ಪುತ್ತೂರು: 34 ನೆಕ್ಕಿಲಾಡಿ ಗ್ರಾಪಂ ವ್ಯಾಪ್ತಿಯ ಮೈಂದನಡ್ಕದಲ್ಲಿ ಸಾರ್ವಜನಿಕ ಆಟದ ಮೈದಾನದ ಪ್ರವೇಶ ದಾರಿಯನ್ನು ಮುಚ್ಚಿ ಧರ್ಮಾಧಾರಿತ ರಾಜಕಾರಣದ ಮೂಲಕ ಸಮಾಜದ ಸಾಮರಸ್ಯವನ್ನು ಒಡೆಯುವ ಹುನ್ನಾರ ಗ್ರಾಪಂ ನಡೆಸಿದ್ದು, ಇದೊಂದು ಸಂಘರ್ಷದ ವಾತಾವರಣ ಉಂಟುಮಾಡುವ ಕಾರ್ಯವಾಗಿದೆ ಎಂದು ಮೈಂದನಡ್ಕ ಶಾಂತಿ-ಸೌಹಾರ್ದತೆ ಉಳಿಸಿ ಹೋರಾಟ ಸಮಿತಿ ಆರೋಪಿಸಿದೆ.
ಮೂಡುಬಿದಿರೆ : ಕಳೆದ ಮೂರು ದಿನಗಳಿಂದ ಬೆಳಿಗ್ಗೆ 6-10 ಗಂಟೆಯ ನಂತರ ಸುಮ್ಮನೆ ಕಾಲ ಕಳೆಯಲು ಮೂಡುಬಿದಿರೆ ಪೇಟೆಯಲ್ಲಿ ಅಡ್ಡಾದಿಡ್ಡಿ ಓಡಾಟ ಮಾಡಿ ಲಾಕ್ ಡೌನ್ ನಿಯಮವನ್ನು ಉಲ್ಲಂಘನೆ ಮಾಡುತ್ತಿದ್ದ 31 ವಾಹನಗಳನ್ನು ಮೂಡುಬಿದಿರೆ ಪೊಲೀಸರು ಜಫ್ತಿ ಮಾಡಿದ್ದು ಅಲ್ಲದೆ ಮಾಸ್ಕ್ ಧರಿಸದಿದ್ದ 70 ಜನರ ವಿರುದ್ಧ ಕೇಸು ದಾಖಲಿಸುವ ಮೂಲಕ ಕಾರ್ಯಚರಣೆಯನ್ನು ಬಿಗಿಗೊಳಿಸಿದ್ದಾರೆ. ಅಗತ್ಯ ವಸ್ತುಗಳ ಖರೀದಿಯ ಸಂದರ್ಭ ಬೆಳಿಗ್ಗೆ ಮೂಡುಬಿದಿರೆಯ ಪೇಟೆಯಲ್ಲಿ ಮತ್ತು
ಕುಂದಾಪುರ: ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ರಕ್ಷಣೆಗೆ ನಮ್ಮ ಶಾಸಕರಾಗಲಿ, ಸಂಸದರಾಗಲಿ ಮಂತ್ರಿಗಳಾಗಲಿ ಯಾರೂ ಮಧ್ಯಪ್ರವೇಶ ಮಾಡಿಲ್ಲ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು. ಉದಯ್ ಗಾಣಿಗ ಕೊಲೆ ಪ್ರಕರಣದ ಆರೋಪಿಗಳಿಗೆ ಬಿಜೆಪಿ ನಾಯಕರು ರಕ್ಷಣೆ ನೀಡುತ್ತಿದ್ದಾರೆ ಎಂಬ ಆರೋಪಗಳಿಗೆ ಅವರು ಕುಂದಾಪುರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.ಕಾನೂನು ಎಲ್ಲರಿಗೂ ಒಂದೇ.
ಕುಂದಾಪುರ: ಅನ್ಯಾಯಗಳ ವಿರುದ್ದ ಧ್ವನಿ ಎತ್ತುತ್ತಿದ್ದ ಉದಯ್ ಗಾಣಿಗ ಅವರನ್ನು ಕಳೆದ ಕೆಲ ದಿನಗಳಿಂದ ಹೊಂಚು ನಡೆಸಿ ಭೀಕರವಾಗಿ ಕೊಲೆಗೈಯ್ಯಲಾಗಿದೆ. ಉದಯ್ ಕೊಲೆಯಲ್ಲಿ ಭಾಗಿಯಾದ ಎಲ್ಲರಿಗೂ ಶಿಕ್ಷೆಯಾಗಬೇಕು. ಅವರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಮಾಜಿ ಶಾಸಕ ಕೆ ಗೋಪಾಲ ಪೂಜಾರಿ ಹೇಳಿದರು. ಅವರು ಹೆಮ್ಮಾಡಿ ಸಮೀಪದ ಕಟ್‌ಬೇಲ್ತೂರು ನಿವಾಸದಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೊಳವೆ ಬಾವಿಗೆ ಎನ್‌ಓಸಿ ಕೊಡಲು ನಿರಾಕರಿಸಲಾಗಿದೆ.
ಪುತ್ತೂರು: ನಗರ ಕಾಂಗ್ರೆಸ್ ವತಿಯಿಂದ ಪುತ್ತೂರು ತಾಲೂಕು ಪತ್ರಕರ್ತರ ಸಂಘಕ್ಕೆ ಎನ್95 ಮಾದರಿಯ ಮಾಸ್ಕನ್ನು ಪತ್ರಿಕಾಭವನದಲ್ಲಿ ವಿತರಿಸಲಾಯಿತು. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾಸ್ಕ್‍ವಿತರಿಸಿ ಮಾತನಾಡಿ, ಕೊರೋನಾ ಸಂಕಷ್ಟ ಕಾಲದಲ್ಲಿ ಕೊರೋನಾ ವಾರಿಯರ್ಸ್ ಆಗಿ ಸಮಾಜದ ಜನರ ನಡುವೆ ತೊಡಗಿಸಿಕೊಂಡಿರುವ ಪತ್ರಕರ್ತರಿಗೆ ಸರಕಾರ ಕೊಡುಗೆಗಳನ್ನು ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರಕಾರ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಒತ್ತಾಯಿಸಿದರು. ಈ
ಕೊರೊನಾ ಕಡಿಮೆಯಾಗುತ್ತಿದೆ ಎಂದು ಹೇಳುತ್ತಿರುವ ಸರ್ಕಾರ ಯಾಕೆ ಉಚಿತವಾಗಿ ಲಸಿಕೆ ನೀಡಲು ಮೀನಾಮೇಷ ಎಣಿಸುತ್ತಿದೆ. ಲಸಿಕೆ ಪಡೆದವರು ಯಾರೂ ಸತ್ತಿಲ್ಲ. ಲಸಿಕೆ ಸಿಗದೇ ಆದಂತಹಾ ಸಾವು ನೋವಿಗೆ ಬಿಜೆಪಿ ಸರ್ಕಾರ ನೇರ ಹೊಣೆ ಎಂದು ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ಆರೋಪಿಸಿದ್ದಾರೆ. ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಲಸಿಕೆಯನ್ನು ಪಡೆಯದ ಕಾರಣ ನಮ್ಮವರು ಸತ್ತಿದ್ದಾರೆ ಎಂದು ಹೇಳುವ ಮಂದಿ
ಕೊರೊನಾದಿಂದ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮಧ್ಯಮ ವರ್ಗ, ಹಿಂದುಳಿದ ವರ್ಗದವರು ಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಘೋಷಿಸಿರುವ ಅನುದಾನ ಯಾವುದಕ್ಕೂ ಸಾಕಾಗುವುದಿಲ್ಲ. ಕನಿಷ್ಠ ಹತ್ತು ಸಾವಿರ ಆದರೂ ಅನುದಾನವನ್ನು ಕಾರ್ಮಿಕರಿಗೆ, ಬಡವರಿಗೆ ನೀಡಬೇಕು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ವಿಶ್ವಾಸ್ ದಾಸ್ ಹೇಳಿದರು. ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.
ಕುಂದಾಪುರ: ತಾಲೂಕಿನಲ್ಲಿರುವ ವ್ಯಾಕ್ಸಿನ್ ಕೇಂದ್ರಗಳಲ್ಲಿ ಕೆಲ ಗೊಂದಲಗಳಾಗುತ್ತಿರುವ ಬಗ್ಗೆ ದೂರುಗಳು ಬಂದಿದ್ದು ಯಾರಿಂದಲೂ ನಿಯಮ ಉಲ್ಲಂಘನೆಯಾಗದಂತೆ ಕುಂದಾಪುರ, ಕಾರ್ಕಳ ಹಾಗೂ ಮಲ್ಪೆಯ ವ್ಯಾಕ್ಸಿನ್ ಕೇಂದ್ರಗಳಿಗೆ ನೋಡಲ್ ಅಧಿಕಾರಿ ನೇಮಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಕುಂದಾಪುರದ ಬೋರ್ಡ್ ಹೈಸ್ಕೂಲಿನಲ್ಲಿರುವ ವ್ಯಾಕ್ಸಿನ್ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಜಿಲ್ಲಾಧಿಕಾರಿ ಜಿ. ಜಗದೀಶ್ ಮಾಧ್ಯಮಗಳ ಜೊತೆ
ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತಿನ ನೇತೃತ್ವದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಸರಕಾರಿ ಜಿಡಬ್ಲ್ಯುಎಲ್‍ಪಿ ಶಾಲೆ ಮಂಜೇಶ್ವರದಲ್ಲಿ ನಡೆಯಿತು. ಕೋವಿಡ್ ಮಾನದಂಡಗಳನ್ನು ಪಾಲಿಸಿ ಕೊಂಡು ಮಂಜೇಶ್ವರ ಗ್ರಾಮ ಪಂಚಾಯತು ಉಪಾಧ್ಯಕ್ಷ ಮೊಹಮ್ಮದ್ ಸಿದ್ದೀಖ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಶಾಲಾ ಪರಿಸರದಲ್ಲಿ ಗಿಡ ನೀಡುವುದರೊಂದಿಗೆ ಮಂಜೇಶ್ವರ ಗ್ರಾ. ಪಂ. ಅಧ್ಯಕ್ಷೆ ಜೀನ್ ಲವೀನಾ ಮೊಂತೆರೋ ಉದ್ಘಾಟಿಸಿದರು. ಈ ಸಂದರ್ಭ
ಲಾಕ್ ಡೌನ್‍ನಿಂದಾಗಿ ದುಡಿಮೆ ಇಲ್ಲದೇ ಹಲವು ಕುಟುಂಬಗಳು ಸಂಕಷ್ಟದಲ್ಲಿವೆ. ಹೀಗಾಗಿ ಸಂಕಷ್ಟದ ಕುಟುಂಬಗಳ ಹಸಿವು ನೀಗಿಸುವ ಕೆಲಸವನ್ನು ಸದ್ದಿಲದೇ ಮಾಡುತ್ತಿದೆ. ಉಡುಪಿಯ ಸ್ಪೀಡ್ ಡೆವಿಲ್ಸ್ ಎನ್ನುವ ಹೆಸರಿನ ಯುವಕರು ಸಂಕಷ್ಟದಲ್ಲಿ ಕುಟುಂಬಗಳ ಮನೆ ಮನೆಗೆ ತೆರಳಿ ಹಸಿವು ನೀಗಿಸುತ್ತಿದೆ. ಇಡೀ ದೇಶವೇ ಕೊವಿಡ್ ಮಹಾಮಾರಿ ಯಿಂದ ಹಾಕಲಾಗಿರುವ ಲಾಕ್ ಡೌನ್ ಗೆ ತತ್ತರಿಸಿ ಹೋಗಿದೆ.ದುಡಿಮೆಯಿಲ್ಲದೇ ಜನ ಹಸಿವಿನಿಂದ ಸಂಕಷ್ಟದಲ್ಲಿದ್ದಾರೆ.ಒಂದೊತ್ತು ಊಟಕ್ಕೂ


















