Home Posts tagged #v4stream (Page 10)

ರೈತರಿಗೆ ಬೆಳೆವಿಮೆ ಕುರಿತು ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರ ಸಭೆ

ರೈತರಿಗೆ ಬೆಲೆ ವಿಮೆ ಹಣ ಜಮಾ ಕಡಿಮೆ ಪಾವತಿಯ ಕುರಿತು ಬಿಜೆಪಿ ಸತ್ಯಶೋಧನಾ ಸಮಿತಿಯಿಂದ ಮಾಜಿ ಶಾಸಕರಾದ ಸಂಜೀವ ಮಠಂದೂರು ರವರು ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ಹಾಗೂ ಸುಳ್ಯ ತಾಲೂಕಿನ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರ ಸಭೆ ನಡೆಸಿ, ತೋಟಗಾರಿಕಾ ಇಲಾಖೆಯ ನಿರ್ಲಕ್ಷದಿಂದ ರೈತರಿಗೆ ಆದ ಅನ್ಯಾಯದ ಕುರಿತು ಗ್ರಾಮ ಮಟ್ಟದಿಂದ ಸಂಗ್ರಹಿಸಿದ

ಕಾಫಿ ಟೇಬಲ್ ಪುಸ್ತಕಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

ಸೈಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಪರಂಪರೆ ಮತ್ತು ಗುರುತುಗಳನ್ನು ಚಿತ್ರಿಸುವ ದಿ ಎಕೋಸ್ ಆಫ್ ದ ಕಾರಿಡಾರ್ಸ್ – ಎ ಪೋರ್ಟ್ರೇಟ್ ಆಫ್ ಸೈಂಟ್ ಅಲೋಶಿಯಸ್ ಯುನಿವರ್ಸಿಟಿ ಹಾಗೂ ಫಾದರ್ ಮಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಷನ್ಸ್‌ನ ಪರಂಪರೆ ಮತ್ತು ಸೇವೆಯನ್ನು ದಾಖಲಿಸುವ ಟಚ್ಡ್ ಬೈ ಏಂಜಲ್ಸ್ – ಎ ಪೋರ್ಟ್ರೇಟ್ ಆಫ್ ಫಾದರ್ ಮಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಷನ್ಸ್ ಎಂಬ ಎರಡು ಕಾಫಿ ಟೇಬಲ್ ಪುಸ್ತಕಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಅಕ್ಷತಾ ಪೂಜಾರಿಗೆ ಮನೆಗೆ ನುಗ್ಗಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಿ : ಯಶ್ ಪಾಲ್ ಸುವರ್ಣ ಆಗ್ರಹ

ಉಡುಪಿ: ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂಬೆಳಗ್ಗೆ 4.30 ರ ಸುಮಾರಿಗೆ ನುಗ್ಗಿ ಯುವತಿಗೆ ಹಲ್ಲೆ ನಡೆಸಿರುವ ಪೊಲೀಸ್‌ ಅಧಿಕಾರಿಗಳ ವಿರುದ್ದ ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿರುವ ಆರೋಪಿಯ ಚಿಕ್ಕಮ್ಮನ ಮನೆಗೆ ಮಹಿಳಾ ಪೋಲಿಸರು ಇಲ್ಲದೇ, ಕೇವಲ ಪುರುಷ ಪೋಲಿಸರು ನುಗ್ಗಿ,

ಚೊಕ್ಕಬೆಟ್ಟು ಮಾಹಿತಿ ಮತ್ತು ನಾಗರಿಕ ಕೇಂದ್ರದ 15 ನೇ ವಾರ್ಷಿಕೋತ್ಸವ ಮತ್ತು ಸಾಧಕರಿಗೆ ಸನ್ಮಾನ

ಸುರತ್ಕಲ್‌: ಸುರತ್ಕಲ್: ಚೊಕ್ಕಬೆಟ್ಟು ಮಾಹಿತಿ ಮತ್ತು ನಾಗರಿಕ ಕೇಂದ್ರದ 15 ನೇ ವಾರ್ಷಿಕೋತ್ಸವ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆದಿತ್ಯವಾರ ಸಂಜೆ ಕಚೇರಿ ಮುಂಭಾಗದಲ್ಲಿ ಜರುಗಿತು. ಉದ್ಘಾಟನೆ ನೆರವೇರಿಸಿ ಮಾತಾಡಿದ ಅಬ್ದುಲ್ ಅಝೀಝ್ ದಾರಿಮಿ ಅವರು, “ಮಾದಕ ದ್ರವ್ಯ ಮುಕ್ತ ಸ್ವಸ್ಥ ಸಮಾಜದ ನಿರ್ಮಾಣವಾಗಬೇಕು. ಇದಕ್ಕಾಗಿ ಜಾತಿ ಪಂಗಡ ಮರೆತು ಒಗ್ಗೂಡಬೇಕು. ಮಾದಕ ದ್ರವ್ಯ, ಮದ್ಯಪಾನದಂತಹ ದುಷ್ಚಟಗಳಿಂದ ನಾವು ನಮ್ಮ ಮನೆಯ ಮಕ್ಕಳನ್ನು ದೂರವಿಡಬೇಕು. ನಾವು

ಉಡುಪಿ:- ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ ಓರ್ವ ಸಾವು

ಉಡುಪಿ:- ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ ನಡೆದು ಓರ್ವ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಐದು ಸೆಂಟ್ಸ್ ಬಳಿ ಭಾನುವಾರ ತಡರಾತ್ರಿ ನಡೆದಿದೆ.ಮೃತನನ್ನು ಪಡುಕರೆ ಸಂತೋಷ್ ಮೊಗವೀರ (30) ಎಂದು ಗುರುತಿಸಲಾಗಿದೆ. ಶಬರಿಮಲೆಗೆ ಹೋಗಿ ಬಂದಿದ್ದ ಯುವಕರು ಭಾನುವಾರ ರಾತ್ರಿ ಎಣ್ಣೆ ಪಾರ್ಟಿ ಮಾಡಿ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ. ಸಂತೋಷ ಮೊಗವೀರನಿಗೆ ನಾಲ್ವರು ಮಾರಣಾಂತಿಕ ಹಲ್ಲೆ ಮಾಡಿದ್ದು ಆತ ಸ್ಥಳದಲ್ಲೇ

13 ಲಕ್ಷ ರೂಪಾಯಿ ಅನುದಾನದ ಕಾಮಗಾರಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ

ಕಾಪು ವಿಧಾನಸಭಾ ಕ್ಷೇತ್ರದ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆ ಜುಮಾದಿ ದೈವಸ್ಥಾನದಿಂದ ಅಚ್ಚಡ ಬಡಗು ಮನೆ ವರೆಗೆ ರಸ್ತೆ ಅಭಿವೃದ್ಧಿಗೆ 13 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 14-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಭಾ ಶೆಟ್ಟಿ, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್, ಯತೀಶ್, ಸುಭಾಸ್ ಬಲ್ಲಾಳ್,

ನ್ಯಾಶನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ಸುಳ್ಯ ಶಾಖೆಯ ಪದಗ್ರಹಣ ಕಾರ್ಯಕ್ರಮ

ಸುಳ್ಯದಲ್ಲಿ ಡಿ. 14 ರಂದು ನ್ಯಾಶನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ (ರಿ.) ಇದರ ನೂತನವಾಗಿ ಪ್ರಾರಂಭವಾದ ಸುಳ್ಯ ಶಾಖೆಯ ಪದಗ್ರಹಣ ಕಾರ್ಯಕ್ರಮವು ಕೆ ವಿ ಜಿ ಆಯುರ್ವೇದ ಫಾರ್ಮಾ ಹಾಗೂ ರಿಸರ್ಚ್ ಸೆಂಟರಿನ ಎ/ಸಿ ಆಡಿಟೋರಿಯಂನಲ್ಲಿ ನೆರವೇರಿತು. ಈ ಕಾರ್ಯಕ್ರಮದ ಪದಗ್ರಹಣ ಅಧಿಕಾರಿ ಆಗಿ ಜಿಲ್ಲಾ ಆಯುಷ್ ಆಫೀಸರ್ ಡಾ. ಮೊಹಮ್ಮದ್ ಇಕ್ಬಾಲ್ ರವರು ಸರಕಾರಿ ಕಾರ್ಯಕ್ರಮ ಹಾಗೂ ಇನ್ನಿತೀರ ಎಲ್ಲಾ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಇಂತಹ ಅಸೋಸಿಯೇಷನ್ ಅತ್ಯಮೂಲ್ಯ

ಪ್ರತಿಭಾ ಕಾರಂಜಿ ಪ್ರಬಂಧ ಸ್ಪರ್ಧೆ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಡಬ:ಹನುಮಾನ್ ನಗರ, ಕಡಬದಲ್ಲಿರುವ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಯ ವಿದ್ಯಾರ್ಥಿನಿ ಕುಮಾರಿ ಪ್ರಣಮ್ಯಾ ಐ. (10ನೇ ತರಗತಿ) ಅವರು ಪುತ್ತೂರು ಮತ್ತು ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ – 2025ರ ಪ್ರೌಢ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇವರ

ಬೈಂದೂರು ಉತ್ಸವ 2026 ಉಪ್ಪುಂದ ಗ್ರಾಮೋತ್ಸವ ಆರೋಗ್ಯ ಮೇಳ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ

ಉಪ್ಪುಂದ,2026ರಲ್ಲಿ ಜ.24,25,26ರಂದು ನಡೆಯುವ ಬೈಂದೂರು ಉತ್ಸವದ ಅಂಗವಾಗಿ ಗ್ರಾ.ಪಂ. ಉಪ್ಪುಂದ, ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ ಉಡುಪಿ ಜಿಲ್ಲೆ ದೃಷ್ಟಿ ಪ್ರದಾನ ಯೋಜನೆ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಲಯನ್ಸ್ ಕ್ಲಬ್ ಎಂಜಿನಿಯರ್ಸ್ ಕುಂದಾಪುರ, ಲಯನ್ಸ್‌ ಕ್ಲಬ್ ಕೌನ್ ಕುಂದಾಪುರ, ನಮ್ಮಭೂಮಿ ಸಂಸ್ಥೆ ಕನ್ಯಾನ ಹಟ್ಟಿಯಂಗಡಿ, ಸ.ಮಾ.ಹಿ.ಪ್ರಾ. ಶಾಲೆ ಉಪ್ಪುಂದ, ಸಮುದಾಯ ಆರೋಗ್ಯ ಕೇಂದ್ರ ಬೈಂದೂರು, ಸರಕಾರಿ ಆಯುಷ್

ಅಶೋಕ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ರಜತ ಮಹೋತ್ಸವದ ವಾರ್ಷಿಕೋತ್ಸವ

ಅಶೋಕ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ದಿನಾಂಕ 13/12/2025 ರಂದು ರಜತ ಮಹೋತ್ಸವದ ವಾರ್ಷಿಕೋತ್ಸವವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀಯುತ ಪ್ರಕಾಶ್ ಕಲ್ಬಾವಿ , ಗೌರವಾನ್ವಿತ ಅತಿಥಿಯಾಗಿ ಡಿ. ಡಿ. ಪಿ .ಐ ಜಿ.ಎಸ್. ಶಶಿಧರ್ ಅವರು ಆಗಮಿಸಿದ್ದರು. ನಮ್ಮ ಶಾಲಾ ಅಧ್ಯಕ್ಷರಾದ ಶ್ರೀಯುತ ರಾಜೇಂದ್ರ ಕಲ್ಬಾವಿಯವರು ಸ್ವಾಗತ ಭಾಷಣವನ್ನು ಮಾಡಿದರು. ಅತಿಥಿಗಳು ನಮ್ಮ ಶಾಲೆಯ ಕುರಿತು ಮಾತನಾಡುತ್ತಾ