Home Posts tagged V4News (Page 642)

ಮೂಡುಬಿದರೆಯ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಗುದ್ದಲಿಪೂಜೆ : ಶಾಸಕ ಉಮಾನಾಥ ಕೋಟ್ಯಾನ್‍ರಿಂದ ಶಿಲಾನ್ಯಾಸ

ಮೂಡುಬಿದಿರೆ: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ 4 ರ ರೂ 10 ಕೋಟಿ ಮೊತ್ತದ ಯೋಜನೆಯಲ್ಲಿ 4.46 ಕೋಟಿ ಮೊತ್ತದ 6 ರಸ್ತೆ ಮತ್ತು ಚರಂಡಿ ಕಾಮಗಾರಿಗಳು ಹಾಗೂ ಪುರಸಭಾ ನಿಧಿ 2022-23ರಲ್ಲಿ ರೂ 1.36 ಕೋಟಿ ಮೊತ್ತದ 27 ಕಾಮಗಾರಿಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ಮಂಗಳವಾರ ಒಂಟಿಕಟ್ಟೆಯಲ್ಲಿ ಗುದ್ದಲಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಕೋಟ್ಯಾನ್ ಅವರು

ಶೂನ್ಯ ತ್ಯಾಜ್ಯದೊಂದಿಗೆ ಕಂಬಳ, ಕಾಂತಾರ ಟೀಮ್ ಜನಾಕರ್ಷಣೆ : ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿಕೆ

ಮೂಡುಬಿದಿರೆ: ಡಿ.24ರಂದು ಮೂಡುಬಿದಿರೆ ಒಂಟಿಕಟ್ಟೆಯಲ್ಲಿ ನಡೆಯುವ 20ನೇ ವರುಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವನ್ನು ಶೂನ್ಯ ತ್ಯಾಜ್ಯವಾಗಿ ಮತ್ತು ಕಾಂತಾರ ಸಿನೆಮಾ ದೊಂದಿಗೆ ವಿಭಿನ್ನವಾಗಿ ಜನಾಕರ್ಷಣೆಯೊಂದಿಗೆ ನಡೆಸಲುದ್ದೇಶಿಸಲಾಗಿದೆ ಎಂದು ಎಂದು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಉಮಾನಾಥ್ ತಿಳಿಸಿದರು. ಅವರು ಒಂಟಿಕಟ್ಟೆ ಕಡಲಕೆರೆ ಬಳಿಯ ಸೃಷ್ಟಿ ಗಾರ್ಡನ್ ಸಭಾಂಗಣದಲ್ಲಿ ಮಂಗಳವಾರ ಸಾಯಂಕಾಲ ನಡೆದ ಮೂಡುಬಿದಿರೆ ಕಂಬಳ ಸಮಿತಿಯ ಸಮಾಲೋಚನ ಸಭೆಯ

ಕಾಂಗ್ರೆಸ್ ನ ಹಿರಿಯ ಮುಖಂಡ ಡಿ. ಸಂಜೀವ ಗಟ್ಟಿ ನಿಧನ

ಕೊಣಾಜೆ: ಕಾಂಗ್ರೆಸ್ ನ ಹಿರಿಯ ಮುಖಂಡ, ಪಿಡಬ್ಲ್ಯುಡಿ ಕಂಟ್ರಾಕ್ಟರ್ ಕೈರಂಗಳ ಗ್ರಾಮದ ಧರ್ಮಕ್ಕಿ ನಿವಾಸಿ ಸಂಜೀವ ಗಟ್ಟಿ (82)ಅಲ್ಪಕಾಲದ ಅಸೌಖ್ಯದಿಂದಮಂಗಳವಾರ ಮಧ್ಯಾಹ್ನ ಕೈರಂಗಳ ಧರ್ಮಕ್ಕಿಯ ಸ್ವಗೃಹದಲ್ಲಿ ನಿಧನರಾದರು.ಕೈರಂಗಳ ಹಾಗೂ ನರಿಂಗಾನ ಗ್ರಾಮದಲ್ಲಿ ಶಾಲೆಗಳ ಮಂಜೂರಾತಿ ಹಾಗೂ ಅಭಿವೃದ್ಧಿಗೆ ಶ್ರಮಿಸಿದ್ದ ಮೃತರುಪಕ್ಷದಲ್ಲಿ ಸುಮಾರು ಐದು ದಶಕಗಳ ಕಾಲ ಸಕ್ರಿಯವಾಗಿ ಕಾರ್ಯನಿರ್ವಹಿಸಿದ ಅನುಭವಿಯಾಗಿದ್ದುಐದು ಬಾರಿ ಬಾಳೆಪುಣಿ ಗ್ರಾಮ ಪಂಚಾಯಿತಿ ಸದಸ್ಯರಾಗಿಯೂ

ಕುಕ್ಕರ್ ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ‌ ಗೃಹ ಸಚಿವರ‌ ಭೇಟಿ, ಪರಿಶೀಲನೆ

ನಗರದ ನಾಗೋರಿಯಲ್ಲಿ ಇತ್ತೀಚೆಗೆ ಆಟೋದಲ್ಲಿ ಕುಕ್ಕರ್‌ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವರಾದ ಆರಗ‌ ಜ್ಞಾನೇಂದ್ರ ಅವರು‌ ನ.23ರ ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಡಿಜಿಪಿ ಪ್ರವೀಣ್ ಸೂದ್, ಐಜಿಪಿ ಚಂದ್ರಗುಪ್ತ,ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್, ಡಿಸಿಪಿ ಅನ್ಶು ಕುಮಾರ್ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.

ನವೆಂಬರ್ 22 ಮಂಗಳೂರಿನಲ್ಲಿ “ಹೋಮ್ ಆರ್ಟ್ ಲೈಟ್ಸ್” ಶುಭಾರಂಭ

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ ಜನತೆಗೊಂದು ಸಿಹಿ ಸುದ್ದಿ ಮಂಗಳೂರಿನಲ್ಲಿ ಮೊತ್ತ ಮೊದಲ ಬಾರಿಗೆ ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಬ್ರಾಂಡೆಡ್ ಲೈಟಿಂಗ್ ಔಟ್ ಲೆಟ್ ಶೋ ರೂಂ ಮಳಿಗೆ ಹೋಮ್ ಆರ್ಟ್ ಲೈಟ್ಸ್ ಇದೇ ಬರುವ 2022 ನವೆಂಬರ್ 27 ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಶುಭಾರಂಭಗೊಳ್ಳಲಿರುವುದಾಗಿ ಸಂಬಂಧಪಟ್ಟವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ನೂತನವಾಗಿ ಶುಭಾರಂಭಗೊಳ್ಳಲಿರುವ 2300 ಚದರ ಮೀಟರ್ ವಿಸ್ತೀರ್ಣ ನ ಹೋಮ್ ಆರ್ಟ್

ಕೊಂಕಣಿ ಮತ್ತು ಬ್ಯಾರಿ ಅಕಾಡಮಿಗಳ ಸಂಯೋಜಿತ ಐಕ್ಯತಾ ಕಾರ್ಯಕ್ರಮ.

ಕರ್ನಾಟಕ ಕೊಂಕಣಿ ಹಾಗೂ ಬ್ಯಾರಿ ಅಕಾಡಮಿ ಗಳು ಜಂಟಿಯಾಗಿ ನಾಳೆ ನವೆಂಬರ್ 23 ಬುಧವಾರ ಕೊಂಕಣಿ ಅಕಾಡೆಮಿಯ ಸಭಾಂಗಣ ಲಾಲ್ ಬಾಗ್ ಮಹಾನಗರ ಪಾಲಿಕೆಯ ಕಛೇರಿಯ ಹಿಂದಿನಲ್ಲಿ ಸಂಜೆ ನಾಲ್ಕು ಗಂಟೆಗೆ ವಿವಿಧ ಭಾಷೆಗಳ ಹಾಗೂ ಸಂಸ್ಕೃತಿಯ ಏಕತೆಯ ಬಗ್ಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಿಜಿಸ್ಟ್ರಾರ್ ಮನೋಹರ್ ಕಾಮತ್ ತಿಳಿಸಿದ್ದಾರೆ.ಕೊಂಕಣಿ, ಬ್ಯಾರಿ, ತುಳು,ಕನ್ನಡ, ಹವ್ಯಕ ಭಾಷೆಗಳ ನಾಮಾಂಕಿತ ಕವಿಗಳು ತಮ್ಮ ಐಕ್ಯತಾ ಪ್ರೋತ್ಸಾಹ ಕವಿತೆಗಳು ಸಾಧರ ಪಡಿಸುವರು.ಕನ್ನಡ

ಮಂಗಳೂರು ದಕ್ಷಿಣ: ಕಾಂಗ್ರೆಸ್ ಟಿಕೆಟ್‍ಗಾಗಿ ವಿಶ್ವಾಸ್ ಕುಮಾರ್ ದಾಸ್ ಅರ್ಜಿ ಸಲ್ಲಿಕೆ

ಮುಂಬರುವ ವಿಧಾನಸಭಾ ಚುನಾವಣೆಗೆ ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡುವಂತೆ ಮನವಿ ಮಾಡಿ ಕಾಂಗ್ರೆಸ್ ಮುಖಂಡ ಹಾಗೂ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಅಧ್ಯಕ್ಷ ವಿಶ್ವಾಸ್‍ಕುಮಾರ್ ದಾಸ್ ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದರು. ಪಕ್ಷದ ಕಾರ್ಯಕರ್ತರ ಒತ್ತಾಸೆಯಂತೆ ನಾನು ಅರ್ಜಿ ಸಲ್ಲಿಸಿದ್ದೇನೆ. ಜಿಲ್ಲೆಯಲ್ಲಿ ಹಿಂದುಳಿದ ವರ್ಗದ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸುವಂತೆ ಪಕ್ಷದ ಕಾರ್ಯಕರ್ತರ ಆಶಯಕೂಡ

ವ್ಯವಸ್ಥಿತ ಜಾಲವನ್ನು ಸರ್ಕಾರ ಬೇಧಿಸಬೇಕು : ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ

ಬಂಟ್ವಾಳ: ಎರಡು ದಿನಗಳ ಹಿಂದೆ ಮಂಗಳೂರಿನ ನಾಗುರಿಯಲ್ಲಿ ಆಟೋರಿಕ್ಷಾದಲ್ಲಿ ನಡೆದ ಕುಕ್ಕರ್ ಸ್ಪೋಟ ಪ್ರಕರಣವನ್ಬು ಸರಕಾರ ಗಂಭೀರವಾಗಿ ಪರಿಗಣಿಸಿ ಇದರ ಹಿಂದಿರುವ ವ್ಯವಸ್ಥಿತ ಜಾಲವನ್ನು ಪತ್ತೆ ಹಚ್ಚಿ ಭಯೋತ್ಪಾದಕ ಮೂಲವನ್ನು ಬೇಧಿಸಬೇಕು ಎಂದು ಆರ್ .ಎಸ್ .ಎಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರು ಒತ್ತಾಯಿಸಿದ್ದಾರೆ.ನಂದಾವರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದೊಗೆ ಮಾತನಾಡಿದ ಅವರು, ರಾಜ್ಯದ ದ.ಕ.ಜಿಲ್ಲೆ ಭಯೋತ್ಪಾದಕ ಸಂಘಟನೆಯ ತಾಣವಾಗುತ್ತಿರುವುದು ದುರ್ದೈವ

ವಿಷ ಪೂರಿತ ಅಣಬೆಯ ಸೇವನೆಯೇ : ಮೃತದೇಹ ಮನೆ ಅಂಗಳದಲ್ಲಿ

ಬೆಳ್ತಂಗಡಿ: ಪುದುವೆಟ್ಟು ಸಮೀಪದ ಪಲ್ಲದಪಲ್ಕೆ ಎಂಬಲ್ಲಿ ಒಂದೇ ಕುಟುಂಬದ ಇಬ್ಬರ ಮೃತದೇಹ ಮನೆ ಅಂಗಳದಲ್ಲಿ ಪತ್ತೆಯಾಗಿದ್ದು ಕಾಡಿನ ವಿಷ ಪೂರಿತ ಅಣಬೆಯ ಸೇವನೆಯೇ ಸಾವಿಗೆ ಕಾರಣ ಎಂದು ಸಂಶಯಿಸಲಾಗಿದೆ. ಮೃತರನ್ನು ಪಲ್ಲದಪಲ್ಕೆ ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(75) ಹಾಗು ಇವರ ಪುತ್ರ ಓಡಿ(45) ಮೃತಪಟ್ಟವರು. ಬಡ ಕುಟುಂಬದ ಮನೆಯಲ್ಲಿ ಮನೆ ಯಾಜಮಾನ ಗುರುವ ಸಹಿತ ಇಬ್ಬರು ಪುತ್ರರು ವಾಸವಾಗಿದ್ದರು. ಮಂಗಳವಾರ ಇವರ ಇಬ್ಬರ ಮೃತದೇಹ‌ ಮನೆ ಮುಂಭಾಗ

ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರ : ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯೆ

ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆ ಮಾಡಬೇಕು ಎಂಬುದು ಕೆಲವರ ಉದ್ದೇಶ. ಆರ್ಥಿಕ ಶಕ್ತಿಕೇಂದ್ರದಲ್ಲಿ ಕೋಮುಗಲಭೆ ಸೃಷ್ಟಿಸುವ ಷಡ್ಯಂತ್ರ ನಡೆದಿದೆ ಎಂದು ಅವರು ಆರೋಪಿಸಿದರು. ಕರ್ನಾಟಕದಲ್ಲಿ ಸರಣಿ ಕೊಲೆಗಳು ನಡೆದಿದ್ದವು. ರಾಜ್ಯವನ್ನು ಶಾಂತಿ ಸುವ್ಯವಸ್ಥೆ ಕೆಡಿಸುವ ಕೆಲಸ ನಡೆಯುತ್ತಿದೆ.  ಪಿಎಫ್ ಐ ಬ್ಯಾನ್