Home Posts tagged #v4stream (Page 18)

ಕಿಟೆಲರ ತುಳು ಒಡನಾಟ’ : ವಿಚಾರಗೋಷ್ಠಿ ಮತ್ತು ಸಾಕ್ಷ್ಯ ಚಿತ್ರ ಪ್ರದರ್ಶನ

ಮಂಗಳೂರು: ತುಳು ಭಾಷೆ ಮತ್ತು ತುಳುನಾಡಿನೊಂದಿಗೆ ಕಿಟೆಲ್ ಅವರ ಒಡನಾಟದ ಬಗ್ಗೆ ಹೊಸ ಬೆಳಕು ಚೆಲ್ಲುವ ವಿಚಾರ ಮಂಥನ ಕಾರ್ಯಕ್ರಮ ನ.22ರ ಶನಿವಾರದಂದು ಬೆಳಿಗ್ಗೆ 10:00 ಗಂಟೆಗೆ ಮಂಗಳೂರಿನ ಊರ್ವ ಸ್ಟೋರ್ ನಲ್ಲಿರುವ ತುಳು ಭವನದಲ್ಲಿ ನಡೆಯಲಿದೆ. ಕರ್ನಾಟಕದಲ್ಲಿ ಸುದೀರ್ಘ ಕಾಲ ಅಧ್ಯಯನ ಹಾಗೂ ಕ್ಷೇತ್ರಕಾರ್ಯ ಮಾಡಿ ಕನ್ನಡದ ನಿಘಂಟು ರೂಪಿಸಿದ ರೆವೆರೆಂಡ್ ಫರ್ಡಿನೆಂಡ್

ಜಿಲ್ಲಾ ಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪಧೆ೯ : ಆಳ್ವಾಸ್ ಪ. ಪೂ. ಕಾಲೇಜಿಗೆ ಅವಳಿ ಪ್ರಶಸ್ತಿ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಮತ್ತು ಶ್ರೀ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜು ಎಡಪದವು ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಅವಳಿ ಪ್ರಶಸ್ತಿ ಪಡೆದಿದೆ. ಆಳ್ವಾಸ್ ಹುಡುಗರ ವಿಭಾಗದಲ್ಲಿ 4 ಚಿನ್ನ, 2 ಬೆಳ್ಳಿ ಹಾಗೂ 1 ಕಂಚಿನ ಪದಕಗಳೊಂದಿಗೆ ಒಟ್ಟು 7 ಪದಕ ಗಳಿಸಿ 178 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿತು. ಹುಡುಗಿಯರ ವಿಭಾಗದಲ್ಲಿ 5 ಚಿನ್ನ, 2

ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

ಕಡಬ: ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26 ನೇ ಸಾಲಿನ ವಾರ್ಷಿಕ ಕ್ರೀಡೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು.ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಯುತ ಪುನೀತ್ ದೈಹಿಕ ಶಿಕ್ಷಕರು ಬೆಥನಿ ಪಿ ಯು ಕಾಲೇಜ್ ನೂಜಿಬಾಳ್ತಿಲ ಇವರು ದೀಪಬೆಳಗಿಸಿ ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯು ಮಹತ್ವವಾಗಿದೆ ಎಂದು ಹೇಳಿ ಕ್ರೀಡೋತ್ಸವಕ್ಕೆ ಚಾಲನೆಯನ್ನು ನೀಡಿದರು. ಸಂಸ್ಥೆಯ ಸಂಚಾಲಕರಾದ ವಂದನೀಯ ಗುರುಗಳಾದ ಪ್ರಕಾಶ್ ಪೌಲ್ ಡಿ’ಸೋಜ ವಿದ್ಯಾರ್ಥಿಗಳಿಗೆ ಶುಭ

ಬೆಳ್ತಂಗಡಿ : ಕಾರು – ಸ್ಕೂಟರ್ ನಡುವೆ ಅಪಘಾತ

ಓರ್ವ ವಿದ್ಯಾರ್ಥಿನಿ ಸಾವು : ಮತ್ತೊರ್ವ ವಿದ್ಯಾರ್ಥಿನಿ ಗಂಭೀರ ಬೆಳ್ತಂಗಡಿ : ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರೆ ಓರ್ವರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ನ.19ರಂದು ಮಧ್ಯಾಹ್ನ ಸಂಭವಿಸಿದೆ. ಸ್ಕೂಟರ್ ಸವಾರೆ, ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯಾ (21) ಮೃತಪಟ್ಟವರು. ಸ್ಕೂಟರ್‌ನ ಇನ್ನೋರ್ವ ಸವಾರೆ, ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ನಿವಾಸಿ ಪ್ರಣಮ್ಯ

ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಮಂಗಳೂರು “ಹಿರಿಯ ನಾಗರಿಕರ ದಿನಾಚರಣೆ”

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಹಾಗೂ ವಕೀಲರ ಸಂಘ (ರಿ.) ಪುತ್ತೂರುಇವರ ಸಂಯುಕ್ತ ಆಶ್ರಯದಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಮಂಗಳೂರುಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಇವರುಗಳ ಸಹಯೋಗದೊಂದಿಗೆ ಹಿರಿಯ ನಾಗರಿಕರ ದಿನಾಚರಣೆ” ಯ ಅಂಗವಾಗಿ ಕಾನೂನು ಮಾಹಿತಿ ಕಾರ್ಯಕ್ರಮ ಮನೀಷಾ ಸಭಾಂಗಣ, ಪುತ್ತೂರು, ಇಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು

ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಗೆ ನೂತನ ಸಮಿತಿ ಆಯ್ಕೆ

ರಚನಾ – ಮಂಗಳೂರಿನ ಕಥೊಲಿಕ್ ವಾಣಿಜ್ಯ ಮಹಾಮಂಡಳಿಯ ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊಮಂಗಳೂರಿನ ಕಥೊಲಿಕ್ ವಾಣಿಜ್ಯ ಮಹಾಮಂಡಳಿ – ರಚನಾದ 26ನೇ ಸಾಮಾನ್ಯ ಸಭೆ 16.11.25ರಂದು ಬೆಂದೂರ್ ಹಾಲ್‌ನಲ್ಲಿ ನಡೆಯಿತು. ಕಥೊಲಿಕ್ ಮುಖಂಡ ಮತ್ತು ಉದ್ಯಮಿ ರೊಯ್ ಕ್ಯಾಸ್ತೆಲಿನೊ ಅವರನ್ನು ಮುಂದಿನ ಎರಡು ವರ್ಷದ ಅವಧಿಗೆ ಏಕಮತದಿಂದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಸಂಸ್ಥೆಯ ನೇತೃತ್ವದಲ್ಲಿ ಇದು ಒಂದು ಪ್ರಮುಖ ಬದಲಾವಣೆ ಆಗಿದ್ದು, ಕ್ಯಾಥೋಲಿಕ್ ಸಮುದಾಯದ

ಸಿಒಡಿಪಿ ಯಿಂದ “ಲಿಂಗ ಸಮಾನತೆ ಮತ್ತು ನ್ಯಾಯ” ಕುರಿತ ಪ್ರೇರಣಾದಾಯಕ ತಂಡ ತರಬೇತಿ ಕಾರ್ಯಕ್ರಮ

“ಲಿಂಗ ಸಮಾನತೆ ಮತ್ತು ನ್ಯಾಯ” ಕುರಿತ ಪ್ರೇರಣಾದಾಯಕ ತಂಡ ತರಬೇತಿ ಕಾರ್ಯಕ್ರಮವನ್ನು 2025ರ ನವೆಂಬರ್ 17ರಂದು ಸಿಒಡಿಪಿಯಲ್ಲಿ ಆಯೋಜಿಸಲಾಯಿತು. KROSS ಬೆಂಗಳೂರು ಹಾಗೂ CODP®️ ಮಂಗಳೂರಿನ ಸಹಯೋಗದಲ್ಲಿ ಮಹಿಳಾ ಸದೃಢೀಕರಣ ಯೋಜನೆ ಘಟಕದಡಿ ಈ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ಶ್ರೀ ರಾಜಶೇಖರ್, ಸಂಯೋಜಕ – ಮಹಿಳಾ ಸದೃಢೀಕರಣ ಯೋಜನೆ (KROSS, ಬೆಂಗಳೂರು), ಡಾ. ರೋಹನ್ ಎಸ್. ಮೊನಿಸ್, ಮುಖ್ಯ ಆಡಳಿತಾಧಿಕಾರಿ – ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ

ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಭಂಡಾರಿ ನೇಮಕ

ಕುಂದಾಪುರ:ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿಯವರನ್ನು ಹಕ್ಕು ಬಾಧ್ಯತಾ ಸಮಿತಿಯ ಅಧ್ಯಕ್ಷರನ್ನಾಗಿ ಕರ್ನಾಟಕ ವಿಧಾನ ಪರಿಷತ್‌ನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4)ರ ಮೇರೆಗೆ ಸಭಾಪತಿಯವರು ನೇಮಕ ಮಾಡಿ ಆದೇಶಿಸಿದ್ದಾರೆ. ಸದಸ್ಯರಾಗಿ ಭಾರತಿ ಶೆಟ್ಟಿ, ಎಸ್.ವಿ. ಸಂಕನೂರ, ನಿರಾಣಿ ಹಣಮಂತ್ ರುದ್ರಪ್ಪ, ಶರವಣ ಟಿ.ಎ., ಡಾ. ಚಂದ್ರಶೇಖರ್ ಬಸವರಾಜ ಪಾಟೀಲ, ಕೆ.ಎಸ್. ನವೀನ್, ತಿಪ್ಪಣ್ಣಪ್ಪ ಕಮಕನೂರ, ರಾಮೋಜಿಗೌಡ ಅವರನ್ನು ನೇಮಿಸಲಾಗಿದೆ. ವಿಧಾನ

ಯಕ್ಷಾಂಗಣ ತಾಳಮದ್ದಳೆ ಸಪ್ತಾಹ ಆಮಂತ್ರಣ ಪತ್ರಿಕೆ ಬಿಡುಗಡೆ

ಯಕ್ಷಾಂಗಣದಿಂದ ಕನ್ನಡದ ನುಡಿ ಹಬ್ಬ ಆಚರಣೆ: ಕೆ.ಕೆ.ಶೆಟ್ಟಿ ಮಂಗಳೂರು: ‘ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ವಾರವಿಡೀ ಯಕ್ಷಗಾನ ತಾಳಮದ್ದಳೆಗಳನ್ನು ನಡೆಸುವ ಮೂಲಕ ಯಕ್ಷಾಂಗಣ ಸಂಸ್ಥೆ ನಿಜಾರ್ಥದಲ್ಲಿ ಕನ್ನಡದ ನುಡಿ ಹಬ್ಬವನ್ನು ಆಚರಿಸುತ್ತಿದೆ. ಸುಲಲಿತವಾದ ಕನ್ನಡ ಭಾಷೆಯನ್ನು ಯಕ್ಷಗಾನದಂತೆ ಸಶಕ್ತವಾಗಿ ಬಳಸಿಕೊಳ್ಳುವ ಕಲಾ ಮಾಧ್ಯಮ ಬೇರೊಂದಿಲ್ಲ’ ಎಂದು ಅಹ್ಮದ್ ನಗರದ ಉದ್ಯಮಿ ಹಾಗೂ ಮುಂಡಪಳ್ಳ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ

ವಿದ್ಯಾರ್ಥಿಗಳ ಸೃಜನಶೀಲ ಪ್ರತಿಭೆಯ ಅನಾವರಣಕ್ಕೆ ಪತ್ರಿಕೆಯು ಉತ್ತಮ ವೇದಿಕೆಯಾಗಲಿ- ಅಭಯಚಂದ್ರ ಜೈನ್

ಮೂಡುಬಿದಿರೆ : ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ದ್ವೈಮಾಸಿಕ ಪತ್ರಿಕೆ “ವಾಯ್ಸ್ ಆಫ್ ವೈಬ್ರೆಂಟ್”ನ ಬಿಡುಗಡೆ ಸಮಾರಂಭವು ಸೋಮವಾರ ನಡೆಯಿತು. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ವಾಯ್ಸ್ ಆಫ್ ವೈಬ್ರೆಂಟ್ ಪತ್ರಿಕೆಯ ಮೊದಲ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಪಠ್ಯ ಚಟುವಟಿಕೆಯೊಂದಿಗೆ ಪಠ್ಯೇತರ ಕೌಶಲವನ್ನು ಬರವಣಿಗೆಯ ರೂಪದಲ್ಲಿ ಈ ಪತ್ರಿಕೆಯಲ್ಲಿ ಪ್ರಕಟಿಸಬೇಕು. ಸಂಸ್ಥೆಯು ತಮಗೆ