Home Posts tagged V4News (Page 779)

ದಡ್ಡಲಕಾಡು ಶಾಲೆಯ ನೂತನ ವಿದ್ಯಾರ್ಥಿ ಮಂಡಲ ರಚನೆ

ಬಂಟ್ವಾಳ: ದಡ್ಡಲಕಾಡು ಸರಕಾರಿ ಆಂಗ್ಲಮಾಧ್ಯಮ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ನೂತನ ವಿದ್ಯಾರ್ಥಿ ಮಂತ್ರಿ ಮಂಡಲ ರಚಿಸಲಾಯಿತು. ನೂತನ ವಿದ್ಯಾರ್ಥಿ ನಾಯಕರು, ವಿರೋಧ ಪಕ್ಷ ನಾಯಕರು ಹಾಗೂ ಮಂತ್ರಿಮಂಡಲದ ಸಚಿವರಿಗೆ ಶಾಲಾ ಮುಖ್ಯೋಪಾಧ್ಯಾಯ ಮೌರೀಸ್ ಡಿಸೋಜಾ ಪ್ರಮಾಣ ವಚನ ಭೋದಿಸಿದರು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಪ್ರಕಾಶ್ ಅಂಚನ್ ಮಂತ್ರಿ ಮಂಡಲದ ಸಚಿವರಿಗೆ

ಪಡುಬಿದ್ರಿಯಲ್ಲಿ ಸ್ಕೂಟರ್‌ಗೆ ಕಾರು ಢಿಕ್ಕಿ: ವ್ಯಕ್ತಿ ಮೃತ್ಯು

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಡೌನ್‌ಟೌನ್ ಬಾರ್ ಮುಂಭಾಗ ಅನದಿಕೃತವಾಗಿ ತೆರೆದುಕೊಂಡಿರುವ ಡೈವರ್ಶನ್ ಇದೀಗ ಎರಡನೇ ಬಲಿ ಪಡೆದುಕೊಂಡಿದೆ. ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ ಪಡುಬಿದ್ರಿ ಕೆಳಗಿನ ಪೇಟೆ ನಿವಾಸಿ ಬಾಲಕೃಷ್ಣ ಭಟ್(74). ಇವರು ತನ್ನ ಮನೆಯಿಂದ ಸ್ಕೂಟರ್ ಚಲಾಯಿಸಿಕೊಂಡು ಹೆಜಮಾಡಿಗೆ ಪ್ರಯಾಣಿಸುವುದಕ್ಕಾಗಿ ಅನದಿಕೃತ ಡೈವರ್ಶನ್‌ನಲ್ಲಿ ರಸ್ತೆ ದಾಟುತ್ತಿದಂತೆ, ಕಡಲಿಗೆ ತಡೆಗೋಡೆ ನಿರ್ಮಾಣ ಗುತ್ತಿಗೆದಾರ ಸಕಲೇಶಪುರ ಮೂಲದ ಇದೀಗ

ರಾಜ್ಯ ರೈತಸಂಘ ಉಬರಡ್ಕ ಮಿತ್ತೂರು ಗ್ರಾಮ ಘಟಕದ ಪುನರ್ರಚನೆ

ಕರ್ನಾಟಕ ರಾಜ್ಯ ರೈತಸಂಘ ಉಬರಡ್ಕ ಮಿತ್ತೂರು ಗ್ರಾಮ ಘಟಕದ ಪುನರ್ರಚನೆ ಹಾಗೂ ಸಭಾ ಕಾರ್ಯಕ್ರಮ ಉಬರಡ್ಕ ಮಿತ್ತೂರು ಪಂಚಾಯತ್ ಸಭಾಭವನದಲ್ಲಿ ರೋಹನ್ ಪೀಟರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತಾನಾಡಿದ ರಾಜ್ಯಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಕೇಂದ್ರ ಸರಕಾರ ಸುಗ್ರಿವಾಜ್ಞೆಯ ಮೂಲಕ ತಂದಿರುವ ಜನವೀರೊಧಿ ಮೂರು ಮಸೂದೆಗಳಿಂದ ಭಾರತದ ಆಹಾರ ಸಾರ್ವಭೌಮತ್ವದ ದುಷ್ಪರಿಣಾಮ ಬೀರುತ್ತದೆ. ದೇಶಿಯ ಕೃಷಿ ಸಂಸೃತಿ ಸಂಪೂರ್ಣ

ಕಡಬ: ಮದರಸದಿಂದ ಬರುತ್ತಿದ್ದ ಬಾಲಕನಿಗೆ ಹುಚ್ಚು ನಾಯಿ ಕಡಿತ

ಕಡಬ: ಹುಚ್ಚುನಾಯಿಯೊಂದು ಕಡಿದ ಪರಿಣಾಮ ವಿದ್ಯಾರ್ಥಿಯೋರ್ವ ಗಾಯಗೊಂಡ ಘಟನೆ ಕಡಬ ಪೇಟೆಯಲ್ಲಿ ನಡೆದಿದೆ. ಗಾಯಗೊಂಡ ಬಾಲಕನನ್ನು ಕಡಬ ನಿವಾಸಿ ಹಮೀದ್ ಎಂಬವರ ಪುತ್ರ ಅಫ್ನಾನ್ ಎಂದು ಗುರುತಿಸಲಾಗಿದೆ. ಎಂದಿನಂತೆ ಮದರಸ ಬಿಟ್ಟು ತೆರಳುತ್ತಿದ್ದ ಬಾಲಕನ ಮೇಲೆ ಹುಚ್ಚು ನಾಯಿ ಎರಗಿದ್ದು, ಕೈಗೆ ಕಚ್ಚಿದೆ ಎಂದು ತಿಳಿದುಬಂದಿದೆ. ಬಾಲಕನಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಹಂಸಲೇಖ ಅವರು ಪೇಜಾವರ ಶ್ರೀಗಳ ಬೃಂದಾವನದ ಮುಂಭಾಗದಲ್ಲಿ ಕ್ಷಮೆ ಯಾಚಿಸಲಿ : ಪ್ರದೀಪ್ ಕುಮಾರ್ ಕಲ್ಕೂರ

ಹಂಸಲೇಖ ಅವರು ಪೇಜಾವರ ಶ್ರೀಗಳ ಬೆಂಗಳೂರಿನಲ್ಲಿರುವ ಬೃಂದಾವನದ ಮುಂಭಾಗದಲ್ಲಿ ಕ್ಷಮೆ ಯಾಚನೆ ಮಾಡಲಿ ಎಂದು ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ ಆಗ್ರಹಿಸಿದರು.ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪೇಜಾವರ ಶ್ರೀಗಳಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಬಂದಾಗ ಎಲ್ಲರೂ ಜಾತಿ ಮತ ಬೇಧವಿಲ್ಲದೆ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ಅವರು ಇಲ್ಲಸಲ್ಲದ ಹೇಳಿಕೆ ಸಮಾಜದ ಭಾವನೆಗಳ ಮೇಲೆ

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷನಾದಲ್ಲಿ ಜಿಲ್ಲೆಗೆ ಕನ್ನಡ ಭವನ ನಿರ್ಮಾಣ : ಎಂ.ಆರ್ ವಾಸುದೇವ

ಪುತ್ತೂರು: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ತಾನು ಸ್ಪರ್ಧಿಸಿದ್ದು, ಜಿಲ್ಲಾಧ್ಯಕ್ಷರಾಗಿ ಚುನಾಯಿತರಾದರೆ ಜಿಲ್ಲೆಯಲ್ಲಿ ಕನ್ನಡ ಭವನ ನಿರ್ಮಿಸುವ ಬಗ್ಗೆ ಪ್ರತ್ನಿ ಪಡುತ್ತೇನೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿಯಾದ ಎಂ.ಆರ್. ವಾಸುದೇವ ಮಂಗಳೂರು ಅವರು ತಿಳಿಸಿದ್ದಾರೆ. ಅವರು ಪುತ್ತೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಾನು ಮಂಗಳೂರು ವಿಮಾನ ನಿಲ್ದಾಣದ ನಿರ್ದೇಶಕನಾಗಿ 15 ವರ್ಷಗಳಿಗೂ ಮೇಲ್ಪಟ್ಟು

ವಿಟ್ಲದ ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ : ಸಹೋದರತ್ವದ ಭಾನುವಾರ ಕಾರ್ಯಕ್ರಮ

ವಿಟ್ಲ: ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ ನಲ್ಲಿ “ಸಹೋದರತ್ವದ ಭಾನುವಾರ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಧರ್ಮಗುರುಗಳಾಗಿ ಭಾಗವಹಿಸಿ ಪ್ರಬೋದನೆ ನೀಡಿ ದಿವ್ಯ ಬಲಿಪೂಜೆಯನ್ನು ಅರ್ಪಿಸಿ ಎಲ್ಲರಿಗೂ ಆಶೀರ್ವಚನ ನೀಡಿದ ಮಂಗಳೂರು ಧರ್ಮ ಪ್ರಾಂತ್ಯದ ಜುಡೀಶಿಯಲ್ ವಿಕಾರ್ ರವರಾದ ಅತೀ ವಂದನೀಯ ಫಾದರ್ ವಾಲ್ಟರ್ ಡಿಮೆಲ್ಲೊ ಅವರು ನಿತ್ಯ ಜೀವನದಲ್ಲೂ ಬೈಬಲ್ ನ ಆದರ್ಶಗಳನ್ನು ಪಾಲಿಸಬೇಕು, ಆಗ ಮಾತ್ರ ಸಹೋದರತ್ವದ ಭಾನುವಾರದ ಆಚರಣೆಗೆ

ಫರಂಗಿಪೇಟೆಯ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

ಬಂಟ್ವಾಳ: ಫರಂಗಿಪೇಟೆಯ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ರೋಟರಿ ಕ್ಲಬ್ ಫರಂಗಿಪೇಟೆಯ ಸಹಕಾರದೊಂದಿಗೆ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಫರಂಗಿಪೇಟೆಯ ಅಧ್ಯಕ್ಷ ಸುರೇಂದ್ರ ಕಂಬಳಿ ಅಡ್ಯಾರುಗುತ್ತು ಶುಭಹಾರೈಸಿದರು. ಕಾರ್ಯದರ್ಶಿ ದಿನೇಶ್ ಶೆಟ್ಟಿ ಕೊಟ್ಟಿಂಜ, ಸದಸ್ಯ ಎ.ಕೆ.ಗಿರೀಶ್ ಶೆಟ್ಟಿ, ಆಡಳಿತ ಮಂಡಳಿಯ ಕಾರ್ಯದರ್ಶಿ ಜಯರಾಂ ಶೇಖ, ಶ್ರೀರಾಮ ವಿದ್ಯಾ ಸಂಸ್ಥೆಯ ಸಂಚಾಲಕ ಗೋವಿಂದ ಶೆಣೈ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ

ವಿಟ್ಲ: ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ: ಇಬ್ಬರ ಬಂಧನ

ವಿಟ್ಲ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಹಳೀರಾದಲ್ಲಿ ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ 20ರಿಂದ 30 ಜನರ ಮೇಲೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಸೂರಿಕುಮೇರಿ ನಿವಾಸಿ ಮಹಮ್ಮದ್ ಹನೀಫ್ (43), ಹಳಿರಾ ನಿವಾಸಿ ಜಗದೀಶ್ (25) ಬಂಧಿತರು. ನ.೧೨ರಂದು ಬೆಂಗಳೂರು ಕಡೆಯ ಶಿಫ್ಟ್ ಕಾರು ಹಾಗೂ ಉಪ್ಪಿನಂಗಡಿ ಕಡೆಯ ಇನ್ನೋವಾ ನಡುವೆ ಅಪಘಾತವಾಗಿ,

ಸುರತ್ಕಲ್ ನಲ್ಲಿ ಮತ್ತೊಂದು ನೈತಿಕ ಪೊಲೀಸ್‍ಗಿರಿ

ನಗರ ಹೊರವಲಯದ ಸುರತ್ಕಲ್ ನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ. ಯುವಕನೊಬ್ಬ ತನ್ನ ಗೆಳತಿಯನ್ನು ಬೈಕಿನಲ್ಲಿ ಆಕೆಯ ಅಪಾರ್ಟ್ಮೆಂಟ್ ಗೆ ಬಿಡಲು ಹೋಗಿದ್ದ ಸಂದರ್ಭದಲ್ಲಿ ಆರು ಜನರ ತಂಡ ಅಡ್ಡಗಟ್ಟಿ ಇಬ್ಬರಿಗೂ ಹಲ್ಲೆ ನಡೆಸಿದೆ. ಹಿಂದು ಸಂಘಟನೆಯ ಕಾರ್ಯಕರ್ತರು ಎನ್ನಲಾದ ಆರು ಮಂದಿ ಅನ್ಯಕೋಮಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ್ದಾರೆ. ಮೊಹಮ್ಮದ್ ಯಾಸೀನ್ ಮತ್ತು ಆತನ ಸ್ನೇಹಿತೆ ಆನ್ಸಿ ವಿನ್ನಿ ಡಯಾಸ್ ಹಲ್ಲೆಗೀಡಾದವರು.