ಅನಂತಪುರದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ತುಲು ಲಿಪಿ ನಾಮಫಲಕದ ಅನಾವರಣ ಮಾಡಲಾಯಿತು. ದೇವಸ್ಥಾನದ ತುಲು ಲಿಪಿ ನಾಮಫಲಕದ ಉದ್ಘಾಟನೆಯನ್ನು ಅನಂತಪುರ ಕ್ಷೇತ್ರದ ಆಡಳಿತ ಮುಖ್ಯಸ್ಥರಾದ ಉದಯಕುಮಾರ್ ಗಟ್ಟಿ ಇವರು ನೆರವೇರಿಸಿದರು. ಕಾರ್ಯಕ್ರಮಕ್ಕೆ ಜೈ ತುಲುನಾಡು (ರಿ.) ಸಂಘಟನೆಯ ಉಪಾಧ್ಯಕ್ಷರಾದ ಹರಿಕಾಂತ್ ಸಾಲ್ಯಾನ್ ಕಾಸರಗೋಡು ಇವರು ಅಧ್ಯಕ್ಷತೆ
ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇಂದು ಸಂಜೆ 5 ಗಂಟೆಗೆ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ನಡೆಯಲಿದೆ.ಜ್ಞಾನಯೋಗಾಶ್ರಮದ ಆವರಣದಲ್ಲಿ ಸ್ವಾಮೀಜಿಗಳ ಅಂತ್ಯಸಂಸ್ಕಾರ ನಡೆಯಲಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದ್ದು, ಸ್ವಾಮೀಜಿ ಅಪೇಕ್ಷೆಯಂತೆಯೇ ಅಂತ್ಯಕ್ರಿಯೆ
ಪುತ್ತೂರು: ವಿಧಾನಸಭೆಯ ಅಧಿವೇಶನದಲ್ಲಿ ಅಡಿಕೆ ಬೆಳೆಗಾರರಿಗೆ ಭವಿಷ್ಯವಿಲ್ಲ, ಅಡಿಕೆ ಬೀದಿ ಪಾಲಾಗುತ್ತದೆ ಎಂಬ ಮಾರಕ ಹೇಳಿಕೆ ನೀಡಿ ಬೆಳೆಗಾರರನ್ನು ಸಂದಿಗ್ಧ ಪರಿಸ್ಥಿತಿಗೆ ತಂದೊಡ್ಡಿದ್ದಾರೆಂದು ಆರೋಪಿಸಿದಲ್ಲದೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ತತ್‍ಕ್ಷಣವೆ ಸಚಿವ ಸ್ಥಾನದಿಂದ ಕೈ ಬಿಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ವತಿಯಿಂದ ಪುತ್ತೂರು ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗೆ ಜ.2ರಂದು ಮನವಿ
ಶಾಲಾ ಬಾಲಕನಿಗೆ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಧಳದಲ್ಲಿಯೇ ಸಾವನ್ನಪ್ಪಿದ ಘಟನೆ ಕಿನ್ನಿಗೋಳಿ ಸಮೀಪದ ಕಟೀಲು ಹೆದ್ದಾರಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಚರಣ್ (15) ಗುರುತಿಸಲಾಗಿದೆ. ಚರಣ್ ಕಟೀಲು ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದು ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಬರುತ್ತಿರುವಾಗ ಕಿನ್ನಿಗೋಳಿ ಕಡೆಯಿಂದ ಕಟೀಲು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಚರಣ್ ಸ್ಧಳದಲ್ಲಿಯೇ ಮೃತ ಪಟ್ಟಿದ್ದಾನೆ ಎನ್ನಲಾಗಿದೆ. ಸ್ಧಳಕ್ಕೆ
ಪುತ್ತೂರು:ಪುತ್ತೂರು ಬ್ಲಾಕ್ ಕಾಂಗ್ರೆಸ್ ಹಾಗೂ ಬ್ಲಾಕ್ ಕಿಸಾನ್ ಕಾಂಗ್ರೆಸ್ ಜಂಟಿ ಆಶ್ರಯದಲ್ಲಿ ರಾಜ್ಯ ಗೃಹ ಸಚಿವರು ಅಡಕೆ ಬೆಳೆಗಾರರ ಕುರಿತು ವಿರೋಧಿ ಹೇಳಿಕೆಯನ್ನು ಖಂಡಿಸಿ ಪ್ರತಿಭಟನಾ ಸಭೆ ಸೋಮವಾರ ಅಮರ್ ಜವಾನ್ ಸ್ಮಾರಕದ ಬಳಿಕ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾತನಾಡಿ, ಜಿಲ್ಲೆಯ ಆರ್ಥಿಕ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿರುವ ಅಡಕೆಯ ಕುರಿತು ಗೃಹ ಸಚಿವರು ಅಡಕೆಗೆ ಭವಿಷ್ಯವಿಲ್ಲ ಎಂದು ವಿರೋಧಿ ಹೇಳಿಕೆ
ವೈಕುಂಟ ಏಕಾದಶಿಯ ಪ್ರಯುಕ್ತ ಮಾಜಿ ಕೇಂದ್ರ ಸಚಿವ ಬಿ ಜನಾರ್ದನ ಪೂಜಾರಿಯವರು ಇಂದು ಮಂಗಳೂರಿನ ಡೊಂಗರಕೇರಿಯ ಶ್ರೀ ವೆಂಕಟ್ರಮಣ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಕ್ಷೇತ್ರದ ಅರ್ಚಕರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಪೂಜೆಯ ಬಳಿಕ ಜನಾರ್ದನ ಪೂಜಾರಿಯವರನ್ನು ಸನ್ಮಾನಿಸಿದರು ಈ ವೇಳೆ ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಅವರು ಜನಾರ್ದನ ಪೂಜಾರಿಯವರ ಜೊತೆಗಿದ್ದರು
2016ರಲ್ಲಿ ನರೇಂದ್ರ ಮೋದಿ ಸರ್ಕಾರವು ಕೈಗೊಂಡ ನೋಟು ರದ್ಧತಿ ಕ್ರಮವು ಮಾನ್ಯವಾದುದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಇಂದು ಪ್ರಕಟಗೊಂಡ ಭಿನ್ನಮತದ ತೀರ್ಪಿನಲ್ಲಿ ಕೇಂದ್ರ ಸರ್ಕಾರವು ಅದನ್ನು ಆರಂಭಿಸಿದ ಮಾತ್ರಕ್ಕೆ ನಿರ್ಧಾರವನ್ನು ತಪ್ಪೆನ್ನಲು ಸಾಧ್ಯವಿಲ್ಲ ಎಂದು ಸುಪ್ರೀಂ ಹೇಳಿದೆ. ನೋಟು ಅಮಾನ್ಯೀಕರಣವನ್ನು ತಳ್ಳಿಹಾಕಲು ಸಾಧ್ಯವಿಲ್ಲ, ನೋಟುಗಳ ವಿನಿಮಯಕ್ಕೆ ನೀಡಿದ 52 ದಿನಗಳ ಅವಧಿಯು ಅಸಮಂಜಸವಲ್ಲ ಎನ್ನಲಾಗದು ಎಂದು ಸುಪ್ರೀಂ ಹೇಳಿದೆ. ಭಾರತೀಯ
ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಪಳ್ಳತ್ತೂರು -ಬಂಟಕಲ್ಲು-ಬಾರೆಕೊಚ್ಚಿ-ಕಟ್ಟತ್ತಾರು ಕಾಲನಿಗೆ ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ರೈತ ಸಂಘ ಹಸಿರು ಸೇನೆ (ವಾಸುದೇವ ಬಣ) ಹಾಗೂ ಸ್ಥಳೀಯ ನಿವಾಸಿಗಳು ಪುತ್ತೂರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.ಈ ಭಾಗದಲ್ಲಿ ಸುಮಾರು ೩೦ ಮನೆಗಳಿಗೆ ಸಂಪರ್ಕ ರಸ್ತೆಯಿಲ್ಲ. ಹಲವು ದಶಕಗಳಿಂದ ಇವರು ವಾಸಿಸುತ್ತಿದ್ದರೂ ಅನಾರೋಗ್ಯದಂತಹ ತುರ್ತು ಸಂದರ್ಭದಲ್ಲಿ ರೋಗಿಯನ್ನು ಹೊತ್ತುಕೊಂಡೇ ಸಾಗಬೇಕಾದ ಸ್ಥಿತಿ
ಉಡುಪಿ: ನಗರದ ಮಲಬಾರ್ ಗೋಲ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಡಿ.31 ರಿಂದ ಜ.08 ರ ವರೆಗೆ ಹಮ್ಮಿಕೊಂಡಿರುವ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಶನಿವಾರ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಈ ಪ್ರದರ್ಶನದಲ್ಲಿ ಟೆಂಪಲ್ ಸಂಗ್ರಹವನ್ನು ಇಲಾ ಕಿರಣ್ ಶೆಟ್ಟಿ, ಮೈನ್ ಡೈಮಂಡ್ಸ್ ನ್ನು ವೈಷ್ಣವಿ ಕೊಡವೂರು, ಜೆಮ್ಸ್ ಸ್ಟೋನ್ ಸಂಗ್ರಹವನ್ನು ನೊಲಿಟ ಸಲ್ಡಾನ ಪ್ರದರ್ಶನದಲ್ಲಿ ಅನಾವರಣಗೊಳಿಸಿದರು. ಇಲಾ ಕಿರಣ್ ಶೆಟ್ಟಿ
ಮಂಜೇಶ್ವರ: ಮೂಸೋಡಿಯಲ್ಲಿ ನಿರ್ಮಾಣವಾಗಿರುವ ಮಂಜೇಶ್ವರ ಮೀನುಗಾರಿಕಾ ಬಂದರು ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ ಉಪಯೋಗ ಶೂನ್ಯವಾಗಿರುವುದಾಗಿ ಮೀನು ಕಾರ್ಮಿಕರು ದೊರಿದ್ದಾರೆ. ಇದು ಉದ್ಘಾಟನೆಯಾಗಿ ಎರಡು ವರ್ಷ ಕಳೆದರೂ ಬೋಟ್‍ಗಳು, ಸಣ್ಣ ದೋಣಿಗಳು ಪ್ರವೇಶಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿರುವುದಾಗಿ ಮಿನು ಕಾರ್ಮಿಕರು ಆರೋಪಿಸುತಿದ್ದಾರೆ.ಮೀನುಗಾರಿಕಾ ಬಂದರು ನಿರ್ಮಾಣ ಕಾಮಗಾರಿ 2014 ಕ್ಕೆ ಅಂದಿನ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಉದ್ಘಾಟಿಸಿದ್ದರು.




























