Home Posts tagged V4News (Page 780)

ಕೋಡಿಕಲ್‍ ನಾಗದೇವರ ಕಲ್ಲಿಗೆ ದುಷ್ಕರ್ಮಿಗಳಿಂದ ಹಾನಿ ಪ್ರಕರಣ : ಕೋಡಿಕಲ್ ಬಂದ್

ನಗರದ ಕೋಡಿಕಲ್‍ನಲ್ಲಿರುವ ನಾಗನಕಟ್ಟೆಯ ನಾಗಬಿಂಬ ಎಸೆದು ದುಷ್ಕೃತ್ಯ ಎಸೆದ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಇಂದು ಕೋಡಿಕಲ್ ಪ್ರದೇಶದಲ್ಲಿ ಸಂಪೂರ್ಣ ಬಂದ್‍ಗೆ ಕರೆ ನೀಡಿದ್ದು, ಅದರಂತೆ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರತವಾಗಿ ಬಂದ್ ಮಾಡಿದ ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಕೋಡಿಕಲ್‍ನಲ್ಲಿ ವಿಶ್ವಹಿಂದೂಪರಿಷತ್ ಹಾಗೂ ಸ್ಥಳೀಯ ಸಾರ್ವಜನಿಕರು

ಗಿರಿಜಾ ಹೆಲ್ತ್ ಕೇರ್ ಹಾಗೂ ಸರ್ಜಿಕಲ್ಸ್ ಸಂಸ್ಥೆ : ಮೂರನೇ ಶೋರೂಮ್ ಮತ್ತು ಮೆಡಿಕೇರ್ ಪೊಲಿಕ್ಲಿನಿಕ್ ಉದ್ಘಾಟನೆ

ಕುಂದಾಪುರ: ಮಂಗಳೂರು ಮತ್ತು ಉಡುಪಿಯಲ್ಲಿ ಕಾರ್ಯಾಚರಿಸುತ್ತಿರುವ ಗಿರಿಜಾ ಹೆಲ್ತ್ ಕೇರ್‍ನ ಮತ್ತೊಂದು ಮಳಿಗೆ ಕುಂದಾಪುರದಲ್ಲಿ ಉದ್ಘಾಟನೆಗೊಂಡಿತು. ಉಡುಪಿಯ ಗಿರಿಜಾ ಗ್ರೂಪ್ಸ್ ಆಫ್ ಕನ್ಸರ್ನ್ ವತಿಯಿಂದ ಗಿರಿಜಾ ಹೆಲ್ತ್ ಕೇರ್ ಹಾಗೂ ಸರ್ಜಿಕಲ್ಸ್ ಮೂರನೇ ಶೋರೂಮ್ ಮತ್ತು ಮೆಡಿಕೇರ್ ಪೆÇಲಿಕ್ಲಿನಿಕ್ ಕುಂದಾಪುರ ಮುಖ್ಯರಸ್ತೆಯ ಪಾರಿಜಾತ ಹೊಟೇಲಿನ ಎದುರಿನ ಅಥರ್ವ ಕಾಂಪ್ಲೆಕ್ಸ್‍ನಲ್ಲಿ ಶುಭಾರಂಭಗೊಂಡಿತು. ಹೆಲ್ತ್ ಕೇರ್‍ನ್ನು ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ

ಕಡಬ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕೆರೆಗೆ ಬಿದ್ದು ಮೃತ್ಯು

ವಿದ್ಯಾರ್ಥಿನಿಯೋರ್ವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನ.15ರಂದು ಬೆಳಿಗ್ಗೆ ನಡೆದಿದೆ. ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ(18ವ.)ಮೃತಪಟ್ಟ ದುರ್ದೈವಿ ವಿದ್ಯಾರ್ಥಿನಿಯಾಗಿದ್ದಾರೆ. ಈಕೆ ಬೆಳಿಗ್ಗೆ ತಮ್ಮ ಮನೆ ಸಮೀಪದ ಕೆರೆಗೆ ತಾವರೆ ಹೂವಿನ ಗಿಡ ಹಾಕಲೆಂದು ಹೋಗಿದ್ದ ವೇಳೆ ಆಕಸ್ಮಿಕವಾಗಿ

ಕ್ಯಾಟರಿಂಗ್ ಪಿಕ್‍ಅಪ್ ವಾಹನ ಅಪಘಾತ: ಇಬ್ಬರು ಸಾವು, ಮತ್ತಿಬ್ಬರಿಗೆ ಗಾಯ

ಬಂಟ್ವಾಳ: ಕ್ಯಾಟರಿಂಗ್ ಆಹಾರ ಸಾಗಾಟದ ಪಿಕ್ ಅಪ್ ವಾಹನವೊಂದರ ವೀಲ್ ಎಂಡ್ ತುಂಡಾದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟು ಮತ್ತಿಬ್ಬರು ಗಾಯಗೊಂಡಿರುವ ಘಟನೆ ತುಂಬೆ ಸಮೀಪದ ರಾಮಲಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರವಿವಾರ ಸಂಜೆ ನಡೆದಿದೆ. ಅಪಘಾತದಲ್ಲಿ ಉಪ್ಪಿನಂಗಡಿ ನಿವಾಸಿಗಳಾದ ಚೇತನ್ (25) ಮತ್ತು ಆಶಿತ್ (21) ಮೃತಪಟ್ಟಿದ್ದಾರೆ. ಸಿಂಚನ್ ಮತ್ತು ಸುದೀಪ್ ಗಾಯಗೊಂಡಿದ್ದಾರೆ. ಇವರ ಪೈಕಿ ಓರ್ವ ಗಂಭೀರ ಗಾಯಗೊಂಡಿದ್ದು ಮಂಗಳೂರು ಖಾಸಗಿ

ಜಂಕ್ ಫುಡ್ ಬಳಕೆಯಿಂದ ಕ್ಯಾನ್ಸರ್‌ಗೆ ಮುನ್ನುಡಿ : ಡಾ| ಅನುಷಾ ಎಚ್ಚರಿಕೆ

ಮೂಡುಬಿದಿರೆ: “ಮೈದಾ, ಜೋಳದ ಹಿಟ್ಟು, ಪುಡಿ ಉಪ್ಪು, ಸಕ್ಕರೆ ಈ ನಾಲ್ಕು ಬಗೆಯ ಬಿಳಿ ವಿಷವಸ್ತುಗಳನ್ನು ಹೊಂದಿರುವ ಆಹಾರ ವಸ್ತುಗಳಿಂದ ದೂರವಿರಿ. ಜಂಕ್ ಫುಡ್ ಸೇವನೆಯಿಂದ ಕ್ಯಾನ್ಸರ್‌ಗೆ ಬಲಿಯಾಗುವ ಅಪಾಯವಿದೆ ಎಂದು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯ ಹೋಮಿಯೋಪತಿ ವಿಭಾಗದ ಡಾ.ಅನುಷಾ ಎಚ್ಚರಿಸಿದರು. ಅಲಂಗಾರು ಸಂತ ಥೋಮಸ್ ಶಾಲಾಸಭಾಂಗಣದಲ್ಲಿ ಮಂಗಳೂರು ಸಿಓಡಿಪಿ ಮೂಡುಬಿದಿರೆ ಪ್ರಗತಿ ಮಹಾಸಂಘ, ಮಂಗಳೂರು ಲಯನ್ಸ್ ಕ್ಲಬ್ ಇವುಗಳ ಆಶ್ರಯದಲ್ಲಿ ಫಾದರ್ ಮುಲ್ಲಾರ್

ಅಕ್ಷರ ಸಂತನ ಮನೆಗೆ ವೃಕ್ಷಮಾತೆ ಭೇಟಿ

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಮನೆಗೆ ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ ತುಳಸೀ ಗೌಡ ಅವರು ಹರೇಕಳದ ನ್ಯೂಪಡ್ಪು ಮನೆಯಲ್ಲಿ ಭೇಟಿ ನೀಡಿದರು. ಇಂದು ಬೆಳಗ್ಗೆ ಭೇಟಿ ನೀಡಿದ ತುಳಸಿ ಗೌಡ ಅವರು ಹಾಜಬ್ಬರ ಜೊತೆ ಉಪಹಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಹರೇಕಳ ಗ್ರಾಮಸ್ಥರಿಂದ ತುಳಸಿ ಗೌಡ ಅವರನ್ನು ಅಭಿನಂದಿಸಲಾಯಿತು.

ತೆಂಕನಿಡಿಯೂರು ಕಾಲೇಜು : ಕ್ಯಾಂಪಸ್ ಆಯ್ಕೆ ಕಾರ್ಯಕ್ರಮ

ಉಡುಪಿ : ಇಂದು ಶೈಕ್ಷಣಿಕ ಕ್ಷೇತ್ರದಲ್ಲಿ ವಿಫುಲ ಅವಕಾಶವಿದ್ದು ಅದನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಒಳ್ಳೆಯ ಉದ್ಯೋಗವನ್ನು ಪಡೆಯಲು ಕೌಶಲ್ಯಗಳು ಅತಿ ಅಗತ್ಯ. ಅದರಲ್ಲೂ ಸಂವಹನ ಕೌಶಲ್ಯ ಮತ್ತು ಭಾಷಾ ಕೌಶಲ್ಯ ಬಹು ಮುಖ್ಯ ಎಂದು ಉಡುಪಿಯ ಪ್ರೈಮ್ ಸಂಸ್ಥೆಯ ಸ್ಥಾಪಕರಾದ ಶ್ರೀ ರತ್ನಕುಮಾರ್ ಹೇಳಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರಿನಲ್ಲಿ ನಡೆದ ಕ್ಯಾಂಪಸ್ ಆಯ್ಕೆ ಕಾರ್ಯಕ್ರಮವನ್ನು

ಭಗತ್ ಸಿಂಗ್ ಸೇವಾ ಪ್ರತಿಷ್ಠಾನದಿಂದ ಗೂಡುದೀಪ ಸಂಗಮ

ಉಳ್ಳಾಲ: ಭಗತ್ ಸಿಂಗ್ ಸೇವಾ ಪ್ರತಿಷ್ಠಾನ ನಡೆಸುವ 13 ನೇ ವರ್ಷದ ಗೂಡುದೀಪ ಸಂಗಮ ದೀಪಾವಳಿ ಸಂಭ್ರಮ ಗೂಡುದೀಪ ಸ್ಪರ್ಧೆಯು ನ. 11 ರಂದು ಸಂಜೆ 5.30 ಕ್ಕೆ ಕುತ್ತಾರು ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಡೆಯಲಿದೆ ಎಂದು ತೊಕ್ಕೊಟ್ಟು ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಜೀವನ್ ಕುಮಾರ್ ತೊಕ್ಕೊಟ್ಟು ಹೇಳಿದರು ತೊಕ್ಕೊಟ್ಟು ಬ್ರಹ್ಮಶ್ರೀ ಬಿಲ್ಲವ ವೇದಿಕೆ ಕಚೇರಿಯಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು. ಸಾಂಪ್ರದಾಯಿಕ ವಿಭಾಗ,

ಕೊಣಾಜೆಯಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ

ಕೊಣಾಜೆ: ಕೊಣಾಜೆ ಅಡ್ಕರೆ ಪಡ್ಪು ವಿನ ಜಮಿಯ್ಯುತುಲ್ ಫಲಾಹ್ ಸಂಸ್ಥೆಯಗ್ರೀನ್ ವೀವ್ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಯೋಜನೆಯಾದ ‘ಅಟಲ್ ಟಿಂಕೆರಿಂಗ್ ಲ್ಯಾಬ್’ ನ್ನು ಉದ್ಘಾಟನೆ ಕಾರ್ಯಕ್ರಮ ನಡೆಯಿತು. ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ‘ಅಟಲ್ ಟಿಂಕೆರಿಂಗ್ ಲ್ಯಾಬ್ ನ್ನು ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ಶೈಕ್ಷಣಿಕವಾದ ಓದಿನೊಂದಿಗೆ ನಮ್ಮ ಸಾಮಾನ್ಯ ಜ್ಞಾನವನ್ನು ವಿಸ್ತರಿಸುವ ಹಾಗೂ ಪ್ರಾಯೋಗಿಕ

ಬೆಸೆಂಟ್ ಕಾಲೇಜಿನಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

ಮಂಗಳೂರು: ಕರ್ನಾಟಕ ಕ್ಯಾನ್ಸರ್ ಅವೆರ್‌ನೆಸ್ ಫೋರಮ್ ಮತ್ತು ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ವತಿಯಿಂದ ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವನ್ನು ಮಂಗಳೂರು ವಿ.ವಿ. ಕುಲಪತಿ ಪ್ರೊ.ಪಿ.ಎಸ್ .ಯಡಪಡಿತ್ತಾಯ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಪತ್ತೆಯಾದರೆ ಕ್ಯಾನ್ಸರ್ ಗೆ ಪೂರ್ಣವಾದ ಚಿಕಿತ್ಸೆ ಇದೆ. ಈ ನಿಟ್ಟಿನಲ್ಲಿ ಆರೋಗ್ಯ ತಪಾಸಣೆಗೆ ವಿಶೇಷವಾದ ಕಾಳಜಿ