Home Posts tagged V4News (Page 675)

ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬೀಬಿಲಚ್ಚಿಲ್ : 108 ದಿನದ ಸಂಧ್ಯಾ ಭಜನಾ ಸಂಕೀರ್ತನೆ

ಮಂಗಳೂರು ತಾಲೂಕಿನ ಅದ್ಯಪಾಡಿ ಬೈಲು ಮಾಗಣೆಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬೀಬಿಲಚ್ಚಿಲ್ ಇಲ್ಲಿ ನಡೆಯಲಿರುವ ಬ್ರಹ್ಮಲಕಶೋತ್ಸವ ಹಾಗೂ ಅಷ್ಟಪವಿತ್ರ ನಾಗಬ್ರಹ್ಮಮಂಡಲೋತ್ಸವ ಪ್ರಯುಕ್ತ ಅಕ್ಟೋಬರ್ 17ರಿಂದ 2023 ಜನವರಿ 31ರ ವರೆಗೆ 108 ದಿನದ ಸಂಧ್ಯಾ ಭಜನಾ ಸಂಕೀರ್ತನೆ ನಡೆಯಲಿದೆ. ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ 2023ರ ಫೆಬ್ರವರಿ 1ರಿಂದ

ಮಂಜೇಶ್ವರ : ರಾಗಂ ಜಂಕ್ಷನ್ ಮಧ್ಯ ಅಂಡರ್ ಪಾಸ್ ನಿರ್ಮಿಸಬೇಕೆಂಬ ಆಗ್ರಹ

ಮಂಜೇಶ್ವರ: ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಅಗಲೀಕರಣವಾಗುತ್ತಿರುವ ಮಂಜೇಶ್ವರ ಗೋವಿಂದ ಪೈ ಕಾಲೇಜು ಹಾಗೂ ರಾಗಂ ಜಂಕ್ಷನ್ ಮಧ್ಯ ಅಂಡರ್ ಪಾಸ್ ನಿರ್ಮಿಸಬೇಕೆಂಬ ಬೇಡಿಕೆಯೊಂದಿಗೆ ಊರ ನಾಗರೀಕರು ಸಮಿತಿ ರಚಿಸಿ ಸಂಬಂಧಪಟ್ಟವರಿಗೆ ಮನವಿ ನೀಡಲು ತೀರ್ಮಾನಿಸಿದ್ದಾರೆ ದಿನನಿತ್ಯ ನೂರಾರು ವಿದ್ಯಾರ್ಥಿಗಳು ಆಗಮಿಸುತ್ತಿರುವ ಹಾಗೂ ದೇವಸ್ಥಾನ, ಮಸೀದಿ ಹಾಗೂ ಚರ್ಚ್ ಸೇರಿದಂತೆ ಇತರ ಹಲವು ಶಾಲೆಗಳನ್ನು ಕೂಡಾ ಸಂಪರ್ಕದ ರಸ್ತೆ ಇರುವ ಗೋವಿಂದ ಪೈ ಕಾಲೇಜು, ಮತ್ತೊಂದು ಭಾಗದಲ್ಲಿ

ಅಡಕೆ ಆಮದು ವಿಚಾರದಲ್ಲಿ ಸರ್ಕಾರ ವಿಮರ್ಶೆ ಮಾಡಬೇಕಾದ ಅಗತ್ಯವಿದೆ

ಪುತ್ತೂರು:ನಮ್ಮ ದೇಶದಲ್ಲಿ ಸುಮಾರು 18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ದೇಶಕ್ಕೆ ಬೇಕಾಗುವಷ್ಟು ಅಡಕೆ ಬೆಳೆಯಲಾಗುತ್ತಿದ್ದರೂ ಇದೀಗ ಭೂತಾನ್‍ನಿಂದ ಅಡಕೆ ಆಮದು ಮಾಡಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ದೇಶದ ಅಡಕೆ ಬೆಳೆಗಾರರ ಪರಿಸ್ಥಿತಿ ಏನಾಗಬಹುದು ಎಂಬುದನ್ನು ಕೇಂದ್ರ ಸರಕಾರ ವಿಮರ್ಶೆ ಮಾಡಬೇಕಾದ ಅಗತ್ಯವಿದೆ ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಸರಕಾರವನ್ನು ಆಗ್ರಹಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ,

ಹೆಜಮಾಡಿ : ಗುದ್ದಲಿ ಪೂಜೆ ನಡೆದು ಏಳು ತಿಂಗಳಾದರೂ ದುರಸ್ಥಿಯಾಗದ ರಸ್ತೆ

ಹೆಜಮಾಡಿ ಗುಂಡಿ ರಸ್ತೆ ದುರಸ್ತಿಗಾಗಿ ಕಳೆದ ಏಳು ತಿಂಗಳ ಹಿಂದೆ ಶಾಸಕರು ಗುದ್ದಲಿ ಪೂಜೆ ನಡೆಸಿದ್ದರಾದರೂ, ಈ ವರೆಗೂ ದುರಸ್ತಿ ಕಾಣದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಚುನಾವಣೆಯಲ್ಲಿ ತಕ್ಕ ಉತ್ತರ ನೀಡುವ ಎಚ್ಚರಿಕೆ ನೀಡಿದ್ದಾರೆ. ಗ್ರಾಮಸ್ಥ ಯೋಗೀಶ್ ಶೆಣೈ ಮಾತನಾಡಿ, ನಮ್ಮ ಬಲು ಬೇಡಿಕೆಯ ಗುಂಡಿ ರಸ್ತೆ ದುರಸ್ತಿಗಾಗಿ ಅದೆಷ್ಟೋ ಮನವಿಗಳ ಬಳಿಕ ಕಳೆದ ಏಳು ತಿಂಗಳ ಹಿಂದೆ ಗುದ್ದಲಿ ಪೂಜೆ ನಡೆಸಲಾಗಿದ್ದು, ಗುದ್ದಲಿ ಪೂಜೆ ನಡೆದು ಎರಡು ತಿಂಗಳ ಬಳಿಕ

ಮಹಡಿಯಿಂದ ಬಿದ್ದು ಯುವಕ ಮೃತ್ಯು

ಮಂಗಳೂರು: ಯುವಕನೋರ್ವ ಆಕಸ್ಮಿಕವಾಗಿ ಮನೆಯ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ರಾತ್ರಿ ನಡೆದಿದೆ. ಕುದ್ರೋಳಿ ಸಮೀಪದ ಕಂಡತ್‌ ಪಳ್ಳಿ ಬಳಿಯ ಟಿ.ಕೆ.ಎಚ್. ಖಾದರ್ ಎಂಬವರ ಪುತ್ರ ಮುಹಮ್ಮದ್ ರಿಯಾಝ್ (33) ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ. ರಿಯಾಝ್ ಮನೆಯ ಮಹಡಿ ಹತ್ತಿದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ತಕ್ಷಣ  ಅವರನ್ನು  ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ

ಕೇದಾರನಾಥ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನ

ಇಂದು ಉತ್ತರಾಖಂಡದಲ್ಲಿ ಕೇದಾರನಾಥ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು, ಇಬ್ಬರು ಪೈಲಟ್‌ಗಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರಾಖಂಡದ ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನಗೊಂಡಿದೆ. ಕೇದಾರನಾಥದಿಂದ ಸುಮಾರು 2 ಕಿ.ಮೀ. ದೂರದಲ್ಲಿರುವ ಗರುಡ್ ಚಟ್ಟಿಯಲ್ಲಿ ಈ ಘಟನೆ ನಡೆದಿದೆ ಹವಾಮಾನ ವೈಪರೀತ್ಯದಿಂದ ದುರಂತ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಎನ್ ಡಿ ಆರ್ ಎಫ್ ಹಾಗೂ

ಟೋಲ್‌ ಗೇಟ್‌ ಮುತ್ತಿಗೆ ಸಂದರ್ಭ ಪೋಲಿಸ್‌ ಹಾಗೂ ಪ್ರತಿಭಟನಾಕಾರರ ನಡುವೆ ನೂಕಾಟ-ತಳ್ಳಾಟ : ಪೊಲೀಸರಿಂದ ಲಾಠಿ ಪ್ರಯೋಗ

ಸುರತ್ಕಲ್:‌ ಸುರತ್ಕಲ್ ಟೋಲ್ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟಗಾರರ ಸಮಿತಿ ಕರೆ ನೀಡಿರುವ ಪ್ರತಿಭಟನೆ. ಟೋಲ್‌ ಗೇಟ್‌ ಮುತ್ತಿಗೆ ಸಂದರ್ಭ ಪೋಲಿಸ್‌ ಹಾಗೂ ಪ್ರತಿಭಟನಾಕಾರರ ನಡುವೆ ನೂಕಾಟ-ತಳ್ಳಾಟ ನಡೆದಿದ್ದು, ಈ ವೇಳೆ ಪೊಲೀಸರು ಪ್ರತಿಭಟನಾಕಾರರಿಗೆ ಲಾಠಿ ಪ್ರಯೋಗ ಮಾಡಿರುವುದಾಗಿ ಎಂದು ತಿಳಿದು ಬಂದಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ಪ್ರತಿಭಟನಾಕಾರ ಅಬ್ದುಲ್‌ ಖಾದರ್‌ ಎಂಬವರ ಕಣ್ಣಿಗೆ ಲಾಠಿ ತಾಗಿ

ಸಂಸದರಿಂದ ಮಹಾವೀರ ವೃತ್ತ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಮಂಗಳೂರು,ಅ.18(ಕ.ವಾ):- ಪಂಪ್ ವೆಲ್ ನಲ್ಲಿ ಕರ್ನಾಟಕ ಬ್ಯಾಂಕ್ ಹಾಗೂ ಸ್ಮಾರ್ಟ್ ಸಿಟಿ ವತಿಯಿಂದ ಮಹಾವೀರ ವೃತ್ತ ಅಭಿವೃದ್ಧಿ ಕಾಮಗಾರಿಗೆ ಅ.18ರಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಸ್ಮಾರ್ಟ್ ಸಿಟಿ, ಕರ್ನಾಟಕ ಬ್ಯಾಂಕ್ ಅಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು ಹಾಗೂ ಇತರೆ ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಶಾಸಕ ಹರೀಶ್ ಪೂಂಜನಿಗೆ ಬೆದರಿಕೆ ಪ್ರಕರಣ ಸಿಐಡಿ ತನಿಖೆಗೆ

ಬಂಟ್ವಾಳ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣದ ತನಿಖೆಯನ್ನು ಸರ್ಕಾರವು ಸಿಐಡಿಗೆ ವರ್ಗಾಯಿಸಿದೆ. ಪ್ರಕರಣದ ಕಡತಗಳನ್ನು ಬಂಟ್ವಾಳ ಪೊಲೀಸರು ಸಿಐಡಿ ವಿಭಾಗಕ್ಕೆ ವರ್ಗಾವಣೆ ಮಾಡಿದ್ದಾರೆ. ಗುರುವಾರ ರಾತ್ರಿ ಸುಮಾರು 11.15ಕ್ಕೆ ಕೆಲ ದುಷ್ಕರ್ಮಿಗಳು ಶಾಸಕ ಹರೀಶ್​ ಪೂಂಜಾರವರ ಕಾರನ್ನು ಅಡ್ಡಗಟ್ಟಿದ್ದರು. ಶಾಸಕರ ಕಾರು ಚಾಲಕನ ದೂರಿನಂತೆ ಫರಂಗಿಪೇಟೆ ಎಂಬಲ್ಲಿ ಘಟನೆ ನಡೆದಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್

ಮಂಗಳೂರು ಬಂದರ್‌ನಿಂದ ಮುನವಳ್ಳಿಗೆ ಕೋಲ್ ಸಾಗಾಟ ಮಾಡುತ್ತಿದ್ದ ಟ್ರಕ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ

ಮಂಗಳೂರು ಬಂದರ್‌ನಿಂದ ಮುನವಳ್ಳಿಗೆ ಕೋಲ್ ಸಾಗಾಟ ಮಾಡುತ್ತಿದ್ದ ಟ್ರಕ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳದ ಸಿಬಂದಿಗಳ‌ ಸಕಾಲಿಕ ಕಾರ್ಯಾಚರಣೆಯಿಂದಾಗಿ ಭಾರಿ ಅವಘಡವೊಂದು ತಪ್ಪಿದಂತಾಗಿದೆ.  ಟ್ರಕ್‌ನಲ್ಲಿ ತುಂಬಿದ್ದ ಕೋಲ್‌ನಲ್ಲಿ ಘರ್ಷಣೆಯುಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು ಟ್ರಕ್ ಚಾಲಕ ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಉಡುಪಿ ಅಗ್ನಿಶಾಮಕದಳಕ್ಕೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ