Home Posts tagged V4News (Page 694)

ಪುತ್ತೂರು : ಪ್ರಥಮ ಬಾರಿಗೆ ಪುತ್ತೂರ್ದ ಪಿಲಿ ರಂಗ್ ಹುಲಿವೇಷ ಸ್ಪರ್ಧೆ

ಪುತ್ತೂರು: ಪುತ್ತೂರಿನ ಇತಿಹಾಸದಲ್ಲೇ ಪ್ರಥಮ ಬಾರಿಗೆ ಕರಾವಳಿಯ ಆಯ್ದ ತಂಡಗಳ ಹುಲಿವೇಷ ಸ್ಪರ್ಧೆ “ಪುತ್ತೂರ್ದ ಪಿಲಿ ರಂಗ್’ ಅಕ್ಟೋಬರ್ 1ರಂದು ಶನಿವಾರ ನಗರದ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವರಾತ್ರಿ ಸಂದರ್ಭದಲ್ಲಿ ಯುವ ಜನತೆಯನ್ನು ಸಾಂಪ್ರದಾಯಿಕ

ರಾಜಕೀಯ ದ್ವೇಷಕ್ಕೆ ಅಮಾಯಕರನ್ನು ಬಂಧಿಸಿ ತುರ್ತುಪರಿಸ್ಥಿತಿ ರೀತಿಯ ವಾತಾವರಣ ಸೃಷ್ಟಿ ಮಾಡುತ್ತಿರುವ ಕೋಮುವಾದಿ ಫಾಸಿಸ್ಟ್ ಸರ್ಕಾರ: SDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು

ಬೆಂಗಳೂರು, 27 ಸೆಪ್ಟೆಂಬರ್ 2022: ಕೋಮುವಾದಿ ಫಾಸಿಸ್ಟ್ ಬಿಜೆಪಿ ಸರ್ಕಾರ ತನ್ನ ರಾಜಕೀಯ ಶತ್ರುಗಳನ್ನು ಗುರಿಯಾಗಿಸಿಕೊಂಡು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ) ವಿರುದ್ಧ ಆರಂಭಿಸಿದ ಅಸಂವಿಧಾನಿಕ ದಾಳಿ ಮತ್ತು ಕಾನೂನುಬಾಹಿರ ಬಂಧನಗಳ ಮುಂದುವರಿದ ಭಾಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷ ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿ.ಎಫ್.ಐ) ಕಾರ್ಯಕರ್ತರನ್ನು ಕೂಡ ಕಾನೂನುಬಾಹಿರವಾಗಿ ಬಂಧಿಸುತ್ತಿದೆ. ಯಾವುದೇ

ಕೋಝಿಕ್ಕೋಡ್‍ನಿಂದ ದೆಹಲಿಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ

ಕಣ್ಣೂರು: ಕೋಝಿಕ್ಕೋಡ್‍ನಿಂದ ದೆಹಲಿಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ ಹೊಡೆದ ಪರಿಣಾಮ, ವಿಮಾನವನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲೇ ಲ್ಯಾಂಡಿಂಗ್ ಮಾಡಿದ ಘಟನೆ ಸೋಮವಾರ ನಡೆದಿದೆ. ವಿಮಾನ ಟೇಕಾಫ್ ಆದ ಸ್ವಲ್ಪ ಸಮಯದಲ್ಲೇ ಹಕ್ಕಿ ಢಿಕ್ಕಿ ಹೊಡೆಯಿತು. ಇದರ ಪರಿಣಾಮ ವಿಮಾನವನ್ನು ತಪಾಸಣೆ ಮತ್ತು ನಿರ್ವಹಣೆಗಾಗಿ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು ಎಂದು ಏರ್ ಇಂಡಿಯಾ ವಕ್ತಾರರು ಹೇಳಿದ್ದಾರೆ. 135 ಮಂದಿ ಪ್ರಯಾಣಿಕರೊಂದಿಗೆ ಕೋಝಿಕ್ಕೋಡ್

“ಅಪರಾಧಿ ನಾನಲ್ಲ” ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

ಎಸ್‍ಎಲ್‍ವಿ ಕಲರ್ಸ್ ಬ್ಯಾನರ್‍ನಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅಪರಾಧಿ ನಾನಲ್ಲ ಚಿತ್ರದ ಫಸ್ಟ್ ಲುಕ್ “ಅಪರಾಧಿ ನಾನಲ್ಲ” ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಬಿಡುಗಡೆ ಕಾರ್ಯಕ್ರಮ ಮೈಸೂರಿನ ಚಾಮುಂಡಿಬೆಟ್ಟದ ತಾಯಿ ಚಾಮುಂಡೇಶ್ವರಿಯ ಸನ್ನಿಧಾನದಲ್ಲಿ ನಡೆಯಿತು. ಮುತಾಲಮಡ ಸ್ನೇಹ ಚಾರಿಟೇಬಲ್ ಟ್ರಸ್ಟ್ ನ ಸುನಿಲ್ ದಾಸ್ ಸ್ವಾಮೀಜಿ ಪೆÇೀಸ್ಟರ್ ಬಿಡುಗಡೆಗೊಳಿಸಿ ಚಿತ್ರ ತಂಡಕ್ಕೆ ಶುಭ ಹಾರೈಸಿದರು. ಪ್ರಶಾಂತ್ ಆಳ್ವ

ವೆಲ್ಪೇರ್ ಅಸೋಸಿಯೇಷನ್ ರಾಣಿಪುರ ವಾರ್ಷಿಕೋತ್ಸವ : ಫಾದರ್ ಮುಲ್ಲರ್ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರ

ಉಳ್ಳಾಲ: ವೆಲ್ಫೇರ್ ಅಸೋಸಿಯೇಷನ್ ರಾಣಿ ಪುರ (ರಿ)ಇದರ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಮುನ್ನೂರು ಗ್ರಾಮ ಪಂಚಾಯತ್ ಮುನ್ನೂರು ಮತ್ತು ಮಂಗಳೂರಿನ ಫಾದರ್ ಮುಲ್ಲರ್ ಅಸ್ಪತ್ರೆ ಇವರ ಸಹಯೋಗದಲ್ಲಿ ಉಚಿತ ವೈದ್ಯಕೀಯಾ ತಪಾಸಣಾ ಶಿಬಿರ ರಾಣಿ ಪುರ ಶಾಲಾ ವಠಾರದಲ್ಲಿ ನಡೆಯಿತು. ರಾಣಿಪುರ ಮೇರಿ ವಿಶ್ವ ಮಾತೆ ದೇವಾಲಯ ಧರ್ಮಗುರು ಫಾದರ್ ಜಯಪ್ರಕಾಶ್ ಡಿ ಸೋಜ ಉಚಿತ ವೈದ್ಯಕೀಯಾ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು ದೇಶದ ಜನರು ಪರಸ್ಪರ ಇತರರ

ಪುತ್ತೂರು: ಪಿಎಫ್ಐ ಮುಖಂಡ ಜಾಬೀರ್ ಅರಿಯಡ್ಕ ಪೊಲೀಸ್ ವಶಕ್ಕೆ

ಪುತ್ತೂರು: ಇಂದು ಮುಂಜಾನೆಯಿಂದಲೇ ರಾಜ್ಯದ ಹಲವೆಡೆ ಪೊಲೀಸರು ದಾಳಿ ನಡೆಸುತ್ತಿದ್ದು, ಪುತ್ತೂರು ಮೂಲದ ಪಿಎಫ್ಐ ಮುಖಂಡ ಜಾಬೀರ್ ಅರಿಯಡ್ಕ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.ಇಂದು ಮುಂಜಾನೆಯಿಂದಲೇ ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪಿಎಫ್ಐ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದು, ಪಿಎಫ್ಐ ಪುತ್ತೂರು ಜಿಲ್ಲಾಧ್ಯಕ್ಷ ಜಾಬೀರ್ ಅರಿಯಡ್ಕ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮೂಡುಬಿದಿರೆ : ದಸರಾ ಅಮೃತ ಮಹೋತ್ಸವಕ್ಕೆ ಚಾಲನೆ

ಮೂಡುಬಿದಿರೆ: ಸಮಾಜ ಮಂದಿರ ಸಭಾ (ರಿ.) ವತಿಯಿಂದ ಸಮಾಜ ಮಂದಿರದಲ್ಲಿ ಸಾಹಿತ್ಯ ಸಾಂಸ್ಕೃತಿಕ ಕಲಾಪಗಳೊಂದಿಗೆ ನಡೆಯಲಿರುವ 75ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವವನ್ನು ಕೇಂದ್ರದ ಮಾಜಿ ಸಚಿವ ಡಾ.ಎಂ.ವೀರಪ್ಪ ಮೊಯಿಲಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ನಾನು ಇಂದು ಏನಾಗಿದ್ದೇನೆ ಅದು ಸಾಹಿತ್ಯ ಇರಬಹುದು ಸಾಂಸ್ಕೃತಿಕ ವ್ಯಕ್ತಿ ಇರಬಹುದು ಅಥವಾ ರಾಜಕೀಯದಲ್ಲಿ ಒಂದು ಸ್ಥಾನ ಪಡೆಯಲು ಗಂಗಾಮೂಲ ಯಾವುದೆಂದರೆ ಅದು ಈ ಸಮಾಜ ಮಂದಿರ ಸಭಾ ಮತ್ತು ಸರಸ್ವತಿ

ಮೂಡುಬಿದರೆ : ಸಿಪಿಐಎಂ ವತಿಯಿಂದ ಜನವಿರೋಧಿ, ದೇಶವಿರೋಧಿ ಆಡಳಿತ ವಿರೋಧಿಸಿ ಆಂದೋಲನ

ಮೂಡುಬಿದಿರೆ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರದ ಜನವಿರೋಧಿ, ದೇಶವಿರೋಧಿ ಆಡಳಿತವನ್ನು ವಿರೋಧಿಸಿ ಮತ್ತು ವಿಪರೀತ ಬೆಲೆ ಏರಿಕೆಯನ್ನು ಖಂಡಿಸಿ ಸಿ.ಪಿ.ಐ.ಎಂನ ತಾಲೂಕು ಸಮಿತಿ ವತಿಯಿಂದ ಸೋಮವಾರ ಆಡಳಿತ ಸೌಧದ ಮುಂಭಾಗದಲ್ಲಿ ಪ್ರಚಾರಾಂದೋಲನ ನಡೆಯಿತು.ಸಿ.ಪಿ.ಐ.ಎಂನ ರಾಜ್ಯ ಸಮಿತಿಯ ಸದಸ್ಯ ಜಿ.ಎನ್ ನಾಗರಾಜ್ ಅವರು ಪ್ರಚಾರಾಂದೋಲನವನ್ನು ಉದ್ದೇಶಿಸಿ ಮಾತನಾಡಿ ನಿರುದ್ಯೋಗ, ಹಣದುಬ್ಬರ, ದೇಶದ ಸಂಪತ್ತಿನ ಲೂಟಿ ಮತ್ತು ಭ್ರಷ್ಟಾಚಾರದಲ್ಲಿ ತನ್ನನ್ನು

ಕೊಲ್ಲೂರು ಶ್ರೀ ಕ್ಷೇತ್ರ ಮೂಕಾಂಬಿಕಾ ದೇವಸ್ಥಾನ ನವರಾತ್ರಿ ಸಂಭ್ರಮ

ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಗಣಪತಿ ಪೂಜೆಯೊಂದಿಗೆ ನವರಾತ್ರಿ ಪರ್ವಕ್ಕೆ ಚಾಲನೆ ನೀಡಿ ಶ್ರೀದೇವಿಗೆ ವಿಶೇಷ ಪೂಜೆ, ಮಂಗಳಾರತಿ ನಡೆಯಿತು. ಬಳಿಕ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ನವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಿದರು. 9 ದಿನಗಳ ಕಾಲ ನಡೆಯುವ ಉತ್ಸವಕ್ಕೆ ದೇವಳ ಸಕಲ ಸಿದ್ಧತೆ ಮಾಡಿಕೊಂಡಿದ್ದು ಊರ- ಪರವೂರಿನಿಂದ ಭಕ್ತರಿಗೋಸ್ಕರ

ಬಡ ದಂಪತಿಗಳಿಗೆ ಮನೆ ನಿರ್ಮಿಸಿಕೊಟ್ಟ ಆಶ್ರಯದಾತ ಡಾ. ಗೋವಿಂದ ಬಾಬು ಪೂಜಾರಿ

ಬೈಂದೂರು :ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ (ರಿ )ಉಪ್ಪುಂದ ಶೈಕ್ಷಣಿಕ ಸಾಮಾಜಿಕ ಸೇವಾ ಸಂಸ್ಥೆಯಾಗಿದೆ ಟ್ರಸ್ಟ್ ಮೂಲಕ ತೀರಾ ಅಗತ್ಯ ಉಳ್ಳವರಿಗೆ ಹಾಗೂ ಕಡು ಬಡವರಿಗೆ ಸೂರು(ಮನೆ) ನಿರ್ಮಿಸಿ ಕೊಡುವ ಕಾರ್ಯ ನಿರಂತರವಾಗಿ ನಡೆಸಿಕೊಂಡು ಬಂದಿರುತ್ತದೆ . ಬೈಂದೂರು ಗಂಗಾನಾಡು ನಿರೋಡಿ ರಾಮ ಮರಾಠ ದಂಪತಿಗಳಿಗೆ ಸುಸಜ್ಜಿತ ಮನೆಯನ್ನು ಶ್ರೀ ಡಾ ಗೋವಿಂದ ಬಾಬು ಪೂಜಾರಿಯವರು ನಿರ್ಮಿಸಿ ಫಲಾನುಭವಿಗಳಿಗೆ ಮನೆಯ ಕೀಯನ್ನು ಹಸ್ತಾಂತರಿಸಿದರು. ವರಲಕ್ಷ್ಮಿ ನಿಲಯದ