Home Posts tagged #v4stream (Page 256)

ಶ್ರೀರಾಮಸೇನೆಗೆ ಜಯರಾಂ ಅಂಬೆಕಲ್ಲು ರಾಜೀನಾಮೆ

ಶ್ರೀರಾಮಸೇನೆಯ ರಾಜ್ಯ ನಾಯಕನ ಕಾರ್ಯವೈಖರಿ ಬಗ್ಗೆ ಬೇಸತ್ತು ಸಂಘಟನೆಗೆ ಜಯರಾಂ ಅಂಬೆಕಲ್ಲು ರಾಜಿನಾಮೆ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಶ್ರೀರಾಮಸೇನೆಯ ಸ್ಥಾಪಕ ನಗರ ಉಪಾಧ್ಯಕ್ಷಾಗಿದ್ದ ಜಯರಾಂ ರವರು ತದ ನಂತರ ವಿವಿಧ ಜವಾಬ್ದಾರಿ ನಿರ್ವಹಿಸಿ, ಜಿಲ್ಲಾಧ್ಯಕ್ಷರಾಗಿ ಎಲ್ಲಾ ಜನರನ್ನು ಸಮಾನವಾಗಿ ಕೊಂಡೊಯ್ದು ಸಂಘಟನೆಯನ್ನು ರಾಜ್ಯ ಮಟ್ಟದಲ್ಲೇ ಗುರುತಿಸಲು

ಒಮಾನ್‌: ಕಡಲಲ್ಲಿ ಮುಳುಗಿ ಮೃತಪಟ್ಟ ಉಳ್ಳಾಲದ ಯುವಕರು

ಎರಡು ವರ್ಷದ ಹಿಂದೆ ಉಳ್ಳಾಲದಿಂದ ಒಮಾನ್‌ ದೇಶಕ್ಕೆ ಉದ್ಯೋಗಕ್ಕಾಗಿ ತೆರಳಿದ್ದ ಇಬ್ಬರು ಯುವಕರು ಅಲ್ಲಿನ ಕಡಲಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಉಳ್ಳಾಲದ ರಿಜ್ವಾನ್ ಅಲೇಕಳ (25), ಉಳ್ಳಾಲ ಕೋಡಿ ನಿವಾಸಿ ಜಹೀರ್ (25) ಮೃತಪಟ್ಟವರು. ಒಮಾನ್‌ನಲ್ಲಿ ಫಿಶ್ ಮಿಲ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದ ಯುವಕರು ದುಕ್ಕುಂ ಎಂಬ ಕಡಲ ತೀರಕ್ಕೆ ಶುಕ್ರವಾರ ಸಂಜೆ ವಿಹಾರಕ್ಕೆ ತೆರಳಿದ್ದರು. ರಿಜ್ವಾನ್ ಕಡಲಿನ ಅಲೆಯಲ್ಲಿ ಸಿಲುಕಿದ್ದು ಮುಳುಗುತ್ತಿದ್ದಾಗ ಜಹೀರ್

ಮೈಸೂರು ಅತ್ಯಾಚಾರ ಪ್ರಕರಣ 85 ಗಂಟೆಯ ಬಳಿಕ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಆಗಸ್ಟ್ 24ರಂದು ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತಮಿಳ್ನಾಡಿನಲ್ಲಿ 5ವರು ಆರೋಪಿಗಳನ್ನು ಬಂಧಿಸಿದ ಪೊಲೀಸ್ ಪಡೆ.ತಾಂತ್ರಿಕ ಸಾಕ್ಷಿಗಳ ಮೂಲಕ ಆರೋಪಿಗಳ ಪತ್ತೆ ಹಚ್ಚಿದ ಪೊಲೀಸರು..ಇದೀಗ ಅತ್ಯಾಚಾರಿಗಳು ಸೆರೆಸಿಕ್ಕಿದ್ದಾರೆ.ಅತ್ಯಾಚಾರ ನಡೆದು 85ಗಂಟೆಗಳ ಬಳಿಕ ಸೆರೆಸಿಕ್ಕ ಆರೋಪಿಗಳು.ಸಂತ್ರಸ್ತೆಯ ಸ್ನೇಹಿತ ನೀಡಿದ ಮಾಹಿತಿಗಳ ಅನ್ವಯ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.ಇನ್ನಷ್ಟು ಮಾಹಿತಿ ತನಿಖೆಯ ನಂತರವೇ ತಿಳಿಯಬೇಕಿದೆ

ಸ್ನಾನಗೃಹದಲ್ಲಿ ಅಡಗಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪ

ಬೆಳ್ತಂಗಡಿ: ಸ್ನಾನಗೃಹದ ಒಳಗೆ ಅವಿತಿದ್ದ ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ, ಕಾಡಿಗೆ ಬಿಟ್ಟ ಘಟನೆ ಅಳದಂಗಡಿಯ ಕೆದ್ದುವಿನಲ್ಲಿ ನಡೆದಿದೆ. ಗುರುವಾರ ಬೆಳಗ್ಗೆ ಅಳದಂಗಡಿ, ಕೆದ್ದು ನಿವಾಸಿ ಗೋಪಾಲಕೃಷ್ಣ ಭಟ್ ಅವರ ಜಿ.ಕೆ.ಫಾರ್ಮ್ಸ್ ಮನೆಯ ಸ್ನಾನ ಗೃಹದಲ್ಲಿ ಕಾಳಿಂಗ ಸರ್ಪ ಅವಿತು ಕುಳಿತಿತ್ತು. ಇಂದು ಬೆಳಗ್ಗೆ ಮನೆಯವರು ಮುಖ ತೊಳೆಯಲು ಒಳಗಡೆ ಹೋಗಿದ್ದಾರೆ, ಈ ವೇಳೆ ಒಳಗಡೆಯಿಂದ ಶಬ್ದ ಕೇಳಿಸಿದ್ದು ಕೂಡಲೇ ಅಂತಕದಿಂದ ಹೊರಗಡೆ ಓಡಿಬಂದಿದ್ದಾರೆ.

ಕೇಂದ್ರದ ಸರ್ಕಾರದ ಖಾಸಗೀಕರಣ ಯೋಜನೆ ವಿರುದ್ಧ ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರದ ಎನ್‌ಎಂಪಿ ಯೋಜನೆಯ ವಿರುದ್ಧ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಮಂಗಳೂರು ರೈಲು ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು.   ಈ ಸಂದರ್ಭ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಮೋದಿ ನೇತೃತ್ವದ ಸರಕಾರವು ದೇಶದ ಆಸ್ತಿಯನ್ನು ಮಾರಾಟ ಮಾಡುತ್ತಲೇ ಇದೆ. ಇದರ ವಿರುದ್ಧ ಯುವ ಜನತೆ ಸೆಟೆದು ನಿಲ್ಲಬೇಕಿದೆ. ಯುವ ಕಾಂಗ್ರೆಸ್ ಈ ನಿಟ್ಟಿನಲ್ಲಿ ಹೋರಾಟ ಮುಂದುವರಿಸಲಿದೆ ಎಂದರು.

ಕಡಬದಲ್ಲಿ ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ : 40 ಕೆಜಿ ದನದ ಮಾಂಸ ಸಹಿತ ಓರ್ವನ ವಶಕ್ಕೆ

ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿರುವ ಕಡಬ ಪೊಲೀಸರು 4೦ ಕೆಜಿ ದನದ ಮಾಂಸ, ಕಟ್ಟಿ ಹಾಕಿದ್ದ 4 ಕರುಗಳು ಸೇರಿದಂತೆ ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದು, ಇಬ್ಬರು ಪರಾರಿಯಾದ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕಳಾರ ನಿವಾಸಿ ಅಬ್ದುಲ್ ರಹಿಮಾನ್ ಎಂದು ಗುರುತಿಸಲಾಗಿದೆ. ಕಳಾರ ಇಸ್ಮಾಯಿಲ್ ಎಂಬವರ ಪಾಳು ಬಿದ್ದ ಶೆಡ್ ನಲ್ಲಿ ಅಕ್ರಮವಾಗಿ ಮಾಂಸ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕಡಬ ಎಸ್‌ಐ ರುಕ್ಮನಾಯ್ಕ್ ಹಾಗೂ

ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಪಡೆದ ಯುವತಿ ಮೃತ್ಯು

ಕುಂದಾಪುರ ತಾಲೂಕು ಹರ್ಕೂರು ಗ್ರಾಮದ ಗುಡಿಮನೆ ನಿವಾಸಿ ಸುಮಾರು 21ಪ್ರಾಯದ ಅಶ್ವಿನಿ ಎಂಬುವರು ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಗಸ್ಟ್ ೨೩ರಂದು ಕೋವಿಡ್ ಲಸಿಕೆಯ ಪ್ರಥಮ ಡೋಸನ್ನು ಪಡೆದುಕೊಂಡಿದ್ದರು, ಲಸಿಕೆ ಪಡೆದ ಮರುದಿನ ರಾತ್ರಿ ಅತೀಯಾಗಿ ವಾಂತಿಯಾದುದರಿಂದ ಅಸ್ವಸ್ಥತೆಗೊಂಡ ಅಶ್ವಿನಿಯವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ವೈದ್ಯರು ಪರೀಕ್ಷಿಸಿ ಕಡಿಮೆ ರಕ್ತದೊತ್ತಡ ಎಂಬುದಾಗಿ ತಿಳಿಸಿ ಕೂಡಲೇ ಮಣಿಪಾಲ್ ಆಸ್ಪತ್ರೆಗೆ

ವಿಟ್ಲ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ವಿಟ್ಲ: ಎಸ್‍ಡಿಪಿಐ ಮಂಚಿ ಗ್ರಾಮ ಸಮಿತಿ ವತಿಯಿಂದ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಮಂಚಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಎಸ್‍ಡಿಪಿಐ ಮಂಚಿ ಗ್ರಾಮ ಸಮಿತಿ ಕಾರ್ಯದರ್ಶಿ ಕಬೀರ್ ಮಂಚಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಲಾಯಿತು. ಮಂಚಿ ಪಂಚಾಯತ್ ಮುಂಭಾಗದಲ್ಲಿ ಓಲೆ ಉರಿಸಿ ಆಕ್ರೋಶ ವ್ಯಕ್ತಪಡಿಸಿಲಾಯಿತು. ಪ್ರತಿಭಟನೆ ಸಭೆಯಲ್ಲಿ ಎಸ್‍ಡಿಪಿಐ ದ.ಕ

ಕ್ರೀಡಾ ಭಾರತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ : ಆ.31ರಂದು ಮಣ್ಣಗುಡ್ಡೆಯ ಸಂಘನಿಕೇತನದಲ್ಲಿ ಕಾರ್ಯಕ್ರಮ

ಮಂಗಳೂರಿನ ಸಂಘನಿಕೇತನದ ಕ್ರೀಡಾ ಭಾರತಿಯ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಮತ್ತು ಕ್ರೀಡಾ ಭಾರತಿ ಧ್ಯಾನ್‍ಚಂದ್ ಖೇಲ್ ರತ್ನ ಪ್ರಶಸ್ತಿ, ಜೀಜಾಬಾಯಿ ಪ್ರಶಸ್ತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಅಗಸ್ಟ್ 31ರಂದು ಮಣ್ಣಗುಡ್ಡೆಯ ಸಂಘನಿಕೇತನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ರೀಡಾ ಭಾರತಿಯ ಗೌರವಾಧ್ಯಕ್ಷರಾದ ಬಿ. ನಾಗರಾಜ್ ಶೆಟ್ಟಿ ಹೇಳಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮುಂದಿನ ದಿನಗಳಲ್ಲಿ

ಈ ಬಾರಿಯೂ ವಾರಾಂತ್ಯ ಕರ್ಫ್ಯೂ : ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

ದ.ಕ. ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಈ ಬಾರಿಯೂ (ಆ. 28, 29) ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಆ. 27ರ ಶುಕ್ರವಾರ ರಾತ್ರಿ 9ರಿಂದ ಆರಂಭಗೊಳ್ಳುವ ವೀಕೆಂಡ್ ಕರ್ಫ್ಯೂ ಆ.30ರ ಸೋಮವಾರ ಬೆಳಗ್ಗೆ 5ರವರೆಗೆ ಜಾರಿಯಲ್ಲಿರುತ್ತದೆ.ಆ.28ರ ಶನಿವಾರ ಮತ್ತು ಆ.29ರ ರವಿವಾರ ಮಧ್ಯಾಹ್ನ 2ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಅವಧಿಯಲ್ಲಿ