Home Posts tagged V4News (Page 621)

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಉಜಿರೆ ಶ್ರೀ ಧ. ಮಂ ಕಾಲೇಜಿನ ಎನ್ಎಸ್ಎಸ್ ಘಟಕದ ನೇತೃತ್ವದಲ್ಲಿ ಯೂಥ್ ರೆಡ್ ಕ್ರಾಸ್ ಘಟಕ, ರೇಂಜರ್ಸ್ & ರೋವರ್ಸ್, ಸಾಮಾಜಿಕ ಜವಾಬ್ದಾರಿಗಳ ಉಪಕ್ರಮಗಳ ಸಮಿತಿ ಆಶ್ರಯದಲ್ಲಿ, ರಕ್ತನಿಧಿ, ಕೆ.ಎಂ.ಸಿ ಆಸ್ಪತ್ರೆ, ಮಂಗಳೂರು ಮತ್ತು ಎಸ್.ಡಿ.ಎಂ. ಆಸ್ಪತ್ರೆ, ಉಜಿರೆ ಸಹಯೋಗದೊಂದಿಗೆ ದಿನಾಂಕ 15-12-2022 ರಂದು ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು.   

ಪಡುಬಿದ್ರಿ: ಹೆಜ್ಜೇನು ದಾಳಿ ಒರ್ವ ಮೃತ್ಯು, ಒರ್ವ ಗಂಭೀರ ಹಲವರಿಗೆ ಗಾಯ

ಪಡುಬಿದ್ರಿ ಮುಖ್ಯ ಬೀಚ್ ಬಳಿ ಹೆಜ್ಜೇನು ದಾಳಿಯಿಂದಾಗಿ ಒರ್ವ ಮೃತಪಟ್ಟರೆ ಮತ್ತೊರ್ವರು ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದು ಹಲವರು ಗಾಯಗೊಂಡಿದ್ದಾರೆ. ಮೃತ ವ್ಯಕ್ತಿ ಸ್ಥಳೀಯ ನಿವಾಸಿ ವಾಸುದೇವ ಡಿ. ಸಾಲ್ಯಾನ್ (65), ಗಂಬೀರ ಗಾಯಗೊಂಡವರು ಚಂದ್ರಶೇಖರ್ (65), ಇವರು ಬೀಚ್ ಬಳಿ ಅಡ್ಡಾಡುತ್ತಿದ್ದಾಗ ದಾಳಿ ನಡೆಸಿದ್ದು ದಾಳಿ ಮಾಡಿದ ತಕ್ಷಣ ವಾಸುದೇವ್ ರಕ್ಷಣೆಗಾಗಿ ಸಮುದ್ರದ ನೀರಿಗೆ ಹಾರಿದವರು ಮತ್ತೆ ಮೇಲೆ ಬರಲಾಗದೆ ಅಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂಬುದಾಗಿ

ಎಸ್.ಡಿ.ಎಂ ಕಾಲೇಜಿನಲ್ಲಿ ವಿಶ್ವ ಮಣ್ಣಿನ ದಿನಾಚರಣೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ವತಿಯಿಂದ ವಿಶ್ವ ಮಣ್ಣಿನ ದಿನಾಚರಣೆಯನ್ನುಆಚರಿಸಲಾಯಿತು. ಮಣ್ಣಿನ ಪ್ರಾಮುಖ್ಯತೆ ಮತ್ತು ಪರೀಕ್ಷಾ ವಿಧಾನವನ್ನು ಕುರಿತು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಲಾಯಿತು.ಕಾರ್ಯಕ್ರಮವನ್ನು ಶ್ರೀ.ಧ.ಮಂ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಬಿ.ಎ ಕುಮಾರ ಹೆಗ್ಡೆ ಉದ್ಘಾಟಿಸಿ ಮಾತನಾಡಿದರು. ನೈಸರ್ಗಿಕ ಸಂಪನ್ಮೂಲಗಳಲ್ಲಿ ಒಂದಾದ ಮಣ್ಣು ಮನುಷ್ಯನ ಜೀವನದ ಅವಿಭಾಜ್ಯ

ಕೇರಳ ರಾಜ್ಯ ಕಬ್ಬಡಿ ತಂಡದ ಮಾಜಿ ನಾಯಕ ಸುನಿಲ್ ಕುಮಾರ್ ನಿಧನ

ಉಳ್ಳಾಲ: ಕೇರಳ ರಾಜ್ಯ ಅಮೆಚೂರು ಕಬ್ಬಡ್ಡಿ ತಂಡದ ಮಾಜಿ ನಾಯಕ ಹಾಗೂ ರಾಷ್ಟ್ರೀಯ ತಂಡದ ಮಾಜಿ ಕಬ್ಬಡ್ಡಿ ಪಟು ಮಂಜೇಶ್ವರ ನಿವಾಸಿ ಸುನಿಲ್ ಕುಮಾರ್ (53) ಇಂದು ಸ್ವಗೃಹದಲ್ಲಿ ನಿಧನಹೊಂದಿದರು.ಅತೀವ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಇವರು , ಗ್ಯಾಂಗ್ರೀನ್ ಗೆ ಒಳಗಾಗಿ ಹಲವು ತಿಂಗಳಿನಿಂದ ಅಸೌಖ್ಯಕ್ಕೊಳಗಾಗಿದ್ದರು. ಕೇರಳದಲ್ಲಿ ಹಿಂದೆ ಇದ್ದಂತಹ ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಆನಂತರ ಉದ್ಯಮ ನಡೆಸುತ್ತಿದ್ದರು. ಕಬ್ಬಡ್ಡಿ ಕೇರಳ ರಾಜ್ಯ

ಸುಳ್ಯ : ಲಾರಿ, ಕಾರು , ಬೈಕ್ ನಡುವೆ ಸರಣಿ ಅಪಘಾತ

ಸುಳ್ಯ ::ಸುಳ್ಯ ಮಡಿಕೇರಿ ರಾಜ್ಯ ಹೆದ್ದಾರಿಯ ಪಾಲಡ್ಕ ಎಂಬಲ್ಲಿ ಲಾರಿ, ಕಾರು , ಬೈಕ್ ನಡುವೆ ಸರಣಿ ಅಪಘಾತವಾಗಿ ಬೈಕ್ ಸವಾರರಿಬ್ಬರು, ಹಾಗೂ ಕಾರು ಚಾಲಕ ಗಾಯಗೊಂಡು ಆಸ್ಪತ್ರೆ ಸೇರಿರುವ ಗುರುವಾರ ವರದಿಯಾಗಿದ. , ಈ ಸಂದರ್ಭದಲ್ಲಿ ಕಾರಿನ ಹಿಂದಿನಂದ ಬರುತ್ತಿದ್ದ ಬೈಕ್ ಕಾರಿಗೆ ಡಿಕ್ಕಿಯಾಗಿದೆ, ಘಟನೆಯಲ್ಲಿ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟು, ಪೆರಾಜೆ ಗ್ರಾಮದ ದೊಡ್ಡಡ್ಕ ದೀನರಾಜ್ ಹಾಗೂ ಕಂಜಿಪಿಲಿ ಪುರುಷೋತ್ತಮ ತೀವ್ರ ಗಾಯಗೊಂಡರೆ, ಕಾರು ..ಲಾರಿಗೆ

ಲವ್ ಜಿಹಾದ್ ತಡೆಗೆ ಪ್ರತ್ಯೇಕ ಕಾನೂನು ರೂಪಿಸುವ ಅಗತ್ಯ ಇಲ್ಲ : ಗೃಹ ಸಚಿವ ಅರಗ ಜ್ಞಾನೇಂದ್ರ

ರಾಜ್ಯದಲ್ಲಿ ಲವ್ ಜಿಹಾದ್ ತಡೆಗೆ ಪ್ರತ್ಯೇಕ ಕಾನೂನು ರೂಪಿಸುವ ಹಾಗೂ ವಿಶೇಷ ಕಾರ್ಯಪಡೆ ರಚಿಸುವ ಅಗತ್ಯ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲವ್ ಜಿಹಾದ್ ತಡೆಗೆ ಪ್ರತ್ಯೇಕ ಕಾನೂನು ರೂಪಿಸಲು ಸಂಘ ಪರಿವಾರದ ಸಂಘಟನೆಗಳು ಮನವಿ ಮಾಡಿದ್ದು, ರಾಜ್ಯದಲ್ಲಿ ಜಾರಿಯಲ್ಲಿರುವ ಮತಾಂತರ ನಿಷೇಧ ಕಾಯ್ದೆಯಲ್ಲಿ ಈ ಅಂಶ ಅಡಕವಾಗಿದ್ದು, ಪ್ರತ್ಯೇಕ ಕಾನೂನು ರೂಪಿಸುವ ಅವಶ್ಯ ಕತೆ ಸದ್ಯಕ್ಕೆ ಇಲ್ಲ

5, 8ನೇ ತರಗತಿಗೆ ಪೂರಕ ಪರೀಕ್ಷೆ ಹಿಂಪಡೆದ ಶಿಕ್ಷಣ ಇಲಾಖೆ

ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಹಿಂದೇಟು ಹಾಕಿದೆ. ಈ ಹಿಂದೆ ಮಾಡಿರುವ ಆದೇಶದ ಪ್ರಕಾರ ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಜೂನ್‌ ಹಾಗೂ ಜುಲೈ ತಿಂಗಳ ಅಂತ್ಯದಲ್ಲಿ ಪರಿಹಾರ ಬೋಧನೆ ಮಾಡಿ ಎರಡು ಪೂರಕ ಪರೀಕ್ಷೆಗಳನ್ನು ಶಾಲಾ ಹಂತದಲ್ಲಿಯೇ ನಡೆಸಲಾಗುವುದು. ಜತೆಗೆ ವಿದ್ಯಾರ್ಥಿಗಳ ಕಲಿಕಾ ಬಲವರ್ಧನೆಗೊಳಿಸಬೇಕು ಎಂದು ಸೂಚಿಸಲಾಗಿತ್ತು.

ಹಾಡು ಹಗಲೆ ಶಾಲಾ ಬಾಲಕಿಯ ಮೇಲೆ ಆ್ಯಸಿಡ್ ದಾಳಿ

ನವದೆಹಲಿ: ಬೈಕ್ ನಲ್ಲಿ ಬಂದ ಇಬ್ಬರು ಯುವಕರು 17 ವರ್ಷದ ಬಾಲಕಿಯ ಮೇಲೆ ಆ್ಯಸಿಡ್ ಎರಚಿ ಪರಾರಿಯಾದ ಆತಂಕಕಾರಿ ಘಟನೆ ನೈಋತ್ಯ ದೆಹಲಿಯ ದ್ವಾರಕಾ ಪ್ರದೇಶದಲ್ಲಿ ಇಂದು ಬೆಳಗ್ಗೆ ನಡೆದಿದೆ. ಆ್ಯಸಿಡ್ ದಾಳಿಯ ಪರಿಣಾಮ ಬಾಲಕಿಯ ಮುಖ ಹಾಗೂ ಕಣ್ಣಿಗೆ ಗಂಭೀರವಾದ ಗಾಯಗಳಾಗಿವೆ ಎಂದು ಬಾಲಕಿಯ ತಂದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಘಟನೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ರಸ್ತೆ ಬದಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ನಡೆದುಕೊಂಡು ಹೋಗುತ್ತಿದ್ದು, ಈ

ಮಂಗಳೂರಿನ ಪಚ್ಚನಾಡಿ ಕಾರ್ಮಿಕ ನಗರದಲ್ಲಿಅಕ್ರಮ ಸರ್ಕಾರಿ ನಿವೇಶನ ಹಂಚಿಕೆ ವಿರುದ್ಧ ಪ್ರತಿಭಟನೆ

ಮಂಗಳೂರಿನ ಪಚ್ಚನಾಡಿ ಕಾರ್ಮಿಕ ನಗರದಲ್ಲಿ ಅಕ್ರಮ ಸರಕಾರಿ ನಿವೇಶನ ಹಂಚಿಕೆ ವಿರುದ್ಧ ಸಾರ್ವಜನಿಕರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಗ್ರಾಮದ ಕಾರ್ಮಿಕನಗರದ ಸರ್ವೇ ನಂ 158ರಲ್ಲಿ ಸುಮಾರು ಎರಡು ಎಕರೆ ಸರಕಾರಿ ಜಾಗವಿದ್ದು ಸದ್ರಿ ಸ್ಥಳದಲ್ಲಿ ಸುಮಾರು 50 ವರುಷಗಳಿಂದ ಒಂದು ಸಾರ್ವಜನಿಕ ವೇದಿಕೆಯಿದೆ. ಈ ವೇದಿಕೆಯಲ್ಲಿ ಸಾರ್ವಜನಿಕ ಕಾರ್ಯಕ್ರಮಗಳು ನಡೆಯುತ್ತಿದ್ದವು ಮತ್ತು ಸ್ಥಳೀಯ ಹುಡುಗರು ಈ

ಡಿ. 24,25 ರಂದು ಶೂನ್ಯ ತ್ಯಾಜ್ಯ ಪರಿಕಲ್ಪನೆಯಡಿಯಲ್ಲಿ ಕೋಟಿ-ಚೆನ್ನಯ ಕಂಬಳ

ಮೂಡುಬಿದಿರೆ ಡಿ. 24,25ರಂದು ನಡೆಯುವ ಕೋಟಿ-ಚೆನ್ನಯ ಕಂಬಳದಲ್ಲಿ ಏಕ ಬಳಕೆಯ ವಸ್ತುಗಳನ್ನು ಬಳಸದ ಮರುಬಳಕೆಯ ವಸ್ತುಗಳನ್ನು ಬಳಸುವ ಮೂಲಕ ಶೂನ್ಯ ತ್ಯಾಜ್ಯದ ಕಂಬಳವನ್ನಾಗಿ ಆಯೋಜಿಸಿ ಮಾದರಿಯಾಗುವಂತೆ ಮಾಡಲು ತಾವು ಸಂಪೂರ್ಣವಾಗಿ ಬೆಂಬಲವನ್ನು ನೀಡುತ್ತೇವೆಂದು ವ್ಯಾಪಾರಸ್ಥರ ಪರವಾಗಿ ಭರತ್ ಅವರು ಭರವಸೆಯನ್ನು ನೀಡಿದ್ದಾರೆ. ಒಂಟಿಕಟ್ಟೆಯ ರಾಣಿ ಅಬ್ಬಕ ಸಂಸ್ಕೃತಿ ಗ್ರಾಮದಲ್ಲಿ ನಡೆಯಲಿರುವ ಹೊನಲು ಬೆಳಕಿನ ಕಂಬಳವನ್ನು ಶೂನ್ಯ ತ್ಯಾಜ್ಯ ಮಾಡುವ ನಿಟ್ಟಿನಲ್ಲಿ ಕಂಬಳ