Home Posts tagged V4News (Page 574)

ಆದ್ಯಪಾಡಿ: ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ
ಮಹಾ ಚಂಡಿಕಾಯಾಗ, ಧಾರ್ಮಿಕ ಸಭೆ

ದೇವರು ನಮಗೆ ನೀಡಿರುವ ಮನುಷ್ಯ ಜೀವನ ಪಾವನಗೊಳಿಸಲು ದೇವರ ಆರಾಧನೆ ಜೊತೆಗೆ ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಮತ್ತಿತರ ಉತ್ಸವಗಳಲ್ಲಿ ಕಾಯಾ ವಾಚಾ ಮನಸಾ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಉಳ್ಳಾಲ ಉಳಿಯ ಧರ್ಮರಸು ಉಳ್ಳಾಲ್ತಿ ಕ್ಷೇತ್ರ ಧರ್ಮದರ್ಶಿ ದೇವು ಮೂಲ್ಯಣ್ಣ ಹೇಳಿದ್ದಾರೆ.ಇಲ್ಲಿನ ಪ್ರಸಿದ್ದ ಆದ್ಯಪಾಡಿ ಬೀಬಿಲಚ್ಚಿಲ್ ಶ್ರೀ

ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆದ “ಶಿವ ಚಿತ್ತಾರ”

ಉಡುಪಿ : ದೇವರನ್ನು ಯಾವುದೇ ರೂಪದಲ್ಲಿಯೂ ಭಕ್ತಿಯನ್ನು ಮಾಡಬಹುದು. ನಿಷ್ಕಲ್ಮಶ ಮನಸ್ಸಿನಿಂದ ಪರಿಶುದ್ಧವಾದ ಪ್ರೀತಿಯಿಂದ ಆ ಪರಶಿವನಿಗೆ ಏನೇ ಅರ್ಪಿಸಿದರೂ ಅದು ಭಕ್ತಿ ಎಂದಾಗುತ್ತದೆ ಎಂಬುದಕ್ಕೆ ಸಾಕ್ಷಿಯಾಯಿತು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆದ “ಶಿವ ಚಿತ್ತಾರ”. ಶಾಲಾ ಮಕ್ಕಳಲ್ಲಿ ಅಡಗಿರುವ ಕಲೆಯನ್ನು, ಸಕಲ ಕಲೆಗೆ ಮೂಲವಾಗಿರುವ ಶಿವನ ಮೂಲಕವೇ ಹೊರತರುವ ಒಂದೊಳ್ಳೆ ಕಲ್ಪನೆಯೇ “ಶಿವ ಚಿತ್ತಾರ”. ಪರಶಿವನ ಚಿತ್ರವನ್ನು

ಫೈವ್ ಸ್ಟಾರ್ಸ್ ಯಂಗ್ ಬಾಯ್ಸ್ (ರಿ )ಅಡ್ಡೂರು ಮತ್ತು ಎಂ. ಜಿ. ಎಂ. ತಾಲೀಮ್ ಸ್ಪೋರ್ಟ್ಸ್ (ರಿ )ಗುರುಪುರ : ತಾಲಿಮ್ ಪ್ರದರ್ಶನ ಸಭೆ ಉದ್ಘಾಟನೆ

ಫೈವ್ ಸ್ಟಾರ್ಸ್ ಯಂಗ್ ಬಾಯ್ಸ್ (ರಿ )ಅಡ್ಡೂರು ಮತ್ತು ಎಂ. ಜಿ. ಎಂ. ತಾಲೀಮ್ ಸ್ಪೋರ್ಟ್ಸ್ (ರಿ )ಗುರುಪುರ ಇವರುಗಳ ಜಂಟಿ ಆಶ್ರಯದಲ್ಲಿ ನಡೆದ ಸಭೆ ಮತ್ತು ತಾಳಿಮು ಪ್ರದರ್ಶನ ಸಭೆಯನ್ನು ಉದ್ಘಾಟಿಸಿದ ಮುಹಮ್ಮದ್ ಬಡೂರ್ ರವರನ್ನು ಎರಡೂ ಸಂಘಟನೆಗಳು ಸನ್ಮಾನಿದ ಸಂದರ್ಭದಲ್ಲಿ. ಕೆ ಪಿ ಸಿ ಸಿ ಜನರಲ್ ಸೆಕ್ರೆಟರಿ ಇನಾಯತ್ ಅಲಿ, ಎಸ್ ಡಿ ಪಿ ಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ, ದ ಕ ಜಿಲ್ಲಾ ಮದ್ರಸ ಮೆನೇಜ್ಮೆಂಟ್ ಕಮಿಟಿ ಅಧ್ಯಕ್ಷರು ಎಂ […]

ಉಳ್ಳಾಲ ಅಬ್ಬಕ್ಕ ಥೀಮ್ ಪಾರ್ಕ್ ಗೆ ಪ್ರಯತ್ನ:  ಸಚಿವೆ ಶೋಭಾ ಕರಂದ್ಲಾಜೆ

ಉಳ್ಳಾಲದ ವೀರರಾಣಿ ಅಬ್ಬಕ್ಕ, ಕಿತ್ತೂರು ರಾಣಿ ಚೆನ್ನಮ್ಮನಂತಹ ಸ್ವಾತಂತ್ರ ಹೋರಾಟಗಾರರು ನಮ್ಮ ರಾಜ್ಯದ ಮಹಿಳೆಯರಿಗೆ ಪ್ರೇರಣ ಶಕ್ತಿಯಾಗಿದ್ದು, ಉಳ್ಳಾಲದಲ್ಲಿ ಅಬ್ಬಕ್ಕಳ ಶೌರ್ಯವನ್ನು ದೇಶ ವಿದೇಶಗಳಿಗೆ ತಿಳಿಸುವ ನಿಟ್ಟಿನಲ್ಲಿ ಥೀಮ್ ಪಾರ್ಕ್ ಆಗಬೇಕು, ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಅಬ್ಬಕ್ಕಳ ಹೆಸರು ಇಡಲು ಪ್ರಧಾನಿಗೆ ಮತ್ತು ಸಂಬಂಧಿತ ಇಲಾಖೆಯ ಸಚಿವರಿಗೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉಳ್ಳಾಲ

ಸಿಎ ಫೌಂಡೇಶನ್ ಪರೀಕ್ಷೆ :ಉತ್ತಮ ಫಲಿತಾಂಶದೊಂದಿಗೆ ಆಳ್ವಾಸ್ ವಿದ್ಯಾರ್ಥಿಗಳ ಸಾಧನೆ

ಮೂಡುಬಿದಿರೆ: ಸಿಎ ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಹಾಗೂ ಪದವಿ ಕಾಲೇಜು ಅತ್ಯುತ್ತಮ ಫಲಿತಾಂಶ ದಾಖಲಿಸಿದೆ. ಆಳ್ವಾಸ್ ಶೇಕಡ 75.78 ಫಲಿತಾಂಶ ಗಳಿಸಿದೆ. ಆಳ್ವಾಸ್ ಕಾಲೇಜಿನ 128 ವಿದ್ಯಾರ್ಥಿಗಳಲ್ಲಿ 97 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದುಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳಾದ ಧನುಷ್, ಸನ್ನಿ ಲಾಯ್ಡ್ ಮಿರಾಂಡಾ, ಅಸ್ಟರ್ ಲೆನ್

ತೊಕ್ಕೊಟ್ಟು: ಮೀನು ಸಾಗಾಟದ ಟೆಂಪೋ ಅಪಘಾತ- ಚಾಲಕನಿಗೆ ಗಾಯ

ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ.ಲಾರಿ ಚಾಲಕ ಸಾದಿಕ್ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ. ಮಂಗಳೂರು ಧಕ್ಕೆಯಿಂದ ಉಳ್ಳಾಲ ಫಿಷ್ ಮಿಲ್‌ಗೆ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ, ಚಾಲಕನ ನಿಯಂತ್ರಣ ತಪ್ಪಿ ವಾಲಿದ್ದು, ಈ ವೇಳೆ ಟಯರ್ ಸಿಡಿದು ರಸ್ತೆಗೆ ಉರುಳಿದೆ. ಘಟನೆಯಿಂದ ರಸ್ತೆ ಸಂಚಾರದಲ್ಲಿ ಅಡಚಣೆಯುಂಟಾಗಿದೆ. ಮಂಗಳೂರು ದಕ್ಷಿಣ ಸಂಚಾರಿ

ವೇದಂ ಆರೋಗ್ಯ ಆಯುರ್ವೇದ ಆಸ್ಪತ್ರೆಯಲ್ಲಿ ಸ್ವರ್ಣ ಬಿಂದು ಪ್ರಶಾನ

ಮಂಗಳೂರಿನ ವೇದಂ ಆರೋಗ್ಯ ಆಯುರ್ವೇದ ಆಸ್ಪತ್ರೆ ವತಿಯಿಂದ ಫೆ.5ರಂದು ಬೆಳಿಗ್ಗೆ 7 ಗಂಟೆಯಿAದ ಸಂಜೆ 6 ಗಂಟೆಯವರೆಗೆ ಸ್ವರ್ಣ ಬಿಂದು ಪ್ರಾಶನವನ್ನು ನೀಡಲಾಗುತ್ತಿದೆ. ನಗರದ ವೆಲೇನ್ಸಿಯಾ ಮತ್ತು ಕದ್ರಿ ಶಾಖೆಯಲ್ಲಿ ಸ್ವರ್ಣ ಬಿಂದು ಪ್ರಾಶನ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಕ್ಕಳಿಗಾಗಿ ಈ ಲಸಿಕೆಯನ್ನು ನೀಡಲಾಗುತ್ತಿದ್ದು, ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 0824 2434 666, 9632008444, 9632007444 ಗೆ ಸಂಪರ್ಕಿಸಬಹುದು.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಉದಯರಾಗದೊಂದಿಗೆ ಎರಡನೇ ದಿನ ಆರಂಭ

ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯುತ್ತಿರುವ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನವು ಉದಯರಾಗದೊಂದಿಗೆ ಆರಂಭಗೊಂಡಿತು. ಮಣಿಕೃಷ್ಣ ಸ್ವಾಮಿ ಅಕಾಡೆಮಿಯ ಕಲಾವಿದರು ಕರ್ನಾಟಕ ಸಂಗೀತದ ರಸಧಾರೆಯೊಂದಿಗೆ ಭಕ್ತಿಸುಧೆಯನ್ನು ಹರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಸಂಬಂಧವಾಗಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಲೋಕಾರ್ಪಣೆಗೂಂಡ ಕೃತಿಗಳನ್ನು ಆಧರಿಸಿ ಬೆಂಗಳೂರಿನ ಅದಿತಿ ಪ್ರಹ್ಲಾದ ಹಾಗೂ ಮಂಗಳೂರಿನ ಮೇಧಾ ಉಡುಪ ಗಾಯನ

ಧಾರ್ಮಿಕತೆ, ಸಾಂಸ್ಕೃತಿಕತೆ ತುಳುಜನರ ಉಸಿರು: ಕೆ.ಕೆ. ಪೇಜಾವರ

ಉಜಿರೆ: ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದ ಸಾ.ರಾ. ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ 25ನೆಯ ಸಾಹಿತ್ಯ ಸಮ್ಮೇಳನದ ಎರಡನೆಯ ದಿನ ‘ದೈವಾರಾಧನೆ ಮತ್ತು ತುಳುನಾಡು’ ಎಂಬ ವಿಷಯದ ಕುರಿತು ತುಳು ಜಾನಪದ ವಿದ್ವಾಂಸ ಮತ್ತು ವಿಜ್ಞಾನ ಶಿಕ್ಷಕ ಕೆ.ಕೆ. ಪೇಜಾವರ ಅವರು ವಿಶೇಷ ಉಪನ್ಯಾಸ ನೀಡಿದರು. ದ್ರಾವಿಡ ಭಾಷಾ ವರ್ಗಗಳಲ್ಲಿ ತುಳು ಪ್ರಮುಖ ಭಾಷೆಯಾಗಿದೆ. ಇಂದಿನ ಕಾಲದಲ್ಲಿ ತುಳು ಭಾಷೆ ಮಹತ್ತರ ಭಾಷೆಯಾಗಿ ಬೆಳೆದು ಬಂದಿದೆ.

“ಸಾಮಾಜಿಕ ಕ್ರಾಂತಿಯ ನಂದಾದೀಪ ಬಸವಣ್ಣ”

ಉಜಿರೆ, ಫೆ.4: ಇಲ್ಲಿನ ಶ್ರೀ ಕೃಷ್ಣಾನುಭವ ಸಭಾಭವನದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೆಯ ದಿನವಾದ ಶನಿವಾರ ‘ಹರಿಕಥೆ’ ನೆರೆದಿದ್ದವರ ಗಮನ ಸೆಳೆಯಿತು. ತೋನ್ಸೆ ಪುಷ್ಕಳ ಕುಮಾರ್ ಮತ್ತು ಬಳಗದವರು ‘ಜಗಜ್ಯೋತಿ ಬಸವಣ್ಣ’ ಕಥಾಕೀರ್ತನ ಪ್ರಸ್ತುತಪಡಿಸಿದರು. ಬಸವಣ್ಣನವರ