Home Posts tagged V4News (Page 599)

ದ.ಕ. ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರದಲ್ಲೂ ಜೆಡಿಎಸ್ ಸ್ಪರ್ಧೆ

ಮುಂದಿರುವ ವಿಧಾನ ಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರದಲ್ಲೂ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ. ಈಗಾಗಲೇ ಆಕಾಂಕ್ಷಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಜಾತ್ಯಾತೀತ ಜನತಾ ದಳದ ದಕ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಹೇಳಿದರು. ಅವರು ಮಂಗಳೂರಿನ

ಕಡಬದ ಹಳೆನೇರಂಕಿ ಗ್ರಾಮದ ಶ್ರೀಚಕ್ರವರ್ತಿ ಕೊಡಮಣಿತ್ತಾಯ ದೈವಸ್ಥಾನ ಜಾತ್ರೋತ್ಸವ

ಕಡಬ ತಾಲೂಕಿನ ಹಳೆನೇರೆಂಕಿ ಗ್ರಾಮದ ನೇರೆಂಕಿಗುತ್ತು ಶ್ರೀಚಕ್ರವರ್ತಿ ಕೊಡಮಣಿತ್ತಾಯ ದೈವಸ್ಥಾನ ಮತ್ತು ಬ್ರಹ್ಮಬೈದರ್ಕಳ ನೇಮೋತ್ಸವ ಮತ್ತು ಶ್ರೀ ಬ್ರಹ್ಮಬೈದರ್ಕಳ ಜಾತ್ರೋತ್ಸವ ಪ್ರಯುಕ್ತ ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಬೆಳಿಗ್ಗೆ ಹಳೆನೇರಂಕಿ ಪೇಟೆಯಿಂದ ಚೆಂಡೆ, ವಾದ್ಯದೊಂದಿಗೆ ಹೊರೆಕಾಣಿಕೆ ಮೆರವಣಿಗೆಯು ದೈವಸ್ಥಾನದ ಸನ್ನಿಧಿಗೆ ಆಗಮಿಸಿತು. ಗ್ರಾಮಸ್ಥರು ಅಡಿಕೆ, ತೆಂಗು, ಸಿಯಾಳ, ಹಿಂಗಾರ, ಬಾಳೆಗೊನೆ ಸೇರಿದಂತೆ ವಿವಿಧ ತರಕಾರಿ

ಜ. 13- 17ರ ವರೆಗೆ ಉಪ್ಪಿನಂಗಡಿಯಲ್ಲಿ ರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್

ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ ಇವುಗಳ ಆಶಯದಲ್ಲಿ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಪುರುಷರ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ ಜನವರಿ 13ರಿಂದ 17ರ ವರೆಗೆ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದ್ದು, ವಿಶಾಲವಾದ ಕ್ರೀಡಾಂಗಣದ ಕೆಲಸ ಕಾರ್ಯಗಳು ನಡೆಯುತ್ತಿದ್ದು, ಬಹುತೇಕ ಕೆಲಸ ಪೂರ್ಣಗೊಂಡಿದೆ. ರಾಷ್ಟ್ರಮಟ್ಟದ ಬಾಲ್ ಬ್ಯಾಡ್ಮಿಂಟನ್ ಟೂರ್ನಿಗೆ ಸಕಲ ಸಿದ್ಧತೆಗಳು

ದ.ಕ.ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ

ಪುತ್ತೂರು : ದ.ಕ.ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರು ಆಯ್ಕೆಯಾಗಿದ್ದಾರೆ. ಮಂಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಪುತ್ತೂರು ತಾಲೂಕಿನ ಈಶ್ವರಮಂಗಲ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಡಾ.ನಿಖಿಲ್.ಕೆ,ಉಪಾಧ್ಯಕ್ಷರಾಗಿ ಬಂಟ್ವಾಳ

ಮೆಸ್ಕಾಂ ನೂತನ ಎಂ. ಡಿ ಮಂಜಪ್ಪರವರಿಗೆ ಗೌರವ

.ದ.ಕಜಿಲ್ಲಾ ವಿದ್ಯುತ್ ಗುತ್ತಿಗೆದಾರರ ವತಿಯಿಂದ ನೂತನವಾಗಿ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಮಂಜಪ್ಪರವರನು ಮೆಸ್ಕಾಂ ಕಚೇರಿಯಲ್ಲಿ ವಿದ್ಯುತ್ ಗುತ್ತಿಗೆದಾರರ ರಾಜ್ಯ ಉಪಾಧ್ಯಕ್ಷರಾದ ಶ್ರೀ ಉರ್ಬನ್ ಪಿಂಟೊ ಶಾಲು ಹೊದಿಸಿ ಗೌರವಿಸಿ ಮಾತನಾಡಿ ಇಡೀ ಮೆಸ್ಕಾಂ ಜನಸಾಮಾನ್ಯರಿಗೆ ಹಾಗೂ ವಿದ್ಯುತ್ ಗುತ್ತಿಗೆದಾರರಿಗೆ ಬಹಳ ಸಂತೋಷ ತಂದಿದೆ. ತಮಿಂದ ಇಡೀ ಮೆಸ್ಕಾಂ ವ್ಯಾಪ್ತಿಯಲ್ಲಿ ಒಳ್ಳೆಯದಾಗಲಿ.ಎಂದು ಶುಭಹಾರೈಸಿದರು ಜಿಲ್ಲಾಧ್ಯಕ್ಷರಾದ ಕುಶಾಲ್

ಆಲೂರು : ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಜಾನಪದ ಸಂಗೀತ ಕಾರ್ಯಕ್ರಮ

ಆಲೂರು ತಾಲ್ಲೂಕಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸರ್ಕಾರಿ ಪ್ರಥಮದರ್ಜೆ ಕಾಲೇಜು, ಕನ್ನಡ ವಿಭಾಗ ಆಲೂರು ಇವರ ಸಂಯುಕ್ತಾಶ್ರಯದೊಂದಿಗೆ ವಿಶೇಷ ಘಟಕ ಯೊಜನೆಯಡಿ ಜಾನಪದ ಸಂಗೀತ ಕಾರ್ಯಕ್ರಮವನ್ನು ಅಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ತಾಲ್ಲೂಕು ಅಧ್ಯಕ್ಷರಾದ ಹೆಚ್.ಈ ದ್ಯಾವಪ್ಪ ಅವರು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ. ಕಲೆ,

ಮೂಡುಬಿದರೆ : ಸಾಹಿತ್ಯ ಸಂಜೆಯ ಕವಿಗೋಷ್ಟಿ

ಕಾವ್ಯ ಹುಟ್ಡುವದಾ ಕಟ್ಟುವುದು ಎಂಬ ಪ್ರಶ್ನೆ ಇದೆ.ಹುಟ್ಟಿದ ಕಾವ್ಯ, ಬೇರೆ ಕಟ್ಟಿದ ಕಾವ್ಯ ಬೇರೆ.ಕಟ್ಟಿದ ಕಾವ್ಯವು ಕಾವುಗೊಳ್ಳಬೇಕು.ಅದಕ್ಕಿಷ್ಟು ಉಪಮೇ,ಅಲಂಕಾರ, ಲಯ,ರೂಪಕಗಳು ಇರಬೇಕು,ಎಂದು ಖ್ಯಾತ ಹಿರಿಯ ಸಾಹಿತಿ ಬಿ ಎಂ ರೋಹಿಣಿ ಅವರು ನುಡಿದರು. ಅವರು ಮೂಡುಬಿದಿರೆಯಲ್ಲಿ ಅರವಿಂದ ಚೊಕ್ಕಾಡಿ ಅವರ ಮನೆಯಲ್ಲಿ ರೇಮಂಡ್ ಡಿಕೂನಾ ತಾಕೊಡೆ ಸಾರಥ್ಯದಲ್ಲಿ ಪಿಂಗಾರ ಸಾಹಿತ್ಯ ಬಳಗದಿಂದ ಹಮ್ಮಿಕೊಂಡ ಸಾಹಿತ್ಯ ಸಂಜೆಯ ಕವಿಗೋಷ್ಟಿಯ ಅದ್ಯಕ್ಷತೆ ವಹಿಸಿ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಫ್ಯಾಕ್ಟರಿ : ಸಿದ್ದರಾಮಯ್ಯ ಹೇಳಿಕೆ

ಉಳ್ಳಾಲ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಹಿಂದುತ್ವದ ಫ್ಯಾಕ್ಟರಿ ಆಗಿದ್ದು, ಕೋಮುವಾದ ಹುಟ್ಟೋದು ಇಲ್ಲಿಂದ, ಇದು ಕೊಮುವಾದದ ಲ್ಯಾಬೋರೇಟರಿ, ಬಿಜೆಪಿ ಬಂಡವಾಡಳವೇ ಇದು ಎಂದು ರಾಜ್ಯ ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಅವರು ಹರೇಕಳ ಕಡವಿನಬಳಿಯ ಯು.ಟಿ ಫರೀದ್ ವೇದಿಕೆಯಲ್ಲಿ ಜರಗಿದ ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ಬೃಹತ್ ಸಾರ್ವಜನಿಕ ಜನಜಾಗೃತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅಧಿಕಾರಕ್ಕೆ

ಬಿಕರ್ನಕಟ್ಟೆಯ ಬಾಲಯೇಸುವಿನ ಚರ್ಚ್‍ಗೆ ಸಿದ್ದರಾಮಯ್ಯ ಭೇಟಿ

ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು ಪ್ರವಾಸದಲ್ಲಿದ್ದು, ಕುದ್ರೋಳಿ ಕ್ಷೇತ್ರಕ್ಕೆ ಭೇಟಿ ನೀಡಿದರು. ಬಳಿಕ ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸು ಚರ್ಚ್‍ಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನಸಭೆಯ ಪ್ರತಿಪಕ್ಷ ಉಪ ನಾಯಕ ಯು.ಟಿ. ಖಾದರ್, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕ ಐವಾನ್ ಡಿಸೋಜಾ ಇದ್ದರು.

ತಲಪಾಡಿಯಿಂದ ಕಾಸರಗೋಡಿವರೆಗೆ ಷಟ್ಪಥ ಹೆದ್ದಾರಿ ಕಾಮಗಾರಿ ಬಹುತೇಕ ಪೂರ್ಣ

ಮಂಜೇಶ್ವರ: ತಲಪ್ಪಾಡಿಯಿಂದ ಕಾಸರಗೋಡುವರೆಗಿನ ಷಟ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು, ತಲಪ್ಪಾಡಿ ಕಾಸರಗೋಡು ರಸ್ತೆಯ ಚಿತ್ರಣವೇ ಬದಲಾಗುತ್ತಿದೆ. ರಸ್ತೆ ಬದಿಯ ಹಳೆಯ ಕಟ್ಟಡಗಳು ನೆಲಸಮಗೊಂಡು ರಸ್ತೆ ನಿರ್ಮಾಣ ಬಹುತೇಕ ಪೂರ್ಣಗೊಂಡಿರುವುದರಿಂದ ಇಲ್ಲಿ ಹೊಸ ಪ್ರಯಾಣದ ಅನುಭವವಾಗುತ್ತಿದೆ. ವಿವಿಧೆಡೆ ಕಾಮಗಾರಿ ಮುಗಿದ ಭಾಗಗಳನ್ನು ಪ್ರಯಾಣಿಕರಿಗೆ ಮುಕ್ತಗೊಳಿಸಿ ಸರ್ವೀಸ್ ರಸ್ತೆಗಳ ಮೂಲಕ ವಾಹನಗಳನ್ನು ಸಾಗಿಸಲಾಗುತ್ತಿದೆ.ತೂಮಿನಾಡುವರೆಗಿನ