ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದು 2 ವರ್ಷದ ಸಂದರ್ಭದಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಸಿಎಂ ಯಡಿಯೂರಪ್ಪ ರಾಜೀನಾಮೆ ಘೋಷಿಸಿದ್ದರು. ಅಲ್ಲದೇ ರಾಜಭವನಕ್ಕೆ ಕಾಲ್ನಡಿಗೆಯಲ್ಲೇ ತೆರಳಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಇದೀಗ ಬಿಎಸ್ ಯಡಿಯೂರಪ್ಪ ಅವರ ಸಿಎಂ ಸ್ಥಾನಕ್ಕೆ ನೀಡಿದಂತ ರಾಜೀನಾಮೆ
ಕಾರಿಗೆ ಕಂಟೇನರ್ ಡಿಕ್ಕಿಯಾಗಿ ಕಾರು ಜಖಂಗೊಂಡ ಘಟನೆ ಉಚ್ಚಿಲ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ರ ಪಣಿಯೂರು ಕ್ರಾಸ್ ಬಳಿ ಸಂಭವಿಸಿದೆ. ಉಡುಪಿ ಕಡೆಯಿಂದ ಬಂದ ಕಾರು ಉಚ್ಚಿಲ ಹೆದ್ದಾರಿ ಕ್ರಾಸ್ ಬಳಿ ಯುಟರ್ನ್ ಮಾಡುವ ವೇಳೆ ಹಿಂಬದಿಯಿಂದ ಬಂದ ಕಂಟೇನರ್ ಡಿಕ್ಕಿಯಾಗಿದೆ. ಘಟನೆಯಿಂದ ಕಾರಿನ ಹಿಂಭಾಗ ಜಖಂಗೊಂಡಿದೆ. ಈ ಸಂದರ್ಭ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಕಾವಲುಗಾರನ ತಲೆಗೆ ಹೊಡೆದು ಗೋಣಿಯೊಯೊಳಗೆ ಕಟ್ಟಿ ಹಾಕಿ ಮಂಜೇಶ್ವರದ ಹೃದಯ ಭಾಗವಾದ ಹೊಸಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ರಾಜಧಾನಿ ಜ್ಯುವೆಲ್ಲರಿಯ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು ಭಾರಿ ಮೌಲ್ಯದ ಬೆಳ್ಳಿ ಆಭರಣ ಹಾಗೂ ಲಕ್ಷಾಂತರ ರೂ. ನಗದನ್ನು ಕೊಂಡೊಯ್ದಿದ್ದಾರೆ. ಕಳೆದ ರಾತ್ರಿ ಎರಡು ಗಂಟೆಯ ಸುಮಾರಿಗೆ ಎರಡು ಕಾರಿನಲ್ಲಿ ಆಗಮಿಸಿದ ಎಂಟು ಮಂದಿಯ ತಂಡ ಈ ಕೃತ್ಯ ನಡೆಸಿದೆ. ಕಾವಲುಗಾರ ಕಡಂಬಾರ್ ನಿವಾಸಿ ಅಬ್ದುಲ್ಲ ದರೋಡೆಕೋರರ ಹಲ್ಲೆಯಿಂದ ಗಾಯಗೊಂಡು
ಕೊನೆಗೂ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.ರಾಜ್ಯ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿಂದು ಏರ್ಪಡಿಸಿದ್ದ ಸಮಾರಂಭದಲ್ಲಿ ವಿದಾಯ ಭಾಷಣ ಮಾಡಿದ ಅವರು, ತಮ್ಮ ರಾಜಕೀಯ ಏಳು ಬೀಳುಗಳನ್ನು ಹೇಳುವಾಗ ಭಾವುಕರಾದರು. ಇಲ್ಲಿಂದ ನೇರವಾಗಿ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದರು. 75 ವರ್ಷದ ಬಳಿಕ ಎರಡು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲು ಅವಕಾಶ ಮಾಡಿಕೊಟ್ಟ
ಮಂಗಳೂರು: ಮಹಿಳೆ ಮತ್ತು ಮಗುವಿದ್ದ ಕಾರಿನ ಟಯರ್ ಪಂಕ್ಚರ್ ಆಗಿದ್ದು, ಇದನ್ನು ಗಮನಿಸಿದ ನಾಗುರಿ ಸಂಚಾರಿ ಠಾಣಾ ಪೊಲೀಸರು ಬೇರೆ ಟಯರ್ ಅಳವಡಿಸಿ ಮಾನವೀಯತೆ ಮೆರೆದರು. ಕುಂದಾಪುರ ಮೂಲದ ಮಹಿಳೆ ನಾಗುರಿ ಕಡೆಯಿಂದ ಮಂಗಳೂರು ನಗರದ ಕಡೆಗೆ ಎಳೆಯ ಮಗುವಿನ ಜೊತೆಗೆ ಕಾರಿನಲ್ಲಿ ತೆರಳುವ ಸಂದರ್ಭ ಪಂಪ್ವೆಲ್ ಬಳಿ ಟಯರ್ ಪಂಕ್ಚರ್ ಆಗಿತ್ತು. ಇದೇ ಸಂದರ್ಭ ಹೈವೇ ಪ್ಯಾಟ್ರಲ್ ಸ್ಥಳದಲ್ಲಿದ್ದು, ಮಹಿಳೆಯ ಅಸಹಾಯಕತೆಯನ್ನು ಗಮನಿಸಿದ ಸಂಚಾರಿ ಪೊಲೀಸರು ತಕ್ಷಣ ಕಾರಿನತ್ತ ಧಾವಿಸಿ
ಆರು ಭಾಷೆಗಳಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟಿ ಇಂದು ನಿಧನರಾದರು . ‘ ಜೇನುಗೂಡು ‘ ಚಿತ್ರವು ಜಯಂತಿ ಅವರು ನಾಯಕಿ ನಟಿಯಾಗಿ ನಟಿಸಿದ ಮೊದಲ ಸಿನಿಮಾ. ನಾಲ್ಕು ಬಾರಿ ಅತ್ಯುತ್ತಮ ನಟಿ ರಾಜ್ಯ ಪ್ರಶಸ್ತಿ ಪಡೆದಿದ್ದ ಜಯಂತಿ ಅವರು 500 ಕ್ಕೂ ಹೆಚ್ಚು ಚಿತ್ರದಲ್ಲಿ ನಟಿಸಿದ್ದರು. 1945 ರ ಜನವರಿ 6 ರಂದು ಜನಿಸಿದ್ದ ಜಯಂತಿ ಅವರ ಮೂಲ ಹೆಸರು ಕಮಲ ಕುಮಾರಿ ಎಂಬುದಾಗಿತ್ತು . ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಅವರು ಇಂದು ಅವರ ಬೆಂಗಳೂರಿನ […]
ಕಾಂಗ್ರೆಸ್‌ನ ಹಿರಿಯ ಮುಖಂಡರಾದ ಆಸ್ಕರ್ ಫೆರ್ನಾಂಡಿಸ್ ಅವರು ಆಸ್ಪತ್ರೆಗೆ ದಾಖಲಾಗಿರುವ ಹಿನ್ನಲೆಯಲ್ಲಿ ಇಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮಂಗಳೂರಿನ ಯೆನೆಪೋಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಆಸ್ಕರ್ ಅವರ ಕುಟುಂಬಿಕರಿಗೆ ಧೈರ್ಯ ತುಂಬಿದ್ದಾರೆ. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ ಅವರು, ಕೊಂಕಣ್ ರೈಲ್ವೇ, ಹೆದ್ದಾರಿ ಅಭಿವೃದ್ಧಿ ಸೇರಿ ಹಲವು ಅಭಿವೃದ್ಧಿಗೆ ಆಸ್ಕರ್ ಕಾರಣಕರ್ತರು. ಒಂದು ಆದರ್ಶ
ದ.ಕ. ಜಿಲ್ಲೆಯಾದ್ಯಂತ ಹಾಗೂ ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಸೇರಿದಂತೆ ಹಲವಾರು ಅಪರಾಧ ಪ್ರಕರಣಗಳನ್ನು ಬೇಧಿಸುವಲ್ಲಿ ಪೊಲೀಸರಿಗೆ ಸಹಕಾರ ನೀಡಿರುವ ಪೊಲೀಸ್ ಶ್ವಾನ ’ಸುಧಾ’ ಕೊನೆಯುಸಿರೆಳೆದಿದೆ. ನಗರದ ಪೊಲೀಸ್ ಕಮಿಷನರೇಟ್ ವತಿಯಿಂದ ಪೊಲೀಸ್ ಮೈದಾನದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಸುಧಾಗೆ ಭಾವಪೂರ್ಣ ಅಂತಿಮ ನಮನವನ್ನು ಸಲ್ಲಿಸಲಾಯಿತು. ಬಿಳಿ ವಸ್ತ್ರದಲ್ಲಿ ಶ್ವಾನ ಸುಧಾಳ ಮೃತದೇಹವನ್ನು ಸುತ್ತಿ, ಹೂವಿನಿಂದ ಅಲಂಕರಿಸಿ ಪೊಲೀಸ್ ವಾದ್ಯ, ತೋಪು ಹಾರಿಸುವಿಕೆ
ಸುರತ್ಕಲ್‌ನ ಕುಳಾಯಿ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು, ಮಹಿಳೆಯ ಕರಿಮಣಿ ಸರ ಎಳೆದು ಪರಾರಿಯಾದ ಪ್ರಕರಣ ಬಗ್ಗೆ ಸಿಸಿಟಿ ಪೂಟೇಜ್ ಹಾಗೂ ಬೇರೆ ಆಯಾಮದಲ್ಲಿ ಮಾಹಿತಿ ಕಲೆ ಹಾಕಿದ ಸಂದರ್ಭದಲ್ಲಿ ಒರ್ವ ವ್ಯಕ್ತಿಯ ಸುಳಿವು ಸಿಕ್ಕಿತ್ತು. ಆ
ಕಾಂಗ್ರೆಸ್ ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ಆಸ್ಕರ್ ಅವರ ಆರೋಗ್ಯ ವಿಚಾರಿಸಿದ ಹೆಗ್ಗಡೆಯವರು ಮಂಜುನಾಥ ಸ್ವಾಮಿಯ ಪ್ರಸಾದ ಹಾಕಿದರು. ಆಸ್ಕರ್ ರನ್ನ ಕಂಡ ಬಳಿಕ ಕುಟುಂಬಿಕರ ಜೊತೆ ಮಾತನಾಡಿ ಧೈರ್ಯ ತುಂಬಿದರು. ಅಲ್ಲದೆ ಕೆಲ ಕಾಲ ಆಸ್ಪತ್ರೆಯ ವೈದ್ಯರ ಜೊತೆ ಮಾತುಕತೆ

















