Home Posts tagged #v4stream (Page 17)

ಎಂ.ಸಿ.ಸಿ. ಬ್ಯಾಂಕಿನ 15ನೇ ಎಟಿಎಂ ಉಡುಪಿ ಶಾಖೆಯಲ್ಲಿ ಉದ್ಘಾಟನೆ

ಎಂಸಿಸಿ ಬ್ಯಾಂಕ್, ಮಂಗಳೂರು ತನ್ನ 15ನೇ ಎಟಿಎಂ ಅನ್ನು ನವಂಬರ್ 23, 2025ರ ರವಿವಾರ ಉಡುಪಿ ಶಾಖೆಯಲ್ಲಿ ಉದ್ಘಾಟಿಸಲಾಯಿತು.ಈ ಎಟಿಎಂ ಅನ್ನು ಉದ್ಯಾವರದ ಸೇಂಟ್ ಕ್ಸೇವಿಯರ್ ಚರ್ಚ್ ಧರ್ಮಗುರು ವಂದನೀಯ ಫಾ| ಅನಿಲ್ ಡಿಸೋಜಾ ಉದ್ಘಾಟಿಸಿದರು. ಉಡುಪಿಯ ಶೋಕಮಾತೆ ಚರ್ಚ್ ಧರ್ಮಗುರು ವಂದನೀಯ ಫಾ| ಚಾರ್ಲ್ಸ್ ಮಿನೇಜಸ್ ಅವರು ಎಟಿಎಂ ಅನ್ನು ಆಶೀರ್ವದಿಸಿದರು. ಹೊಸದಾಗಿ

ಬಟ್ಟೆ ತೊಳೆಯಲು ತೆರಳಿದ ದಂಪತಿ ಹೇಮಾವತಿ ನಾಲೆಯಲ್ಲಿ ಬಿದ್ದು ಸಾವಿಗೀಡಾದ ದುರ್ಘಟನೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನ. 23ರಂದು ಸಂಭವಿಸಿದ ದಾರುಣ ಘಟನೆ ಗ್ರಾಮಸ್ಥರನ್ನು ಕಣ್ಣೀರಲ್ಲಿಟ್ಟುಬಿಟ್ಟಿದೆ. ಹೇಮಾವತಿ ನಾಲೆಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ದಂಪತಿ ದುರಂತವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಬಟ್ಟೆ ತೊಳೆಯುವ ಸಂದರ್ಭ ದೀಪು ಕಾಲು ಜಾರಿಬಿದ್ದು ನಾಲೆಗೆ ಬಿದ್ದಾಳೆ. ತಕ್ಷಣವೇ ಪತ್ನಿಯನ್ನು ರಕ್ಷಿಸಲು ಗೋಪಾಲ್ ನಾಲೆಗೆ ಇಳಿದರೂ, ನಾಲೆಯಲ್ಲಿ ಹರಿಯುತ್ತಿದ್ದ ಭಾರೀ ಪ್ರಮಾಣದ ನೀರಿನ ಹರಿವು

ಪುತ್ತೂರು :ರಾಜಸ್ಥಾನದಲ್ಲಿ ನಡೆಯುವ ಹುಡುಗರ ಮತ್ತು ಹುಡುಗಿಯರ 49ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್ಶಿಪ್

ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನಲ್ಲಿ .ಬಾಲಕರ ಮತ್ತು ಬಾಲಕಿಯರ 49ನೇ ಜೂನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ 2025 ರ ಡಿಸೆಂಬರ್ 16 ರಿಂದ 21 ರವರೆಗೆ ರಾಜಸ್ಥಾನದ ಜುನ್ಜುನುವಿನ ಪಿಲಾನಿಯಲ್ಲಿ ನಡೆಯಲಿದೆ . ಕರ್ನಾಟಕ ರಾಜ್ಯ ವಾಲಿಬಾಲ್ ಅಸೋಸಿಯೇಷನ್ ಗೆ .ವಾಲಿಬಾಲ್ ಫೆಡರೇಶನ್ ಆಫ್ ಇಂಡಿಯಾ ಕಳುಹಿಸಿರುವ ಸುತ್ತೋಲೆ ಪ್ರಕಾರ ದಿನಾಂಕ: 27ನೇ ಮತ್ತು 28 ನವೆಂಬರ್ 2025 ರಂದು ಬೆಳಗ್ಗೆ 9 ಗಂಟೆಗೆ ಭಾರತೀಯ ಕ್ರೀಡಾ

ಅಜ್ಜಾವರ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

“ಮನಸ್ಸು ಮತ್ತು ಬುದ್ಧಿಯ ಹತೋಟಿ ದುಶ್ಚಟ ಮುಕ್ತ ಸಮಾಜಕ್ಕೆ ಬುನಾದಿ”ಡಾ. ಅನುರಾಧಾ ಕುರುಂಜಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸುಳ್ಯ ವತಿಯಿಂದ ಅಜ್ಜಾವರ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು 24-11-2025 ರಂದು ನಡೆಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು SDMC ಅಧ್ಯಕ್ಷರಾದ ಶ್ರೀ ಪ್ರಕಾಶ್ ಕಣೆಮರಡ್ಕ ರವರು ವಹಿಸಿದ್ದರು. ಕಾರ್ಯಕ್ರಮವನ್ನು ಅಜ್ಜಾವರ ವಲಯದ ಜನ ಜಾಗೃತಿ ಅಧ್ಯಕ್ಷರಾದ ಶ್ರೀ

ಕಿಟೆಲ್ ತುಳು ಭಾಷೆಗೆ ಅನನ್ಯ ಕೊಡುಗೆ ನೀಡಿದವರು : ಪ್ರಶಾಂತ್ ಪಂಡಿತ್

ಮಂಗಳೂರು: ಕನ್ನಡದ ಮೊಟ್ಟ ಮೊದಲ ಶಬ್ದಕೋಶವನ್ನು ತಯಾರಿಸಿದ ಫರ್ಡಿನೆಂಡ್ ಕಿಟೆಲ್ ಅವರು ತುಳು ಭಾಷೆಗೆ ಅನನ್ಯವಾದ ಕೊಡುಗೆ ನೀಡಿದವರು. ಕಿಟ್ಟೆಲ್ ಅವರು ಮಂಗಳೂರಿನಲ್ಲಿ ಕಳೆದ ದಿನಗಳು ಅವರ ಬದುಕಿನ ಮಹತ್ವದ ವಿದ್ವತ್ ಪೂರ್ಣ ದಿನಗಳಾಗಿದ್ದವು ಎಂದು ಸಂಶೋಧಕ, ಹಾಗೂ ಸಾಕ್ಷ್ಯ ಚಿತ್ರ ನಿರ್ಮಾಪಕ ಪ್ರಶಾಂತ್ ಪಂಡಿತ್ ಅವರು ಅಭಿಪ್ರಾಯಪಟ್ಟರು. ಅವರು ಮಂಗಳೂರಿನ ತುಳು ಭವನದಲ್ಲಿ ಕರ್ನಾಟಕದ ತುಳು ಸಾಹಿತ್ಯ ಅಕಾಡೆಮಿಯು ಆಯೋಜಿಸಿದ್ದ ತುಳು ಭಾಷೆಗೆ ಕಿಟ್ಟೆಲ್ ಅವರ

Father Muller Paediatrics host Children’s Day

The Department of Paediatrics, Father Muller Medical College Hospital (FMMCH), together with the Department of Paediatric Nursing, Father Muller College of Nursing (FMCON) and Department of Speech and Hearing celebrated Children’s Day with great enthusiasm in the Conference Hall on the afternoon of 15th November 2025. The event was a heart-warming occasion, filled

ಸುರತ್ಕಲ್‌-ನಂತೂರು-ಬಿ.ಸಿ ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ

ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಅನುಮೋದನೆ ನೀಡಿದೆ. ಆ ಮೂಲಕ ಹಲವು

ಪುತ್ತೂರು: ಯುವಕನ ದುರಂತ ಅಂತ್ಯ; ತಂದೆ-ತಾಯಿಯಂತೆಯೇ ಮಗನೂ ಆತ್ಮಹತ್ಯೆಗೆ ಶರಣು

ಪುತ್ತೂರು: ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪುರುಷರಕಟ್ಟೆ ಇಂದಿರಾನಗರದಲ್ಲಿ ನವೆಂಬರ್ 21ರಂದು ನಡೆದಿದೆ. ಮೃತರನ್ನು ಪುರುಷರಕಟ್ಟೆ ಇಂದಿರಾನಗರ ನಿವಾಸಿ, ದಿವಂಗತ ಪ್ರವೀಣ್ ಜೋಗಿ ಅವರ ಪುತ್ರ ಪ್ರತೀಕ್ (23) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಶೋರೂಮ್‌ ವರ್ಕ್‌ಶಾಪ್‌ ಒಂದರಲ್ಲಿ ಉದ್ಯೋಗದಲ್ಲಿದ್ದ ಪ್ರತೀಕ್, ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಗುರುವಾರ ಮಧ್ಯಾಹ್ನ

ಕಾಪು ಪುರಸಭೆ ಬೀಡುಬದಿ ವಾರ್ಡಿನ ರಸ್ತೆ ಅಭಿವೃದ್ಧಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ

ಕಾಪು ಪುರಸಭಾ ವ್ಯಾಪ್ತಿಯ ಬೀಡುಬದಿ ವಾರ್ಡಿನ ಶ್ರೀ ಕೃಷ್ಣ ಪೂಜಾರಿ ಅವರ ಮನೆಯಿಂದ ಸಾದು ಶೆಟ್ಟಿ ಮನೆ ವರೆಗೆ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು 20-11-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಪುರಸಭೆಯ

ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರಿಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರಧಾನ

ಸಹಕಾರ ಕ್ಷೇತ್ರದಲ್ಲಿ ನೀಡಿದ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ ಮಂಗಳೂರಿನ ಉರ್ವ ಸ್ಟೋರ್‌ನ ತುಳುಭವನ ಸಿರಿ ಚಾವಡಿಯಲ್ಲಿ 16 ನವೆಂಬರ್ 2025 ರಂದು ನಡೆದ 72ನೇ ಸಹಕಾರ ಸಪ್ತಾಹ ಆಚರಣೆಯ ಸಮಾರಂಭದಲ್ಲಿ ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರಿಗೆ 2025 ರ ಪ್ರತಿಷ್ಠಿತ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ತುಳುನಾಡು ರಕ್ಷಣಾ ವೇದಿಕೆ (ರಿ) ಮತ್ತು ತುಳುನಾಡು ಸೂರ್ಯ ಪತ್ರಿಕೆ ಜಂಟಿಯಾಗಿ ಆಯೋಜಿಸಿದ