ಪುತ್ತೂರು: ಪುತ್ತೂರಿನ ಸಮಾಜ ಸೇವಕಿ ಧಾರ್ಮಿಕ ಮುಂದಾಳು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಳಿನಿ ಲೋಕಪ್ಪ ಗೌಡ (74ವ)ರವರು ಅಲ್ಪಕಾಲದ ಅಸೌಖ್ಯದಿಂದ ಫೆ.12ರಂದು ಬೆಳಗ್ಗೆ ನಿಧನರಾದರು. ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾಗಿರುವ ಲೋಕಪ್ಪ ಗೌಡ ಅವರ ಪತ್ನಿ ನಳಿನಿ ಲೋಕಪ್ಪ ಗೌಡ ಅವರು ಸಮಾಜ ಸೇವಕಿಯಾಗಿದ್ದರು.
ಮೂಡುಬಿದಿರೆ: ಬೆದ್ರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಮೊಸರುಕುಡಿಕೆ ಉತ್ಸವದಲ್ಲಿ ಶ್ರೀಕೃಷ್ಣ ವೇಷಧಾರಿಯ ಯಕ್ಷಗಾನ ಹಿಮ್ಮೇಳ ತಂಡದ ನೇತೃತ್ವ ವಹಿಸುತ್ತಿದ್ದ ಹಿರಿಯ ಭಾಗವತಿಕೆ ಹಾಗೂ ಮದ್ದಳೆ ಕಲಾವಿದ ಸುಧಾಕರ ಕುಲಾಲ್ (ದಾಸಪ್ಪ) 78ಮಳಲಿಯಲ್ಲಿ ಅನಾರೋಗ್ಯದಿಂದ ನಿಧನರಾದರು. ಮೂಡುಬಿದಿರೆಯ ಯಕ್ಷಗಾನೀಯ ಪರಂಪರೆಯ ಮೊಸರುಕುಡಿಕೆ ಉತ್ಸವದ ಪ್ರಮುಖ ಹಿನ್ನೆಲೆದಾರರಾಗಿದ್ದ ಸುಧಾಕರ ಕುಲಾಲ್ ಮಂಗಳವಾರ ಮುಂಜಾನೆ ಅಲ್ಪಕಾಲದ ಅಸ್ವಸ್ಥತೆಯಿಂದ ಕೊನೆಯುಸಿರೆಳೆದರು. ಅವರು
ಮೂಡುಬಿದಿರೆ: ಅಗ್ನಿವೀರ್ ರ‍್ಯಾಲಿ ಆಡಳಿತ, ಸಂಘಟಿತ ವ್ಯವಸ್ಥೆ ಮತ್ತು ಸೇವಾಭಾವದ ಅಪರೂಪದ ಸಮನ್ವಯಕ್ಕೆ ಸಾಕ್ಷಿಯಾಗಿದೆ. ಇದು ಕೇವಲ ನೇಮಕಾತಿ ಪ್ರಕ್ರಿಯೆಯಲ್ಲ; ಯುವ ಮನಸ್ಸುಗಳಲ್ಲಿ ದೇಶಸೇವೆಯ ಉತ್ಸಾಹವನ್ನು ಮತ್ತಷ್ಟು ಗಟ್ಟಿಗೊಳಿಸಿದ ಮಹತ್ವದ ಅಧ್ಯಾಯವಾಗಿದೆ. ಪುಣ್ಯದ ಕೆಲಸದಲ್ಲಿ ನಮ್ಮ ಸಂಸ್ಥೆಯು ಭಾಗಿಯಾಗಿರುವುದು ನಮ್ಮ ಭಾಗ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿಪ್ರಾಯಪಟ್ಟರು. ಅವರು ಮೂಡುಬಿದಿರೆಯ ಸ್ವರಾಜ್ಯ
ಕಡಬ, ಫೆ.10: ಸರಸ್ವತೀ ವಿದ್ಯಾಲಯ ಪ್ರೌಢಶಾಲೆ, ಕಡಬ ಇಲ್ಲಿನ ವಿಜ್ಞಾನ ಸಂಘದ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ‘ಅನ್ವೇಷಣೆ–2026’ ಎಂಬ ಶೀರ್ಷಿಕೆಯಲ್ಲಿ ವಿಜ್ಞಾನ ಮಾದರಿ ಪ್ರದರ್ಶನ, ರಂಗೋಲಿ ಸ್ಪರ್ಧೆ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಮಂಗಳವಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು, ಸುಬ್ರಹ್ಮಣ್ಯದ ನಿವೃತ್ತ ಮುಖ್ಯಗುರುಗಳಾದ ಶ್ರೀ ಕೆ. ಯಶವಂತ ರೈ
ಆತ್ಮಶಕ್ತಿ ವಿವಿದ್ದೋದ್ದೇಶ ಸಹಕಾರಿ ಸಂಘ (ನಿ) ಆರೋಗ್ಯ ಸೇವಾ ಸಂಗಮ 100ನೇ ಯ ಬೃಹತ್ ಉಚಿತ ವೈದ್ಯಕೀಯ ನೇತ್ರ, ದಂತ, ರಕ್ತದಾನ ಶಿಬಿರ, ವೈದ್ಯ ಸೇವಾ ಸಾಧಕರ ಅಭಿನಂದನಾ ಕಾರ್ಯಕ್ರವು ಹಾಗೂ 14ನೇ ವಾರ್ಷಿಕೋತ್ಸವ ಕಾರ್ಯಕ್ರಮವು ಇತ್ತೀಚೆಗೆ ಮಂಗಳೂರಿನ ಪಡೀಲ್‌ನಲ್ಲಿ ತನ್ನ ಕೇಂದ್ರ ಕಛೇರಿ “ಆತ್ಮ ಶಕ್ತಿ ಸೌಧ” ದಲ್ಲಿ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆತ್ಮಶಕ್ತಿ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ “ಸಹಕಾರ ರತ್ನ”
ಮಹಾನಗರ: ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ, ಕುಂಭ ಮಹೋತ್ಸವ ಫೆ. 11ರಿಂದ 14ರ ವರೆಗೆ ನಡೆಯಲಿದೆ. ಶ್ರೀ ಕ್ಷೇತ್ರ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳು ಆಶೀರ್ವಾ ದದೊಂದಿಗೆ ಶ್ರೀ ಕ್ಷೇತ್ರದ ತಂತ್ರಿ ಅನಂತ ಉಪಾಧ್ಯಾಯರ ನೇತೃತ್ವದಲ್ಲಿ ಪ್ರಧಾನ ಅರ್ಚಕ ಜನಾರ್ದನ ಭಟ್ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಫೆ. 11ರಂದು ಸುಮತಿ ಮತ್ತು ಶ್ರೀನಿವಾಸ್ ಅವರಿಂದ ದೀಪ ಪ್ರಜ್ವಲನೆ, 3ಕ್ಕೆ ಭಜನೆ, 5.45ಕ್ಕೆ ಜಾನಪದ
ಸುಳ್ಯ ಶಾಸಕಿಯರಾದ ಭಾಗೀರಥಿ ಮುರುಳ್ಯ ಅವರು ಬಂದೂಕು ಪರವಾನಗಿದಾರರೊಂದಿಗೆ ಸೋಮವಾರ ಮಂಗಳೂರು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರನ್ನು ಭೇಟಿ ಮಾಡಿ, ಕೃಷಿಕರಿಗೆ ನೀಡುವ ಕೋವಿ ಪರವಾನಗಿ ನವೀಕರಣದಲ್ಲಿ ನಡೆಯುತ್ತಿರುವ ವಿಳಂಬ ಹಾಗೂ ನಿರಾಕರಣೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಾಡಂಚಿನ ಗ್ರಾಮಗಳಲ್ಲಿ ಆನೆ, ಚಿರತೆ ಸೇರಿದಂತೆ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದ್ದು, ಬೆಳೆ ರಕ್ಷಣೆಗೆ ರೈತರಿಗೆ ಆಯುಧಗಳು ಅಗತ್ಯವಿವೆ. ಆದರೆ ಅರ್ಹ ಕೃಷಿಕರಿಗೂ ಪರವಾನಗಿ
ವಾಲಿಬಾಲ್ ಫೆಡರೇಶನ್ ಆಫ್ ಇಂಡಿಯಾ ಕಳುಹಿಸಿರುವ ಸುತ್ತೋಲೆಯ ಆದೇಶ ಪ್ರಕಾರ ಮಾರ್ಚ್ 15ರಿಂದ 20ರವರೆಗೆ ಭುವನೇಶ್ವರ ಒಡಿಸ್ಸಾದಲ್ಲಿ ನಡೆಯಲಿರುವ , 26ನೇ ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್ಶಿಪ್ (ಪುರುಷ ಮತ್ತು ಮಹಿಳಾ) ನಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯ ಮಹಿಳಾ ಯೂತ್ ವಾಲಿಬಾಲ್ ತಂಡಕ್ಕೆ ಆಯ್ಕೆ ಪ್ರಕ್ರಿಯೆ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣ, ಜಯನಗರ 3ನೇ ಬ್ಲಾಕ್, , ಬೆಂಗಳೂರು ನಲ್ಲಿ ಫೆಬ್ರವರಿ 13, 2026 (ಶುಕ್ರವಾರ) ಬೆಳಗ್ಗೆ 9:30 ಸರಿಯಾಗಿ
ಮಂಡೆಕೋಲು ಗ್ರಾಮದ ಪೇರಾಲು ಅಂಬ್ರೋಟಿಯಲ್ಲಿರುವ ಶ್ರೀ ಮುಚ್ಚಿರಡಿ ಇರುವೆರ್ ಉಳ್ಳಾಕುಲು ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಫೆ. 20ರಿಂದ 22ರ ವರೆಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ. ಶ್ರೀ ಕ್ಷೇತ್ರದಲ್ಲಿ ಶ್ರೀ ನಾಗದೇವರು ಮತ್ತು ಇರುವೆರು ಉಳ್ಳಾಕುಲು ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಹಾಗೂ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ
ಮೂಡುಬಿದಿರೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೂಡುಬಿದಿರೆ ಸ್ಥಳೀಯ ಸಂಸ್ಥೆಯ ಆಶ್ರಯದಲ್ಲಿ ವಾರ್ಷಿಕ ಕಬ್ಸ್-ಬುಲ್ ಬುಲ್ಸ್ ಉತ್ಸವ, ಸ್ಕೌಟ್-ಗೈಡ್ ಮೇಳ ಹಾಗೂ ರೋವರ್ಸ್-ರೇಂಜರ್ಸ್ ಸಮಾಗಮವು ಭಾನುವಾರ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ನಡೆಯಿತು. ಮೂಡುಬಿದಿರೆ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ವಸಂತ್ ದೇವಾಡಿಗ ಅವರು ಉದ್ಘಾಟಿಸಿ ಮಾತನಾಡಿ “ವಿದ್ಯಾರ್ಥಿ ದೆಸೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಶಿಸ್ತು, ಸಮಾಜ ಸೇವೆ ಮತ್ತು ನಾಯಕತ್ವದ




























