Home Posts tagged V4News (Page 704)

ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಭಿವೃದ್ಧಿ ಬಗ್ಗೆ ಸ್ವರ್ಣ(ಅಷ್ಟಮಂಗಲ) ಪ್ರಶ್ನಾಚಿಂತನೆ

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಲ್ಲಿ ಕ್ಷೇತ್ರದ ಮುಂದಿನ ಅಭಿವೃದ್ಧಿಯ ಕಾರ್ಯ ದ ಪ್ರಯುಕ್ತ ಸ್ವರ್ಣ(ಅಷ್ಟಮಂಗಲ )ಪ್ರಶ್ನಾಚಿಂತನೆಯು ದೈವಜ್ಞರಾದ ಜೋತಿಷ್ಯ ತಿಲಕಂ ಶಶಿಧರ್ ಮಾಂಗಾಡ್, ರಾಜೇಶ್ ಇರಿಯ, ಗೋಪಾಲ ಕೃಷ್ಣ ಕುಲಾಲ್ ವಾಂತಿಚಾಲ್ ಇವರ ಮೂಲಕ ಆರಂಭಗೊಂಡಿದ್ದು ದಿನಾಂಕ 13.09.2022 ರಿಂದ ಪ್ರಶ್ನಾಚಿಂತನ ಪ್ರಾರಂಭ

ಕಡಬ ತಹಶೀಲ್ದಾರ್ ಆಗಿ ರಮೇಶ್ ಬಾಬು ; ಅನಂತಶಂಕರ್ ಉಡುಪಿಗೆ

ಕಡಬ ತಾಲೂಕು ತಹಶೀಲ್ದಾರ್ ಬಿ ಅನಂತಶಂಕರ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪುರಸಭಾ ತಹಶೀಲ್ದಾರ್, ಜಿಲ್ಲಾಧಿಕಾರಿ ಕಚೇರಿ ಉಡುಪಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ತೆರವಾದ ಸ್ಥಾನಕ್ಕೆ ರಮೇಶ್ ಬಾಬು ಟಿ., ತಹಶೀಲ್ದಾರ್ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಯವರಿಂದ ಅನುಮೋದಿತವಾಗಿರುವ ಕರ್ನಾಟಕ ರಾಜ್ಯಪಾಲ ಆದೇಶಾನುಸಾರ ಜಿ ಎನ್ ಸುಶೀಲಾ, ಸರಕಾರ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆ ಇವರು ಅಧಿಸೂಚನೆಯನ್ನು ಹೊರಡಿಸಿದ್ದಾರೆ.

ಬೈಂದೂರು ವಲಯ ವತಿಯಿಂದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ವಲಯ ವತಿಯಿಂದ ನಾವು ಕಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಾನಕಿ ವಹಿಸಿದ್ದರು.ಬೈಂದೂರು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು ಶುಭ ಹಾರೈಸಿದರು. ಸುಮಾರು 10

ಮಂಗಳೂರು-ಕಟ್ಟಡ ಕಾರ್ಮಿಕರ ವಿವಿಧ ಸಮಸ್ಯೆ ಬಗೆಹರಿಸಬೇಕು : ಭಾರತೀಯ ಮಜುದೂರ್ ಸಂಘ

ಕಟ್ಟಡ ಕಾರ್ಮಿಕರ ಹಾಗೂ ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಸರ್ಕಾರ ಶೀಘ್ರದಲ್ಲೇ ಬಗೆಹರಿಸಬೇಕೆಂದು ಭಾರತೀಯ ಮಜ್ದೂರು ಸಂಘ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕೆ.ವಿ. ವಿಶ್ವನಾಥ್ ಶೆಟ್ಟಿ ಅವರು, ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆಸ್ಪತ್ರೆಯಲ್ಲಿ ನಗದು ರಹಿತ ಚಿಕಿತ್ಸೆ ದೊರಕಬೇಕು. ಇಎಸ್‍ಐ ವ್ಯಾಪ್ತಿಗೆ ತರಬೇಕು ಹಾಗೂ ಪಿಎಫ್ ವ್ಯವಸ್ಥೆ ಜಾರಿಗೊಳಿಸಬೇಕು. ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಮನೆ ಹಾಗೂ

ವಿಟ್ಲ: ಕೆಎಸ್ಆರ್ ಟಿಸಿ ಬಸ್‍ನಿಂದ ಎಸೆಯಲ್ಪಟ್ಟ ಪ್ರಯಾಣಿಕ ಗಂಭೀರ

ವಿಟ್ಲ : ಪೆರುವಾಯಿ ಗ್ರಾಮದ ಕೆದುವಾರು ಎಂಬಲ್ಲಿ ಕೆಎಸ್ ಆರ್ ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಪ್ರಯಾಣಿಕ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಕೆದುವಾರು ನಿವಾಸಿ ಇನಾಸ್ ಡಿ ಸೋಜಾ ಗಾಯಗೊಂಡವರು. ಅವರು ಸೆ.15ರಂದು ವಿಟ್ಲ ಪೇಟೆಯಿಂದ ಆಗತ್ಯ ಕೆಲಸ ಮುಗಿಸಿ ವಿಟ್ಲ ಪಕಳಕುಂಜ ಕೆ ಎಸ್ ಆರ್ ಟಿ ಸಿ ಬಸ್ಸಲ್ಲಿ ಪ್ರಯಾಣಿಕನಾಗಿ ವಿಟ್ಲದಿಂದ ಹೊರಟು ಕೆದುವಾರು ಎಂಬಲ್ಲಿಗೆ ಸುಮಾರು 12.25 ಗಂಟೆ ಸಮಯಕ್ಕೆ ತಲುಪುವ ವೇಳೆ ಬಸ್ ಸ್ಟಾಪ್ ನಲ್ಲಿ ಇಳಿಯಲು ಎದ್ದು ನಿಂತಾಗ ಕೆ

ಮತಾಂತರ ನಿಷೇಧ ಕಾಯ್ದೆ ಸಂವಿಧಾನ ವಿರೋಧಿ : ಶೇಖರ್ ಎಲ್

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಮಸೂದೆ (ಮತಾಂತರ ನಿಷೇಧ ) ಸಂವಿಧಾನದ ಕಲಂ 25 ರ ಸ್ಪಷ್ಟ ಉಲ್ಲಂಘನೆಯಾಗಿದೆ. ಆದರೂ ಸಂವಿಧಾನ ವಿರೋಧಿಯಾಗಿರುವ ಮಸೂದೆ ಜಾರಿಗೆ ತಂದಿರುವ ರಾಜ್ಯ ಸರ್ಕಾರವನ್ನು ತಕ್ಷಣ ವಜಾ ಮಾಡುವ ಅಗತ್ಯವಿದೆ ಎಂದು ಒತ್ತಾಯಿಸಿದ ಅವರು ಪರಿಶಿಷ್ಟ ಜಾತಿ/ಪಂಗಡಗಳನ್ನು ಇಂದಿಗೂ ಜಾತಿಯ ಕಾರಣಕ್ಕಾಗಿ ಹಿಂದೂ ಧರ್ಮದ ಸಂಪ್ರದಾಯ , ಆಚರಣೆ ವಿಚಾರದಲ್ಲಿ ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಅದರ ಬಗ್ಗೆ ಯಾವುದೇ ಕಠಿಣ ಮಸೂದೆ,

ಲೇಡಿಹಿಲ್ ಆರೋಗ್ಯ ಕೇಂದ್ರ ,ಸೌಲಭ್ಯ ಕ್ಕೆ ಆಗ್ರಹಿಸಿ ಧರಣಿ : ಅವ್ಯವಸ್ಥೆ ಸರಿಪಡಿಸದಿದ್ದಲ್ಲಿ ಮೇಯರ್ ಕಚೇರಿಗೆ ಮುತ್ತಿಗೆ- ಸುನೀಲ್ ಕುಮಾರ್ ಬಜಾಲ್

ಲೇಡಿಹಿಲ್ ನಗರ ಆರೋಗ್ಯ ಕೇಂದ್ರದಲ್ಲಿ ಸಣ್ಣ ಪುಟ್ಟ ರೋಗಗಳಿಗೂ ಚಿಕಿತ್ಸೆ ಸಿಗುತ್ತಿಲ್ಲ. ಅಗತ್ಯ ಜ್ವರಗಳಿಗೆ ನೀಡುವಂತಹ ಮಾತ್ರೆಗಳು ಕೂಡಾ ಕಳೆದ ಎರಡು ತಿಂಗಳುಗಳಿಂದ ಸರಬರಾಜು ಮಾಡದ ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತ ನಗರದ ಜನರ ಆರೋಗ್ಯ ಕಾಳಜಿಯನ್ನು ಸಂಪೂರ್ಣವಾಗಿ ಕಡೆಗಣಿಸಿವೆ. ಇಂತಹ ಸಮಸ್ಯೆಗಳನ್ನು ಬಗೆಹರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಮೇಯರ್ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ

ಉದ್ಘಾಟನೆಗೊಂಡು ಒಂದು ತಿಂಗಳ ಒಳಗೆ ಕೆಟ್ಟುಹೋದ ನೀರಿನ ಘಟಕ

ಕಾರ್ಕಳ: ಮುಖ್ಯ ಬಸ್ ನಿಲ್ದಾಣದಲ್ಲಿ ಸುಮಾರು ಎರಡು ವರ್ಷಗಳ ಹಿಂದೆ ಮಾನ್ಯ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಿಂದ ಪ್ರಯಾಣಿಕರಿಗೆ ಸುಮಾರು ಒಂದು ಲಕ್ಷ ರೂಪಾಯಿ ವೆಚ್ಚದಲ್ಲಿ ಕುಡಿಯುವ ಶುದ್ಧ ನೀರಿನ ಘಟಕದ ವ್ಯವಸ್ಥೆಯನ್ನು ಮಾಡಿರುತ್ತಾರೆ ಆದರೆ ಇದನ್ನ ಅಳವಡಿಸಿದ ಒಂದು ತಿಂಗಳ ಒಳಗೆ ಕೆಟ್ಟು ಹೋಗಿ ಇದು ಯಾರಿಗೂ ಬೇಡವಾದ ಘಟಕವಾಗಿದೆ. ಈ ನಿಟ್ಟಿನಲ್ಲಿ ನಾವು ಹಲವಾರು ಬಾರಿ ಪುರಸಭೆಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೂ ತಂದರು ನಮಗೂ ಈ ಸಮಸ್ಯೆಗೂ ಯಾವುದೇ

ಮೂತ್ರ ಪಿಂಡದ ಕಸಿಗೆ ದಾನಿಗಳ ಸಹಾಯದ ನಿರೀಕ್ಷೆಯಲ್ಲಿ ಸಚಿನ್ ಕುಟುಂಬ

ಬಂಟ್ವಾಳದ ಗೋಳ್ತಮಜಲು ಗ್ರಾಮದ ಸಚಿನ್ ಕೊಟ್ಟಾರಿ ಅವರು ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ಕಳೆದ 5 ವರ್ಷಗಳಿಂದ ವಾರಕ್ಕೆ ಮೂರು ಬಾರಿ ಡಯಾಲಿಸಿಸ್‍ಗೆ ಒಳಗಾಗುತ್ತಿದ್ದಾರೆ. ವೈದ್ಯರ ಸಲಹೆಯಂತೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೂತ್ರ ಪಿಂಡದ ಕಸಿ ಮಾಡಲು ನೋಂದಾಯಿಸಿದ್ದು, ಇದೀಗ ಮೂತ್ರ ಪಿಂಡದ ಕಸಿ ಶಸ್ತ್ರಚಿಕಿತ್ಸೆಗೆ ಸುಮಾರು 15 ಲಕ್ಷ ರೂಪಾಯಿ ವೆಚ್ಚ ತಗುಲಲಿದೆ. ಸಚಿನ್ ಕೊಟ್ಟಾರಿ ಕುಟುಂಬ ಕಡು ಬಡವರಾಗಿದ್ದು, ಇದೀಗ ದಾನಿಗಳ ಸಹಾಯದ

ಕಾಪು : ಪೋಷಣ್ ಅಭಿಯಾನ-ಪೋಷಣ್ ಮಾಸಾಚರಣೆ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾಪು ಪುರಸಭೆ, ಡೇ ನಲ್ಮ್ ಯೋಜನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು, ಶ್ರೀ ದೇವಿ ಸ್ಪೋರ್ಟ್ ಮತ್ತು ಕಲ್ಟರಲ್ ಕ್ಲಬ್ ಕಾಪು, ಅರಣ್ಯ ಇಲಾಖೆ ಪಡುಬಿದ್ರಿ ವಲಯ ಪ್ರಾಥಮಿಕ ಆರೋಗ್ಯ ಕೇಂದ್ರ ಕಾಪು ಹಾಗೂ ಆರೋಗ್ಯ ನಿರ್ವಹಣೆ ಮತ್ತು ಸಂಶೋಧನಾ ಸಂಸ್ಥೆ ಬೆಂಗಳೂರು, ಯುನಿಸೆಫ್ ಇವರ ಸಹಯೋಗದೊಂದಿಗೆ