Home Posts tagged V4News (Page 601)

ನಳಿನ್ ಕುಮಾರ್ ಕಟೀಲ್ ಹೇಳಿಕೆ ಸಮರ್ಥಿಸಿದ ಶಾಸಕ ಭರತ್ ಶೆಟ್ಟಿ 

ಬಿಜೆಪಿ ರಾಜ್ಯಾದ್ಯಕ್ಷರು ಕಾರ್ಯಕರ್ತರಿಗೆ ರಸ್ತೆ ವಿಚಾರ ಬಿಡಿ ಅಂತ ಹೇಳಿದ್ದಾರೆ, ರಸ್ತೆ ಮಾಡುವುದು ಚುನಾಯಿತ ಜನ ಪ್ರತಿನಿಧಿಗಳ ಕೆಲಸ, ಸಮಾಜದಲ್ಲಿ ವಿಷದ ವಾತಾವರಣ ನಿರ್ಮೂಲನೆ ಕೆಲಸ ಮಾಡಿ ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆಯನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಸಮರ್ಥಿಸಿಕೊಂಡಿದ್ದಾರೆ. ಅವರು ಮಾಧ್ಯಮದವರ

ಅರ್ಕುಳ ಮತ್ತು ಅಡ್ಯಾರು ಗ್ರಾಮ ‘ಮಂಗಳೂರು ಎ’ ಹೋಬಳಿಗೆ ಸೇರ್ಪಡೆ

ಅರ್ಕುಳ ಮತ್ತು ಅಡ್ಯಾರು ಗ್ರಾಮಗಳನ್ನು ಮಂಗಳೂರು ಎ ಹೋಬಳಿಗೆ ಸೇರ್ಪಡೆಗೊಳಿಸಬೇಕೆಂಬ ಈ ಭಾಗದ ಜನರ ಬಹುಕಾಲದ ಬೇಡಿಕೆಯನ್ನು ಮನಗಂಡು ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು. ಇದನ್ನು ಸಕರಾತ್ಮಕವಾಗಿ ಪರಿಗಣಿಸಿದ ಸರ್ಕಾರ ಗುರುಪರ ಹೋಬಳಿಯಿಂದ ಈ ಗ್ರಾಮಗಳನ್ನು ಕೈಬಿಟ್ಟು ಮಂಗಳೂರು ಎ ಹೋಬಳಿಗೆ ಸೇರ್ಪಡೆಗೊಳಿಸಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಿ ಆದೇಶ ಹೊರಡಿಸಲಾಗಿರುತ್ತದೆ ಎಂದು ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದರು. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ

ಜ್ಞಾನದ ಪ್ರಾಯೋಗಿಕ ಅನ್ವಯದಿಂದ ಕಲಿಕೆ ಸಾರ್ಥಕ

ಉಜಿರೆ: ಜ್ಞಾನ ಮತ್ತು ಕೌಶಲ್ಯಗಳು ಪ್ರಾಯೋಗಿಕವಾಗಿ ಅನ್ವಯವಾದಾಗ ಮಾತ್ರ ಕಲಿಕೆಯ ಸಾರ್ಥಕತೆ ಸಾಧ್ಯ ಎಂದು ‘ಜೆಸಿಐ ಬೆಳ್ತಂಗಡಿ ಮಂಜುಶ್ರೀ’ಯ ಅಧ್ಯಕ್ಷರಾದ ಶಂಕರ್ ರಾವ್ ಬಿ ನುಡಿದರು. ಉಜಿರೆಯ ಎಸ್.ಡಿ.ಎಂ ಪದವಿ ಕಾಲೇಜಿನ ಸಮ್ಯಕ್ ದರ್ಶನ್ ಸಭಾಂಗಣದಲ್ಲಿ ವ್ಯವಹಾರ ಆಡಳಿತ ವಿಭಾಗವು ಶನಿವಾರ ಆಯೋಜಿಸಿದ್ದ ಅಂತರ್ ವಿಭಾಗ ‘ಶಾರ್ಟ್ ಫಿಲ್ಮ್ ಫೆಸ್ಟಿವಲ್’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಲಿಕೆಯ ಹಂತದಿಂದಲೇ ವಿದ್ಯಾರ್ಥಿಗಳು ವಿಭಿನ್ನವಾಗಿ ಯೋಚಿಸುವ

ಪುತ್ತೂರು : ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಉದ್ಘಾಟನೆ

ಪುತ್ತೂರು: ಉಪ ಬೆಳೆಯಾಗಿ ಅತಿ ಬೇಡಿಕೆ ಪಡೆಯುತ್ತಿರುವ ಕಡಿಮೆ ಜಾಗ, ಖರ್ಚು ಬಯಸುವ ಮೀನಿನ ಕೃಷಿಗೆ ಮುಂದಾಗಬೇಕು ಎಂದು ರಾಜ್ಯ ಬಂದರು ಮತ್ತು ಒಳನಾಡು ಮೀನುಗಾರಿಕಾ ಇಲಾಖೆ ಸಚಿವ ಎಸ್. ಅಂಗಾರ ಮನವಿ ಮಾಡಿದ್ದಾರೆ. ಪುತ್ತೂರಿನಲ್ಲಿ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕುಗಳನ್ನೊಳಗೊಂಡ ಉಪವಿಭಾಗ ವ್ಯಾಪ್ತಿಯ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ತಾಲೂಕು ಪಂಚಾಯತ್ ಕಟ್ಟಡದಲ್ಲಿ ಅವರು ಉದ್ಘಾಟಿಸಿದರು.ಇಂದು ಒಳನಾಡು ಮೀನುಗಾರಿಕೆಗೆ ಸಂಬಂಧಿಸಿ

ಬೆಳ್ತಂಗಡಿಯ ಮುಗೇರಡ್ಕ ಎಂಬಲ್ಲಿ ಅಕ್ರಮ ಮರಳು ದಂಧೆ : ಮಾಜಿ ಶಾಸಕ ವಸಂತ ಬಂಗೇರ ಆರೋಪ

ಬೆಳ್ತಂಗಡಿ ತಾಲೂಕಿನ ಮೊಗ್ರೂ ಗ್ರಾಮದ ಮುಗೇರಡ್ಕ ಎಂಬಲ್ಲಿ ನಡೆಯುವ ಅಕ್ರಮ ಮರಳು ದಂಧೆ ಮತ್ತು ನೀರಾವರಿ ಕಾಮಗಾರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ಬೆಳ್ತಂಗಡಿ ತಾಲೂಕಿನ ಮಾಜಿ ಶಾಸಕರಾದ ವಸಂತ ಬಂಗೇರ ಹೇಳಿದರು. ಅವರುಬೆಳ್ತಂಗಡಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿ ಮುಗೇರಡ್ಕದಲ್ಲಿ ನಡೆಯುವ ಅಕ್ರಮ ಮರಳು ದಂಧೆ ಮತ್ತು 250 ಕೋಟಿಯ ಕಾಮಗಾರಿಯಲ್ಲಿ ಭ್ರಷ್ಟಾಚಾರ, ಅಕ್ರಮ ಸಕ್ರಮಗಳಲ್ಲಿ ವಿಳಂಬ ನೀತಿ, ಬಿಜೆಪಿ ಸರಕಾರದ 40% ಕಮಿಷನ್ ದಂಧೆ, ತಾಲೂಕು

ರಸ್ತೆ ಗುಂಡಿ, ಚರಂಡಿ ಅಭಿವೃದ್ಧಿ ಮಾಡುವ ಯೋಗ್ಯತೆ ಇಲ್ಲ : ನಳಿನ್ ವಿರುದ್ಧ ಮಾಜಿ ಸಚಿವ ಯು.ಟಿ.ಖಾದರ್ ವಾಗ್ದಾಳಿ

ರಸ್ತೆ ಗುಂಡಿ, ಚರಂಡಿ ಅಭಿವೃದ್ಧಿ ಮಾಡುವ ಯೋಗ್ಯತೆ, ಅರ್ಹತೆ ಇಲ್ಲದವರು, ಭಾವನಾತ್ಮಕ ವಿಚಾರದ ಮೂಲಕವೇ ರಾಜಕಾರಣ ಮಾಡುತ್ತಿದ್ದಾರೆ ಎಂದು ನಳಿನ್ ವಿರುದ್ಧ ಮಾಜಿ ಸಚಿವ ಹಾಗೂ ಶಾಸಕ ಯು.ಟಿ.ಖಾದರ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆ ಗುಂಡಿ, ಚರಂಡಿ ಅಭಿವೃದ್ಧಿ ಮಾಡುವ ಯೋಗ್ಯತೆ ಎಂಬುವುದನ್ನ ಕಳೆದ ನಾಲ್ಕು ವರ್ಷ ಜನರಿಗೆ ತೋರಿಸಿಕೊಟ್ಟಿದ್ದಾರೆ. ಚುನಾವಣೆ ಹತ್ತಿರ ಬಂದಾಗ ಇಂತಹ

ಪತ್ರಕರ್ತರಲ್ಲಿ ಹೋರಾಟದ ಮನೋಭಾವ ಇರಬೇಕು : ಓಶಿಯನ್ ಪರ್ಲ್ ಹೋಟೆಲ್‍ ಉಪಾಧ್ಯಕ್ಷ ಗಿರೀಶ್

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮ್ಮೇಳನದಲ್ಲಿ ಕರಾವಳಿ ಅಭಿವೃದ್ಧಿ ಮತ್ತು ಪತ್ರಿಕೋದ್ಯಮದ ಬಗ್ಗೆ ವಿಚಾರಗೋಷ್ಟಿ ನಡೆಯಿತು. ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಪತ್ರಕರ್ತರ ಜಿಲ್ಲಾ ಸಮ್ಮೇಳನದಲ್ಲಿ ವಿಚಾರಗೋಷ್ಟಿ ನಡೆಯಿತು. ಹಿರಿಯ ಪತ್ರಕರ್ತರಾದ ಅನಿಲ್ ಶಾಸ್ತ್ರಿ ಅವರು ವಿಷಯ ಮಂಡಿಸಿದರು. ಓಶಿಯನ್ ಪರ್ಲ್ ಹೋಟೆಲ್‍ನ ಉಪಾಧ್ಯಕ್ಷರಾದ ಗಿರೀಶ್ ಅವರು ಕರಾವಳಿ ಅಭಿವೃದ್ಧಿ ಮತ್ತು ಪತ್ರಿಕೋದ್ಯಮದ ಬಗ್ಗೆ ಮಾತನಾಡಿ,

ಅಡಿಕೆಗೆ ಭವಿಷ್ಯವಿಲ್ಲ ಗೃಹ ಸಚಿವರ ಹೇಳಿಕೆಗೆ ಖಂಡನೆ : ಮಾಜಿ ಶಾಸಕ ವಸಂತ ಬಂಗೇರಾ ವಾಗ್ದಾಳಿ

ಅಡಿಕೆಯ ಬಗ್ಗೆ ಹಗುರವಾಗಿ ಮಾತನಾಡಿದ ಗೃಹ ಸಚಿವರ ವಿರುದ್ಧ ಗರಂ ಆದ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಅವರು ಅವರ ಮಾತು ಖಂಡನಾರ್ಹ ಎಂದು ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿ ಗೃಹ ಸಚಿವರು ಆ ರೀತಿ ಹೇಳಬಾರದಿತ್ತು ಅಡಿಕೆ ಬೆಳೆಗಾರರ ಬಗ್ಗೆ ಕೀಳಾಗಿ ಮಾತನಾಡಬಾರದು ಅಡಿಕೆ ಬೆಳೆಗಾರರು ಹೆದರುವಂಥ ಅವಶ್ಯಕತೆ ಇಲ್ಲ ಅಡಿಕೆಗೆ ಬೆಲೆ ಯಾವತ್ತೂ ಕಡಿಮೆಯಾಗುವುದಿಲ್ಲ ಎಂದು ಅಡಿಕೆ ಬೆಳೆಗಾರರಿಗೆ ಧೈರ್ಯ ಹೇಳಿದರು ಈ ಸಂದರ್ಭದಲ್ಲಿ ಮಾಜಿ ಸಚಿವ

ವಿಟ್ಲ : ಬಾಲಕಿಗೆ ಬೈಕ್ ಢಿಕ್ಕಿ ಗಂಭೀರ ಗಾಯ

ವಿಟ್ಲ: ರಸ್ತೆ ಬದಿ ನಿಂತಿದ್ದ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ಸಂಭವಿಸಿದೆ. ವಿಟ್ಲ ಒಕ್ಕೆತ್ತೂರು ನಿವಾಸಿ ಬಶೀರ್ ಅವರ ಪುತ್ರಿ ಫಾತಿಮತ್ ನಿದಾ ಗಾಯಗೊಂಡ ವಿದ್ಯಾರ್ಥಿನಿಯಾಗಿದ್ದು, ಈಕೆ ವಿಟ್ಲ ಸರಕಾರಿ ಮಾದರಿ ಶಾಲೆಯ 5ನೇ ತರಗತಿ ವಿದ್ಯಾರ್ಥಿಯಾಗಿದ್ದು, ಶಾಲೆಗೆ ಹೋಗಲು ಒಕ್ಕೆತ್ತೂರಿನಲ್ಲಿ ಆಟೋ ರಿಕ್ಷಾಕ್ಕೆ ಕಾಯುತ್ತಿದ್ದಾಗ ವಿಟ್ಲ ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದು

ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ 2023

ತುಳು ವಿದ್ವಾಂಸ, ಸಂಶೋಧಕ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ಇವರಿಗೆ 2022-23 ಸಾಲಿನ ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿಯನ್ನು ತುಳು ಸಾಹಿತ್ಯ ಕ್ಷೇತ್ರಕ್ಕೆ ಅಗಾಧ ಕೊಡುಗೆ ನೀಡಿದ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ಇವರು ಸ್ವೀಕರಿಸಲಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 05, ಜನವರಿ 2023ರಂದು ಕೆನರಾ ಪ್ರೌಢಶಾಲೆ ಡೊಂಗರಕೇರಿಯ ಭುವನೇಂದ್ರ ಸಭಾಂಗಣದಲ್ಲಿ ಸಂಜೆ ಸರಿಯಾಗಿ 4:30ಕ್ಕೆ ಜರುಗಲಿದೆ. ಉತ್ತಮ ಶಿಕ್ಷಕ, ಅಪ್ರತಿಮ ವಾಗ್ಮಿ ಹಾಗೂ ಅನೇಕ