Home Posts tagged V4News (Page 775)

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಜೈನಮಿಲನ್ ’ಸಂಮಿಲನ್ 2021

ಮೂಡುಬಿದಿರೆ: ಬೆಳ್ಳಿಹಬ್ಬ ಸಂಭ್ರಮದಲ್ಲಿರುವ ಭಾರತೀಯ ಜೈನ್ ಮಿಲನ್ ಮೂಡುಬಿದಿರೆ ಹಾಗೂ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಜಂಟಿ ಆಶ್ರಯದಲ್ಲಿ ’ಸಂಮಿಲನ್ ‘2021’ಕ್ರೀಡಾಕೂಟವು ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಕ್ಯಾಂಪಸ್‌ನಲ್ಲಿ ನಡೆಯಿತು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ವೀರಸಾಗರ ಸಭಾಂಗಣದಲ್ಲಿ ಸಂಮಿಲನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜೈನ

ತುಳು, ಕನ್ನಡ ರಂಗಭೂಮಿ ನಟಿ ಸುಮಿತ್ರಾ ರೈ ಇನ್ನಿಲ್ಲ

ತುಳು ಕನ್ನಡ ರಂಗಭೂಮಿಯ ಹಿರಿಯ ರಂಗಕಲಾವಿದ , ಶ್ರೀ ನಂದಿಕೇಶ್ವರ ನಾಟಕ ಸಂಘದ ರೂವಾರಿ ದಿ. ಪಿ.ಬಿ ರೈ ಯವರ ಧರ್ಮ ಪತ್ನಿ, ನಾಟಕ ಕಲಾವಿದೆ ಶ್ರೀಮತಿ ಬೇಬಿ ಯಾನೆ ಸುಮಿತ್ರ ರೈ (76 )ಇಂದು ಮಂಜೇಶ್ವರ ಸಮೀಪದ ಕುಂಜತ್ತೂರಿನ ತಮ್ಮ ಸ್ವ ಗೃಹದಲ್ಲಿ ನಿಧನ ಹೊಂದಿದರು. ದಿವಂಗತರು ಖ್ಯಾತ ಗುಬ್ಬಿ ವೀರಣ್ಣ ನಾಟಕ ಕಂಪನಿ, ಬಸವರಾಜ ಬಡಿಗೇರ ಮತ್ತು ತಮ್ಮ ಪತಿಯವರು ಕಟ್ಟಿ ಬೆಳೆಸಿದ ಶ್ರೀ ನಂದಿಕೇಶ್ವರ ನಾಟಕ ಸಂಘದಲ್ಲಿ ರಂಗನಟಿಯಾಗಿ, ಹಾಗೂ ಹಲವಾರು ಚಲನಚಿತ್ರಗಳಲ್ಲಿ […]

ಆಕಸ್ಮಿಕ ಬೆಂಕಿ : ಸುಟ್ಟು ಹೋದ ಕಾರು

ಕಡಬ : ಆಲ್ಟೋ ಕಾರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಹೋದ ಘಟನೆ ಬುಧವಾರ ಸಂಜೆ ವೇಳೆ ಬಳ್ಪ ಸಮೀಪ ಸಂಭವಿಸಿದೆ. ಪಂಜ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಬಳ್ಪ ಎಂಬಲ್ಲಿಯ ಪಾದೆ ಬಳಿ ಘಟನೆ ಸಂಭವಿಸಿದೆ. ಪಂಜದ ಕೃಷ್ಣನಗರ ಕೇಶವ ಆಚಾರಿ ಎಂಬವರು ತಮ್ಮ ಕಾರಿನಲ್ಲಿ ಏನೆಕಲ್ಲು ಕಡೆಯಿಂದ ಕೆಲಸ ಮುಗಿಸಿ ಬರುತ್ತಿರುವಾಗ ಪಾದೆ ಬಳಿ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಿಂದ ಇಳಿದು ನೋಡಬೇಕು ಎನ್ನವ ಕ್ಷಣ ಮಾತ್ರದಲ್ಲಿ

ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಎಕ್ಸಿಕ್ಯೂಟಿವ್ ಎಂಜಿನಿಯರ್ ಮನೆಗೆ ಎಸಿಬಿ ದಾಳಿ || KS Linge gowda

ಬೆಂಗಳೂರು, ನ.24: ಮಂಗಳೂರು ಸ್ಮಾರ್ಟ್ ಸಿಟಿ ಎಕ್ಸಿಕ್ಯುಟಿವ್ ಇಂಜಿನಿಯರ್ ಕೆ.ಎಸ್.ಲಿಂಗೇಗೌಡ ಸೇರಿದಂತೆ ರಾಜ್ಯದ 15 ಕಡೆಗಳಲ್ಲಿ ಏಕಕಾಲದಲ್ಲಿ ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳಿಗೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು ಕಡತ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಎಕ್ಸಿಕ್ಯೂಟಿವ್ ಎಂಜಿನಿಯರ್ ಕೆ.ಎಸ್ ಲಿಂಗೇಗೌಡ, ಮಂಡ್ಯ ಹೆಚ್.ಎಲ್.ಬಿ.ಸಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಶ್ರೀನಿವಾಸ್ ಕೆ, ದೊಡ್ಡಬಳ್ಳಾಪುರ

ಮುಂಬಯಿ ಪತ್ರಕರ್ತ ಪಾಲೆತ್ತಾಡಿ ಅವರಿಗೆ V4 ಸುದ್ದಿವಾಹಿನಿಯ ವತಿಯಿಂದ ಅಭಿನಂದನೆ

ಮಂಗಳೂರು: ನವಂಬರ್ 1ರಂದು ಬೆಂಗಳೂರಿನಲ್ಲಿ ಜರಗಿದ ರಾಜ್ಯೋತ್ಸವ ಸಮಾರಂಭದಲ್ಲಿ 2021 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಹೊರನಾಡ ಕನ್ನಡಿಗ, ಮುಂಬಯಿ ‘ಕರ್ನಾಟಕ ಮಲ್ಲ’ ಕನ್ನಡ ದೈನಿಕದ ಸಂಪಾದಕ ಚಂದ್ರಶೇಖರ ಪಾಲೆತ್ತಾಡಿ ಅವರನ್ನು ಮಂಗಳೂರಿನಲ್ಲಿV4 ನ್ಯೂಸ್ ಕರ್ನಾಟಕ ಸುದ್ದಿವಾಹಿನಿಯ ಕಾರ್ಯಾಲಯದಲ್ಲಿಅಭಿನಂದಿಸಲಾಯಿತು. ಮಂಗಳೂರಿನ V4 ನ್ಯೂಸ್ ಕರ್ನಾಟಕ ಸುದ್ದಿವಾಹಿನಿಯ ಕಚೇರಿ ಆವರಣದಲ್ಲಿ ವಾಹಿನಿಯ ಆಡಳಿತ ನಿರ್ದೇಶಕ

ಸಂಸ್ಕಾರ ಭಾರತೀ ಆಶ್ರಯದಲ್ಲಿ ಕ್ರಾಂತಿಸೂರ್ಯ ಭಗತ್ ಸಿಂಹ ಯಕ್ಷಗಾನ

ಭಾರತದ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಪ್ರಯುಕ್ತ ಕಲೆ ಮತ್ತು ಸಾಹಿತ್ಯಕ್ಕಾಗಿ ಸಮರ್ಪಿತವಾದ ರಾಷ್ಟ್ರೀಯ ಸಂಘಟನೆಯಾದ ಮಂಗಳೂರು ಸಂಸ್ಕಾರ ಭಾರತೀಯ ಆಶ್ರಯದಲ್ಲಿ ನವೆಂಬರ್ 28 ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಪ್ರಸಿದ್ಧ ಭಾಗವತರಾದ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಕ್ರಾಂತಿಸೂರ್ಯ ಭಗತ ಸಿಂಹ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಪುರುಷೋತ್ತಮ ಕೆ. ಭಂಡಾರಿ ಅಡ್ಯಾರು ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ

ಖಾಸಗಿ ಟಿವಿ ವರದಿಗಾರನ ಮೇಲೆ ಹಲ್ಲೆ ಪ್ರಕರಣ : ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ಟಿವಿ ವರದಿಗಾರನ ಮೇಲೆ ಹಲ್ಲೆ ನಡೆದಿದ್ದು ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಸರಕಾರ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಇನ್ನು ಮುಂದೆ ಇಂತಹ ಘಟನೆಗಳು ನಡೆದಲ್ಲಿ ಅದಕ್ಕೆ ಸರಕಾರವೇ ಹೊಣೆ ಹೊರಬೇಕು ಎಂಬುದು ನಮ್ಮ ಆಗ್ರಹ ಎಂದು ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನಾಳ ಮತ್ತು ಸದಸ್ಯರು ಮಾನ್ಯ ಮುಖ್ಯ ಮಂತ್ರಿಗಳಿಗೆ

ಎಸ್‌ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ವಿಧಾನ ಪರಿಷತ್ ಕ್ಷೇತ್ರಕ್ಕೆ ಡಿಸೆಂಬರ್ 10 ರಂದು ನಡೆಯುವ ಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್ ಡಿಪಿಐ ಪಕ್ಷದ ಅಭ್ಯರ್ಥಿಯಾಗಿ ರಾಜ್ಯ ಕಾರ್ಯದರ್ಶಿ, ಯುವ ನಾಯಕ ಶಾಫಿ ಬೆಳ್ಳಾರೆಯವರು ಇಂದು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳಲ್ಲಿ ಇರುವಂತಹ ಸಮಸ್ಯೆ ಪರಿಹಾರವೇ ನನ್ನ ಗುರಿ ಎಂದು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ನಾಮಪತ್ರ ಸಲ್ಲಿಕೆ

ಮಂಗಳೂರು: ಮಂಗಳೂರಲ್ಲಿ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ್ ಭಂಡಾರಿ ಸ್ಪರ್ಧಿಸುತ್ತಿದ್ದು, ಇಂದು ಅವರು ಚುನಾವಣಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ನಾಮಪತ್ರ ಸಲ್ಲಿಸಿದರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಂಜುನಾಥ್ ಭಂಡಾರಿ, ವಿದ್ಯಾರ್ಥಿ ಜೀವನದಿಂದಲೇ ನಾನು ಕಾಂಗ್ರೆಸ್ ಪಕ್ಷದ ಜೊತೆ ಗುರುತಿಸಿಕೊಂಡಿದ್ದೇನೆ. ಕಳೆದ 40 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದೇನೆ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದ

ಎಸ್‌ಎಸ್‌ಎಫ್ ರಾಜ್ಯ ಪ್ರತಿಭೋತ್ಸವ

ಕರ್ನಾಟ ರಾಜ್ಯ ವಿದ್ಯಾರ್ಥಿ ಒಕ್ಕೂಟವು ಯುವ ಜನಾಂಗದದಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪೋಷಿಸಲು ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಸುತ್ತಾ ಬಂದಿರುವ ಪ್ರತಿಭೋತ್ಸವ ರಾಜ್ಯ ಸಮಾವೇಶವು ನವೆಂಬರ್ 26 ರಿಂದ 28 ರ ವರೆಗೆ ಕೃಷ್ಣಾಪುರದಲ್ಲಿ ನಡೆಯಲಿದೆ ಎಂದು ರಾಜ್ಯ ಪ್ರತಿಭೋತ್ಸವ ಸಮಿತಿಯ ಚೇರ್‌ಮೆನ್ ಕೆ.ಎಂ. ಮುಸ್ತಫಾ ನಈಮಿ ಹಾವೇರಿ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು.