Home Posts tagged #v4stream (Page 200)

ಕಾಂಗ್ರೆಸ್‌ನಿಂದಾಗಿ ಬಿಜೆಪಿಯವರು ರಾಜ್ಯಭಾರ ಮಾಡುತ್ತಿದ್ದಾರೆ : ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ 

ಕಾಂಗ್ರೆಸ್‌ನಿಂದಾಗಿ ಸಿಟಿ ರವಿ ಸಹಿತ ಬಿಜೆಪಿಯವರು ರಾಜ್ಯಭಾರ ಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ದೇಗುಲ ಧ್ವಂಸ ಮಾಡಿದ್ದು ತಾಲಿಬಾನ್ ಕೃತ್ಯ, ಇದು ಸಂವಿಧಾನ ವಿರೋಧಿ ಅಂದರು. ದೇವರ ಹೆಸರಿನಲ್ಲಿ ರಾಜಕೀಯ

ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಂವಾದ ಕಾರ್ಯಕ್ರಮ

ಮಂಗಳೂರು ನಗರ ಪೊಲೀಸ್ ವತಿಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸಂವಾದ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಮಂಗಳೂರಿನ ಎಸ್.ಸಿ.ಡಿ.ಸಿಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಗರ ಪೊಲೀಸ್ ವತಿಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸಂವಾದ ಕಾರ್ಯಕ್ರಮವನ್ನ ನಡೆಸಲಾಯ್ತು. ಇನ್ನು ಕಾರ್ಯಕ್ರಮವನ್ನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು

ನೀರೆಂದು ಭಾವಿಸಿ ಪೆಟ್ರೋಲ್‌ ಕುಡಿದು ಅಜ್ಜಿ ಸಾವು

ನೀರು ಎಂದು ಬಾಟಲಿಯಲ್ಲಿದ್ದ ಪೆಟ್ರೋಲ್‌ ಅನ್ನು ಕುಡಿದು ಅಜ್ಜಿ ಸಾವನ್ನಪ್ಪಿದ ಘಟನೆ ಪೆರ್ನೆ ಸಂಪದಕೋಡಿಯಲ್ಲಿ ನಡೆದಿದೆ.ಪದ್ಮಾವತಿ ಅವರು ಸೆ.26ರಂದು ಪೆರ್ನೆಯ ಮಗಳ ಮನೆಗೆ ಬಂದಿದ್ದರು. ಹುಲ್ಲು ಕತ್ತರಿಸುವ ಯಂತ್ರಕ್ಕೆಂದು ತಂದಿಟ್ಟಿದ್ದ ಪೆಟ್ರೋಲ್‌  ಬಾಟಲಿಯನ್ನು ನೀರೆಂದು ಭಾವಿಸಿ ಕುಡಿದಿದ್ದಾರೆ. ಈ ಸಂದರ್ಭ ಅಸ್ವಸ್ಥರಾದ ಅವರನ್ನು ಮಂಗಳೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಚಿಕಿತ್ಸೆ ಫಲಿಸದೇ ಬುಧವಾರ

ಧ್ವನಿ ವರ್ಧಕ ಮೂಲಕ ಶಬ್ದಮಾಲಿನ್ಯ ತಡೆಯಲು ಆಗ್ರಹ : ಅ.7ರಂದು ಪ್ರತಿಭಟನೆ

ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಹಿಂದೂ ದೇವಸ್ಥಾನಗಳನ್ನು ರಾತ್ರೋರಾತ್ರಿ ನೆಲಸಮ ಮಾಡುವ ಕೆಲಸಕ್ಕೆ ಕೈ ಹಾಕಿದೆ. ಆದರೆ ಕಳೆದ 21 ವರ್ಷದ ಹಿಂದೆಯೇ ಶಬ್ದ ಮಾಲಿನ್ಯ ಹಿನ್ನೆಲೆಯಲ್ಲಿ ರಾತ್ರಿ 10ರಿಂದ ಬೆಳಗ್ಗೆ 6ರ ವರೆಗೆ ಧ್ವನಿವರ್ಧಕ ಹಾಗೂ ಇತರೆ ಮಾಧ್ಯಮ ಮೂಲಕ ಶಬ್ದ ಮಾಲಿನ್ಯ ತಡೆಯಲು ಆದೇಶಿಸಿದೆ. ಹಲವಾರು ಹೈಕೋರ್ಟ್‍ಗಳಯ ಕಟ್ಟುನಿಟ್ಟಾಗಿ ಆಜ್ಞೆ ಪಾಲಿಸಲು ಹೇಳಿದ್ದರೂ ಇಂದಿಗೂ ಪಾಲನೆ ಯಾಕೆ ಆಗುತ್ತಿಲ್ಲ ಎಂದು ಶ್ರೀರಾಮ ಸೇನೆಯ ರಾಜ್ಯ ಪ್ರಧಾನ

ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವ : ಅ.2ರಂದು ಸಂರಕ್ಷಣಾ ಅಭಿಯಾನ

ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವದ ಸಂಭ್ರಮೋತ್ಸವದ ಆಚರಣೆ ಸಂರಕ್ಷಣಾ ಅಭಿಯಾನವು ಆಕ್ಟೋಬರ್ 2ರಂದು ಬೆಳಗ್ಗೆ 9 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣಗೈದು ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪಾದಯಾತ್ರೆಯನ್ನು ಪ್ರಾರಂಭಿಸಲಾಗುವುದು ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಬಿ. ಸಲ್ಯಾನ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಈ ಅಮೃತ

ಪುತ್ತೂರು : ದೇವಸ್ಥಾನ ಸಹಿತ ಪ್ರಾರ್ಥನಾ ಮಂದಿರಗಳ ದ್ವಂಸ ಖಂಡಿಸಿ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ

ಪುತ್ತೂರು; ಸರ್ವ ಧರ್ಮಿಯರ ಧಾರ್ಮಿಕ ಭಾವನೆಗಳಿಗೆ ದಕ್ಕೆಯನ್ನುಂಟುಮಾಡಿ ಕತ್ತಲ್ಲಿರುವ ಸರಕಾರಕ್ಕೆ ಬೆಳಕು ತೋರಿಸುವ ನಿಟ್ಟಿನಲ್ಲಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪಂಜಿನ ಆಗ್ರಹ ನಗರದ ಅಮರ್ ಜವಾನ್ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಹಿಂದುತ್ವದ ಆಧಾರದಲ್ಲಿ ಆಡಳಿತಕ್ಕೆ ಬಂದ ಬಿಜೆಪಿ ಸರಕಾರ ದೇವಸ್ಥಾನಗಳನ್ನು ಕೆಡವುವ ಮೂಲಕ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುತ್ತಿದ್ದು,

ಕಂಪ್ಯೂಟರ್ ವಿಜ್ಞಾನಿ ಕೆ.ಪಿ.ರಾವ್ ಅವರಿಗೆ ಡಾ. ಶಿವರಾಮ ಕಾರಂತರ ಬಾಲವನ ಪ್ರಶಸ್ತಿ

ಡಾ. ಶಿವರಾಮ ಕಾರಂತರ ಬಾಲವನ ಪ್ರಶಸ್ತಿಗೆ ಕಂಪ್ಯೂಟರ್ ವಿಜ್ಞಾನಿ ಕೆ.ಪಿ.ರಾವ್ ಕೀಲಿಮಣೆ ವಿನ್ಯಾಸ ತಜ್ಞ ಕಿನ್ನಿಕಂಬಳ ಪದ್ಮನಾಭ ರಾವ್(ಕೆ.ಪಿ.ರಾವ್) ಅವರನ್ನು ಆಯ್ಕೆ ಮಾಡಲಾಗಿದೆ. ಅ. 10 ಪುತ್ತೂರಿನ ಡಾ. ಶಿವರಾಮ ಕಾರಂತ ಬಾಲವನದಲ್ಲಿ ನಡೆಯಲಿರುವ ಕಾಂತರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ತಿಳಿಸಿದ್ದಾರೆ. ಅವರು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ

ಕಾಪು ಬ್ಲಾಕ್ ಹಾಗೂ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ

ದೇವಸ್ಥಾನ ಸಹಿತ ಪ್ರಾರ್ಥನಾ ಮಂದಿಗಳ ದ್ವಂಸ ವಿರೋಧಿ ಕಾಪು ಬ್ಲಾಕ್ ಕಾಂಗ್ರೆಸ್ ಹಾಗೂ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಪಡುಬಿದ್ರಿ ಬೀಡು ಬಳಿಯಿಂದ ಪಡುಬಿದ್ರಿ ಮುಖ್ಯ ಪೇಟೆಯವರಗೆ ನಡೆದ ಬೃಹತ್ ಪಂಜಿನ ಮೆರವಣಿಗೆಯಲ್ಲಿ ನೂರಾರು ಮಂದಿ ಕಾರ್ಯಕರ್ತರು ಪಾಲ್ಗೊಂಡಿದ್ದು ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿದರು. ಬಳಿಕ ಪಡುಬಿದ್ರಿ ಪೇಟೆಯಲ್ಲಿ ಸೇರಿದ ಸಭೆಯನ್ನು ಉದ್ಧೇಶಿಸಿ ಮಾತನಾಡಿದ ನ್ಯಾಯವಾದಿ

ಮಂಜೇಶ್ವರ ಗ್ರಾ. ಪಂ.ನಲ್ಲಿ ಬೀಫ್ ಸ್ಟಾಲ್ ಸ್ಥಾಪನೆಗೆ ವಿರೋಧ : ಪ್ರತಿಭಟನೆ

ಮಂಜೇಶ್ವರ : ಮಂಜೇಶ್ವರ ಗ್ರಾ. ಪಂ. ಬೋರ್ಡ್ ಸಭೆಯಲ್ಲಿ ಬೀಫ್ ಸ್ಟಾಲ್ ಸ್ಥಾಪನೆಗೆ ಆಡಳಿತ ಮಂಡಳಿ ಅಜೆಂಡಾದ ಬಗ್ಗೆ ಚರ್ಚಿಸಿ ಆ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳದೆ ಇರುವುದರಿಂದ ಘರಂ ಆದ ವಿರೋಧ ಪಕ್ಷದ ಯುಡಿಎಫ್ ಸದಸ್ಯರುಗಳು ಬೀಫ್ ಸ್ಟಾಲ್‍ಗಳನ್ನು ವಿರೋಧಿಸುತ್ತಿರುವುದು ಆರೆಸ್ಸಸ್ ಅಜೆಂಡಾವನ್ನು ಪ್ರಾಬಲ್ಯಕ್ಕೆ ತರುವ ಯತ್ನವಾಗಿರುವುದಾಗಿ ಆರೋಪಿಸಿ ಬೋರ್ಡ್ ಸಭೆಯನ್ನು ತ್ಯಜಿಸಿ ಹೊರ ಬಂದು ಪ್ರತಿಭಟಿಸಿದರು. ಇವರೊಂದಿಗೆ ಎಸ್ ಡಿ ಪಿ ಐ ಹಾಗೂ ಆಡಳಿತರಂಗ

ಉದ್ಯಮಿ ಜಾರ್ಕಳ ಅಜಿತ್ ಹೆಗ್ಡೆ ನಿಧನ

ಕಾರ್ಕಳ ತಾಲೂಕಿನ ಉದ್ಯಮಿ, ಸಾಮಾಜಿಕ ಕಾರ್ಯಕರ್ತರು ಹಾಗೂ ಕಾರ್ಕಳದ ಲತಾ ಮೆಡಿಕಲ್ಸ್‍ನ ಸ್ಥಾಪಕರಾದ ಜಾರ್ಕಳ ಅಜಿತ್ ಹೆಗ್ಡೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರ ಅಂತಿಮ ದರ್ಶನವು ಸೆ.30ರಂದು ಬೆಳಗ್ಗೆ 8.30ರಿಂದ 10ರ ವರೆಗೆ ಕಾರ್ಕಳದ ತೆಳ್ಳಾರ್ ರಸ್ತೆಯಲ್ಲಿರುವ ಸ್ವಗೃಹ ಕಸ್ತೂರಿಯಲ್ಲಿ ನಡೆಯಲಿದೆ. ನಂತರ ಮಧ್ಯಾಹ್ನ 12.30ಕ್ಕೆ ನಿಂಜೂರು ಪಡುಮನೆ ಎಂಬಲ್ಲಿ ಅಂತಿಮ ಸಂಸ್ಕಾರದ ವಿಧಿ ವಿಧಾನಗಳು ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.