ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ, ಮಂಡ್ಯ, ಹಾಸನ, ಕೊಡಗು, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮ್ಯಾಂಡೌಸ್ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧೆಡೆ ಡಿಸೆಂಬರ್ 14ರವರೆಗೆ ಮಳೆ ಮುಂದುವರಿಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್
ಸುಳ್ಯ: ತೋಟಗಾರಿಕೆ, ಯೋಜನೆ ಮತ್ತು ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಮುನಿರತ್ನ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿಗೆ ಭೇಟಿ ನೀಡಿ, ಎಲೆ ಚುಕ್ಕಿ, ಅಡಿಕೆ ಎಲೆ ರೋಗ ಬಾಧಿಕ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುಳ್ಯ ತಾಲೂಕಿನ ಮರ್ಕಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ರೋಗ ಬಾಧಿಕ ನಾಲ್ಕು ಕೃಷಿಕರ ತೋಟಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡು, ರೈತರ ಅಹವಾಲು ಆಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ
ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ನಲ್ಲಿ ಪ್ರತಿದಿನ ಅಪಘಾತ ಸಂಭವಿಸುತ್ತಿದ್ದು, ಕಾಪು ಪೊಲೀಸರಿಂದ ವಾಹನ ಸವಾರರನ್ನು ಜಾಗೃರನ್ನಾಗಿ ಮಾಡುವ ಸಂದೇಶ ಸಾರಲಾಯಿತು. ಅಪಘಾತ ಸಂಭವಿಸಲು ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸದೇ ಇರುವುದು ಕಾರಣವಾಗಿದೆ. ಇದಕ್ಕಾಗಿ ಪೊಲೀಸ್ ಇಲಾಖೆಯಿಂದ ಮುಂಜಾಗ್ರತಾ ಕ್ರಮವಾಗಿ ವಾಹನ ಸವಾರರಿಗೆ ಜಾಗೃತಿ ಮೂಡಿಸುವ ಸೂಚನಾ ಫಲಕವನ್ನು ಕಟಪಾಡಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ
ಡಿಜಿಟಲ್ ಕ್ಷೇತ್ರದಲ್ಲಿ ಗ್ರಾಹಕ ಸೇವೆಯಲ್ಲಿ ನಿರತವಾಗಿರುವ ಎಲ್‌ಕೋಡ್ ಟೆಕ್ನಾಲಾಜೀಸ್ ಸಾಫ್ಟ್‌ವೇರ್ ಸಂಸ್ಥೆಯ ನೂತನ ಕಚೇರಿಯನ್ನು ಬಿಜೈ ಕಾಪಿಕಾಡ್‌ನ ಅಜಂತಾ ಬಿಸ್‌ನೆಸ್ ಸೆಂಟರ್‌ನಲ್ಲಿ ಶುಭಾರಂಭಗೊಂಡಿತ್ತು. ನೂತನ ಎಲ್‌ಕೋಡ್ ಟೆಕ್ನಾಲಜೀಸ್ ಸಾಫ್ಟ್‌ವೇರ್ ಸಂಸ್ಥೆಯ ನೂತನ ಕಚೇರಿಯನ್ನು ಕರ್ಣಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಮಹಾಬಲೇಶ್ವರ ಎಂ.ಎಸ್.ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಈಗ ಇರುವ ಡಿಜಿಟಲ್ ವ್ಯವಸ್ಥೆಯ ಕುರಿತಂತೆ
ವಿಟ್ಲ: ಚಂದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಂಭ್ರಮ ಶನಿವಾರ ನಡೆಯಿತು. ಎಸ್ ಎಲ್ ವಿ ಬುಕ್ ಕಂಪೆನಿಯ ದಿವಾಕರದಾಸ್ ನೇರ್ಲಾಜೆ ಮಾತನಾಡಿ ಹಿರಿಯ ಶಿಕ್ಷಕರು ಭದ್ರ ಅಡಿಪಾಯ ಇಟ್ಟುಕೊಟ್ಟ ಕಾರಣದಿಂದ ಶಾಲೆಯೂ ಇಂದು ಉತ್ತಮವಾಗಿ ಅಭಿವೃದ್ಧಿ ಹೊಂದಿದೆ. ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಶಿಕ್ಷಕರ, ಹಳೆ ವಿದ್ಯಾರ್ಥಿಗಳ ಕಾರ್ಯ ಶ್ಲಾಘನೀಯ ಎಂದರು. ವಜ್ರಮಹೋತ್ಸವ ಸಮಿತಿ ಅಧ್ಯಕ್ಷ ದೇಜಪ್ಪ ಪೂಜಾರಿ ನಿಡ್ಯ ಅವರನ್ನು
ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ ನಡೆಯುವ 22ನೇ ವರ್ಷದ ಸಂಭ್ರಮ “ಅಕ್ಷರ ಉತ್ಸವ” ವು ಶನಿವಾರ ಬೆಳಿಗ್ಗೆ ಉದ್ಘಾಟನೆಗೊಂಡಿತು. ಶಾಲಾ ಪೆÇೀಷಕರ ಸಂಘದ ಅಧ್ಯಕ್ಷ ಅರುಣ್ ಐತಾಳ್ ಅಕ್ಷರ ಉತ್ಸವವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರಾ ಮಕ್ಕಳಿಗೆ ಬಹುಮಾನ ವಿತರಿಸಿದರು. ಶಾಲಾ ಸಂಚಾಲಕ ಮೋಹನ್ ರೈ.ಕೆ. ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಬಿಜೆಪಿ ಯುವ
ಉಳ್ಳಾಲ: ನಟಿ ರಕ್ಷಿತಾ ಪ್ರೇಮ್ ಸಲಹೆ ಮೇರೆಗೆ ಕರಾವಳಿಯ ಕಾರಣೀಕ ಶಕ್ತಿ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರಿಗೆ ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಭೇಟಿ ನೀಡಿದರು. ವೇದ ಸಿನಿಮಾದ ಫ್ರೀ ರಿಲೀಸ್ ಇವೆಂಟ್ ಗೆ ಮಂಗಳೂರಿಗೆ ಆಗಮಿಸಿರೋ ಶಿವರಾಜ್ ಕುಮಾರ್ ಇಂದು ಮೊದಲ ಬಾರಿಗೆ ಪತ್ನಿ ಗೀತ ಹಾಗೂ ಕುಟುಂಬಸ್ಥರೊಂದಿಗೆ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಇಂದು ಸಂಜೆ ಪಣಂಬೂರು ಬೀಚ್ ನಲ್ಲಿ ನಡೆಯಲಿರುವ ವೇದ ಸಿನಿಮಾದ ಫ್ರೀ ರಿಲೀಸ್ ಇವೆಂಟ್
ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಈ ವರ್ಷದ ಸೂಪರ ಹಿಟ್ ಕಾಂತಾರ ಚಲನಚಿತ್ರ ಸಿನಿಮಾ ನಿರ್ಮಾಪಕ ವಿಜಯ್ ಕಿರಂದೂರು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಳದ ಅರ್ಚಕ ಹರಿನಾರಾಯಣ ದಾಸ ಅಸ್ರಣ್ಣ ವಿಜಯ್ ಅವರಿಗೆ ದೇವರ ಶೇಷ ವಸ್ತ್ರ ನೀಡಿ ದೇವಳದ ವತಿಯಿಂದ ಕಿರಂದೂರು ಅವರನ್ನು ಗೌರವಿಸಲಾಯಿತು.
ಮೂಡುಬಿದಿರೆ: ಬಸ್ಸಿಗೆ ಢಿಕ್ಕಿ ಹೊಡೆದ ತಾಲೂಕಿನ ನೆಲ್ಲಿಕಾರು ಗ್ರಾ.ಪಂ.ವ್ಯಾಪ್ತಿಯ ಮೈನೇರು ಎಂಬಲ್ಲಿ ಇಂದು ಬೆಳಿಗ್ಗೆ ಕಾರೊಂದು ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಒಂದೂವರೆ ವರ್ಷದ ಮಗು ಸಹಿತ ಮೂರು ಮಂದಿ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರು ಮೂಲದ ದಂಪತಿ ತಮ್ಮ ಒಂದೂವರೆ ವರ್ಷದ ಮಗುವಿನೊಂದಿಗೆ ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದಾಗ ಕಾರ್ಕಳದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ವಿಶಾಲ್ ಬಸ್ಸಿಗೆ ಢಿಕ್ಕಿ ಹೊಡೆದು ಬಸ್ಸಿನ ಅಡಿಭಾಗದಲ್ಲಿ
ರಾಷ್ಟ್ರೀಯ ಹೆದ್ದಾರಿ ಬಳಿಯ ಆರು ಅಂಗಡಿಗಳಿಗೆ ನುಗ್ಗಿದ ಕಳ್ಳರು ಸರಣಿ ಕಳವು ನಡೆಸಿ ಸಾವಿರಾರು ರೂ. ಬೆಲೆಬಾಳುವ ಸೊತ್ತುಗಳನ್ನು ಕಳವು ನಡೆಸಿರುವ ಘಟನೆ ಗಡಿಭಾಗ ತಲಪಾಡಿಯಲ್ಲಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಶ್ರಫ್, ಕುಲದೀಪ್, ಶ್ರೀಧರ್ ಹಾಗೂ ಮಹಮ್ಮದ್ , ಶಂಕರ್ ಎಂಬವರಿಗೆ ಸೇರಿದ ಅಂಗಡಿಗಳಿಂದ ಸಾವಿರಾರು ರೂ. ಬೆಲೆಬಾಳುವ ವಸ್ತುಗಳು ಹಾಗೂ ಕ್ಯಾಷ್ ಡ್ರಾವರಿನಲ್ಲಿದ್ದ ನಗದು ಹಾಗೂ ಇನ್ನೋರ್ವ ಅಶ್ರಫ್ ಎಂಬವರಿಗೆ ಸೇರಿದ ಝೆರಾಕ್ಸ್ ಅಂಗಡಿಯಿಂದ ನಗದು,




























