Home Posts tagged #v4stream (Page 16)

“Nitte Nexus 2025” ಜಾಗತಿಕ ಹಳೆಯ ವಿದ್ಯಾರ್ಥಿಗಳ ಸಮಾವೇಶ

WENAMITAA (NMAMIT ಹಳೆಯ ವಿದ್ಯಾರ್ಥಿಗಳ ಸಂಘ) ಮತ್ತು Nitte Mahalinga Adyanthaya Memorial Institute of Technology (NMAMIT), ನಿಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ಜಾಗತಿಕ ಹಳೆಯ ವಿದ್ಯಾರ್ಥಿ ಸಮಾವೇಶ – “Nitte Nexus 2025” ಅನ್ನು ಡಿಸೆಂಬರ್ 20, 2025, ಸಂಜೆ 4 ಗಂಟೆಯಿಂದ, ಮುಲ್ಕಿಯ ಸುಂದರ ರಾಮ ಶೆಟ್ಟಿ ಕನ್ವೆನ್ಷನ್ ಸೆಂಟರ್­ನಲ್ಲಿ

ಕುಕ್ಕೆ: ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೆರವೇರಿದ ಚಂಪಾಷಷ್ಠಿ ಮಹಾರಥೋತ್ಸವ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಬುಧವಾರ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ, ಭಕ್ತಿಯಿಂದ ನೆರವೇರಿತು.ಚಿಕ್ಕ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು ಆಸೀನರಾಗಿದ್ದರು. ಬ್ರಹ್ಮರಥದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರು ಆಸೀನರಾಗಿದ್ದರು. ಸುವರ್ಣ ವೃಷ್ಟಿ, ಚಿಕ್ಕ ರಥೋತ್ಸವ ಬಳಿಕ ಚಂಪಾಷಷ್ಠಿ

ಶ್ರೀ ನಿತಿನ್ ಗಡ್ಕರಿಯವರ ಧರ್ಮಪತ್ನಿ ಶ್ರೀಮತಿ ಕಾಂಚನ ನಿತಿನ್ ಗಡ್ಕರಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ

ಉಚ್ಚಿಲ:ಕೇಂದ್ರ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿಯವರ ಧರ್ಮಪತ್ನಿ ಶ್ರೀಮತಿ ಕಾಂಚನ ನಿತಿನ್ ಗಡ್ಕರಿ ಅವರು ಇಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದರು. ಭೇಟಿ ನೀಡಿದ ಅವರು ಶ್ರೀ ದೇವರ ದರ್ಶನ ಪಡೆದು ಶ್ರೀಕ್ಷೇತ್ರದ ವತಿಯಿಂದ ನೀಡಿದ ಸ್ಮರಣಿಕೆ ಹಾಗೂ ಪ್ರಸಾದ ಮತ್ತು ಗೌರವವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಆಡಳಿತ ಸಮಿತಿಯ ಅಧ್ಯಕ್ಷ ಗಿರಿಧರ್ ಸುವರ್ಣ, ಸದಸ್ಯರು ಶಿವಕುಮಾರ್ ಮೆಂಡನ್, ದಿನೇಶ್ ಎರ್ಮಾಳ್,

ಕೆವಿಜಿ ಆಯುರ್ವೇದ ಕಾಲೇಜ್ ವಾರ್ಷಿಕೋತ್ಸವ ಸಮಾರಂಭ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ನವೆಂಬರ್ 23 ರಂದು ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನ್ನು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ, ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಇವರು ದೀಪ ಬೆಳಗಿಸಿ ಉದ್ಘಾಟಿಸಿ, ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ, ವೈದ್ಯ ಹಾಗೂ ರೋಗಿಯ ನಡುವಿನ ಸಂಬಂಧ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನದ

ಕಡಬ ತಾಲೂಕಿನಲ್ಲಿ ಪೂಜ್ಯ ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಪ್ರಯುಕ್ತ ಸಾಮಾಜಿಕ ಸೇವಾ ಕಾರ್ಯಕ್ರಮ

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಪೂಜ್ಯ ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಜನ್ಮದಿನದ ಪ್ರಯುಕ್ತ ಕಡಬ ತಾಲೂಕಿನಾದ್ಯಂತ ವಿವಿಧ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭ ಕಡಬ ತಾಲೂಕಿನ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ವರ್ಗ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ವತಿಯಿಂದ ಕಡಬ ಪಟ್ಟಣದ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ವಿಶೇಷ

ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ಎಂಆರ್‌ಜಿ ಗ್ರೂಪ್‌ನ ಸಿಎಂಡಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಸನ್ಮಾನ

ಪಡುಬಿದ್ರಿ: ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರು, ಕಾರ್ಯದರ್ಶಿ , ಖಜಾಂಚಿ ಮತ್ತು ಟ್ರಸ್ಪಿಗಳಿಂದ ಉದ್ಯೋಗ ಮೇಳ-2025 ಉದಾರ ಪ್ರಾಯೋಜಕತ್ವವನ್ನು ನೀಡಿದ ಎಂಆರ್‌ಜಿ ಗ್ರೂಪ್‌ನ ಸಿಎಂಡಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಸನ್ಮಾನ ಕಾರ್ಯಕ್ರಮವು ಸೋಮವಾರದಂದು ಪಡುಬಿದ್ರಿಯಲ್ಲಿ ನಡೆಯಿತು. ಈ ಬಾರಿಯ ಉದ್ಯೋಗ ಮೇಳದಲ್ಲಿ 1,517 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು ಉಳಿದವರನ್ನು ಮುಂದಿನ ಆಯ್ಕೆ ಪ್ರಕ್ರಿಯೆಯಲ್ಲಿ ಇರಿಸಲಾಗಿದೆ.

ಪುತ್ತೂರು: ನ.26ರಂದು ಮಾಧ್ಯಮ ಪ್ರತಿನಿಧಿಗಳು ಹಾಗೂ ಅವರ ಕುಟುಂಬದವರಿಗೆ ಜೈ ತುಳು ಸಿನಿಮಾದ ಸ್ಪೆಷಲ್ ಶೋ

ಪುತ್ತೂರಿನಲ್ಲಿ ನವೆಂಬರ್ 26ರಂದು ಬುಧವಾರ ಮಧ್ಯಾಹ್ನ 1 ಗಂಟೆ 15 ನಿಮಿಷಕ್ಕೆ `ಜೈ’ ತುಳು ಚಿತ್ರದ ವಿಶೇಷ ಪ್ರದರ್ಶನ ಆಯೋಜಿಸಲಾಗಿದೆ. ಈ ವಿಶೇಷ ಶೋಗೆ MG Motors Mangalore ಪ್ರಾಯೋಜಕತ್ವ ನೀಡಿದ್ದು, ಕಾರ್ಯಕ್ರಮದ ಎಲ್ಲಾ ವ್ಯವಸ್ಥೆಯನ್ನು ಜೈ ಚಿತ್ರತಂಡವೇ ನಿರ್ವಹಿಸುತ್ತಿದೆ. ಬಂಟ್ವಾಳ, ವಿಟ್ಲ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ ಮತ್ತು ಮಡಿಕೇರಿ ಸೇರಿದಂತೆ ಹಲವಾರು ಪ್ರದೇಶಗಳಿಂದ ಆಗಮಿಸುವ ಮಾಧ್ಯಮ ಮತ್ತು ಪತ್ರಿಕಾ ಸ್ನೇಹಿತರಿಗಾಗಿ ಮಾತ್ರ ಈ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ: ಪವಿತ್ರ ಪಲ್ಲಪೂಜೆ

ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಜಾತ್ರಾ ಮಹೋತ್ಸವದ ನಿಮಿತ್ತ ಕಾರ್ತಿಕ ಶುದ್ಧ ಚೌತಿಯಂದು ಪವಿತ್ರ ಪಲ್ಲಪೂಜೆ, ಮಂಗಳವಾರ ಮತ್ತು ಬುಧವಾರ ಎಳೆಯಲಿರುವ ಪಂಚಮಿ ರಥ ಹಾಗೂ ಬ್ರಹ್ಮರಥಗಳ ಶಿಖರ (ಕಳಶ) ಪೂಜೆ, ಎಡೆಸ್ನಾನ ಪೂಜಾ ವಿಧಿವಿಧಾನಗಳು ನಡೆದವು. ಬೆಳಗ್ಗೆ ದೇವಸ್ಥಾನದ ಒಳಾಂಗಣದಲ್ಲಿ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿ ತಾಯರು ವಿಧಿವಿಧಾನಗಳಿಂದ ಪಲ್ಲಪೂಜೆ ನೆರವೇರಿಸಿದರು. ಬಳಿಕ ಅಕ್ಷಯಪಾತ್ರೆಗೆ ಪೂಜೆ ಸಲ್ಲಿಸಿ,

ಮಲ್ಪೆ: ಸರಕಾರಿ ಜಾಗ ವಿವಾದ: ಸ್ಥಳೀಯ ಮೀನುಗಾರರಲ್ಲಿ ಉಂಟಾಗಿದ್ದ ಆತಂಕ ನಿವಾರಣೆ

ಮಲ್ಪೆ ಪ್ರದೇಶದಲ್ಲಿ ಉಂಟಾದ ಸರಕಾರಿ ಜಾಗ ವಿವಾದದಿಂದ ಸ್ಥಳೀಯ ಮೀನುಗಾರರಲ್ಲಿ ಉಂಟಾದ ಆತಂಕ ನಿವಾರಣೆ, ನೈಜ ಮೀನುಗಾರರ ರಕ್ಷಣೆ ಹಾಗೂ ಸರ್ಕಾರ ಹೊರಡಿಸಿದ ಆದೇಶವನ್ನು ರದ್ದುಗೊಳಿಸುವ ಕುರಿತು ಉಡುಪಿ ಜಿಲ್ಲಾಧಿಕಾರಿಗೂ ಹಾಗೂ ಉಡುಪಿ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ವತಿಯಿಂದ ಮನವಿ ನೀಡಲಾಯಿತು. ಮಲ್ಪೆ ಪರಿಸರದಲ್ಲಿ ಇತ್ತೀಚೆಗೆ ಸರಕಾರಿ ಮೀನುಗಾರಿಕಾ ಜಾಗಕ್ಕೆ ಸಂಬAಧಿಸಿದAತೆ ಸರ್ಕಾರದಿಂದ ಹೊರಡಿಸಿದ ಆದೇಶದಿಂದ

ಕಾಡುಪ್ರಾಣಿಗಳ ಹಾವಳಿ ವಿರುದ್ಧ ಕ್ರಮಕ್ಕೆ ಆಗ್ರಹ
ಮಂಡೆಕೋಲು ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

ಸುಳ್ಯ: ಕಳೆದ ಎರಡು ದಶಕಗಳಿಂದ ಮಂಡೆಕೋಲು ಗ್ರಾಮಸ್ಥರನ್ನು ಕಾಡುತ್ತಿರುವ ಕಾಡಾನೆ ಹಾಗೂ ಇತರ ವನ್ಯಮೃಗಗಳ ಹಾವಳಿ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದು, ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಸೋಮವಾರ ಮಂಡೆಕೋಲಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಬೆಳಗ್ಗೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದ ನೂರಾರು ಗ್ರಾಮಸ್ಥರು ಸೂಕ್ತ ಕ್ರಮಕ್ಕೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರಳ್ಯ ಮಾತನಾಡಿ,