗೋಳಿ ಕೆ ಎಸ್ ಆರ್ ಪಿಯ ಏಳನೇ ಬೆಟಾಲಿಯನ್ ನ ನೂತನ ಬ್ಯಾಚ್ ನ ಪೊಲೀಸ್ ಪೇದೆ ಬಾಡಿಗೆ ರೂಮಿನಲ್ಲಿ ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಅಸೈಗೋಳಿ ಸೈಟ್ ನಲ್ಲಿ ಇಂದು ಸಂಜೆ ಬೆಳಕಿಗೆ ಬಂದಿದೆ. ಬೆಳಗಾಂ ನಿವಾಸಿ ವಿಮಲನಾಥ ಜೈನ್ (28) ಆತ್ಮಹತ್ಯೆ ಮಾಡಿಕೊಂಡವರು. ತಿಂಗಳ ಹಿಂದಷ್ಟೇ ತಾಯಿ ತೀರಿಕೊಂಡ ನಂತರ ದು:ಖದಲ್ಲಿದ್ದ ಅವರು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ನೂತನ ಬ್ಯಾಚ್ ನವರಾಗಿದ್ದ ವಿಮಲನಾಥ್ ಇಂದು ಕರ್ತವ್ಯಕ್ಕೆ ಹಾಜರಾಗದೇ ಬಾಡಿಗೆ ರೂಮಿನಲ್ಲಿ