ಸೆ.25ರ ಮುಂಜಾನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಧರ್ಮಸ್ಥಳದಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್ಸು ಹಾಸನದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸೇರಿ ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಪ್ರಯಾಣಿಕರನ್ನು
ಒಟಿಟಿ ಸೀಸನ್ ಮುಗಿದ ಬೆನ್ನಲ್ಲೆ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್‍ಬಾಸ್‍ನ ಟಿವಿ ಸೀಸನ್ ಇಂದು ಆರಂಭಗೊಳ್ಳುತ್ತಿದ್ದು, ಬಿಗ್‍ಬಾಸ್ ಸೀಸನ್ 9ರ ಮನೆಗೆ ಸದಸ್ಯರನ್ನು ಕಳುಹಿಸಲು ಕಲರ್ಸ್ ಕನ್ನಡ ಚಾನೆಲ್ ಸಜ್ಜಾಗಿದೆ. ಒಟಿಟಿಯಲ್ಲಿ ಸೀಸನ್‍ನಲ್ಲಿ ಟಾಪರ್ ಅಗಿರುವ ರೂಪೇಶ್ ಶೆಟ್ಟಿ ಅವರು ಟಿವಿ ಸೀಸನ್‍ಗೆ ಎಂಟ್ರಿ ಕೊಡಲಿದ್ದಾರೆ. ರೂಪೇಶ್ ಶೆಟ್ಟಿ ಕನ್ನಡ ಮತ್ತು ತುಳು ಚಿತ್ರರಂಗದ ಪ್ರತಿಭಾವಂತ ನಟ, ಇವರು
ನಮ್ಮ ಜಿಲ್ಲೆಯ ಹೆಸರಾಂತ ಉತ್ಸವಗಳಲ್ಲಿ ಅತೀ ಪ್ರಸಿದ್ಧ್ದವಾದ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವದ 100ನೇ ವರ್ಷದ ಕಾರ್ಯಕ್ರಮಗಳನ್ನು ಎಂದಿನ0ತೆ ಮಂಗಳೂರು ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಳದ ಆಚಾರ್ಯ ಮಠದ ನೂತನ ವಸಂತ ಮಂಟಪದಲ್ಲಿ ಧಾರ್ಮಿಕ ಕಾರ್ಯಕ್ರಮದೊಂದಿಗೆ ನಡೆಸುವುದೆಂದು ನಿಶ್ಚಯಿಸಲಾಗಿದೆ. ಎಲ್ಲಾ ಕಾರ್ಯಕ್ರಮಗಳಲ್ಲಿ ಭಗವತ್ ಭಕ್ತರು ತನು-ಮನ-ಧನಗಳಿಂದ ಪಾಲುಗೊಂಡು ಶ್ರೀ ದೇವಿಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕೆಂದು ವಿನಂತಿ.ಮಂಗಳೂರು ಶ್ರೀ
ಉಳ್ಳಾಲ: ಅಕ್ರಮ ಮರಳು ದಾಸ್ತಾನಿರಿಸಿದ ಪ್ರದೇಶಕ್ಕೆ ದಾಳಿ ನಡೆಸಿದ ತಹಸೀಲ್ದಾರ್ ನೇತೃತ್ವದ ತಂಡ ಎರಡು ಲೋಡ್ ಮರಳನ್ನು ವಶಪಡಿಸಿಕೊಂಡಿದೆ.ಅಂಬ್ಲಮೊಗರು ಗ್ರಾಮದ ಕುಂಡೂರು ಮಸೀದಿ ಬಳಿ ದಾಸ್ತಾನಿರಿಸಿದ ಮರಳು ಕುರಿತು ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ತಹಸೀಲ್ದಾರ್ ಡಿ.ಎ ಪುಟ್ಟರಾಜು ನೇತೃತ್ವದಲ್ಲಿ ಕಂದಾಯ ನಿರೀಕ್ಷಕ ಮಂಜುನಾಥ್ ಕೆ.ಹೆಚ್, ಪಿಡಿಓ ರವೀಂದ್ರ ನಾಯಕ್, ಗ್ರಾಮಕರಣಿಕೆ ನಯನಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಪ್ರಧಾನಿ ನರೇಂದ್ರ ಮೋದಿಯವರ ಕನಸಾದ ಮಧು ಕಾಂತ್ರಿಯನ್ನು ನನಸು ಮಾಡಲು ದೇಶದೆಲ್ಲೆಡೆ ಜೇನು ಕೃಷಿಯ ಮೇಲೆ ಒಲವು ಹೆಚ್ಚಾಗುತ್ತಿದೆ. ಗುಜರಾತ್ ರೈತರಿಗೆ ಜೇನು ಸಾಕಾಣಿಕೆಯ ಬಗ್ಗೆ ಹೆಚ್ಚಿನ ತರಬೇತಿ ನೀಡಲು ದಕ್ಷಿಣಕನ್ನಡ ಜಿಲ್ಲೆಯ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಜೇನು ಉತ್ಪಾದಕರೊಬ್ಬರು ಗುಜರಾತ್‍ಗೆ ತೆರಳಲಿದ್ದಾರೆ. ಈಗಾಗಲೇ ದಕ್ಷಿಣಕನ್ನಡ ಜಿಲ್ಲೆಯ 100 ಜೇನು ಕುಟುಂಬಗಳನ್ನು ಗುಜರಾತ್‍ಗೆ ರವಾನಿಸಿರುವ ಇವರಿಗೆ ಒಟ್ಟು 1 ಸಾವಿರ ಜೇನು
ಶಿಕಾರಿಪುರ : ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 11,133 ನೇರಪಾವತಿ ಪೌರಕಾರ್ಮಿಕರನ್ನು ಖಾಯಂ ಸರ್ಕಾರಿ ನೌಕರರಾಗಿ ಪರಿಗಣಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ. ಇದರಿಂದ ಶಿಕಾರಿಪುರ ಪುರಸಭೆಯಲ್ಲಿ ಒಟ್ಟು 23 ಜನ ನೇರಪಾವತಿ, ಪೌರಕಾರ್ಮಿಕರು ಖಾಯಂ ನೌಕರ ಸೌಲಭ್ಯವನ್ನು ಪಡೆಯಲಿದ್ದಾರೆ ಎಂದು ಸಂಸದ ಬಿ. ವೈ ರಾಘವೇಂದ್ರ ಹೇಳಿದರು. ಶಿಕಾರಿಪುರ ಪುರಸಭೆ ಕಾರ್ಯಾಲಯದಲ್ಲಿ ಪೌರ ಕಾರ್ಮಿಕರ ದಿನಾಚರಣೆ 2022 ಕಾರ್ಯಕ್ರಮವನ್ನು ಸಂಸದರಾದ ಬಿ. ವೈ ರಾಘವೇಂದ್ರ
ದೇಶ ವಿಭಜನೆ ಮಾಡಿದ ಪಾಪದ ‘ಪ್ರಾಯಶ್ಚಿತ್ತ ಯಾತ್ರೆ’ ವಿನಹ ಭಾರತವನ್ನು ಜೋಡಿಸುವ ಯಾತ್ರೆಯಲ್ಲ: ಕುಯಿಲಾಡಿ ಸುರೇಶ್ ನಾಯಕ್
ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನದಿಂದ ನಮ್ಮ ಭಾರತಕ್ಕೆ ದೊರೆತ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಪಕ್ಷ ತನ್ನದೇ ಸಾಧನೆ ಎಂಬಂತೆ ಬಿಂಬಿಸುವ ಪ್ರಯತ್ನದ ಮೂಲಕ ಸ್ವಾತಂತ್ರ್ಯ ಯೋಧರನ್ನು ಅವಮಾನಿಸುವುದು ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಅಪಪ್ರಚಾರ ಮಾಡುವುದು ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯ ಪ್ರಮುಖ ಉದ್ದೇಶವಾಗಿದೆ. ಕಾಂಗ್ರೆಸ್‌ನ ಅನೇಕ ಹಿರಿಯ ಮುಖಂಡರು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರ
ಕಡಬ,: ಕಾಂಗ್ರೆಸ್ ಪಕ್ಷದ ಬಿಳಿನೆಲೆ ವಲಯದ ಮಾಜಿ ಅಧ್ಯಕ್ಷ, ಐತ್ತೂರು ಗ್ರಾ.ಪಂ. ಸದಸ್ಯ ಮನಮೋಹನ್ ಗೋಳ್ಯಾಡಿ ಅವರನ್ನು ಪಕ್ಷದ ಶಿಸ್ತನ್ನು ಉಲ್ಲಂಘಿಸಿ ಪಕ್ಷ ವಿರೋದಿ ಚಟುವಟಿಕೆಯ ನಡೆಸಿದ ಹಿನ್ನೆಲೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷರ ಸೂಚನೆಯ ಮೇರೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್‍ಕುಮಾರ್ ಶೆಟ್ಟಿ ಬಿಳಿನೆಲೆ ಅವರು ತಿಳಿಸಿದ್ದಾರೆ. ಅವರು ಕಡಬ ಬ್ಲಾಕ್ ಕಾಂಗ್ರೆಸ್
ಮಂಜೇಶ್ವರ: ಪಾಪ್ಯುಲರ್ ಫ್ರಂಟ್ ಮುಖಂಡರ ಬಂಧನವನ್ನು ವಿರೋಧಿಸಿ ರಾಜ್ಯ ವ್ಯಾಪಕವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರೆ ನೀಡಿರುವ ಪ್ರತಿಭಟನೆಯ ಭಾಗವಾಗಿ ಮಂಜೇಶ್ವರ ವ್ಯಾಪ್ತಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರು. ಮಂಜೇಶ್ವರ ಭಾಗದಲ್ಲಿ ಹರತಾಳ ಬೆಂಬಲಿಗರ ಮನವಿ ಮೇರೆಗೆ ಬಹುತೇಕ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಮುಚ್ಚಿ ಸಹಕರಿಸಿದ್ದಾರೆ. ಅತ್ಯವಶ್ಯಕ ಕೆಲವೊಂದು ವಾಹನಗಳು ರಸ್ತೆಗಿಳಿಯುವುದನ್ನು ಹೊರತು ಪಡಿಸಿದರೆ ಖಾಸಗಿ ಅಥವಾ ಸರಕಾರಿ ಬಸ್ಸುಗಳು
9 ಹ್ಯಾಂಡ್ಸ್ ಫೌಂಡೇಶನ್ ಮುಂಬೈ ಸಂಸ್ಥೆಯ ವಾರ್ಷಿಕ ಮಹಾಸಭೆಯು ಆಂಧೇರಿಯ ಹೋಟೆಲ್ ತುಂಗಾ ಇಂಟರ್‍ನ್ಯಾಷನಲ್ ಸಭಾಂಗಣದಲ್ಲಿ ದಯಾನಂದ ಬಂಗೇರ ಅಧ್ಯಕ್ಷತೆಯಲ್ಲಿ ಜರುಗಿತು. ಕಾರ್ಯದರ್ಶಿ ದೇವರಾಜ ಅಮೀನ್ ಅವರು ಗತ ವರ್ಷದ ವಾರ್ಷಿಕ ಮಹಾಸಭೆಯ ಟಿಪ್ಪಣಿ ಓದಿದರು. ಜೊತೆ ಕೋಶಾಧಿಕಾರಿ ಶ್ರೀ ಸಂತೋಷ್ ಕರ್ಕೇರ ಇವರು ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು. ಶ್ರೀ ತುಕಾರಾಂ ಸಾಲ್ಯಾನ್ ಮತ್ತು ಶ್ರೀ ಹರೀಶ್ ಶ್ರೀಯಾನ್ ರವರು ತಮ್ಮ ಭಾಷಣದಲ್ಲಿ 9 ಹ್ಯಾಂಡ್ಸ್

























