Home Posts tagged #v4newskarnataka (Page 16)

ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ 2025 ಆಳ್ವಾಸ್ ಪದವಿಪೂರ್ವ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾವೇರಿ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರು ತಂಡ ಪ್ರಶಸ್ತಿಯನ್ನು ಪಡೆದುಕೊಂಡು ಒಟ್ಟು 09 ಪದಕಗಳೊಂದಿಗೆ ಆಳ್ವಾಸ್ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು

ಹಲವೆಡೆ ಸಂವಿಧಾನ ಪೀಠಿಕೆಯ ತುಳು ಓದು ಅಭಿಯಾನ

ಮಂಗಳೂರು : ಸಂವಿಧಾನ ದಿನದ ಅಂಗವಾಗಿ ಸಂವಿಧಾನ ಪೀಠಿಕೆಯನ್ನು ತುಳುವಿನಲ್ಲಿ ಓದುವ ಕಾರ್ಯಕ್ರಮ ಮಂಗಳೂರಿನಲ್ಲಿ ಈ ದಿನ ಹಲವೆಡೆ ನಡೆಯಿತು. ಸಂವಿಧಾನ ಪೀಠಿಕೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳು ಭಾಷೆಗೆ ಅನುವಾದಿಸಿ ಫಲಕದ ರೂಪದಲ್ಲಿ ಬಿಡುಗಡೆ ಮಾಡಿತ್ತು. ಮಂಗಳೂರಿನ ತುಳು ಭವನ, ಮಂಗಳೂರು ರಥಬೀದಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಂಗಳೂರು ಬಲ್ಮಠ ಸರಕಾರಿ ಪ್ರಥಮ ದರ್ಜೆ ‌ಮಹಿಳಾ ಕಾಲೇಜು, ತುಳು ಪರಿಷತ್ ಮಂಗಳೂರು ಘಟಕ , ಹಂಪನಕಟ್ಟೆ

ಕಳಾರದಲ್ಲಿ ಆತ್ಮಹತ್ಯೆ ಯತ್ನ; ಚಿಕಿತ್ಸೆ ಫಲಿಸದೆ ಯುವಕ ಸಾವು

ಕಡಬ ಪೊಲೀಸರಿಂದ ಯುಡಿಆರ್ ಪ್ರಕರಣ ದಾಖಲು ಕಡಬ: ಕುಟ್ರುಪ್ಪಾಡಿ ನಿವಾಸಿ ಸೊಲೊಮೊನ್ (54) ಅವರು ನೀಡಿದ ದೂರಿನ ಮೇರೆಗೆ, ಅವರ ಪುತ್ರ ರಾಕೇಶ್ (36) ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ರಾಕೇಶ್ ಅವರು ಕಡಬದ ಕಳಾರದಲ್ಲಿ ದ್ವಿಚಕ್ರ ವಾಹನ ಗ್ಯಾರೇಜ್ ನಡೆಸುತ್ತಿದ್ದು, ತನ್ನ ಪತ್ನಿ ಹಾಗೂ ಸ್ನೇಹಿತನ ನಡುವೆ ಮೊಬೈಲ್ ಸಂಪರ್ಕವಿರುವ ವಿಚಾರ ತಿಳಿದ ಹಿನ್ನೆಲೆ ತೀವ್ರ

ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂವಿಧಾನ ದಿನಾಚರಣೆ

ಸಂವಿಧಾನದ ಆಶಯಗಳನ್ನು ಗೌರವಿಸಿರಿ: ಕೃಷ್ಣ ಪ್ರಸಾದ ಆಳ್ವ ಸಂವಿಧಾನದ ಜಾಗೃತಿ ಮೂಡಿಸುವ, ಬ್ಲಾಕ್ ಕಾಂಗ್ರೆಸ್ಸಿನ ಕಾರ್ಯ ಶ್ಲಾಘನೀಯ:ನೂರುದ್ದೀನ್ ಸಾಲ್ಮರಪುತ್ತೂರು : ಪುತ್ತೂರು ಬ್ಲಾಕ್ ಕಾಂಗ್ರೆಸ್ಸಿನ ವತಿಯಿಂದ, ಕಾಂಗ್ರೆಸ್ ಕಚೇರಿಯಲ್ಲಿ ಇಂದು, ಸಂವಿಧಾನ ದಿನಾಚರಣೆಯನ್ನು ಆಚರಿಸಿ, ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ಬರೆದ “ಸಂವಿಧಾನ ಓದು” ಎಂಬ ಪುಸ್ತಕವನ್ನು, ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಎಲ್ಲಾ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಹುಟ್ಟುಹಬ್ಬದ ಪ್ರಯುಕ್ತ ಸುಳ್ಯ ಶ್ರೀ ಚನ್ನಕೇಶವ ಸ್ವಾಮಿ ದೇವರಿಗೆ ವಿಶೇಷ ಪೂಜೆ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಖಾವಂದರ ಹುಟ್ಟುಹಬ್ಬದ ಶುಭ ಸಂದರ್ಭದಲ್ಲಿ ಸುಳ್ಯ ತಾಲೂಕಿನ ಸುಳ್ಯ ಶ್ರೀ ಚನ್ನಕೇಶವ ಸ್ವಾಮಿ ದೇವರಿಗೆ ವಿಶೇಷ ಅಲಂಕಾರ ಪೂಜೆ ಹಾಗೂ ಮಹಾಪೂಜೆ ಮತ್ತು ವಿಶೇಷ ಪ್ರಾರ್ಥನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತಾಭಿಮಾನಿಗಳ ಬಳಗ ಸುಳ್ಯ ವತಿಯಿಂದ ಮಾಡಲಾಯಿತು.ವಿಶೇಷ ಸಭಾ ಕಾರ್ಯಕ್ರಮವನ್ನು ಮಾಡಿದ್ದು ಇತರ ಕಾರ್ಯಕ್ರಮಗಳಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಂ.ಬಿ ಫೌಂಡೇಶನ್ ನ ಅಧ್ಯಕ್ಷರಾದ ಶ್ರೀ ಎಂ.ಬಿ

“Nitte Nexus 2025” ಜಾಗತಿಕ ಹಳೆಯ ವಿದ್ಯಾರ್ಥಿಗಳ ಸಮಾವೇಶ

WENAMITAA (NMAMIT ಹಳೆಯ ವಿದ್ಯಾರ್ಥಿಗಳ ಸಂಘ) ಮತ್ತು Nitte Mahalinga Adyanthaya Memorial Institute of Technology (NMAMIT), ನಿಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ಜಾಗತಿಕ ಹಳೆಯ ವಿದ್ಯಾರ್ಥಿ ಸಮಾವೇಶ – “Nitte Nexus 2025” ಅನ್ನು ಡಿಸೆಂಬರ್ 20, 2025, ಸಂಜೆ 4 ಗಂಟೆಯಿಂದ, ಮುಲ್ಕಿಯ ಸುಂದರ ರಾಮ ಶೆಟ್ಟಿ ಕನ್ವೆನ್ಷನ್ ಸೆಂಟರ್­ನಲ್ಲಿ ಆಯೋಜಿಸಲಾಗಿದೆ. 1986ರಲ್ಲಿ ಸ್ಥಾಪಿತವಾದ NMAMIT ತನ್ನ 40 ವರ್ಷಗಳ ಸೇವೆ ಮತ್ತು ಶ್ರೇಷ್ಠತೆಗೆ

ಕುಕ್ಕೆ: ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೆರವೇರಿದ ಚಂಪಾಷಷ್ಠಿ ಮಹಾರಥೋತ್ಸವ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಬುಧವಾರ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ, ಭಕ್ತಿಯಿಂದ ನೆರವೇರಿತು.ಚಿಕ್ಕ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು ಆಸೀನರಾಗಿದ್ದರು. ಬ್ರಹ್ಮರಥದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರು ಆಸೀನರಾಗಿದ್ದರು. ಸುವರ್ಣ ವೃಷ್ಟಿ, ಚಿಕ್ಕ ರಥೋತ್ಸವ ಬಳಿಕ ಚಂಪಾಷಷ್ಠಿ

ಶ್ರೀ ನಿತಿನ್ ಗಡ್ಕರಿಯವರ ಧರ್ಮಪತ್ನಿ ಶ್ರೀಮತಿ ಕಾಂಚನ ನಿತಿನ್ ಗಡ್ಕರಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ

ಉಚ್ಚಿಲ:ಕೇಂದ್ರ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿಯವರ ಧರ್ಮಪತ್ನಿ ಶ್ರೀಮತಿ ಕಾಂಚನ ನಿತಿನ್ ಗಡ್ಕರಿ ಅವರು ಇಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದರು. ಭೇಟಿ ನೀಡಿದ ಅವರು ಶ್ರೀ ದೇವರ ದರ್ಶನ ಪಡೆದು ಶ್ರೀಕ್ಷೇತ್ರದ ವತಿಯಿಂದ ನೀಡಿದ ಸ್ಮರಣಿಕೆ ಹಾಗೂ ಪ್ರಸಾದ ಮತ್ತು ಗೌರವವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಆಡಳಿತ ಸಮಿತಿಯ ಅಧ್ಯಕ್ಷ ಗಿರಿಧರ್ ಸುವರ್ಣ, ಸದಸ್ಯರು ಶಿವಕುಮಾರ್ ಮೆಂಡನ್, ದಿನೇಶ್ ಎರ್ಮಾಳ್,

ಕೆವಿಜಿ ಆಯುರ್ವೇದ ಕಾಲೇಜ್ ವಾರ್ಷಿಕೋತ್ಸವ ಸಮಾರಂಭ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ನವೆಂಬರ್ 23 ರಂದು ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನ್ನು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ, ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಇವರು ದೀಪ ಬೆಳಗಿಸಿ ಉದ್ಘಾಟಿಸಿ, ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ, ವೈದ್ಯ ಹಾಗೂ ರೋಗಿಯ ನಡುವಿನ ಸಂಬಂಧ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನದ

ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ಎಂಆರ್‌ಜಿ ಗ್ರೂಪ್‌ನ ಸಿಎಂಡಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಸನ್ಮಾನ

ಪಡುಬಿದ್ರಿ: ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರು, ಕಾರ್ಯದರ್ಶಿ , ಖಜಾಂಚಿ ಮತ್ತು ಟ್ರಸ್ಪಿಗಳಿಂದ ಉದ್ಯೋಗ ಮೇಳ-2025 ಉದಾರ ಪ್ರಾಯೋಜಕತ್ವವನ್ನು ನೀಡಿದ ಎಂಆರ್‌ಜಿ ಗ್ರೂಪ್‌ನ ಸಿಎಂಡಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಸನ್ಮಾನ ಕಾರ್ಯಕ್ರಮವು ಸೋಮವಾರದಂದು ಪಡುಬಿದ್ರಿಯಲ್ಲಿ ನಡೆಯಿತು. ಈ ಬಾರಿಯ ಉದ್ಯೋಗ ಮೇಳದಲ್ಲಿ 1,517 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು ಉಳಿದವರನ್ನು ಮುಂದಿನ ಆಯ್ಕೆ ಪ್ರಕ್ರಿಯೆಯಲ್ಲಿ ಇರಿಸಲಾಗಿದೆ.