Home Posts tagged V4News (Page 7)

ವಿಶೇಷ ಚೇತನ ಮಕ್ಕಳ ರಾಜ್ಯಮಟ್ಟದ ಕ್ರೀಡಾಕೂಟ : ಮೂಡುಬಿದಿರೆಯ ಅಪಿ೯ತಾಗೆ ಕಂಚು

ಮೂಡುಬಿದಿರೆ: ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನಲ್ಲಿ ನಡೆದ 2025–26ನೇ ಸಾಲಿನ ವಿಶೇಷ ಚೇತನ ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮೂಡುಬಿದಿರೆ ಜ್ಯೋತಿನಗರ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಅರ್ಪಿತಾ ಸ್ಪರ್ಧಿಸಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಸಾಧನೆಗಾಗಿ ಶಾಲೆಯ ಮುಖ್ಯೋಪಾಧ್ಯಾಯರು,

ಪುತ್ತೂರು: ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಪುತ್ತೂರು:ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ. ಪುತ್ತೂರು ತಾಲೂಕು ಒಳಮೊಗ್ರು ಗ್ರಾಮ ಹೊಸಮನೆ ನಿವಾಸಿ ಅಜಿತ್ ರೈ ವಿರುದ್ಧ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಕರ್ನಾಟಕ ಪೊಲೀಸ್‌ ಕಾಯ್ದೆ 1963ರ ಕಲಂ 55ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಆದೇಶ ಹೊರಡಿಸುವ ಕುರಿತು ಸಲ್ಲಿಸಿರುವ

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಎನ್ ಡಿ ಆರ್ ಎಫ್(NDRF) 10th ಬೆಟಾಲಿಯನ್ ವತಿಯಿಂದ ವಿಶೇಷ ತರಬೇತಿ ಕಾರ್ಯಗಾರ

ಉಡುಪಿ:ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ಜಿಲ್ಲೆ ಇದರ ಉಡುಪಿ ಕಾಪು ಬ್ರಹ್ಮಾವರ ಶೌರ್ಯ ವಿಪತ್ತು ನಿರ್ವಹಣಾ ತಾಲೂಕು ಸಮಿತಿಯ ಸ್ವಯಂಸೇವಕರಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಎನ್ ಡಿ ಆರ್ ಎಫ್ (NDRF) 10th ಬೆಟಾಲಿಯನ್ ವತಿಯಿಂದ ವಿಶೇಷ ತರಬೇತಿ ಕಾರ್ಯಗಾರವನ್ನು ಕರಾವಳಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಆನಂದ ಸುವರ್ಣರವರು ಉದ್ಘಾಟಿಸಿದರು.ಉದ್ಘಾಟಿಸಿ

ಓಮನ್‌ನಲ್ಲಿ ಬಹು ವಾಹನ ಅಪಘಾತ: ಉಡುಪಿ ಮೂಲದ ಯುವಕ ಸೇರಿ ಮೂವರು ಮೃತ

ಉಡುಪಿ : ಓಮನ್‌ನ ಉತ್ತರ ಅಲ್ ಬಟಿನಾ ಗವರ್ನರೇಟ್‌ನ ಲಿವಾ ವಿಲಾಯತ್‌ನಲ್ಲಿ ಭಾನುವಾರ ಮುಂಜಾನೆ ನಡೆದ ಬಹು ವಾಹನ ಅಪಘಾತದಲ್ಲಿ ಉಡುಪಿಯ ಕಾಪು ಸಮೀಪದ ಉಚ್ಚಿಲ ಕಲತೂರು ನಿವಾಸಿ ಚೇತನ್ (26) ಸೇರಿದಂತೆ ಮೂವರು ಮೃತಪಟ್ಟಿದ್ದು, ಇನ್ನೂ ಮೂವರು ಗಾಯಗೊಂಡಿದ್ದಾರೆ. ನಾಗರಿಕ ರಕ್ಷಣಾ ಮತ್ತು ಆಂಬ್ಯುಲೆನ್ಸ್ ಪ್ರಾಧಿಕಾರದ ಮಾಹಿತಿಯಂತೆ, ಮೂರು ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ತುರ್ತು ಚಿಕಿತ್ಸೆಗಾಗಿ ಸಮೀಪದ

ಭಾರತ್ ಬೀಡಿ ವರ್ಕ್ಸ್ ಸಂಸ್ಥೆಯ ಸಂಸ್ಥಾಪಕರ 113 ನೇ ಜನ್ಮ ದಿನಾಚರಣೆ

ಮಂಗಳೂರು: ಪ್ರಖ್ಯಾತ 30 ಮಾರ್ಕಿನ ಬೀಡಿಗಳ ತಯಾರಕರಾದ ಭಾರತ್ ಬೀಡಿ ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ನ ಸಂಸ್ಥಾಪಕರಾದ ಮಂಜುನಾಥ ಪೈ ಅವರ 113 ನೇ ಜನ್ಮ ದಿನಾಚರಣೆಯನ್ನು ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಸಲಾಯಿತು.ಸಂಸ್ಥೆಯ ಕಾರ್ಯಕಾರಿ ನಿರ್ದೇಶಕರಾದ ಸುಬ್ರಾಯ ಎಂ. ಪೈ ಅವರು ಸಂಸ್ಥೆಯು ನಡೆದು ಬಂದ ದಾರಿ, ಸಂಸ್ಥಾಪಕರು ಸಮಾಜಕ್ಕೆ ನೀಡಿದ ಕೊಡುಗೆ, ಸಂಸ್ಥಾಪಕರ ದೂರ ದೃಷ್ಟಿಯ ಬಗ್ಗೆ ವಿವರಿಸಿದರು.ಕಾರ್ಯಕ್ರಮದಲ್ಲಿ ವಿವಿಧ ಬ್ಯಾಂಕುಗಳ ಅಧಿಕಾರಿಗಳು, ತಮ್ಮ

ಕೆ. ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಲಿವರ್ ಟ್ಯೂಮರ್ ಗೆ  ಮಾಡಲಾಗಿರುವ  ಕರಾವಳಿ ಕರ್ನಾಟಕದಲ್ಲಿಯೇ  ಮೊದಲ ಯಶಸ್ವಿ ಮಕ್ಕಳ ರೊಬೊಟಿಕ್ ಶಸ್ತ್ರಚಿಕಿತ್ಸೆ

ಹದಿನಾಲ್ಕು ವರ್ಷದ ಬಾಲಕಿಯೊಬ್ಬಳಿಗೆ  ಕಿಬ್ಬೊಟ್ಟೆಯ ನೋವು ಕಾಣಿಸಿಕೊಂಡಿದ್ದರಿಂದ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಮಕ್ಕಳ ಶಸ್ತ್ರಚಿಕಿತ್ಸಾ ವಿಭಾಗಕ್ಕೆ ಕರೆತರಲಾಗಿತ್ತು.  ಅಲ್ಲಿನ ವೈದ್ಯಕೀಯ ತಂಡವು ಆಕೆಯನ್ನು ಸಂಪೂರ್ಣ ಪರಿಶೀಲನೆ ಮಾಡಿದಾಗ ಆಕೆಗೆ  ಯಕೃತ್ತಿನಲ್ಲಿ  (ಕಾಡೇಟ್ ಲೋಬ್) ದೊಡ್ಡ ಗೆಡ್ಡೆ ಉಂಟಾಗಿರುವುದು ಪತ್ತೆಯಾಯಿತು. ಈ ಥರದ  ದೊಡ್ಡ ಪಿತ್ತಜನಕಾಂಗದ ಗೆಡ್ಡೆಗಳಿಗೆ  ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ

ಕ್ಯಾನ್ಸರ್ ರೋಗಿಗಳಿಗೆ ಬೆಂಬಲ ನೀಡಲು ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌ನಿಂದ ಕೂದಲು ದಾನ ಶಿಬಿರ

ಮಂಗಳೂರು:ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಧೀನದಲ್ಲಿರುವ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರವಾದ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್ ವತಿಯಿಂದ ಶನಿವಾರ, 7 ಫೆಬ್ರವರಿ 2026ರಂದು ಬೆಳಿಗ್ಗೆ 9.00ರಿಂದ ಸಂಜೆ 4.00ರವರೆಗೆ ಕೂದಲು ದಾನ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವು ಎ.ಜೆ. ಆಸ್ಪತ್ರೆಯ 2ನೇ ಮಹಡಿಯ ಸಭಾಂಗಣದಲ್ಲಿ (ಕಾನ್ಫರೆನ್ಸ್ ಹಾಲ್) ನಡೆಯಲಿದೆ. ಈ ಕಾರ್ಯಕ್ರಮವನ್ನು ಇಂಡಿಯನ್ ಕ್ಯಾನ್ಸರ್ ಸೊಸೈಟಿ ಹಾಗೂ ಕಪೆಲಿ ಸ್ಯಾಲೂನ್ (Capeli

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಕುಲಗುರುಗಳ ಕಂಚಿನ ಪುತ್ಥಳಿ ನಿರ್ಮಾಣ ಸಲುವಾಗಿ ಸಾಮೂಹಿಕ ಗುರುಪಾದ ಕಾಣಿಕೆ ಸಮರ್ಪಣೆ”

ಉಚ್ಚಿಲ:ಸುಮಾರು ಸಾವಿರ ವರ್ಷಗಳ ಇತಿಹಾಸವಿರುವ ಮೊಗವೀರ ಸಮಾಜದ ಗುರುಪರಂಪರೆಯಲ್ಲಿ ಒಂಭತ್ತು ತಲೆಮಾರಿನ ಗುರುಗಳು ಸಮಾಜದ ಧಾರ್ಮಿಕ, ಸಾಮಾಜಿಕ, ಅಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಬದುಕಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ.ಅಂತಹ ಮಹಾನುಭಾವರಲ್ಲಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸ್ಥಾಪಕರಾಗಿದ್ದ ಹಾಗೂ ಮಾರ್ಚ್ 31, 1966ರಂದು ಕೀರ್ತಿಶೇಷರಾದ ಶ್ರೀ ಮಾಧವ ಮಂಗಳ ಪೂಜಾರ್ಯರು ಸದ್ರಿ ಗುರುಪರಂಪರೆಯ ಕೊನೆಯ ಗುರುಗಳಾಗಿದ್ದಾರೆ.ಉಚ್ಚಿಲ ಶ್ರೀ ಮಹಾಲಕ್ಷ್ಮೀ

ಕೋಳಿಅಂಕ ವಿಚಾರ: ಅಶೋಕ್ ಕುಮಾರ್ ರೈ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

ಕೋಳಿಅಂಕ ವಿಚಾರದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪೋಲೀಸರು ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ ನೀಡಿದೆ. ಪುತ್ತೂರು :ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಢಾಣಾ ವ್ಯಾಪ್ತಿಯ ಕೇಪು ಉಳ್ಳಾಲ್ತಿ ದೈವಸ್ಥಾನದಲ್ಲಿ ಡಿಸೆಂಬರ್ 20, 2025 ರಂದು ಮುರಳೀಧರ ರೈ ಎಂಬವರ ಜಾಗದಲ್ಲಿ ಕಾನೂನುಬಾಹಿರವಾಗಿ ಕೋಳಿ ಅಂಕ ನಡೆಯುತ್ತಿದ್ದ ಸಂದರ್ಭದಲ್ಲಿ ವಿಟ್ಲ ಪೋಲೀಸರು ಕೋಳಿ ಅಂಕವನ್ನು ತಡೆಯಲು ಮುಂದಾದ ಸಂದರ್ಭದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್

ನೇತ್ರ ಜ್ಯೋತಿ ಕಾಲೇಜಿನಲ್ಲಿ ಫಿಸಿಯೋಥೆರಪಿ ಕ್ಲಿನಿಕ್ ಉದ್ಘಾಟನೆ

ಉಡುಪಿಯ:ಉಡುಪಿಯ ಪ್ರತಿಷ್ಠಿತ ಕಾಲೇಜು ನೇತ್ರ ಜ್ಯೋತಿ ಕಾಲೇಜಿನಲ್ಲಿ ಫಿಸಿಯೋಥೆರಪಿ ಕ್ಲಿನಿಕ್ ಅನ್ನು ಮಣಿಪಾಲ ಕಾಲೇಜು ಆಫ್ ಹೆಲ್ತ್ ಸೈನ್ಸ್ ನ ಡೀನ್ ಡಾ. ಅರುಣ್ ಮಯ್ಯರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಅವರು ಮಾನವನಿಗೆ ಮೊದಲ ಉಸಿರಿನಿಂದ ಕೊನೆಯ ಉಸಿರು ಇರುವವರೆಗೆ ಫಿಸಿಯೋಥೆರಪಿ ಚಿಕಿತ್ಸೆಯ ಅವಶ್ಯಕತೆ ಇದೆ. ಮನುಷ್ಯ ಎಷ್ಟು ವರ್ಷ ಬದುಕಿದ್ದೇನೆ ಎನ್ನುವುದುಕಿಂತ ಎಷ್ಟು ವರ್ಷ ಆರೋಗ್ಯವಂತನಾಗಿ ಬದುಕಿದ್ದೇನೆ ಎನ್ನುವುದು ಬಹಳ