ದಕ್ಷಿಣ ಭಾರತದ ಅಜ್ಮಿರ್ ಎಂದೇ ಪ್ರಸಿದ್ಧಗೊಂಡ ಇತಿಹಾಸ ಪ್ರಸಿದ್ಧ ಉಳ್ಳಾಲದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಖುತುಬುಝಮಾನ್ ಸಯ್ಯದ್ ಶರೀಫುಲ್ ಮದನಿ ರವರ ಹೆಸರಲ್ಲಿ 21ನೇ ಉರೂಸ್ ಸಮಾರಂಭ ಡಿಸೆಂಬರ್ 23 ರಂದು ನಡೆಯಲಿದ್ದು, ಇದರ ಪ್ರಚಾರ ಸಮಾರಂಭ ಉದ್ಘಾಟನೆ ನಡೆಯಿತು. ಈ ಸಂದರ್ಭದಲ್ಲಿ ಜನತಾದಳ ರಾಷ್ಟ್ರೀಯ ಕಾರ್ಯಾಧ್ಯಕ್ಷರೂ, ವಿಧಾನ ಪರಿಷತ್ ಶಾಸಕರಾದ ಬಿ.
ಕಡಬ: ಕೋಳಿ ಹಿಡಿಯಲೆಂದು ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ಭಾನುವಾರದಂದು ಸಂಭವಿಸಿದೆ.ಚಿರತೆಯು ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಎಂಬವರ ಮನೆಯ ಸಮೀಪದ ಬಾವಿಗೆ ಬಿದ್ದಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಚಿರತೆಯ ರಕ್ಷಣಾ ಕಾರ್ಯ ಅರಣ್ಯ ಇಲಾಖೆಯಿಂದ ಆರಂಭಗೊಂಡಿದೆ.
ನಾಡಿನ ಪ್ರಸಿದ್ಧ ಸಂಸ್ಥೆಯಾಗಿರುವ ಐಡಿಯಲ್ ಐಸ್‍ಕ್ರೀಂ ಸ್ಥಾಪಕರಾದ ಶಿಬರೂರು ಪ್ರಭಾಕರ ಕಾಮತ್ (79) ಶನಿವಾರ ಮುಂಜಾನೆ 3.30ಕ್ಕೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರು ಅ.29ರಂದು ಬಿಜೈನಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಓರ್ವ ಪುತ್ರ ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮಂಗಳೂರಿನಲ್ಲಿ ಟೈಲರಿಂಗ್ ವಸ್ತುಗಳ ವಿತರಣೆ, ಪಟಾಕಿ ವಿತರಣೆ ಮಾಡಿಕೊಂಡಿದ್ದ
ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಅಡಿಕೆ ಕದ್ದ ಆರೋಪದ ಮೇಲೆ ಅಪ್ರಾಪ್ತ ಬಾಲಕನಿಗೆ ಹಲ್ಲೆ ಮಾಡಿರುವ ಘಟನೆ ನಡೆದಿದೆ, ಸುಳ್ಯ ತಾಲೂಕಿನ ಗುತ್ತಿಗಾರಿನ ಪುರ್ಲುಮಕ್ಕಿಯಲ್ಲಿ ಈ ಘಟನೆ ನಡೆದಿದ್ದು, ಬಾಲಕನಿಗೆ ಹಲ್ಲೆ ನಡೆಸುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ ಬಾಲಕನಿಂದ ಮಕ್ಕಳ ಕಲ್ಯಾಣ ಸಮಿತಿಗೆ ಹಾಗೂ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾನೆ, ಹಲ್ಲೆ ನಡೆಸಿದ ಹತ್ತು ಮಂದಿಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಪೊಳಲಿ ಟೈಗರ್ಸ್ ಫ್ರೆಂಡ್ಸ್ ಮತ್ತು ಪುರಲ್ದ ಅಪ್ಪೆನ ಮೋಕೆದ ಬೊಳ್ಳಿಲು ತಂಡದ ವತಿಯಿಂದ ಶ್ರೀ ಕ್ಷೇತ್ರ ಪೊಳಲಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ಹಣತೆ ದೀಪ’ ಬೆಳಕಿನ ಹಬ್ಬಕ್ಕೆ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಪೊಳಲಿಯಲ್ಲಿ ದೇವಸ್ಥಾನದ ಆವರಣದಲ್ಲಿ ತುಪ್ಪ ದೀಪ ಅಲಂಕಾರ ಸೇವೆ ನೆರವೇರಿತು… ಈ ವಿಶೇಷ ಸೇವೆಯು ಕಳೆದ ಎರಡು ವರ್ಷಗಳಿಂದ ನಡೆದುಕೊಂಡು ಬಂದಿದ್ದು ಈ ಬಾರಿಯ ಸೇವಾಕಾರ್ಯಕ್ಕೆ ಅತಿಥಿಯಾಗಳು ಸೇರಿ ಚಾಲನೆ ನೀಡಿದರು. ಈ ವೇಳೆ ದೇವಸ್ಥಾನದ ಪ್ರಧಾನ
ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆಯಂದು ಒಳಗಾದ ದೇವರ ಬಲಿ ಉತ್ಸವ ವಾಡಿಕೆಯಂತೆ ದೀಪಾವಳಿ ಅಮವಾಸ್ಯೆ ದಿನದಂದು ಸಂಪ್ರದಾಯದಂತೆ ಆರಂಭಗೊಂಡಿದೆ. ಕಳೆದ ರಾತ್ರಿ ಶ್ರೀ ದೇವರ ಬಲಿ ಹೊರಟು ದೀಪಾವಳಿ ಉತ್ಸವ ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರೂ ಆಗಿರುವ ಪ್ರಧಾನ ಅರ್ಚಕ ವೇದ.ಮೂ.ವಿ.ಎಸ್.ಭಟ್ ಮತ್ತು ವೇ.ಮೂ. ವಸಂತ ಕೆದಿಲಾಯ ಅವರ ನೇತೃತ್ವದಲ್ಲಿ ಉತ್ಸವಾದಿಗಳು ನಡೆಯಿತು. ದೇವಳದ ಪ್ರಾಕಾರ ಗುಡಿಗಳಲ್ಲಿ ಹೂವಿನ ಪೂಜೆ
ಬಹುನಿರೀಕ್ಷೆಯ ದಿಲ್ ರಂಗ್-2 ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ದುಬೈಯಲ್ಲಿ ನಡೆಯಿತು. ದುಬೈಯ ಕಲಾ ಪೋಷಕ ಚಿತ್ರ ನಿರ್ಮಾಪಕರಾದ ಹರೀಶ್ ಶೇರಿಗಾರ ಅವರು ಪೋಸ್ಟರನ್ನು ಬಿಡುಗಡೆಗೊಳಿಸಿದರು.v4news ಕ್ರಿಯೇಟಿವ್ ಫಿಲಮ್ಸ್ ಮಂಗಳೂರು ಬ್ಯಾನರಡಿಯಲ್ಲಿ ಅಭಿಷೇಕ್ ರಾವ್ ನಿರ್ದೇಶನದ ಬಹುನಿರೀಕ್ಷಿತ ತುಳು ಚಲನಚಿತ್ರ ದಿಲ್ ರಂಗ್ 2 ಈಗಾಗಲೇ ತೆರೆಗೆ ಬರಲು ಸಜ್ಜಾಗಿದೆ. ಇದರ ಪೋಸ್ಟರ್ ಬಿಡುಗಡೆ ಸಮಾರಂಭವು ದುಬಾಯಿಯಲ್ಲಿ ನಡೆಯಿತು. ದುಬಾಯಿಯ ಕಲಾ ಪೋಷಕ
ಮಂಗಳೂರಿನ ಶಕ್ತಿನಗರದಲ್ಲಿರುವ ಸಾನಿಧ್ಯ ವಸತಿಯುತ ಶಾಲೆಯಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಿದರು. ಸಾನಿಧ್ಯದಲ್ಲಿ ದೀಪಾವಳಿ ಹಬ್ಬವನ್ನು ವಿಶೇಷ ಮಕ್ಕಳೊಂದಿಗೆ ಸೇರಿ ಸಂಭ್ರಮದಿಂದ ಆಚರಿಸಲಾಯಿತು. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ್ ಕಾಮತ್ ಅವರು ವಿಶೇಷ ವಿದ್ಯಾರ್ಥಿನಿ ಮಾನ್ಸಿ ಪ್ರಜಾಪತಿ ಹಾಗೂ ಗಣ್ಯರ ಜೊತೆ ಸೇರಿ ಜ್ಯೋತಿ ಬೆಳಗಿಸಿ ದೀಪಾವಳಿ ಹಬ್ಬವನ್ನು ಉದ್ಘಾಟಿಸಿ ಸಂದೇಶ ನೀಡಿದರು. ಮಾತ್ರವಲ್ಲ ವಿಶೇಷ ಮಕ್ಕಳ ಜೊತೆ ಸುಡು
ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಗರದ ಕಾರ್‌ಸ್ಟ್ರೀಟ್‌ನಲ್ಲಿ ಬುಧವಾರ ರಾತ್ರಿ ನಡೆದಿದೆ. ಈ ಕೊಲೆ ದೃಶ್ಯವು ಅಪಾರ್ಟ್ ಮೆಂಟ್ ನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೊಲೆಯಾದವರನ್ನು ಕಾರ್‌ಸ್ಟ್ರೀಟ್‌ನ ಮಹಮ್ಮಾಯಿ ದೇವಸ್ಥಾನ ರಸ್ತೆಯಲ್ಲಿರುವ ವೀರ ವೆಂಕಟೇಶ್ ಎಂಬ ಅಪಾರ್ಟ್ ಮೆಂಟ್ ನಿವಾಸಿ ವಿನಾಯಕ ಕಾಮತ್ ಎಂದು ಗುರುತಿಸಲಾಗಿದೆ. ಇವರು ಕರಂಗಲ್ಪಾಡಿಯಲ್ಲಿರುವ ಟ್ರಾವೆಲ್ಸ್ ವೊಂದರಲ್ಲಿ
ಮೂಡುಬಿದಿರೆ : ಅರಮನೆಯ 20 ಎಕ್ರೆ ಜಾಗವನ್ನು ಗೇಣಿಗೆ ಪಡೆದುಕೊಂಡು ಭತ್ತವನ್ನು ಬೆಳೆದು ಇನ್ನೇನು ಕಟಾವು ಮಾಡಬೇಕೆನ್ನುವಷ್ಟರಲ್ಲಿ ಜೋರಾಗಿ ಬೀಸಿದ ಮಳೆಯಿಂದಾಗಿ ಗದ್ದೆಯಲ್ಲಿ ನೀರು ನಿಂತು ಭತ್ತವೆಲ್ಲಾ ಕೊಳೆತು ನಾಶವಾಗಿ ರೈತರು ಕಂಗಾಲಾದ ಘಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಮಾಂಟ್ರಾಡಿ ಗ್ರಾಮದ ಅರಮನೆ ಬೈಲು ಎಂಬಲ್ಲಿನ ಸ್ಥಳೀಯರಾದ 6 ಜನ ಸೇರಿಕೊಂಡು ಅರಮನೆಗೆ ಸಂಬಂಧಿಸಿದ 20 ಎಕ್ರೆ ಜಾಗವನ್ನು ಗೇಣಿಗೆ ಪಡೆದುಕೊಂಡು ಭತ್ತದ


















