Home Posts tagged #v4newskarnataka

ಕಿಟಕಿ ಪೊರಂನಲ್ಲಿ ಸಿಲುಕಿಕೊಂಡ ವಿಶೇಷಚೇತನ ಬಾಲಕನ ರಕ್ಷಣೆ

ಉಡುಪಿ: ಉಡುಪಿ ನಗರದ ಬ್ರಹ್ಮಗಿರಿಯ ಅಪಾರ್ಟ್ಮೆಂಟ್ ನ ಕಿಟಕಿ ಪೊರಂನಲ್ಲಿ ಎಂಟು ವರ್ಷದ ವಿಶೇಷಚೇತನ ಬಾಲಕ ಸಿಲುಕಿಕೊಂಡಿರುವ ಘಟನೆ ನಡೆದಿದೆ. 11ನೇ ಮಹಡಿಯ ಬಾಲ್ಕನಿ ಮೂಲಕ ಹೊರ ಹೋಗಿ 10ನೇ ಮಹಡಿಯ ಕಿಟಕಿ ಪೋರಂ‌ನಲ್ಲಿ ಸಿಲುಕಿಕೊಂಡಿದ್ದ ಆರುಷ್ ಎಂಬ ಬಾಲಕನನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಅಗ್ನಿಶಾಮಕ ದಳದ ಯಶಸ್ವಿ ಕಾರ್ಯಚರಣೆಯಿಂದ ಆರುಷ್

ಜೈನ ಮುನಿಗಳ ಹತ್ಯೆಗೆ ಪೇಜಾವರ ಶ್ರೀಗಳು ಖಂಡನೆ

ಉಡುಪಿ : ಜೈನ ಮುನಿಗಳ ಹತ್ಯೆಯನ್ನು ಖಂಡಿಸಿ ಇಂದು ಉಡುಪಿಯಲ್ಲಿ ಮಾತನಾಡಿದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು, ವಿಚಾರ ತಿಳಿದು ನನಗೆ ಅತೀವ ದುಃಖವಾಗಿದೆ. ಇದು ಜನತೆಯಲ್ಲಿ ಗಾಬರಿ ಹುಟ್ಟಿಸುವ ಘಟನೆ. ಓರ್ವ ಸಾಧುವನ್ನು ಸ್ವತಂತ್ರ ಭಾರತದಲ್ಲಿ ಈ ರೀತಿ ಹತ್ಯೆ ಮಾಡಿರುವುದು ದುರಂತ. ಹೀಗಾದರೆ ಸಾಮಾನ್ಯ ಜನರ ಪಾಡೇನು? ಇಂತಹ ಕೃತ್ಯ ಎಂದೂ ಎಲ್ಲೆಲ್ಲೂ ನಡೆಯಬಾರದು. ಈ ಘಟನೆಯನ್ನು ತೀಕ್ಷ್ಣ ಮಾತುಗಳಿಂದ ಖಂಡಿಸುತ್ತೇವೆ. ಸರ್ಕಾರ ತಕ್ಷಣ ಕ್ರಮ ಕೈಗೊಂಡು

ಎಬಿವಿಪಿ 75ನೇ ರಾಷ್ಟ್ರೀಯ ವಿದ್ಯಾರ್ಥಿ ದಿವಸ್

ಉಡುಪಿ : 1949 ಜುಲೈ 9 ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಷ್ಟ್ರದಪುನರ್ ರ್ನಿರ್ಮಾಣದ ಧ್ಯೇಯದೊಂದಿಗೆ ಅಧಿಕೃತವಾಗಿ ನೊಂದಾಯಿಸಲ್ಪಟ್ಟು ಪ್ರಾರಂಭವಾಯಿತು. ಅಂದಿನಿಂದ ಇಂದಿನವರೆಗೂ ಪ್ರತೀ ವರ್ಷ ಎಬಿವಿಪಿ ಈ ದಿನವನ್ನು ರಾಷ್ಟ್ರೀಯ ವಿದ್ಯಾರ್ಥಿ ದಿವಸನ್ನಾಗಿ ಆಚರಿಸಿಕೊಂಡು ಬಂದಿದೆ. ಈ ಬಾರಿ ಎಬಿವಿಪಿ 75ನೇ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಅನ್ನು ರಾಷ್ಟ್ರಾದ್ಯಂತ ಪ್ರತೀ ಶಾಖೆಗಳಲ್ಲಿ ಧ್ವಜಾರೋಹಣ ಮಾಡುವುದರೊಂದಿಗೆ ಕಾರ್ಯಕ್ರಮದ ಸಂಭ್ರಮಾಚರಣೆ

ಉಡುಪಿ : ಎಡೆಬಿಡದ ಮಳೆಗೆ ಮತ್ತೊಂದು ಸಾವು

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮಹಾಮಳೆಗೆ ಮತ್ತೊಂದು ಸಾವು ಸಂಭವಿಸಿದೆ. ತಡರಾತ್ರಿ ಉಡುಪಿ ಜಿಲ್ಲೆಯ ಬೆಳ್ಮಣ್ ಪೇಟೆ ಬಳಿಯಲ್ಲಿ, ಬೈಕ್ ಸವಾರನ‌ ಮೇಲೆ ಭಾರೀ ಗಾತ್ರದ ಮರ ಉರುಳಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಪಿಲಾರುಕಾನದ ಪ್ರವೀಣ್ ಆಚಾರ್ಯ (30), ಕಾರ್ಕಳದಿಂದ ತನ್ನ ಮನೆಯತ್ತ ತೆರಳುತ್ತಿದ್ದಾಗ ಏಕಾಏಕಿ ಉರುಳಿಬಿದ್ದ ಬೃಹತ್‌ ಮರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ

ಜುಲೈ 7ರಂದು ಉಡುಪಿ ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು ಕೆಲವೆಡೆ ಹಾನಿ ಸಂಭವಿಸಿದೆ. ಜುಲೈ 7 ರಂದು ಮಳೆ ಮುಂದುವರೆಯುವ ಮುನ್ಸೂಚನೆಯಿದ್ದು, ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಆದ್ದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ಕೂಡ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ. ಉಳಿದಂತೆ ಎಲ್ಲಾ ಪದವಿ,

ರಕ್ಷಣೆಗೆ ಎಲ್ಲಾ ತಂಡಗಳು ಸನ್ನದ್ಧವಾಗಿವೆ : ಉಡುಪಿ ಡಿಸಿ ಎಂ. ಕೂರ್ಮ ರಾವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು ಅರೆಂಜ್ ಅಲೆರ್ಟ್ ಘೋಷಿಸಲಾಗಿದೆ. ತಗ್ಗು ಪ್ರದೇಶಗಳಲ್ಲಿ ಸ್ಥಳಾಂತರ ನಡೆಸಲು ಅಗ್ನಿಶಾಮಕ ದಳ ಸಿದ್ದವಾಗಿದೆ. ಉಡುಪಿಯ 9 ಪ್ರದೇಶಗಳಿಗೆ ಈಗಾಗಲೇ ಬೋಟ್ ವ್ಯವಸ್ಥೆ ಮಾಡಲಾಗಿದೆ. ಉಡುಪಿ ನಗರದ ತಗ್ಗು ಪ್ರದೇಶಗಳಲ್ಲಿ ಕೂಡಾ ನೀರು ಮನೆಗೆ ನುಗ್ಗಿದೆ. ಆದ್ದರಿಂದ ಜನರನ್ನು ಎತ್ತರದ ಪ್ರದೇಶಗಳಿಗೆ ಸ್ಥಳಾಂತರ ಮಾಡುತ್ತಿದ್ದೇವೆ. ರಕ್ಷಣೆಗೆ ಎಲ್ಲಾ ತಂಡಗಳು ಸನ್ನದ್ಧವಾಗಿವೆ. ಉಸ್ತುವಾರಿ ಸಚಿವರು ಕೂಡಾ ನಿರಂತರವಾಗಿ ಸಂಪರ್ಕದಲ್ಲಿದ್ದು

ಉಡುಪಿಯಲ್ಲಿ ಬಿಡುವಿಲ್ಲದ ಮುಂಗಾರಿನ ಜೋರು

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಕಳೆದ 24 ಗಂಟೆಯಲ್ಲಿ 121 ಮಿಲಿಮೀಟರ್ ಮಳೆ ದಾಖಲಾಗಿದೆ. ಉಡುಪಿ ಜಿಲ್ಲೆಯ ಸರಾಸರಿ ಮಳೆಯ ವಿವರದ ಪ್ರಕಾರ ಉಡುಪಿ ನಗರದಲ್ಲಿ 131 ಮಿ.ಮೀ., ಬ್ರಹ್ಮಾವರದಲ್ಲಿ 106, ಬೈಂದೂರಿನಲ್ಲಿ 130, ಕುಂದಾಪುರದಲ್ಲಿ 85, ಕಾರ್ಕಳದಲ್ಲಿ 151, ಕಾಪುವಿನಲ್ಲಿ 126 ಮತ್ತು ಹೆಬ್ರಿಯಲ್ಲಿ 116 ಮಿ.ಮೀ. ಮಳೆ ದಾಖಲಾಗಿದೆ.

ಭಾರೀ ಮಳೆಯಿಂದ ಉಡುಪಿಯ ತಗ್ಗು ಪ್ರದೇಶಗಳು ಜಲಾವೃತ

ಉಡುಪಿ: ಎರಡು ‌ದಿನಗಳಿಂದ ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಉಡುಪಿಯ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಉಡುಪಿ ನಗರದ ಮೂಡನಿಡುಂಬೂರು ಬ್ರಹ್ಮ ಬೈದರ್ಕಳ ಗರಡಿ ಮತ್ತು ಬನ್ನಂಜೆ ಶಿರಿಬೀಡು ವಾರ್ಡ್‌ನಲ್ಲಿವ ಗರಡಿಗೆ ವಿಪರೀತ ಮಳೆಯಿಂದಾಗಿ ನೀರು ನುಗ್ಗಿದೆ. ಸಾಕಷ್ಟು ಮನೆಗಳ ಅಂಗಳದವರೆಗೂ ನೀರು ನುಗ್ಗಿದ್ದು, ಹರಿಯುವ ನೀರಿನಲ್ಲಿ ಕಾರ್ಮಿಕರು ನಡೆದಾಡಲು ಹರಸಾಹಸ ಪಡುವಂತಾಗಿದೆ. ಇಂದ್ರಾಣಿ ನದಿ ಇದೀಗ ನೆರೆಯಿಂದ

ರಾಜ್ಯದ ಪತ್ರಕರ್ತರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಡೆಯಲಿದೆ ಪುರಸ್ಕಾರ

ಉಡುಪಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಜತ ಮಹೋತ್ಸವ ಸಮಿತಿ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ರಾಜ್ಯದ ಪತ್ರಕರ್ತರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುತಿಭಾ ಪುರಸ್ಕಾರ – 2023 ಕಾರ್ಯಕ್ರಮ ಜುಲೈ 8 ರಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಉಡುಪಿ ಜಿಲ್ಲೆಯ ಕೆಎಂಸಿ ಆಸ್ಪತ್ರೆ ಮಣಿಪಾಲ ಇದರ ಟಿಎಂಎಪೈ ಆಡಿಟೋರಿಯಂ ನ ಮೂರನೇ ಮಹಡಿಯಲ್ಲಿ ಜರುಗಲಿದೆ ಎಂದು ಉಡುಪಿ ಜಿಲ್ಲಾ

ತುಂಬಿ ಹರಿಯುತ್ತಿದೆ ಉಡುಪಿಯ ಜೀವನಾಡಿ ‘ಸ್ವರ್ಣ ನದಿ’

ಉಡುಪಿ: ಉಡುಪಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮುಂಗಾರು ಮಳೆಯ ಹಿನ್ನಲೆಯಲ್ಲಿ ಉಡುಪಿ ನಗರದ ಜೀವನಾಡಿ ಸ್ವರ್ಣ ನದಿ ತುಂಬಿ ಹರಿಯುತ್ತಿದೆ. ಇದರಿಂದ ಸ್ವರ್ಣ ನದಿಗೆ ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಅಡ್ಡಗಟ್ಟಿರುವ ಬಜೆ ಡ್ಯಾಮ್ ಭರ್ತಿಯಾಗಿ ನೀರು ಹೊರ ಹೋಗುತ್ತಿದೆ.