Home Posts tagged #v4newskarnataka (Page 118)

ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬೀಬಿಲಚ್ಚಿಲ್ : 108 ದಿನದ ಸಂಧ್ಯಾ ಭಜನಾ ಸಂಕೀರ್ತನೆ

ಮಂಗಳೂರು ತಾಲೂಕಿನ ಅದ್ಯಪಾಡಿ ಬೈಲು ಮಾಗಣೆಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬೀಬಿಲಚ್ಚಿಲ್ ಇಲ್ಲಿ ನಡೆಯಲಿರುವ ಬ್ರಹ್ಮಲಕಶೋತ್ಸವ ಹಾಗೂ ಅಷ್ಟಪವಿತ್ರ ನಾಗಬ್ರಹ್ಮಮಂಡಲೋತ್ಸವ ಪ್ರಯುಕ್ತ ಅಕ್ಟೋಬರ್ 17ರಿಂದ 2023 ಜನವರಿ 31ರ ವರೆಗೆ 108 ದಿನದ ಸಂಧ್ಯಾ ಭಜನಾ ಸಂಕೀರ್ತನೆ ನಡೆಯಲಿದೆ. ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ 2023ರ ಫೆಬ್ರವರಿ 1ರಿಂದ

ಮಂಜೇಶ್ವರ : ರಾಗಂ ಜಂಕ್ಷನ್ ಮಧ್ಯ ಅಂಡರ್ ಪಾಸ್ ನಿರ್ಮಿಸಬೇಕೆಂಬ ಆಗ್ರಹ

ಮಂಜೇಶ್ವರ: ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಅಗಲೀಕರಣವಾಗುತ್ತಿರುವ ಮಂಜೇಶ್ವರ ಗೋವಿಂದ ಪೈ ಕಾಲೇಜು ಹಾಗೂ ರಾಗಂ ಜಂಕ್ಷನ್ ಮಧ್ಯ ಅಂಡರ್ ಪಾಸ್ ನಿರ್ಮಿಸಬೇಕೆಂಬ ಬೇಡಿಕೆಯೊಂದಿಗೆ ಊರ ನಾಗರೀಕರು ಸಮಿತಿ ರಚಿಸಿ ಸಂಬಂಧಪಟ್ಟವರಿಗೆ ಮನವಿ ನೀಡಲು ತೀರ್ಮಾನಿಸಿದ್ದಾರೆ ದಿನನಿತ್ಯ ನೂರಾರು ವಿದ್ಯಾರ್ಥಿಗಳು ಆಗಮಿಸುತ್ತಿರುವ ಹಾಗೂ ದೇವಸ್ಥಾನ, ಮಸೀದಿ ಹಾಗೂ ಚರ್ಚ್ ಸೇರಿದಂತೆ ಇತರ ಹಲವು ಶಾಲೆಗಳನ್ನು ಕೂಡಾ ಸಂಪರ್ಕದ ರಸ್ತೆ ಇರುವ ಗೋವಿಂದ ಪೈ ಕಾಲೇಜು, ಮತ್ತೊಂದು ಭಾಗದಲ್ಲಿ

ಅಡಕೆ ಆಮದು ವಿಚಾರದಲ್ಲಿ ಸರ್ಕಾರ ವಿಮರ್ಶೆ ಮಾಡಬೇಕಾದ ಅಗತ್ಯವಿದೆ

ಪುತ್ತೂರು:ನಮ್ಮ ದೇಶದಲ್ಲಿ ಸುಮಾರು 18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ದೇಶಕ್ಕೆ ಬೇಕಾಗುವಷ್ಟು ಅಡಕೆ ಬೆಳೆಯಲಾಗುತ್ತಿದ್ದರೂ ಇದೀಗ ಭೂತಾನ್‍ನಿಂದ ಅಡಕೆ ಆಮದು ಮಾಡಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ದೇಶದ ಅಡಕೆ ಬೆಳೆಗಾರರ ಪರಿಸ್ಥಿತಿ ಏನಾಗಬಹುದು ಎಂಬುದನ್ನು ಕೇಂದ್ರ ಸರಕಾರ ವಿಮರ್ಶೆ ಮಾಡಬೇಕಾದ ಅಗತ್ಯವಿದೆ ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಸರಕಾರವನ್ನು ಆಗ್ರಹಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ,

ಹೆಜಮಾಡಿ : ಗುದ್ದಲಿ ಪೂಜೆ ನಡೆದು ಏಳು ತಿಂಗಳಾದರೂ ದುರಸ್ಥಿಯಾಗದ ರಸ್ತೆ

ಹೆಜಮಾಡಿ ಗುಂಡಿ ರಸ್ತೆ ದುರಸ್ತಿಗಾಗಿ ಕಳೆದ ಏಳು ತಿಂಗಳ ಹಿಂದೆ ಶಾಸಕರು ಗುದ್ದಲಿ ಪೂಜೆ ನಡೆಸಿದ್ದರಾದರೂ, ಈ ವರೆಗೂ ದುರಸ್ತಿ ಕಾಣದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಚುನಾವಣೆಯಲ್ಲಿ ತಕ್ಕ ಉತ್ತರ ನೀಡುವ ಎಚ್ಚರಿಕೆ ನೀಡಿದ್ದಾರೆ. ಗ್ರಾಮಸ್ಥ ಯೋಗೀಶ್ ಶೆಣೈ ಮಾತನಾಡಿ, ನಮ್ಮ ಬಲು ಬೇಡಿಕೆಯ ಗುಂಡಿ ರಸ್ತೆ ದುರಸ್ತಿಗಾಗಿ ಅದೆಷ್ಟೋ ಮನವಿಗಳ ಬಳಿಕ ಕಳೆದ ಏಳು ತಿಂಗಳ ಹಿಂದೆ ಗುದ್ದಲಿ ಪೂಜೆ ನಡೆಸಲಾಗಿದ್ದು, ಗುದ್ದಲಿ ಪೂಜೆ ನಡೆದು ಎರಡು ತಿಂಗಳ ಬಳಿಕ

ಮಹಡಿಯಿಂದ ಬಿದ್ದು ಯುವಕ ಮೃತ್ಯು

ಮಂಗಳೂರು: ಯುವಕನೋರ್ವ ಆಕಸ್ಮಿಕವಾಗಿ ಮನೆಯ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ರಾತ್ರಿ ನಡೆದಿದೆ. ಕುದ್ರೋಳಿ ಸಮೀಪದ ಕಂಡತ್‌ ಪಳ್ಳಿ ಬಳಿಯ ಟಿ.ಕೆ.ಎಚ್. ಖಾದರ್ ಎಂಬವರ ಪುತ್ರ ಮುಹಮ್ಮದ್ ರಿಯಾಝ್ (33) ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ. ರಿಯಾಝ್ ಮನೆಯ ಮಹಡಿ ಹತ್ತಿದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ತಕ್ಷಣ  ಅವರನ್ನು  ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ

ಸಂಸದರಿಂದ ಮಹಾವೀರ ವೃತ್ತ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಮಂಗಳೂರು,ಅ.18(ಕ.ವಾ):- ಪಂಪ್ ವೆಲ್ ನಲ್ಲಿ ಕರ್ನಾಟಕ ಬ್ಯಾಂಕ್ ಹಾಗೂ ಸ್ಮಾರ್ಟ್ ಸಿಟಿ ವತಿಯಿಂದ ಮಹಾವೀರ ವೃತ್ತ ಅಭಿವೃದ್ಧಿ ಕಾಮಗಾರಿಗೆ ಅ.18ರಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಸ್ಮಾರ್ಟ್ ಸಿಟಿ, ಕರ್ನಾಟಕ ಬ್ಯಾಂಕ್ ಅಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು ಹಾಗೂ ಇತರೆ ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಶಾಸಕ ಹರೀಶ್ ಪೂಂಜನಿಗೆ ಬೆದರಿಕೆ ಪ್ರಕರಣ ಸಿಐಡಿ ತನಿಖೆಗೆ

ಬಂಟ್ವಾಳ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣದ ತನಿಖೆಯನ್ನು ಸರ್ಕಾರವು ಸಿಐಡಿಗೆ ವರ್ಗಾಯಿಸಿದೆ. ಪ್ರಕರಣದ ಕಡತಗಳನ್ನು ಬಂಟ್ವಾಳ ಪೊಲೀಸರು ಸಿಐಡಿ ವಿಭಾಗಕ್ಕೆ ವರ್ಗಾವಣೆ ಮಾಡಿದ್ದಾರೆ. ಗುರುವಾರ ರಾತ್ರಿ ಸುಮಾರು 11.15ಕ್ಕೆ ಕೆಲ ದುಷ್ಕರ್ಮಿಗಳು ಶಾಸಕ ಹರೀಶ್​ ಪೂಂಜಾರವರ ಕಾರನ್ನು ಅಡ್ಡಗಟ್ಟಿದ್ದರು. ಶಾಸಕರ ಕಾರು ಚಾಲಕನ ದೂರಿನಂತೆ ಫರಂಗಿಪೇಟೆ ಎಂಬಲ್ಲಿ ಘಟನೆ ನಡೆದಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್

ಕಾಂಗ್ರೆಸ್‍ನವರು ಸರ್ಕಸ್ ಮಾಡಿದರೂ ಅಂಗಾರರ ವಿರುದ್ಧ ಗೆಲ್ಲಲು ಸಾಧ್ಯವಿಲ್ಲ: ಬಿಜೆಪಿ ಹೇಳಿಕೆ

ಸುಳ್ಯ: ಸುಳ್ಯದಲ್ಲಿ ಕಳೆದ 6 ಬಾರಿ ಶಾಸಕರಾಗಿ ಸಚಿವರಾಗಿರುವ ಅಂಗಾರರ ವಿರುದ್ಧ ಸುಳ್ಯದ ಕಾಂಗ್ರೆಸಿಗರಿಗೆ ಕಳೆದ 30 ವರ್ಷಗಳಿಂದ ಯಾವುದೇ ಸರ್ಕಸ್ ಮಾಡಿದರೂ ಗೆಲ್ಲಲು ಸಾಧ್ಯವಾಗಿಲ್ಲ. ಮುಂದೆಯೂ ಗೆಲ್ಲಲು ಸಾಧ್ಯವಿಲ್ಲ ಎಂದು ಸುಳ್ಯ ಬಿಜೆಪಿ ನಗರ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಜಿನ್ನಪ್ಪ ಪೂಜಾರಿ ಮತ್ತು ಸಿಎ ಬ್ಯಾಂಕ್ ಅಧ್ಯಕ್ಷ ಬಾಲಗೋಪಾಲ ಸೇರ್ಕಜೆ ಹೇಳಿದರು. ಅವರು ಸುಳ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, “ಸುಳ್ಯದ ಜನತೆ ಅಂಗಾರರನ್ನು

ಅಪಘಾತಕ್ಕೀಡಾಗಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿದ ಪಿ.ಎಸ್.ಐ. ಸೇಸಮ್ಮ

ಪುತ್ತೂರು : ಆಟೋ ರಿಕ್ಷಾವೊಂದು ಡಿವೈಡರ್ ಗೆ ಡಿಕ್ಜಿಯಾಗಿ ಪಲ್ಟಿಯಾದ ಘಟನೆ ಪುತ್ತೂರು ಉಪ್ಪಿನಂಗಡಿಯ ಪಡೀಲ್ ನಲ್ಲಿ ನಡೆದಿದ್ದು, ಘಟನೆಯಲ್ಲಿ ಗಾಯಗೊಂಡ ಮಹಿಳೆ ಮತ್ತು ಚಾಲಕನನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪಿ.ಎಸ್.ಐ ಸೇಸಮ್ಮ ಮತ್ತು ಎ.ಎಸ್.ಐ ರಾಧಾಕೃಷ್ಣ ಅವರು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಚಾಲಕ ಅಬ್ದುಲ್ ಎಂಬವರ ಆಟೋ ಡಿವೈಡರ್‍ಗೆ ಬಡಿದ ಹಿನ್ನಲೆಯಲ್ಲಿ ಮಹಿಳೆ ಕುಸುಮಾವತಿಯವರಿಗೆ ಗಾಯವಾಗಿತ್ತು. ಈ ವೇಳೆ ಜನರು

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಶೀರ್ ಗೆ ನೆರವು ಹಸ್ತಾಂತರ

ಮಂಜೇಶ್ವರ : ಕಿಡ್ನಿ ವೈಫಲ್ಯಕ್ಕೊಳಗಾಗಿ ಚಿಕಿತ್ಸೆಯಲ್ಲಿರುವ ಮಂಜೇಶ್ವರದ ಕಾಂಗ್ರೆಸ್ ಕಾರ್ಯಕರ್ತ ಬಶೀರ್ ರವರಿಗೆ ಹರ್ಷಾದ್ ವರ್ಕಾಡಿಯವರ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಸಂಗ್ರಹಿಸಿದ ಚಿಕಿತ್ಸಾ ಸಹಾಯ ಮೊತ್ತವನ್ನು ಹಸ್ತಾಂತರಿಸಲಾಯಿತು. ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಕಮಲಾಕ್ಷಿ. ಕೆ. ಅವರು 40,000 ರೂ. ಮೊತ್ತವನ್ನು ಬಶೀರ್ ರವರಿಗೆ ಹಸ್ತಾಂತರಿಸಿದರು. ಮಾಜಿ ಜಿ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ, ಮಂಜೇಶ್ವರ ಬ್ಲಾಕ್