Home Posts tagged V4News (Page 844)

ಕಾಬೂಲಿನ ಮಿಲಿಟರಿ ಏರ್ ಬೇಸ್ ನಲ್ಲಿ ಉದ್ಯೋಗದಲ್ಲಿದ್ದ ಮಂಗಳೂರು ಮೂಲದ ನಾಲ್ಕು ಮಂದಿ ಸುರಕ್ಷಿತವಾಗಿ ಮನೆಗೆ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲಿನ ಮಿಲಿಟರಿ ಏರ್ ಬೇಸ್ ನಲ್ಲಿ ಉದ್ಯೋಗದಲ್ಲಿದ್ದ ಮಂಗಳೂರು ಮೂಲದ ನಾಲ್ಕು ಮಂದಿ ಸುರಕ್ಷಿತವಾಗಿ ಮನೆ ಸೇರಿದ್ದಾರೆ. ಕಾಬೂಲಿನ ನ್ಯಾಟೋ ಏರ್ ಬೇಸ್ ನಲ್ಲಿ ಕೆಲಸಕ್ಕಿದ್ದ ನಾಲ್ವರನ್ನು ಅಮೆರಿಕದ ವಾಯುಪಡೆ ಆಗಸ್ಟ್ 17 ರಂದು ಕತಾರ್ ಗೆ ಏರ್ ಲಿಫ್ಟ್ ಮಾಡಿತ್ತು. ಅಲ್ಲಿಂದ ಭಾರತದ ವಾಯುಪಡೆ ವಿಮಾನ ಭಾನುವಾರ ದೆಹಲಿಗೆ ಕರೆತಂದಿತ್ತು.

ಇ.ಎಂ.ಎಸ್. ಗ್ರಂಥಾಲಯ ಸಮಿತಿಯಿಂದ ಓಣಂ ಆಚರಣೆ

ಕುಂಬಳೆ : ಬಲಿ ಚರ್ಕವರ್ತಿಯನ್ನು ಬರಮಾಡಿಕೊಳ್ಳುವ ಓಣಂ ಹಬ್ಬವು ಸಮೃದ್ಧಿ ಫಲವತ್ತಿನ ಸಂಕೇತವಾಗಿ ಎಲ್ಲಾ ವರ್ಗ , ಸಮುದಾಯವನ್ನು ಬೆಸೆಯುವ ಹಬ್ಬವಾಗಿದೆ. ಗಡಿನಾಡಿನಲ್ಲೂ ಓಣಂ ಸಂಭ್ರಮ ಮನೆ ಮಾಡಿದೆ. ಕಾಸರಗೋಡು ಜಿಲ್ಲೆಯು ಸಪ್ತ ಭಾಷೆಗಳ ಸಂಗಮ ನಾಡು , ಸರ್ವ ಭಾಷೆ, ಸಂಸ್ಕೃತಿಯ ಸೌಹಾರ್ಧತೆಯ ಬೀಡು , ಇದು ಮಂಜೇಶ್ವರ ಗೋವಿಂದ ಪೈ ಅವರಂತ ಕನ್ನಡದ ಶ್ರೇಷ್ಠ ಕವಿವರ್ಯರು ನಡೆದಾಡಿದ ನಾಡು, ಇ.ಎಂ.ಎಸ್. ನಂಬೂದೂರಿಪಾಡ್ ಅವರಂತಹ ಅಪ್ರತಿಮ ಹೋರಾಟಗಾರರಿಂದ ಪ್ರೇರಣೆ ಪಡೆದ

24 ಸ್ಟಾರ್ ಸ್ಟಾರ್ಟ್ ಅಪ್ ಗಳಿಗೆ ಎಂ.ಎಸ್. ರಾಮಯ್ಯ ಶಿಕ್ಷಣ ಸಂಸ್ಥೆಯಿಂದ ತಲಾ 50 ಲಕ್ಷ ರೂಪಾಯಿ ನೆರವು   ಎಂ.ಆರ್. ಸೀತಾರಾಂ

ಬೆಂಗಳೂರು: ರಾಮಯ್ಯ ಎವುಲೂಟ್, ಗೋಕುಲ ಶಿಕ್ಷಣ ಸಂಸ್ಥೆ ಹಾಗೂ ರಾಮಯ್ಯ ಸಮೂಹ ಸಂಸ್ಥೆಗಳ ನೆರವಿನಿಂದ ನಾವೀನ್ಯತೆ, ಭವಿಷ್ಯದ ಉತ್ಪನ್ನಗಳ ಉತ್ಪಾದನೆ, ಮುಂದಿನ ತಲೆಮಾರು ಬಳಕೆಯ ತಂತ್ರಜ್ಞಾನ ಸೇರಿ ವಿವಿಧ ಕ್ಷೇತ್ರಗಳಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ 24 ನವೋದ್ಯಮಗಳ [ಸ್ಟಾರ್ ಸ್ಟಾರ್ಟ್ ಅಪ್ ಗಳು] ಅಭ್ಯುದಯಕ್ಕಾಗಿ ತಲಾ 50 ಲಕ್ಷ ರೂಪಾಯಿ ನೆರವು ನೀಡಿ ಗೌರವಿಸಲಾಯಿತು. ಮತ್ತೀಕೆರೆಯ ಎಂ.ಎಸ್.ಆರ್.ಟಿ ಕ್ಯಾಂಪಸ್ ನಲ್ಲಿರುವ ಆಡಿಟೋರಿಯಂನಲ್ಲಿ ನವೋದ್ಯಮಗಳಿಗೆ

ಇದು ಜನಾಶೀರ್ವಾದ ಅಲ್ಲ, ಜನರ ಕ್ಷಮೆ ಕೋರುವ ಯಾತ್ರೆ ಆಗಬೇಕು: ಸಲೀಂ ಅಹ್ಮದ್

‘ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ರಾಜ್ಯಕ್ಕೆ ನಿರಂತರ ಅನ್ಯಾಯ ಮಾಡುತ್ತಿದ್ದು, ಅವರು ಜನಾಶೀರ್ವಾದ ಯಾತ್ರೆ ಬದಲು ಜನರ ಕ್ಷಮೆ ಕೋರುವ ಯಾತ್ರೆ ನಡೆಸಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಕಿಡಿಕಾರಿದ್ದಾರೆ. ‘ಕೋವಿಡ್ 2ನೇ ಅಲೆಯಲ್ಲಿ ಲಕ್ಷಾಂತರ ಜನರ ಸಾವಿಗೆ ಕಾರಣರಾಗಿದ್ದಕ್ಕೆ, ಸ್ವರ್ಗ ತೋರಿಸುತ್ತೇವೆ ಎಂದು ಅಧಿಕಾರಕ್ಕೆ ಬಂದು ಜನರಿಗೆ ನರಕ ತೋರಿಸುತ್ತಿರುವುದಕ್ಕೆ, ಕೇಂದ್ರದ ಮಲತಾಯಿ ಧೋರಣೆ, ರಾಜ್ಯಕ್ಕೆ

ಕೋವಿಡ್ ಮಾರ್ಗಸೂಚಿ ಕೇಂದ್ರ ಸಚಿವರಿಗೆ ಅನ್ವಯವಾಗುವುದಿಲ್ಲವೇ?: ರಾಮಲಿಂಗಾ ರೆಡ್ಡಿ

ಬೆಂಗಳೂರು:‘ಕೇಂದ್ರ ಸಚಿವರು ಕಾನೂನಿಗಿಂತ ದೊಡ್ಡವರೆ? ಕೋವಿಡ್ ಮಾರ್ಗಸೂಚಿ ಇವರಿಗೆ ಅನ್ವಯವಾಗುವುದಿಲ್ಲವೇ? ಬಿಜೆಪಿಯವರಿಗೊಂದು ಕಾನೂನು, ಜನಸಾಮಾನ್ಯರು ಮತ್ತು ವಿರೋಧ ಪಕ್ಷದವರಿಗೊಂದು ಕಾನೂನು ಇದೆಯೇ?’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ ಅವರು ಪ್ರಶ್ನಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ರಾಮಲಿಂಗಾರೆಡ್ಡಿ ಅವರು ಸೋಮವಾರ ಪತ್ರಿಕಾಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ

ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನ್ಮ ದಿನದ ಕಾರ್ಯಕ್ರಮ

 ಅಖಿಲ ಭಾರತ ಬಿಲ್ಲವರ ಯೂನಿಯನ್, ಬಿಲ್ಲವ ಮಹಿಳಾ ಸಂಘ ಮತ್ತು ನಾರಾಯಣಗುರು ವಿದ್ಯಾ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನ್ಮ ದಿನದ ಕಾರ್ಯಕ್ರಮವನ್ನು ನಗರದ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ಆಚರಿಸಲಾಯ್ತು. ಈ ವೇಳೆ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷರಾದ ನವೀನ್ ಚಂದ್ರ ಡಿ.ಸುವರ್ಣ, ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಕುದ್ರೊಳಿ ನಾರಾಯಣ ಗುರು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ|ವಸಂತ್ ಕುಮಾರ್,

ವಿದ್ಯಾರ್ಥಿಗಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಕ್ರಿಯಾ ಯೋಜನೆ ರೂಪಿಸಬೇಕು: ವಿಶ್ವೇಶ್ವರ ಹೆಗಡೆ ಕಾಗೇರಿ

ಬೆಂಗಳೂರು: ವಿದ್ಯಾರ್ಥಿಗಳು ಮತ್ತು ಮಕ್ಕಳು ಕೋವಿಡ್ -19 ಸೋಂಕಿನಿಂದ ಬಾಧಿತರಾಗದಂತೆ ಖಾತ್ರಿಪಡಿಸಿಕೊಳ್ಳುವ ಸಲುವಾಗಿ ಅವರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕ್ರಿಯಾಯೋಜನೆ ರೂಪಿಸುವಂತೆ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜ್ಯ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ. ಮಾಧ್ಯಮ ಪ್ರಕಟಣೆಯಲ್ಲಿ ಅವರು, ಶಾಲೆ ಮತ್ತು ಕಾಲೇಜುಗಳನ್ನು ತೆರೆಯುವ ಸರ್ಕಾರದ ನಿರ್ಧಾರ ಸ್ವಾಗತಾರ್ಹವಾದುದಾಗಿದೆ. ಆದರೆ ಮಕ್ಕಳಲ್ಲಿ ಕೋವಿಡ್ -19

ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನುಷ್ಠಾನಕ್ಕೆ ಚಾಲನೆ

ಬೆಂಗಳೂರು:  ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನುಷ್ಠಾನಕ್ಕೆ ಕೇಂದ್ರ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಚಾಲನೆ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎನ್.ಇ.ಪಿ ಸಹಾಯವಾಣಿ, ಉನ್ನತ ಶಿಕ್ಷಣ ಅಂತರಾಷ್ಟೀಕರಣ , 2021- 22 ನೇ ಸಾಲಿಗೆ ಉನ್ನತ ಶಿಕ್ಷಣಕ್ಕೆ ಪ್ರವೇಶಾತಿ ಕಾರ್ಯಕ್ರಮಗಳನ್ನು ಉದ್ಘಾಟಿಸಿದರು.