Home Posts tagged V4News (Page 809)

ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯ ಅಧ್ಯೆಕ್ಷೆಯಾಗಿ ಚಿತ್ರಾ ಜೆ ಶೆಟ್ಟಿ ಆಯ್ಕೆ

ಸುರತ್ಕಲ್: ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ 2021-23 ನೇ ಸಾಲಿನ ನೂತನ ಅಧ್ಯಕ್ಷೆಯಾಗಿ ಚಿತ್ರಾ ಜೆ ಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು. ಸುರತ್ಕಲ್ ಬಂಟರ ಭವನದಲ್ಲಿ ನಡೆದ ಮಹಿಳಾ ವೇದಿಕೆಯ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷೆಯಾಗಿ ಭವ್ಯಾ ಎ. ಶೆಟ್ಟಿ, ಕಾರ್ಯದರ್ಶಿಯಾಗಿ ಸರೋಜ ಟಿ ಶೆಟ್ಟಿ, ಜತೆ ಕಾರ್ಯದರ್ಶಿಯಾಗಿ ರಾಜೇಶ್ವರಿ

ತುಳು ಭಾಷೆಗೆ ಮಾನ್ಯತೆ ಸಿಗಬೇಕೆಂದು ಪ್ರತಿಭಟನೆ ಮಾಡದಂತೆ ನೋಟಿಸ್ ಬೇಸರ ತಂದಿದೆ : ಯೋಗೀಶ್ ಶೆಟ್ಟಿ ಜೆಪ್ಪು

ದಕ್ಷಿಣ ಕನ್ನಡ ಜಿಲ್ಲೆಯ ತುಳು ಅಧಿಕೃತ ಭಾಷೆ ಪೊರಂಬಾಟ್ ಸಮಿತಿ ವತಿಯಿಂದ ತುಳು ಭಾಷೆಗೆ ಮಾನ್ಯತೆ ಸಿಗಬೇಕೆಂದು ಪ್ರತಿಭಟನೆ ಹಮ್ಮಿಕೊಂಡಿದ್ದೇವು. ಆದರೆ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದರಿಂದ ಪ್ರತಿಭಟನೆಯನ್ನು ರದ್ದುಮಾಡಬೇಕಿತ್ತು. ರಾಜಕೀಯ ಕಾರ್ಯಕ್ರಮ, ರಾಜಕೀಯ ಪ್ರತಿಭಟನೆಗೆ ಅವಕಾಶ ಕೊಡುತ್ತಾರೆ. ಆದರೆ ನಮ್ಮ ತುಳುವರ ಶಾಂತಿಯುತ ಪ್ರತಿಭಟನೆಗೆ ಯಾಕೆ ಅವಕಾಶ ನೀಡಿಲ್ಲ ಎಂದು ಯೋಗೀಶ್ ಶೆಟ್ಟಿ ಜೆಪ್ಪು ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿ

ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ

ಮಂಗಳೂರಿನ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವವು ಅಕ್ಟೋಬರ್ 7 ರಿಂದ ಅಕ್ಟೋಬರ್ 16ರ ವರೆಗೆ ನಡೆಯಲಿದೆ. ನವರಾತ್ರಿಯ ಸಂದರ್ಭ ಪ್ರತಿದಿನ ವಿಶೇಷ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಜರುಗಲಿರುವುದು.  ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ,ಸುದ್ದಿಗೋಷ್ಟಿಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರಾದ ಪಿ ರಾಮನಾಥ ಹೆಗ್ಡೆ ರಘುರಾಮ ಉಪಾದ್ಯಾಯ, ಅರುಣ ಐತಾಳ್ ರಾಮನಾಯ್ಕ ಉಪಸ್ಥಿತರಿದ್ದರು.

ನ್ಯಾಯಾಲಯಕ್ಕೆ ತಲೆಬಾಗಿ ಆಗಮಿಸಿದ್ದೇನೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ನಾನು ಇಂಧನ ಸಚಿವನಾಗಿದ್ದ ಸಂದರ್ಭ ವ್ಯಕ್ತಿಯೋರ್ವ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ನಂತರ ಅಧಿಕಾರಿಗಳು ದೂರು ದಾಖಲಿಸಿದ್ದರು. ಆತ ಅಧಿಕಾರಿಗಳನ್ನೂ ನಿಂದನೆ ಮಾಡಿದ್ದ. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಯಾಗಿ ಬರಬೇಕು ಎಂದು ನ್ಯಾಯಾಲಯ ಸೂಚಿಸಿದ್ದು, ಹೀಗಾಗಿ ನ್ಯಾಯಾಲಯಕ್ಕೆ ತಲೆಬಾಗಿ ಈಗ ಆಗಮಿಸಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದೊಂದಿಗೆ ಮತನಾಡಿದರು.

ಬಿಜೆಪಿಯ ಕಪಟ ಹಿಂದೂತ್ವಕ್ಕೆ ಜನ ತಕ್ಕ ಪಾಠ ಕಲಿಸುತ್ತಾರೆ : ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ

ಕುಂದಾಪುರ: ದೇವಸ್ಥಾನದ ರಕ್ಷಣೆಯ ಹೆಸರಲ್ಲಿ ನಾಟಕವಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಇದೀಗ ಹಿಂದೂ ದೇವಾಲಯಗಳನ್ನು ಉರುಳಿಸಲು ಮುಂದಾಗಿದೆ. ಬಿಜೆಪಿ ನಾಯಕರ ಇಂತಹ ಕಪಟ ಹಿಂದೂತ್ವಕ್ಕೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ವಾಗ್ದಾಳಿ ನಡೆಸಿದರು. ಅವರು ಮೈಸೂರು ನಂಜನಗೂಡಿನ ಪುರಾತನ ಹಿಂದೂ ದೇವಾಲಯ ಸೇರಿದಂತೆ ಧಾರ್ಮಿಕ ಕೇಂದ್ರಗಳನ್ನು ದ್ವಂಸ ಮಾಡುತ್ತಿರುವ ಬಿಜೆಪಿ ಸರ್ಕಾರದ ವಿರುದ್ದ

ಗೋ ಹತ್ಯೆ, ಗೋ ಕಳ್ಳತನದಲ್ಲಿ ಭಾಗಿಯಾದ ಆರೋಪ : ಉಡುಪಿ ಎಸ್ಪಿ ವಿಷ್ಣುವರ್ಧನ್ ಎಚ್ಚರಿಕೆ

ಠಾಣೆಯಲ್ಲಿ ಇದುವರೆಗೆ ಗೋ ಕಳ್ಳತನ, ಗೋ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಆರೋಪಗಳನ್ನು ಹಾಗೂ ದನದ ದಲ್ಲಾಳಿ ಮಾಡುವವರನ್ನು ಮತ್ತು ದನಸಾಗಾಟ ಮಾಡುವ ವಾಹನಚಾಲಕರ ಪರೇಡ್ ನಡೆಸಿದರು. ಇವರುಗಳು ಮುಂದಕ್ಕೆ ಯಾವುದೇ ಗೋ ಕಳ್ಳತನ ಗೋ ಹತ್ಯೆ ಪ್ರಕರಣದಲ್ಲಿ ಬಾಗಿಯಾದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿಷ್ಣು ವರ್ದನ್ ರವರು ಎಚ್ಚರಿಕೆಯನ್ನು ನೀಡಿದ್ದಾರೆ. ಸಭೆಯಲ್ಲಿ ಪೊಲೀಸ್ ಉಪಾದೀಕ್ಷಕರಾದ ಎಸ್ ವಿಜಯಪ್ರಸಾದ್, ಕಾರ್ಕಳ ವೃತ್ತ

ಖಾನ್‍ಗಳು ದೇಶ ಬಿಟ್ಟು ನೇರವಾಗಿ ಅಪಘಾನಿಸ್ಥಾನಕ್ಕೆ ಹೋಗಲಿ : ಬಸನಗೌಡ ಪಾಟೀಲ ಯತ್ನಾಳ್

ಬಾಲಿವುಡ್ ಖಾನ್‍ಗಳ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಹೇಳಿಕೆ ನೀಡಿರುವ ಯತ್ನಾಳ ಶಾರುಖಾನ್ ಪುತ್ರ ಡ್ರಗ್ಸ್ ಕೇಸ್ ಲ್ಲಿ ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿ ದೇಶ ಸುರಕ್ಷಿತ ಅಲ್ಲ ಎಂದ ಖಾನ್ ಗಳು ದೇಶ ಬಿಡಲಿ ಎಂದರು. ಆ ಮಕ್ಕಳೆಲ್ಲ ನೇರವಾಗಿ ಅಪಘಾನಿಸ್ತಾನಕ್ಕೆ ಹೋಗಲಿ, ಅಲ್ಲಿಯೇ ಸುರಕ್ಷಿತವಾಗಿ ತಾಲಿಬಾನ್ ಕೆಳಗೆ ನಟನೆ ಮಾಡಿಕೊಂಡಲು ಇರಲಿ ಎಂದು ವ್ಯಂಗವಾಡಿದ್ದಾರೆ.  

ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾದ ಭೂಪ

ಮೂಡಬಿದ್ರೆ ಬೆಳುವಾಯಿ ಗ್ರಾಮದ ತರುಣಿಯೊಬ್ಬರನ್ನು ಮದುವೆಯಾಗಿದ್ದ ಬೆಂಗಳೂರಿನ ರಾಘವೇಂದ್ರ ಕುಲಕರ್ಣಿ ಎಂಬಾಂತ ಇದೀಗ ತನ್ನ ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾಗಿದ್ದು, ಈ ಬಗ್ಗೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರಿನ ಬಸವೇಶ್ವರ ಬಡವಾಣೆಯ ಅಂದ್ರಳ್ಳಿ ನಿವಾಸಿ ರಾಘವೇಂದ್ರ ಕುಲಕರ್ಣಿ ಎಂಬಾತ 2017ರ ಜೂನ್ 18ರಂದು ಮೂಡಬಿದ್ರೆಯ ತರುಣಿಯನ್ನು ಬೆಂಗಳೂರಿ ಲಗ್ಗೇರಿಯಲ್ಲಿರುವ ರಾಘವೇಂದ್ರ ಮಠದಲ್ಲಿ ಹಿಂದೂ

ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರ ಹೇಳಿಕೆ ಹಾಸ್ಯಾಸ್ಪದ: ಕಾಂಗ್ರೆಸ್ ಮುಖಂಡರ ಜಂಟಿ ಸುದ್ದಿಗೋಷ್ಟಿ

ಕಾಪು ಕ್ಷೇತ್ರದ ಮಾಜಿ ಶಾಸಕ ವಿನಯ ಕುಮಾರ್ ಸೊರಕೆ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂಬ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕೊಯಿಲಾಡಿ ಸುರೇಶ್ ನಾಯಕ್ ಹೇಳಿಕೆ ಹಾಸ್ಯಸ್ಪದ ಎಂಬುದಾಗಿ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ ಪೂಜಾರಿ ಹಾಗೂ ಕೆ.ಪಿ.ಸಿ.ಸಿ ಸಂಯೋಜಕ ನವೀನ್‌ಚಂದ್ರ ಜೆ. ಶೆಟ್ಟಿ ತಿಳಿಸಿದ್ದಾರೆ. ಪಡುಬಿದ್ರಿಯ ಖಾಸಗಿ ಸಭಾಂಗಣದಲ್ಲಿ ಜಂಟಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಾದ-ವಿವಾದ