ಪುತ್ತೂರು: ವಿಲೇವಾರಿಗೆ ಕಷ್ಟವಾಗಿರುವ ಹಳೆಯ ನೋಟುಗಳನ್ನು ವಿಲೇವಾರಿ ಮಾಡಿಕೊಟ್ಟವರಿಗೆ 30 ಶೇ. ಕಮಿಷನ್ ನೀಡುವುದಾಗಿ ಹೇಳಿ ಮಹಿಳೆಯೊಬ್ಬರಿಂದ 10 ಲಕ್ಷ ರೂ.ಪಡೆದು ನೋಟಿನ ಬದಲು ಕಾಗದದ ತುಂಡುಗಳನ್ನು ನೀಡಿ ವಂಚಿಸಿರುವ ಆರೋಪದಲ್ಲಿ ರೆಂಜದ ಅರಂತನಡ್ಕ ನಿವಾಸಿ ಸಹಿತ ಐವರನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ. ತಮ್ಮ ಬಳಿ ದೇವಸ್ಥಾನಗಳ ಹುಂಡಿಯಲ್ಲಿ ಭಕ್ತರು
ಹಿರಿಯ ಕಾಂಗ್ರೇಸಿಗರು, ಸಹಕಾರಿ ದುರೀಣರಾದ ಗಂಜಿಮಠ ನಾರಾಯಣ ಪೂಜಾರಿಯವರು ನಿನ್ನೆ ರಾತ್ರಿ ನಿಧನ ಹೊಂದಿರುತ್ತಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಮತ್ತು ಕಾಂಗ್ರೆಸ್ ನಾಯಕ ಗಣೇಶ್ ಪೂಜಾರಿ ಸಹಿತ 4 ಗಂಡು ಮತ್ತು 2 ಹೆಣ್ಣು ಮಕ್ಕಳನ್ನು ಅಗಲಿರುತ್ತಾರೆ.ಶ್ರೀಯುತರು ಸುಮಾರು 18 ವರ್ಷಗಳ ಕಾಲ ಗಂಜಿಮಠ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಮತ್ತು ಸುಮಾರು 30 ವರ್ಷಗಳ ಕಾಲ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಹಾಗೂ ದ. ಕ. ಜಿಲ್ಲಾ
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹತ್ಯೆಗೈದು ಮೃತದೇಹವನ್ನು ಚರಂಡಿಗೆ ಎಸೆದಿರುವ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ರವಿವಾರ ಸಂಜೆ ಬೆಳಕಿಗೆ ಬಂದಿದೆ. ಸಂಜೆ ನಾಲ್ಕು ಗಂಟೆಯ ವೇಳೆ ಪರಾರಿ ಸಮೀಪದ ಕಾರ್ಖಾನೆಯ ಕಾರ್ಮಿಕರೊಬ್ಬರ ಮಗು ನಾಪತ್ತೆಯಾಗಿದ್ದಾಳೆ. ಬಾಲಕಿಯ ನಾಪತ್ತೆಯಿಂದ ಆತಂಕಕ್ಕೊಳಗಾದ ಪೊಷಕರು ಹಾಗೂ ಇತರ ಕಾರ್ಮಿಕರು ಕಾರ್ಖಾನೆ ಸೇರಿದಂತೆ ಹಲವೆಡೆಗಳಲ್ಲಿ ಶೋಧ ನಡೆಸಿದ್ದು, ಈ ವೇಳೆ ಕಾರ್ಖನೆಯ ಪಕ್ಕದ ಚರಂಡಿಯಲ್ಲಿ
ವಿಧಾನ ಪರಿಷತ್ ಚುನಾವಣೆ ಸ್ಪರ್ಧಾಕಣದಿಂದ ಎಸ್‍ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ ಎಂ. ಎನ್. ರಾಜೇಂದ್ರ ಕುಮಾರ್ ಅವರು ಹಿಂದೆ ಸರಿದಿದ್ದಾರೆ. ಶನಿವಾರ ಅಧಿಕೃತವಾಗಿ ಘೋಷಣೆ ಮಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ಉಳಿಯುವ ಬಯಕೆ ನನ್ನದು, ಹೀಗಾಗಿ ರಾಜಕೀಯ ದಿಂದ ದೂರವಿದ್ದು, ಸಹಕಾರಿ ಕ್ಷೇತ್ರದ ಉನ್ನತಿಗೆ ಶ್ರಮಿಸುತ್ತೇನೆ ಎಂದರು. ಕಳೆದ 35 ವರ್ಷಗಳಿಂದ ಸಹಕಾರ ರಂಗದಲ್ಲಿದ್ದೇನೆ. ರಾಜಕೀಯ ಬೇಡ, ಸಹಕಾರಿ ಕ್ಷೇತ್ರಕ್ಕೂ ರಾಜಕೀಯ ತರುವುದಿಲ್ಲ ಎಂದು
ಮಂಗಳೂರು, ನ.20(ಕ.ವಾ):- ಕರ್ನಾಟಕ ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಭಾಂಗಣದಲ್ಲಿ ನ.20ರ ಶನಿವಾರ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವರಾದ ಸುನೀಲ್ ಕುಮಾರ್, ಮೀನುಗಾರಿಕೆ,
ಮಂಗಳೂರು: ಮುಂಬರುವ 25 ಸ್ಥಾನಗಳಿಗೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಕರ್ನಾಟಕ ವಿಧಾನ ಪರಿಷತ್ ನಲ್ಲಿ ಗರಿಷ್ಠ ಸಂಖ್ಯಾಬಲವನ್ನು ಹೊಂದಲಿದೆ ಎಂದು ಮಾಜಿ ಮುಖ್ಯ ಮಂತ್ರಿ ಹಾಗೂ ಸಂಸದ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಬಿಜೆಪಿ ವತಿಯಿಂದ ಅಡ್ಯಾರ್ ಗಾರ್ಡನ್ ಸಭಾಂಗಣ ದಲ್ಲಿಂದು ಹಮ್ಮಿಕೊಂ ಡ ಜನಸ್ವರಾಜ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಮಸೂದೆ ಅಂಗೀಕಾರ ವಾಗಬೇಕಾ ದರೆ.ಎರಡೂ
ಉಳ್ಳಾಲ. ಎಸ್ ಡಿಪಿಐ ಉಳ್ಳಾಲ ನಗರ ಸಮಿತಿ ವತಿಯಿಂದ ಸ್ಥಳಾಂತರಿತ ಪಕ್ಷದ ಕಚೇರಿ ಮತ್ತು ಮಾಹಿತಿ ಸೇವಾ ಕೇಂದ್ರ ಉದ್ಘಾಟನೆಗೊಂಡಿತು.ಉಳ್ಳಾಲ ಸೈಯ್ಯದ್ ಮದನಿ ದರ್ಗಾ ಸಮಿತಿ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿ ನೂತನ ಸೇವಾ ಕೇಂದ್ರವನ್ನು ಉದ್ಘಾಟಿಸಿದರು.ಎಸ್ ಡಿಪಿಐ ದ.ಕ ಪ್ರ.ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಎಸ್ ಡಿಪಿಐ ಉಳ್ಳಾಲ ನಗರ ಸಮಿತಿ ಕಚೇರಿಯನ್ನು ಉದ್ಘಾಟಿಸಿದರು.ಎಸ್ ಡಿಪಿಐ ರಾಜ್ಯ ಪ್ರ.ಕಾರ್ಯದರ್ಶಿ ಬಿ.ಆರ್ ಭಾಸ್ಕರ್ ಪ್ರಸಾದ್ ದಿಕ್ಸೂಚಿ
ಕೇಂದ್ರ ಸರಕಾರ ಮೂರು ಕೃಷಿ ಕಾಯಿದೆ ಹಿಂಪಡೆದ ಪರಿಣಾಮ ಬೆಳ್ತಂಗಡಿಯಲ್ಲಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಳ್ತಂಗಡಿ ಮಾಜಿ ಶಾಸಕರಾದ ವಸಂತ ಬಂಗೇರಾ ಮಾತನಾಡಿ ಕೇಂದ್ರ ಸರಕಾರ ಮೂರು ಕೃಷಿ ಮಸೂದೆಗಳನ್ನು ವಾಪಸ್ ಪಡೆದು ಕೊಂಡಿದೆ ಈ ದೇಶದ ರೈತರ ಒಗ್ಗಟ್ಟಿನ ಹೋರಾಟ ಇದಕ್ಕೆ ಕಾರಣ,ಒಂದು ವರ್ಷದಿಂದ ಹೋರಾಟ ಮಾಡುತಿದ್ದ ರೈತರು ಈ ಹಂತಕ್ಕೆ ತಲುಪುವ ಸಂದರ್ಭದಲ್ಲಿ ಕೇಂದ್ರ ಸರ್ಕಾರದವರು ಮಸೂದೆ ವಾಪಸ್ ಪಡೆದಿದ್ದಾರೆ, ನಾವು ಈ ವಿಚಾರವಾಗಿ
ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಹೆಗಡೆಗುಳಿ ಎಂಬಲ್ಲಿ ಉರುಳಿಗೆ ಸಿಲುಕಿದ್ದ ಚಿರತೆಯೊಂದನ್ನು ಬಂಟ್ವಾಳದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ರಕ್ಷಿಸಲು ಯಶಸ್ವಿಯಾಗಿದೆ. ಶುಕ್ರವಾರ ತಡರಾತ್ರಿವರೆಗೂ ಈ ಕಾರ್ಯಾಚರಣೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್, ಉಪಅರಣ್ಯ ಸಂರಕ್ಷಣಾಧಿಕಾರಿ ದಿನೇಶ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನಟಾಲ್ಕರ್ ಮಾರ್ಗದರ್ಶನದಲ್ಲಿ ನಡೆದಿದ್ದು. ಅವರ ಮಾರ್ಗದರ್ಶನದಂತೆ ಮುಂದಿನ ಕ್ರಮ
ಮೂಡುಬಿದಿರೆ: ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ವರದಾನವಾಗಿರುವ ಅಳಿಯೂರಿನ ಸರ್ಕಾರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಮುನ್ನೂರು ದಾಟಿದರೂ, ಕೊಠಡಿಯ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಬಿಸಿಲು, ಗಾಳಿ ಮಳೆಯನ್ನು ಲೆಕ್ಕಿಸದೆ ಅಂಗಳದಲ್ಲೇ ಕೂತು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಳಿಯೂರು ದ.ಕ ಜಿ.ಪಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಈ ಪರಿಸ್ಥಿತಿ ಎದುರಾಗಿದೆ. ಶಾಲೆಯಲ್ಲಿ


















