ಟೀಮ್ ಬಿ-ಹ್ಯೂಮನ್, ಮಂಗಳೂರು ಹಾಗೂ ಮುಬಾರಕ್ ವೆಲ್ಫೇರ್ ಅಸೋಸಿಯೇಷನ್ (ರಿ) 75 ನೇ ಸ್ವಾತಂತ್ರ್ಯೋತ್ಸವವನ್ನು ರಕ್ತದಾನದ ಮೂಲಕ ವಿಶಿಷ್ಟವಾಗಿ ಆಚರಣೆ ಟೀಮ್ ಬಿ-ಹ್ಯೂಮನ್, ಮಂಗಳೂರು ಹಾಗೂ ಮುಬಾರಕ್ ವೆಲ್ಫೇರ್ ಅಸೋಸಿಯೇಷನ್ (ರಿ) ಸೋಮೇಶ್ವರ ಉಚ್ಚಿಲ ಇದರ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರದ ಮೂಲಕ
ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ 75ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ ಎಕ್ಕಾರು ಧ್ವಜಾರೋಹಣ ಗೈದರು. ಅವರು ಮಾತನಾಡಿ ಸಂವಿಧಾನದ ಆಶಯಗಳಾದ ಸಮಾನತೆ, ಸಹೋದರತೆ, ಸ್ವಾತಂತ್ರ್ಯಗಳನ್ನು ಅರ್ಥಮಾಡಿಕೊಂಡು ಅನುಸರಿಸಬೇಕು ಹಾಗೂ ನಾಗರಿಕರ ಕರ್ತವ್ಯಗಳನ್ನು ನಿಷ್ಠೆಯಿಂದ ಪಾಲಿಸಬೇಕು. ಮಾನವ ಸಂಪನ್ಮೂಲ ಅಭಿವೃದ್ಧಿಯ ಕಡೆಗೆ ಅಗತ್ಯವಾಗಿ
ದೇಶಕ್ಕಾಗಿ ಜೈಲಿಗೆ ಹೋದವರು ಮತ್ತು ಹುತಾತ್ಮರಾದವರ ಬಗ್ಗೆ ಹಗುರವಾಗಿ ಮಾತನಾಡುವ ಸಿ.ಟಿ ರವಿಯಂತಹವರೇ ನಿಜವಾದ ದೇಶದ್ರೋಹಿ ಎಂದು ಮಾಜಿ ಸಚಿವ ಬಿ.ರಮಾನಾಥ್ ರೈ ಕಿಡಿಕಾರಿದ್ದಾರೆ. ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಸಿ.ಟಿ.ರವಿ, ಈಶ್ವರಪ್ಪರಂತಹವರು ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದವರನ್ನು, ಕೊಡುಗೆಗಳನ್ನು ನೀಡಿದವರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ದೇಶದ ಪ್ರಪ್ರಥಮ
ಪುತ್ತೂರು: 75ನೇ ವರ್ಷ ಸ್ವಾತಂತ್ರ್ಯ ದಿನಾಚರಣೆಯಂದು ಪುತ್ತೂರು ತಾಲೂಕಿನ ಕಬಕ ಗ್ರಾ .ಪಂ ನ ಆವರಣದಿಂದ ಹೊರಟ ಸ್ವರಾಜ್ ರಥದಲ್ಲಿ ವೀರ್ ಸಾರ್ವಕರ್ ರವರ ಭಾವಚಿತ್ರ ಇದೆಯೆಂದು ಆಕ್ಷೇಪಿಸಿ ಎಸ್.ಡಿಪಿ.ಐ ಪಕ್ಷವೊಂದರ ಕೆಲ ಕಾರ್ಯಕರ್ತರು ತಡೆಯೊಡಿದ್ದ ಘಟನೆಯಿಂದ ಕೆರಳಿರುವ ಹಿಂದೂ ಪರ ಸಂಘಟನೆಗಳ ಹಾಗೂ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಕಬಕ ಪೇಟೆಯಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟಿಸಿದರು. ನಗರಸಭೆ ಅಧ್ಯಕ್ಷರಾದ ಜೀವಂಧರ್ ಜೈನ್, ನಗರ ಸಭೆ
ಉದ್ಯೋಗ ಸೃಷ್ಟಿಸಿ ನಿರುದ್ಯೋಗದಿಂದ ರಕ್ಷಿಸಿ, ಸ್ಥಳೀಯರಿಗೆ ಆದ್ಯತೆ ಒದಗಿಸಲು ಆಗ್ರಹಿಸಿ, ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಡಿವೈಎಫ್‍ಐ ನೇತೃತ್ವದಲ್ಲಿ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಸಿಪಿಐಎಂ ಮುಖಂಡ ಸುನೀಲ್ ಕುಮಾರ್ ಬಜಾಲ್ ಅವರು, ನಿರುದ್ಯೋಗಿಗಳ ಪ್ರಮಾಣ ದಿನದಿಂದ ದಿನಕ್ಕೆ ಬೃಹದಾಕಾರವಾಗಿ ಬೆಳೆಯುತ್ತಿದೆ. ನಿರುದ್ಯೋಗದ ಪ್ರಮಾಣ ಸ್ವತಂತ್ರ ಭಾರತ ಯಾವತ್ತೂ ಕಂಡಿರದ ಮಟ್ಟಕ್ಕೆ ಏರಿಕೆಯಾಗಿದೆ.ಎಲ್ಲೆಲ್ಲೊ
ತಾಲಿಬಾನ್ ಮತಾಂಧ ಸಂಘಟನೆಯಿಂದ ಪ್ರೇರಿತರಾಗಿ ಆಂತರಿಕವಾಗಿ ನಮ್ಮ ದೇಶದಲ್ಲಿಯೂ ಕಾನೂನು ಮುರಿಯುವ ದುಸ್ಸಾಹಕ್ಕೆ ಕೈ ಹಾಕಿದರೆ ನಿಮ್ಮ ಮತಾಂಧ ತೆಯನ್ನು ಮಟ್ಟ ಹಾಕಲು ಸರಕಾರ ಬದ್ದವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ. ಕಬಕದಲ್ಲಿ ಸ್ವಾತಂತ್ರ್ಯ ರಥವನ್ನು ತಡೆದು ವೀರ ಸಾವರ್ಕರ್ ಫೋಟೋ ತೆಗೆದು ಮತಾಂಧ ಟಿಪ್ಪು ಫೋಟೋ ಹಾಕಬೇಕೆಂಬ ಎಸ್ ಡಿ ಪಿ ಐ ಕಾರ್ಯಕರ್ತರ ಕಾನೂನು ಭಂಜಕ ಕೃತ್ಯವನ್ನು ಸಹಿಸುವುದಿಲ್ಲ.ದೇಶದಲ್ಲಿ ಕಾನೂನು,ಪಾಲಿಸಿ ಅದನ್ನು
ಪಹಣೆ ಪತ್ರದಲ್ಲಿ ಹತ್ತು ಮಂದಿ ಹಕ್ಕುದಾರರಿದ್ದರೂ, ಒರ್ವ ವ್ಯಕ್ತಿ ನೀಡಿದ ಅರ್ಜಿಗೆ ಗ್ರಾ.ಪಂ.ನ ಅಧ್ಯಕ್ಷೆ, ಉಪಾಧ್ಯಕ್ಷೆ ಸಹಿತ ಪಿಡಿಒ ಒಳ ಒಪ್ಪಂದ ನಡೆಸಿ ಅನುಮತಿ ನೀಡುವ ಮೂಲಕ ಅಕ್ರಮ ನಡೆಸಿದ್ದಾರೆ ಎಂಬುದಾಗಿ ಒರ್ವ ಹಕ್ಕುದಾರ ಜಾನ್ ರಿಚಾರ್ಡ್ ತಿಳಿಸಿದ್ದಾರೆ. ಕಾಪು ಪ್ರೆಸ್ ಕ್ಲಬ್ ನಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮುಖವಾಗಿ ಪಾರ್ಮ್ ನಂಬರ್ ೧೦ ಸಹಿತ ಪೂರಕ ದಾಖಲೆಗಳೇ ಇಲ್ಲದೆ ನೀಡಿದ ಅರ್ಜಿಗೆ ಕಟಪಾಡಿ ಗ್ರಾ.ಪಂ. ಪಿಡಿಒ ಮಮತ ವಿ.
ಮಂಗಳೂರು: ರಾಜ್ಯದ ಮುಖ್ಯಮಂತ್ರಿಗಳು ನೀಡಿದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಮೂಲಕ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹಾಗೂ ಅದರ ಪಾಸಿಟಿವಿಟಿಯನ್ನು ನಿಯಂತ್ರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಈಗಾಗಲೇ
ಮಂಗಳೂರಿನ ಆಪಲ್ ಮೊಬೈಲ್ ಶೋರೂಂ ಒಂದರಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣವನ್ನು ಬೇಧಿಸಿರುವ ಮಂಗಳೂರು ಪೊಲೀಸರು ಓರ್ವ ಆರೋಪಿ ಸಹಿತ ಕಳವಾದ 40 ಮೊಬೈಲ್‌ಗಳನ್ನು ಆರೋಪಿಯಿಂದ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರ ಮೂಲದ ಆರೋಪಿಯನ್ನು ಮುಂಬೈನಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದು, ಸುಮಾರು 41 ಲಕ್ಷ ರೂ. ವೌಲ್ಯದ ಕಳವಾದ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕಮಾರ್ ಹೇಳಿದ್ದಾರೆ. ಈ ಕುರಿತು
ಆರ್ಥಿಕವಾಗಿ ತೀರಾ ಹಿಂದುಳಿದಿರುವ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಂಗಳೂರಿನ ಬಜ್ಪೆ ಝಕರಿಯಾ ಫೌಂಡೇಶನ್ ಹಮ್ಮಿಕೊಂಡಿದ್ದ, ಲಾಕ್ ಡೌನ್ ಕಾರಣದಿಂದ ಮುಂದೂಡಲಾದ ‘ಸೌಹಾರ್ದ ಸಾಮೂಹಿಕ ವಿವಾಹ ಸಮಾರಂಭ’ವು ಅಕ್ಟೋಬರ್ 16ರಂದು ಮಂಗಳೂರು ತಾಲೂಕಿನ ಗಂಜಿಮಠದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಭಾಂಗಣ ‘ಝರಾ ಆಡಿಟೋರಿಯಂ’ನಲ್ಲಿ ನಡೆಯಲಿದೆ. ಜಾತಿ, ಮತ, ಧರ್ಮಗಳ ಬೇಧವಿಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು


















