ಭಾರತಕ್ಕೆ ಟೋಕಿಯೋ ಒಲಂಪಿಕ್ಸ್ ನಲ್ಲಿ ಮತ್ತೊಂದು ಪದಕವನ್ನು ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಗೆಲ್ಲುವ ಮೂಲಕ ಹೊತ್ತು ತಂದಿದ್ದಾರೆ. ತೀವ್ರ ಹಣಾಣಿಯಲ್ಲಿ ಟೋಕಿಯೋ ಒಲಂಪಿಕ್ಸ್ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಪಿವಿ ಸಿಂಧು ಸತತ ಎರಡನೇ ಬಾರಿಗೆ ಕಂಚಿನ ಪದಕವನ್ನು ಗೆದ್ದ ಸಾಧನೆ ಮಾಡಿದ್ದಾರೆ. ಭಾನುವಾರ ಕಂಚಿನ ಪದಕ ಸಲುವಾಗಿ ನಡೆದ ಪಂದ್ಯದಲ್ಲಿ ತಮ್ಮ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಇಂದು ಬೆಂಗಳೂರಿನ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿ.ಸೋಮಣ್ಣ, ಹೆಚ್.ಡಿ.ರೇವಣ್ಣನವರು ಜೊತೆಗಿದ್ದರು.
ಪುತ್ತೂರು : ಅಭಿವೃದ್ಧಿ ಹೊಂದುತ್ತಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಕೆದಿಲ ಗ್ರಾಮದಲ್ಲಿ ಹಲವು ರಸ್ತೆಗಳು ನಾದುರಸ್ತಿಯಲ್ಲಿದ್ದು, ಕೆದಿಲ ಗ್ರಾಪಂನವರು ಗ್ರಾಮದ ಹಲವು ರಸ್ತೆಗಳ ದುರಸ್ತಿಗೆ ಅನುದಾನ ಒದಗಿಸುವಂತೆ ಬೇಡಿಕೆಯಿಟ್ಟಿದ್ದಾರೆ. ಇದು ತಾಲೂಕಿನ ಇಡೀ ಗ್ರಾಮಸ್ಥರ ಬೇಡಿಕೆಯೂ ಆಗಿದೆ. ಎಲ್ಲಾ ಸಮುದಾಯದವರು ವಾಸಿಸುವ ಈ ಗ್ರಾಮದಲ್ಲಿ ಕೃಷಿಕರು ಅಧಿಕ ಸಂಖ್ಯೆಯಲ್ಲಿದ್ದಾರೆ. ಹಲವು ಶಾಲೆಗಳು ಕಾರ್ಯಾಚರಿಸುತ್ತಿವೆ. ಅಡಕೆ ಗಾರ್ಬಲ್‌ಗಳು ಇನ್ನಿತರ
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ವೀರಯೋಧ (ನಿವೃತ್ತ) ಲಾರೆನ್ಸ್ ಡಿಸೋಜ ಪಣಪಿಲ ಇವರು ನಿಧನರಾಗಿದ್ದು ನಿವೃತ್ತ ಸೈನಿಕರ ಸಂಘ ಮೂಡುಬಿದಿರೆ ಇವರಿಂದ ಅಂತಿಮ ಗೌರವ ಸಲ್ಲಿಸಲಾಯಿತು. ದೇಶದ ತ್ರಿವರ್ಣ ಧ್ವಜವನ್ನು ಮೃತದೇಹದ ಮೇಲೆ ಹೊದಿಸಿ ಸರ್ಕಾರಿ ಸಮಾನ ಗೌರವ ಅರ್ಪಿಸಲಾಯಿತು. ಮೃತ ಯೋಧ ಲಾರೆನ್ಸ್ ಡಿಸೋಜರವರು ಭಾರತೀಯ ಭೂಸೇನೆಯಲ್ಲಿ ಸುಮಾರು ೨೭ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಜಮ್ಮು ಕಾಶ್ಮೀರ, ಅಲಹಾಬಾದ್ ಸೇರಿದಂತೆ ವಿವಿದೆಡೆ ಸೇವೆ ಸಲ್ಲಿಸಿದ್ದರು. ೯೮
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ರವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಹಾಗೂ ಬ್ಲಾಕ್ ಅಧ್ಯಕ್ಷರ ಆದೇಶ ಪತ್ರ ವಿತರಣಾ ಸಮಾರಂಭವೂ ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕೆಪಿಸಿಸಿ ಹಿಂದುಳಿದ ವರ್ಗ ಗಳ ವಿಭಾಗ
ಮಂಗಳೂರು: ಮಂಗಳಮುಖಿಯರಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ನವಸಹಜ ಸಂಘಟನೆಯ ಅಧ್ಯಕ್ಷ ನಿಖಿಲ್ ಎಂಬಾತನನ್ನು ಪಣಂಬೂರು ಪೊಲೀಸರು ಉಡುಪಿಯಲ್ಲಿ ಬಂಧಿಸಿದ್ದಾರೆ. ಸಂಘಟನೆಯ ಇತರ ಆರೋಪಿಗಳು ತಪ್ಪಿಸಿಕೊಂಡಿದ್ದು ಪೊಲೀಸರು ಅವರ ಹುಡುಕಾಟ ನಡೆಸುತ್ತಿದ್ದಾರೆ. ಜುಲೈ 26ರಂದು ರಾತ್ರಿ ನಿಖಿಲ್ ತನ್ನ ಇತರ ಸಂಗಡಿಗರಾದ ಅರುಂಧತಿ, ರಾಶಿ, ರೇಖಾ, ಪ್ರೀಯಾ ಮತ್ತಿತರು ಸೇರಿ ಶಾಂತಾ ಪೂರ್ಣಿಮಾ, ನೀಲಾ, ಹುಲಿಗೆಮ್ಮ ಮತ್ತು ಪಾರ್ವತಿ ಎಂಬವರ ಮೇಲೆ ಬೈಕಂಪಾಡಿ ರೈಲ್ವೆ ಗೇಟ್ ಬಳಿ
ಕುಂದಾಪುರ: ಕೋಟೇಶ್ವರದ ಕಾಳಾವರ ಸಮೀಪದಲ್ಲಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಯುವಕನೋರ್ವನ ಕುತ್ತಿಗೆ ಕೊಯ್ದು ಭೀಕರವಾಗಿ ಹತ್ಯೆಗೈದಿದ್ದು, ಹತ್ಯೆಗೆ ಹಣಕಾಸಿನ ವ್ಯವಹಾರ ಹಾಗೂ ಹೊಸ ಕಾರು ಖರೀದಿ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ತಾಲೂಕಿನ ಯಡಾಡಿ ಮತ್ಯಾಡಿ ಕೂಡಾಲು ನಿವಾಸಿ ಅಜೇಂದ್ರ ಶೆಟ್ಟಿ (33) ಕೊಲೆಯಾದ ಯುವಕ. ಮೇಲ್ನೋಟಕ್ಕೆ ಹಣಕಾಸಿನ ವಿಚಾರದಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದ್ದು, ಫೈನಾನ್ಸ್ ಪಾಲುದಾರ ಅನೂಪ್ ಮೇಲೆ ಅನುಮಾನ
ಮಂಗಳೂರು: ರಾಜ್ಯ ಸರ್ಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಪಟ್ಟಂತೆ ಸ್ಪಷ್ಟಯೋಜನೆ ರೂಪಿಸಬೇಕೆಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ವಿದ್ಯಾರ್ಥಿಗಳು, ಹೆತ್ತವರು ಮಾನಸಿಕ ಒತ್ತಡದಲ್ಲಿಯೇ ಜೀವನ ಸಾಗಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ನೇರ ಕಾರಣ ಬಿಜೆಪಿ ಸರ್ಕಾರ ಎಂದು ಅವರು ದೂರಿದರು. ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತಿಲ್ಲ ಇನ್ನು
ರಾಜ್ಯದಲ್ಲಿ ಸರಕಾರ ಇದೆಯೋ ಇಲ್ಲವೋ ಎಂದು ಜನ ಕೇಳುತ್ತಿದ್ದಾರೆ. ರಾಜ್ಯದಲ್ಲಿ ಆಡಳಿತ ಅಷ್ಟು ನಿಷ್ಕ್ರೀಯವಾಗಿದೆ ಎಂದು ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವ ಯು.ಟಿ. ಖಾದರ್ ಸುದ್ದಿಗೋಷ್ಠಿಯಲ್ಲಿಂದು ಟೀಕಿಸಿದ್ದಾರೆ. ರಾಜ್ಯದಲ್ಲಿ ಆಡಳಿತ ನಡೆಸಿದ ಯಡಿಯೂರಪ್ಪ ನೇತೃತ್ವದ ಸರಕಾರ ಎಲ್ಲಾ ಕ್ಷೇತ್ರದಲ್ಲೂ ವಿಫಲವಾಗಿದೆ. ಅವರ ಪಕ್ಷದವರೆ ಬಿಜೆಪಿಯ ಭ್ರಷ್ಟಾಚಾರದ ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಈ
ನವದೆಹಲಿ: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.ಕಳೆದ ವರ್ಷ ಕೇಂದ್ರ ಸರ್ಕಾರವು 12 ಸಾವಿರ ಕೋಟಿ ರೂ. ಜಿ.ಎಸ್.ಟಿ ಪರಿಹಾರ ನೀಡಿದ್ದು, ಇನ್ನು 11 ಸಾವಿರ ಕೋಟಿ ರೂ. ಗಳಷ್ಟು ಪರಿಹಾರ ಬಿಡುಗಡೆಯಾಗಬೇಕಿದೆ. ಈ ಪರಿಹಾರದ ಬಿಡುಗಡೆ ಕುರಿತು ಚರ್ಚಿಸಿದರು. ಈ ವರ್ಷ ಸುಮಾರು 18 ಸಾವಿರ ಕೋಟಿ ಪರಿಹಾರವನ್ನು ಸಾಲ ರೂಪದಲ್ಲಿ ಬಿಡುಗಡೆ


















