Home Posts tagged V4News (Page 559)

ಸ್ಯಾಂಡಲ್‌ ವುಡ್‌ ನ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್‌ ನಿಧನ | SK Bhagavan

ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್ ಕೆ ಭಗವಾನ್ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 90 ವರ್ಷದ ಭಗವಾನ್ ಕೊನೆಯುಸಿರೆಳೆದಿದ್ದಾರೆ. ಜಯದೇವ ಆಸ್ಪತ್ರೆ ಸೇರಿದ ಬಳಿಕ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದರು. ಆದರೆ ಇಂದು ಚಿಕಿತ್ಸೆ

ದ.ಕ. ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಸ್ತಿಗೆ ಬಲ: ಅಪರಾಧಿಗಳ ಪತ್ತೆಗೆ ನೂತನ  ಎಮ್‌ಸಿಸಿಟಿಎನ್‌ಎಸ್   ಪೋರ್ಟಬಲ್ ಸ್ಕ್ಯಾನರ್ ಬಳಕೆ

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಜರುಗಬಹುದಾದ ಅಪರಾಧ ಕೃತ್ಯಗಳನ್ನು ತಡೆಗಟ್ಟುವ ಹಾಗೂ ಅಪರಾಧಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ನೂತನ MCCTNS ( Mobile Crime and Criminal Tracking Network System) ಪೋರ್ಟಬಲ್ ಸ್ಕ್ಯಾನರ್ ಬಳಕೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದೆ. ಈ ನೂತನ ತಂತ್ರಜ್ಞಾನದ ಸ್ಕ್ಯಾನರ್  ಅನ್ನು  ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳ 

ಕುಂಪಲ: ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾವು

ಕುಂಪಲ ಆಶ್ರಯ ಕಾಲನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯ ದಂಪತಿಯ ಹಿರಿಯ ಪುತ್ರಿ ಧನ್ಯ(17) ಮೃತ ವಿದ್ಯಾರ್ಥಿನಿ. ಧನ್ಯ ನಗರದ ಕಾಲೇಜಿನಲ್ಲಿ ದ್ವಿತೀಯ ಪಿ.ಯು ವಿದ್ಯಾರ್ಥಿನಿಯಾಗಿದ್ದಳು.ಫೆ.14 ರಂದು ಮದ್ಯಾಹ್ನ ಧನ್ಯ ತಾಯಿ ಭವ್ಯ ಮನೆಗೆ ತೆರಳಿದಾಗ ರಜೆಯಲ್ಲಿದ್ದ ಮಗಳು ಮನೆಯಲ್ಲಿ ಇರಲಿಲ್ಲ.ಮದ್ಯಾಹ್ನ 3 ಗಂಟೆಗೆ ಧನ್ಯ ಮನೆಗೆ ಮರಳಿದ್ದು ಈ ವೇಳೆ ತಾಯಿ ಮಗಳಲ್ಲಿ ಎಲ್ಲಿಗೆ ಹೋಗಿದ್ದೆ ಎಂದು ಪ್ರಶ್ನಿಸಿದ್ದು ಗೆಳತಿ ಮ‌ನೆಗೆ ಓದಲು ತೆರಳಿದ್ದೆ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ರಾಜ್‌ ಕುಮಾರ್ ಬಹರೈನ್ ಅವರಿಗೆ ಸಾರ್ವಜನಿಕ ಸನ್ಮಾನ ಮತ್ತು ರಾಜಾಭಿನಂದನೆ

ವಿದೇಶದಲ್ಲಿ ಕನ್ನಡ ಭಾಷೆ, ಕಲೆ, ಸಂಸ್ಕೃತಿಯನ್ನು ಪಸರಿಸಿ ಮೇಳೈಸಿದ ಅನಿವಾಸ ಭಾರತೀಯ ವಿಭಾಗದಲ್ಲಿ 2022ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ರಾಜ್ ಕುಮಾರ್ ಬಹರೈನ್ ಅಂಬಲಪಾಡಿ ಇವರಿಗೆ ಸಾರ್ವಜನಿಕ ಸನ್ಮಾನ ಮತ್ತು ರಾಜಾಭಿನಂದನೆ ಕಾರ್ಯಕ್ರಮವು ಫೆ.19ರಂದು ಮಧ್ಯಾಹ್ನ 3.30ಕ್ಕೆ ಉಡುಪಿ ಅಜ್ಜರಕಾಡಿನ ಪುರಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಧರ್ಮಸ್ಥಳದ ನಿತ್ಯಾನಂದ ನಗರದ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಂ ಸದ್ಗುರು

ಸರ್ಕಾರ ಮಹತ್ವವಿಲ್ಲದ ಬಜೆಟ್ ಮಂಡಿಸಿದೆ : ಯು.ಟಿ. ಖಾದರ್

ರಾಜ್ಯದ ಸಂಸದರ ಮೌನ, ಸರಕಾರದ ಅಸಹಾಯಕತೆ, ಕೇಂದ್ರ ಸರಕಾರದ ಮಲತಾಯಿ ಧೋರಣೆಯಿಂದಾಗಿ ರಾಜ್ಯದ ಜನತೆ ಸಾಲದ ಹೊರೆಯಲ್ಲಿ ಹೊತ್ತುಕೊಳ್ಳುವಂತಾಗಿದೆ. ರಾಜ್ಯ ಸರಕಾರ ಮಂಡಿಸಿದ್ದು ಸುಲಿಗೆ, ಸಾಲದ ಬಜೆಟ್ ಆಗಿದೆ ರಾಜ್ಯ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊನೆಯ ಉಸಿರೆಳೆಯುತ್ತಿರುವ ಸರಕಾರ ಮಹತ್ವವಿಲ್ಲದ ಬಜೆಟ್ ಮಂಡಿಸಿದ್ದು, ಜನತೆಯನ್ನು ಸಾಲದಲ್ಲಿ ಮುಳುಗಿಸಿದೆ

ಕಾಪಿಕಾಡ್ : ಉಮಾಮಹೇಶ್ವರಿ ದೇವಸ್ಥಾನ : ಆಹೋರಾತ್ರಿ ಭಜನೋತ್ಸವ

ಉಳ್ಳಾಲ ತಾಲೂಕಿನ ಕಾಪಿಕಾಡ್ ಉಮಾಪುರಿ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ಆಹೋರಾತ್ರಿ ಭಜನೋತ್ಸವ ಆಯೋಜಿಸಲಾಯಿತು. ಶನಿವಾರ ಮುಂಜಾನೆ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಆಹೋರಾತ್ರಿ ಭಜನೋತ್ಸವಕ್ಕೆ ಉದ್ಯಮಿ ವನಿತಾ ಶೆಟ್ಟಿ ಮತ್ತು ಗಣೇಶ್ ಶೆಟ್ಟಿ ದಂಪತಿಗಳು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು. ಶನಿವಾರ ಮುಂಜಾನೆ ಆರಂಭಗೊಂಡ ಭಜನೋತ್ಸವವು ರಾತ್ರಿ ಶಿವರಾತ್ರಿಯ ಜಾಗರಣೆಯೊಂದಿಗೆ ಮುಂದುವರಿದು ಭಾನುವಾರ ಬೆಳಿಗ್ಗೆ ತನಕ

ಕಾಂಗ್ರೆಸ್ ಕಾರ್ಯಕರ್ತರಲ್ಲದ ಅಭ್ಯರ್ಥಿಗೆ ಟಿಕೆಟ್ ನೀಡುವ ಪ್ರಶ್ನೆಯೇ ಇಲ್ಲ : ಕಾರ್ಕಳದಲ್ಲಿ ಕಾಂಗ್ರೆಸ್ ಮುಖಂಡರ ಪುನರುಚ್ಚಾರ

ಕಾರ್ಕಳ: ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲದ ಐದನೇ ಅಭ್ಯರ್ಥಿಗೆ ಟಿಕೆಟ್ ನೀಡುವ ಪ್ರಶ್ನೆಯೇ ಇಲ್ಲ. ನಾವೆಲ್ಲಾ ಒಗ್ಗಟ್ಟಾಗಿ ಚುನಾವಣೆ ಎದುರಿಸಿ ಜಯಶಾಲಿಯಾಗಲಿದ್ದೇವೆ ಎಂದು ಕಾರ್ಕಳ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ನೀರೆ ಕೃಷ್ಣ ಶೆಟ್ಟಿ, ಮಂಜುನಾಥ್ ಪೂಜಾರಿ ಮುದ್ರಾಡಿ, ಡಿ ಆರ್ ರಾಜು, ಸುರೇಂದ್ರ ಶೆಟ್ಟಿ ಪುನರುಚ್ಚರಿಸಿದ್ದಾರೆ. ಕಾರ್ಕಳ ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಹೆಬ್ರಿ ಬ್ಲಾಕ್

ವಿಟ್ಲ : ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ

ವಿಟ್ಲ: ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಕನ್ಯಾನದಲ್ಲಿ ನಡೆದಿದೆ.ಮೃತರನ್ನು ಆಟೋ ಚಾಲಕ ದಿನೇಶ್ ಬೈರಿಕಟ್ಟೆ (32) ಎಂದು ಗುರುತಿಸಲಾಗಿದೆ.ಅವಿವಾಹಿತರಾಗಿದ್ದ ದಿನೇಶ್ ರವರು ಆಟೋ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಇಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.ಆತ್ಮಹತ್ಯೆ ಕಾರಣ ತಿಳಿದು ಬಂದಿಲ್ಲ.

ಯುವಜನರಿಗೆ ಉದ್ಯೋಗದ ಭರವಸೆ ನೀಡದ ನಿರಾಶದಾಯಕ ಬಜೆಟ್: ಡಿವೈಎಫ್ಐ ಖಂಡನೆ

ಮುಖ್ಯಮಂತ್ರಿ ಮಾನ್ಯ ಬಸವರಾಜ ಬೊಮ್ಮಾಯಿಯವರು ತಮ್ಮ ಅಧಿಕಾರವಧಿಯಲ್ಲಿ ಎರಡನೇ ಬಾರಿಗೆ ಇಂದು ಸದನದಲ್ಲಿ ಮಂಡಿಸಿದ ಆಯವ್ಯಯವು ರಾಜ್ಯದ ಯುವಜನರ ಬದುಕಿನ ಕುರಿತು ಯಾವುದೆ ಸ್ಪಷ್ಟ ಕಣ್ಣೋಟ ಹೊಂದಿಲ್ಲ. ಉದ್ಯೋಗಕ್ಕಾಗಿ ಹಂಬಲಿಸುತ್ತಿರುವ ನಿರುದ್ಯೋಗಿ ಯುವಕರಿಗೆ ಈ ಬಜೆಟ್ ನಿರಾಸೆ ಮೂಡಿಸಿದೆ. ಯುವಜನರ ಬದುಕಿಗೆ ಭದ್ರತೆ ನೀಡದ ಈ ಬಜೆಟ್ ಅನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿ ಖಂಡಿಸುತ್ತದೆ. ಮುಖ್ಯಮಂತ್ರಿಗಳು ತಮ್ಮ

ಕಿನ್ನಿಗೋಳಿ: ಯುವ ಸಮ್ಮೇಳನ ಡಿ ವೈ ಸಿ 2023

ಕಿನ್ನಿಗೋಳಿ: ನಾವು ಮಾಡುವ ಕೆಲಸದಿಂದ ಇನ್ನೊಬ್ಬರಿಗೆ ಮೆಚ್ಚುವಂತಾಗಿರಬೇಕು ಹಾಗೂ ಶಕ್ತಿಯುತ ಸಮುದಾಯವನ್ನು ಕಟ್ಟುವಂತ ಕೆಲಸ ಮಾಡಬೇಕು. ಸಮಾಜ ಸೇವೆಯಲ್ಲಿ ತೊಡಗಿ ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸಬೇಕು ಎಂದು ಮುನ್ಸೂಜಾರ್ ಮ್ಯಾಕ್ಸಿಮ ನೊರೋನ್ಹಾ ವಿಗರ್ ಜನರಲ್ ಮಂಗಳೂರು ಧರ್ಮ ಪ್ರಾಂತ್ಯ ಅವರು ಹೇಳಿದರು. ಅವರು ರೆಮೆದಿ ಅಮ್ಮನವರ ದೇವಾಲಯದ ಸಭಾಭವನದಲ್ಲಿ ಭಾರತೀಯ ಕಥೋಲಿಕ ಯುವ ಸಮ್ಮೇಳನ್ ಐಸಿ ವೈ ಎಂ ಕೇಂದ್ರೀಯ ಸಮಿತಿ ಮಂಗಳೂರು ಮತ್ತು ಸಂತ ಜೂಡ ಐಸಿ ವೈ ಎಂ