ಕಳೆದ ಮೂರು ವರ್ಷದ ಹಿಂದೆ ಕ್ರೂರ ಮತಾಂಧ ಶಕ್ತಿಗಳ ಸಂಚಿಗೆ ಬಲಿಯಾದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಸ್ಮೃತಿ ದಿನ ಜು. 26ರಂದು ಅವರ ಮನೆಯಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಲಾಯಿತು. ಸುಳ್ಯ ಬಿಜೆಪಿ ಮಂಡಲ ಉಪಾಧ್ಯಕ್ಷರಾದ ಆರ್. ಕೆ ಭಟ್ ಕುರುಂಬುಡೇಲು ಪ್ರಾಸ್ತವಿಕವಾಗಿ ಮಾತನಾಡಿ ಪ್ರವೀಣ್ ನೆಟ್ಟಾರು
ಸುಳ್ಯ ತಾಲೂಕು ಆಸ್ಪತ್ರೆಗೆ ನೂತನ ವೈದ್ಯಾಧಿಕಾರಿಯಾಗಿ ಈ ಹಿಂದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಇದೀಗ ಸುಳ್ಯ ತಾಲೂಕು ಆಸ್ಪತ್ರೆಗೆ ವರ್ಗಾವಣೆಗೊಂಡು ಬಂದು ಆಡಳಿತ ವೈದ್ಯಾಧಿಕಾರಿಯಾಗಿ ನಿಯುಕ್ತರಾಗಿರುವ ಶ್ರೀ ನವೀನ್ ಎಸ್ ಎನ್ ಅವರಿಗೆ ಸುಳ್ಯ ಯುವ ಕಾಂಗ್ರೆಸ್ ವತಿಯಿಂದ ತಾಲೂಕು ಆಸ್ಪತ್ರೆಯಲ್ಲಿ ಭೇಟಿಯಾಗಿ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವ ಎಲ್ಲಾ ರೋಗಿಗಳಿಗೆ ಅತ್ಯುತ್ತಮ
ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಆಟಿ ಸಂಭ್ರಮ ‘ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಮ್ಮ ಶಾಲೆಯ ಹಿರಿಯ ಪೋಷಕರಾದ ಶ್ರೀಮತಿ . ಪುಷ್ಪಾವತಿ ಮಾಣಿಬೆಟ್ಟು , ಶ್ರೀಮತಿ. ಜಯಲಕ್ಷ್ಮಿ ಇವರು ಭಾಗವಹಿಸಿ ಆಟಿಯ ಮಹತ್ವದ ಬಗ್ಗೆ ಪುಟಾಣಿ ಮಕ್ಕಳಿಗೆ ತಿಳಿಸಿಕೊಟ್ಟರು . ಪೋಷಕರೆಲ್ಲರೂ ಆಟಿಯ ವಿಶೇಷ ಖಾದ್ಯಗಳನ್ನು ತಯಾರಿಸಿ ಮಕ್ಕಳೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು . ಶಾಲೆಯ ಪುಟಾಣಿ ವಿದ್ಯಾರ್ಥಿಗಳು ನೃತ್ಯ ಮಾಡಿ
ಮೂಡುಬಿದಿರೆ: ರಾಷ್ಟ್ರ ನಿರ್ಮಾಣದ ಶಿಲ್ಪಿಗಳು ಶಿಕ್ಷಕರು. ಮೌಲ್ಯಾಧಾರಿತ, ಚಾರಿತ್ರ್ಯವಂತ ವ್ಯಕ್ತಿತ್ವಗಳನ್ನು ರೂಪಿಸುವ ಸಂಕಲ್ಪ ಶಿಕ್ಷಕರಲ್ಲಿರಬೇಕು. ವ್ಯಕ್ತಿತ್ವವನ್ನು ರೂಪಿಸುವ ಶಿಕ್ಷಕರು ಅಂಧಕಾರವನ್ನು ದೂರಮಾಡಿ ಸಮಾಜವನ್ನು ಪ್ರಕಾಶಮಾನಗೊಳಿಸುವಲ್ಲಿ ಮಹತ್ತರವಾದ ಪಾತ್ರವನ್ನು ನಿವ೯ಹಿಸುತ್ತಿದ್ದಾರೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.ಅವರು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದ ವತಿಯಿಂದ ವಿದ್ಯಾಗಿರಿಯ ವಿ.ಎಸ್
ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಅಮೆರಿಕಾದ ಬೋಸ್ಟನ್ ನಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಪ್ರಥಮ ಬಾರಿಗೆ ಆಯ್ಕೆಯಾಗಿರುವ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಅವಕಾಶ ಪಡೆದಿದ್ದಾರೆ. ಕರ್ನಾಟಕದ ವಿಧಾನಸಭೆಯ 224 ಸದಸ್ಯರುಗಳಲ್ಲಿ 14 ಶಾಸಕರು ಆಯ್ಕೆಯಾಗಿದ್ದು ಅದರಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ
ಮೂಡುಬಿದಿರೆ: ಇಲ್ಲಿನ ಪುತ್ತಿಗೆ ಗ್ರಾಮದ ಸಂಪಿಗೆಯಲ್ಲಿ ಶನಿವಾರ ಮಧ್ಯಾಹ್ನ ಸುರಿದ ಗಾಳಿ ಮಳೆಗೆ ವಿದ್ಯುತ್ ಕಂಬ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದು ಸವಾರ ಗಾಯಗೊಂಡಿದ್ದಾರೆ.ನಿಡ್ಡೋಡಿ ನಿವಾಸಿ ವಿನೋದ್ ನಿಡ್ಡೋಡಿಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದಾಗ, ಸಂಪಿಗೆ ಎಚ್.ಪಿ ಪೆಟ್ರೋಲ್‌ಬಂಕ್ ಬಳಿ ವಿದ್ಯುತ್ ಕಂಬ ಧರೆಗುರುಳಿದು ಬೈಕ್ ಮೇಲೆ ಬಿದ್ದಿದೆ. ಬೈಕ್‌ನ ಮಧ್ಯಭಾಗ ಜಖಂಗೊಂಡಿದ್ದು, ಸವಾರ ವಿನೋದ್ ಅವರ ಕಾಲಿಗೆ ಗಾಯವಾಗಿದೆ.
ಬೆಂಗಳೂರು, 26 ಜುಲೈ 2025 – “ಬಸ್ತರ್ 1862 ಕೃತಿಯು ವಸಾಹತುಶಾಹಿ ಮತ್ತು ಪ್ರಾದೇಶಿಕ ಕಣ್ಣುಗಳ ಮೂಲಕ ಇತಿಹಾಸವನ್ನು ನೋಡುವ ಮಹತ್ವದ ಕೃತಿಯಾಗಿದೆ. ಈ ಕೃತಿಯು ಕ್ಯಾಪ್ಟನ್ ಗ್ಲಾಸ್‌ಫರ್ಡ್‌ರ ವರದಿ ಮತ್ತು ಮಹಾರಾಜ ಪ್ರವೀರ್ ಚಂದ್ರ ಭಂಜದೇವ್‌ರ ಕಥನದ ಕುರಿತು ಚರ್ಚೆ ಉಂಟುಮಾಡಬಲ್ಲ ಕೃತಿಯಾಗಿದೆ. ಡಾ. ಉಮಾ ರಾಮ್ ಮತ್ತು ಕೆ.ಎಸ್. ರಾಮ್ ಈ ಈ ಕೃತಿಯ ಮೂಲಕ ಸಮಾಜಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ” ಎಂದು ಯುನೆಸ್ಕೋದ ಮಾಜಿ ರಾಯಭಾರಿ ಡಾ. ಚಿರಂಜೀವ್ ಸಿಂಗ್
ಬ್ಯಾಂಕಿಂಗ್’ನಲ್ಲಿ ಹೊಸ ದಿಗಂತಗಳನ್ನು ಅನ್ವೇಷಿಸಲು ಮತ್ತು ಮುಂದಿನ ಹಂತದ ಬೆಳವಣಿಗೆಗೆ ವಿಚಾರ, ಅಭಿಪ್ರಾಯ ಮತ್ತು ಸಲಹೆಗಳನ್ನು ಸಂಗ್ರಹಿಸಲು, ಎಂಸಿಸಿ ಬ್ಯಾಂಕ್ ಜುಲೈ 24, 2025 ರಂದು ಮಂಗಳೂರಿನ ಅತ್ತಾವರದಲ್ಲಿರುವ ಹೋಟೆಲ್ ಅವತಾರ್‌ನಲ್ಲಿ ‘ಐಡಿಯಾ ಸಮ್ಮಿತ್ 2025’ (Idea Summit 2025) ಅನ್ನು ಆಯೋಜಿಸಲಾಗಿತ್ತು.ಈ ಸಮ್ಮಿತ್’ನ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರು ವಹಿಸಿದ್ದರು. ಗಣ್ಯ
ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಗಣನೀಯ ಪ್ರಗತಿ ಸಾಧಿಸಿರುವ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್. ವಿಶ್ವದ ಮೊದಲ AI ಕಾರ್ಡ್ ಅನ್ನು ಅಭಿವೃದ್ಧಿಪಡಿಸುವ ಮೂಲಕ ಗಮನ ಸೆಳೆದಿದೆ. ಇದೀಗ, ಈ ಕಾರ್ಡ್ ಅನ್ನು ಒಳಗೊಂಡ AI ಸಾಕ್ಷರತೆಯನ್ನು ಬೆಳೆಸುವ ಮಹತ್ವಾಕಾಂಕ್ಷೆಯ ಯೋಜನೆಯೊಂದಿಗೆ ಸಂಸ್ಥೆಯು ಮುನ್ನಡೆಯುತ್ತಿದೆ. ಇದರ ಭಾಗವಾಗಿ, ಪ್ರತಿ ತಾಲೂಕಿನಲ್ಲಿ ಆಯ್ದ 40 ಫಲಾನುಭವಿಗಳಿಗೆ ತಲಾ ರೂ. 20,000 ಮೌಲ್ಯದ AI ಶಿಕ್ಷಣ ಕಿಟ್ಗಳನ್ನು ವಿತರಿಸುವ ವಿಶೇಷ
ಬೈಂದೂರು ಹಾಗೂ ಕುಂದಾಪುರ ತಾಲೂಕಿನಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಬೈಂದೂರು ತಾಲೂಕಿನಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ತುಂಬಿ ಹರಿಯುತ್ತಿದೆ. ಬೈಂದೂರಿನ ಸೌಪರ್ಣಿಕಾ, ಸುಮನಾವತಿ, ಸಂಕದ ಗುಂಡಿ, ಎಡ ಮಾವಿನ ಹೊಳೆ ತುಂಬಿ ಹರಿಯುತ್ತಿದ್ದು, ನದಿ ಪಾತ್ರ, ನಾಡ, ನಾವುಂದ, ಮರವಂತೆ, ಬಡಾಕೆರೆ ಚಿಕ್ಕಳ್ಳಿ ಪಡುಕೋಣೆ ಆನಗಳ್ಳಿ ಹಳಗೇರಿ ಜನರು ಎಚ್ಚರ ವಹಿಸಬೇಕು ಪಶ್ಚಿಮ ಘಟ್ಟದಲ್ಲಿ ಮಳೆ ಮುಂದುವರಿದರೆ ನೆರೆ ಕಟ್ಟಿಟ್ಟ ಬುತ್ತಿ ಪ್ರತಿ ವರ್ಷ




























