ಉಳ್ಳಾಲ: ವಾರೆಂಟ್ ಆರೋಪಿಯನ್ನು ಹಿಡಿಯಲು ಹೋದ ಉಳ್ಳಾಲ ಠಾಣೆಯ ನಾಲ್ವರು ಪೊಲೀಸ್ ಸಿಬ್ಬಂದಿಗೆ ರೌಡಿಶೀಟರ್ ತಲವಾರು ತೋರಿಸಿ ಪರಾರಿಯಾದ ಘಟನೆ ಉಳ್ಳಾಲದ ಧರ್ಮನಗರದಲ್ಲಿ ನಡೆದಿದೆ. ಧರ್ಮನಗರ ನಿವಾಸಿ ಮುಕ್ತಾರ್ ಮುಕ್ತಾರ್ ಅಹ್ಮದ್ ಎಂಬಾತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು. ಈತನ ಮೇಲೆ ಹತ್ತಕ್ಕೂ ಹೆಚ್ಚು ಕೇಸುಗಳಿದ್ದು, ಕೋರ್ಟಿಗೆ ಹಾಜರಾಗದೆ
ಕಾರ್ಕಳ: ಕೋವಿಡ್ ಸಂದರ್ಭ ದೇಣಿಗೆ ಸಂಗ್ರಹಕ್ಕೆ ಬಳಸಿದ ವೇದಿಕೆ ಪಿಎಂ ಕೆರ್ಸ್ ಯೋಜನೆಯು ಪಾರದರ್ಶಕತೆಯನ್ನು ಹೊಂದಿರಲಿಲ್ಲ. ಹಣ ಸಂಗ್ರಹ ಹಾಗೂ ಖರ್ಚುಗಳ ಲೆಕ್ಕ ವಿ ಡದ ಈ ನಿಧಿಯ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ಪ್ರತಿಬಿಂಬಿಸುತ್ತದೆ. ಕೇಂದ್ರದ ಮಾಜಿ ಸಚಿವ ಮಾಜಿ ಮುಖ್ಯಮಂತ್ರಿ ಯಂ. ವೀರಪ್ಪ ಮೊಯ್ಲಿ ಟೀಕಿಸಿದರು ಕಾರ್ಕಳ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಆಡಳಿತದಲ್ಲಿರುವ ಸರಕಾರಗಳಿಗೆ
ಸಂಬಳ ನೀಡದೆ ಸತಾಯಿಸುತ್ತಿರುವ ಕೇಂದ್ರ ಕಛೇರಿಯ ಅಧಿಕಾರಿಗಳ ವಿರುದ್ಧ ಕೆ.ಎಸ್.ಆರ್.ಟಿ.ಸಿ ನೌಕರರು ಧರಣೆ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಪುತ್ತೂರು ಕೆ.ಎಸ್.ಆರ್.ಟಿ.ಸಿ ಘಟಕದ ಸಿಬ್ಬಂದಿಗಳು ಬಿಎಂಎಸ್ ಸಂಘಟನೆಯ ನೇತೃತ್ವದಲ್ಲಿ ಈ ಪ್ರತಿಭಟನೆಯನ್ನು ಆರಂಭಿಸಿದ್ದು, ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಈ ಧರಣಿ ಸತ್ಯಾಗ್ರಹವನ್ನು ನಡೆಸುತ್ತಿದ್ದಾರೆ. ಅಕ್ಟೋಬರ್ ನಲ್ಲಿ ಅರ್ಧ ಸಂಬಳ ನೀಡಿದ್ದು, ಬಳಿಕ ಸಂಬಳವನ್ನೇ ನೀಡದೆ ಕೇಂದ್ರ ಕಛೇರಿಯ ಅಧಿಕಾರಿಗಳು
ಭತ್ತ ಕಟಾವಿಗೆ ಯಂತ್ರ ಬಂದಿದ್ದು ಗಂಟೆಯೊಂದಕ್ಕೆ 2,500 ರೂ ದುಬಾರಿ ದರ ವಿಧಿಸುತ್ತಿದ್ದು, ಮುಂದಿನ ಬಾರಿ ಭತ್ತದ ಬೇಸಾಯ ಮಾಡಬೇಕೋ ಬೇಡವೋ ಎಂಬ ಚಿಂತೆ ಕಾಡುತ್ತಿದೆ ಎಂದು ಮಟ್ಟು ಭಾಗದ ರೈತರು ತಮ್ಮ ಹತಾಶಾ ಭಾವನೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಒಂದೆಡೆ ಗದ್ದೆಗಳನ್ನು ಹಡಿಲು ಬಿಟ್ಟಲ್ಲಿ ಸರಕಾರ ಕ್ರಮ ತೆಗೆದುಕೊಳ್ಳುವ ಭೀತಿ, ಬೇಸಾಯ ಕೈಗೊಂಡರೆ ನಷ್ಟವನ್ನು ಅನುಭವಿಸುವ ಸಂಕಷ್ಟ. ಒಂದೆಡೆ ಅಕಾಲಿಕ ಮಳೆ, ಮತ್ತೊಂದೆಡೆ ಉಕ್ಕೇರಿ ಹರಿದ ಹೊಳೆಯ ನೀರು ಇವೆಲ್ಲದರ
ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ನೀಡಲಾಗುವ ಪ್ರತಿಷ್ಠಿತ ಮಹರ್ಷೀ ವಾಲ್ಮೀಕಿ ಪ್ರಶಸ್ತಿ ಪ್ರಧಾನ ಸಮಾರಂಭವು ಇಂದು ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. 2020 ಹಾಗೂ 2021 ರ ಸಾಲಿನಲ್ಲಿ ಒಟ್ಟು 11 ಮಂದಿಯನ್ನು ಈ ಪ್ರಶಸ್ತಿಗೆ ಸರಕಾರ ಆಯ್ಕೆ ಮಾಡಿತ್ತು. ಮೈಸೂರು ವಿಭಾಗದಿಂದ ಪ್ರಶಸ್ತಿಗೆ ಆಯ್ಕೆಯಾಗಿದ್ದ ಉಡುಪಿ ಜಿಲ್ಲೆಯ ಗೌರಿ ಕೊರಗ ಕೆಂಜೂರು ಅವರಿಗೆ ಸೇರಿದಂತೆ
ಅತೀ ದೊಡ್ಡ ವ್ಯಾಪ್ತಿ ಹೊಂದಿರುವ ಪಡುಬಿದ್ರಿ ಮೆಸ್ಕಾಂ ಕಛೇರಿಗೆ ಶಾಶ್ವತ ಶಾಖಾಧಿಕಾರಿ ಇಲ್ಲದೆ, ವ್ಯವಸ್ಥೆಗಳು ಹಾಳಾಗುತ್ತಿದ್ದು ಇದಕ್ಕೆ ಸಾಕ್ಷಿಯೋ ಎಂಬಂತೆ ಹೆಜಮಾಡಿ ಗುಂಡಿ ರಸ್ತೆಯುದ್ಧಕ್ಕೂ ಮೆಸ್ಕಾಂ ವಿದ್ಯುತ್ ಕಂಬ ತಂತಿಗಳಿಗೆ ಬಳ್ಳಿ ಸುತ್ತಿಕೊಂಡು ಅಪಾಯದ ಸ್ಥಿತಿ ನಿರ್ಮಾಣಗೊಂಡಿದೆ. ಪಡುಬಿದ್ರಿ ಮೆಸ್ಕಾಂ ಕಛೇರಿ ವ್ಯಾಪ್ತಿ ಬಹಳಷ್ಟು ವಿಸ್ತೀರ್ಣ ಇದ್ದು ಇಲ್ಲಿ ಸಮಸ್ಯೆ ತುಂಬಿ ತುಳುಕುತ್ತಿದೆ. ಈ ಬಗ್ಗೆ ಪ್ರತೀ ಗ್ರಾಮಸಭೆಗಳಲ್ಲೂ ಸಭೆಗೆ ಮಾಹಿತಿ ನೀಡಲು
ಮೂಡುಬಿದಿರೆ: 2೦ ದಿನಗಳ ಹಿಂದೆ ನಾಪತ್ತೆಯಾಗಿದ್ದ ವೃದ್ಧರೊಬ್ಬರ ಶವವು ಜ್ಯೋತಿನಗರ ಗಾಂಧಿಪಾರ್ಕ್ ಬಳಿ ನಿಲ್ಲಿಸಲಾಗಿದ್ದ ಹಳೆ ಕಾರಿನೊಳಗಡೆ ಬುಧವಾರ ಮಧ್ಯಾಹ್ನ ಪತ್ತೆಯಾಗಿದೆ. ಪುರಸಭೆ ವ್ಯಾಪ್ತಿಯ ಕರಿಂಜೆ ಗ್ರಾಮ ನಿವಾಸಿ ಶ್ರೀಧರ ಶೆಟ್ಟಿ(73) ಸೆಪ್ಟೆಂಬರ್ 29ರಂದು ನಾಪತ್ತೆಯಾಗಿದ್ದರು. ಈ ಬಗ್ಗೆ ಶ್ರೀಧರ ಶೆಟ್ಟಿ ಅವರ ಮಗ ರೋಹಿತ್ ಶೆಟ್ಟಿ ಅವರು ಅಕ್ಟೋಬರ್ 6ರಂದು ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬುಧವಾರ ಜ್ಯೋತಿನಗರ ಮೆಸ್ಕಾಂ ಪರಿಸರದಲ್ಲಿ
ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾ ಅವರ ನಗರದ ವೆಲೆನ್ಸಿಯಾದಲ್ಲಿರುವ ಮನೆಗೆ ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮನೆಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಸರಿ ಬಣ್ಣ ಮತ್ತು ಕೇಸರಿ ಶಾಲಿನ ಬಗ್ಗೆ ಐವನ್ ಡಿಸೋಜ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂದು ಬಜರಂಗದಳ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿವಿ ಮಾಧ್ಯಮದ ಚರ್ಚೆಯ ಸಂದರ್ಭದಲ್ಲಿ ಐವಾನ್ ಡಿಸೋಜ, ಕೇಸರಿ ಶಾಲು ಹಾಕಿದವರು
ಮಂಜೇಶ್ವರ: ಮನೆ ಟೆರೇಸ್ ನಲ್ಲಿ ಆಟವಾಡುತಿದ್ದ ಹತ್ತು ವರ್ಷದ ಬಾಲಕನೊಬ್ಬ ವಿದ್ಯುತ್ ಶಾಕ್ ತಗಲಿ ಸಾವನ್ನಪ್ಪಿದ್ದಾನೆ. ಮೀಂಜ ಮೊರತ್ತಣೆ ಆಟೋ ಚಾಲಕ ಸದಾಶಿವ ಶೆಟ್ಟಿ- ಯಶೋಧ ದಂಪತಿಗಳ ಪುತ್ರ ಮೊಕ್ಷಿತ್ ರಾಜ್ ಸಾವನ್ನಪ್ಪಿದ ದುರ್ದೈವಿ. ತಲೇಕ್ಕಲ ಸರಕಾರಿ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿಯಾಗಿರುವ ಮೋಕ್ಷಿತ್ ರಾಜ್ ಆಟವಾಡುತಿದ್ದ ಟೆರೇಸ್ ಮೇಲಿನಿಂದ ಪಕ್ಕದ ಮನೆಗೆ ಹಾಕಲಾಗಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಮುಟ್ಟಿದಾಗ ಶಾಕ್ ತಗಲಿ ಟೆರೇಸ್ ನ ಕೆಳಗೆ
ಉಳ್ಳಾಲ: ಬಿಜೆಪಿ ಕಾರ್ಯಕರ್ತನ ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಸಮೀಪ ನಿನ್ನೆ ತಡರಾತ್ರಿ ನಡೆದಿದೆ. ಬಿಜೆಪಿ ಕಾರ್ಯಕರ್ತ, ಕೊಣಾಜೆ ಗ್ರಾ.ಪಂ ಮಾಜಿ ಸದಸ್ಯ ಪ್ರಕಾಶ್ ಶೆಟ್ಟಿ (38) ಎಂಬವರ ಕೊಲೆಗೆ ಯತ್ನಿಸಲಾಗಿದೆ. ಬೈಕಲ್ಲಿ ಬಂದ ಮೂವರು ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ. ಸ್ನೇಹಿತ ಮಂಜುನಾಥ್ ಜೊತಗೆ ಬೈಕಿನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ದುಷ್ಕರ್ಮಿಗಳು ತಲವಾರು ಬೀಸಿದ್ದಾರೆ. ಪವಾಡಸದೃಶವಾಗಿ ತಲವಾರು ದಾಳಿ ಕೈಗೆ ಮಾತ್ರ


















