Home Posts tagged #v4stream (Page 257)

ಹೊಸಬೆಟ್ಟುವಿನ ತಾವರೆಕೊಳದಲ್ಲಿ ಕಿರು ಸೇತುವೆ ನಿರ್ಮಾಣ : ವಿ4 ನ್ಯೂಸ್ ನ ವರದಿಗೆ ಎಚ್ಚೆತ್ತ ಅಧಿಕಾರಿಗಳು

ಹೊಸಬೆಟ್ಟುವಿನ ತಾವರೆಕೊಳದಲ್ಲಿದ್ದ ಕಿರು ಸೇತುವೆಯನ್ನು ದಿಢೀರ್ ಕೆಡವಿ ಹಾಕಿದ್ದು, ಇದರಿಂದ ಸ್ಥಳೀಯರಿಗೆ ತೊಂಬಾ ತೊಂದರೆಯಾಗಿತ್ತು. ಈ ಬಗ್ಗೆ ವಿ4 ನ್ಯೂಸ್ ಸಮಗ್ರ ವರದಿಯನ್ನು ಭಿತ್ತರಿಸಿತ್ತು. ಮಾತ್ರವಲ್ಲದೆ ಶಾಸಕ ಡಾ. ವೈ ಭರತ್ ಶೆಟ್ಟಿಯವರ ಗಮನಕ್ಕೆ ತರಲಾಗಿತ್ತು. ಇದೀಗ ಶಾಸಕರಾದ ಡಾ.ಭರತ್ ಶೆಟ್ಟಿಯವರ ಸಹಕಾರದೊಂದಿಗೆ ತಾವರೆಕೊಳದಲ್ಲಿ 74 ಲಕ್ಷ ರೂ.

ವಾರಾಂತ್ಯದ ಕರ್ಫ್ಯೂನಿಂದ ಆರ್ಥಿಕ ನಷ್ಟ ಅನುಭವಿಸಿದ್ದೇವೆ : ಬೆಳ್ತಂಗಡಿಯಲ್ಲಿ ವರ್ತಕರ ಸಂಘದ ಅರವಿಂದ ಕಾರಂತ್ ಹೇಳಿಕೆ

ಲಾಕ್ ಡೌನ್ ಸಂದರ್ಭದಲ್ಲಿ ಸುಮಾರು 64 ರಿಂದ65ದಿನಗಳ ಕಾಲ ಬೆಳ್ತಂಗಡಿ ತಾಲೂಕಿನ ಕೈಗಾರಿಕಾ ಸಂಘದ ಅಡಿಯಲ್ಲಿ ಬರುವ ವರ್ತಕರು ಸರಕಾರದ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸಿದ್ದೇವೆ. ಆ ನಂತರ ಜಿಲ್ಲಾಧಿಕಾರಿಗಳು ಮಾಡಿರುವ ವಾರಾಂತ್ಯದ ಕರ್ಪ್ಯುನಿಂದಾಗಿ ಅಂಗಡಿ ಮಾಲಕರಾದ ನಾವು ಆರ್ಥಿಕ ನಷ್ಟವನ್ನು ಅನುಭವಿಸಿದ್ದೇವೆ. ಅಲ್ಲದೆ ನೂರಾರು ನೌ ಕರರು ಕೆಲಸವನ್ನು ಕಳೆದು ಕೊಂಡು ಕಂಗಾಲಾಗಿದ್ದಾರೆ ಎಂದು ವರ್ತಕರ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತ್ ಹೇಳಿದರು. ಅವರು

ಕಿಟ್ ವಿತರಣೆಯಾಗದೆ ಕೆಟ್ಟು ಹೋಗುತ್ತಿರುವ ಆಹಾರ : ಕಾರ್ಕಳದಲ್ಲಿ ಸುಭೋದ್ ರಾವ್ ಆರೋಪ

ಕರ್ನಾಟಕದ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಊರಿನಲ್ಲಿ ಅಹಾರ ಕಿಟ್ಟ್ ವಿತರಣೆಯಾಗದೆ ಆಹಾರ ಪದಾರ್ಥಗಳು ಕೆಟ್ಟುಹೋಗುತ್ತಿವೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರಿಗೆ ಸಹಾಯವಾಗಲೆಂದು ಕಾರ್ಮಿಕ ಇಲಾಖೆಯಿಂದ ಆಹಾರ ಕಿಟ್ಟ್ ಬಿಡುಗಡೆಯಾಗಿದೆ. ಆದರೆ ಸಮರ್ಪಕವಾಗಿ ಕಿಟ್ಟ್ ವಿತರಣೆಯಾಗದೆ ಸಾವಿರಾರು ಕಿಟ್ಟ್ ಗಳ ಗೋಡಾನ್‍ನಲ್ಲಿ ರಾಶಿ ಬಿದ್ದು ಅದರ ಆಹಾರ ಪದಾರ್ಥಗಳು ಕೆಟ್ಟುಹೋಗುತ್ತಿವೆ. ಆಗೊಮ್ಮೆ ಈಗೊಮ್ಮೆ ಬಂದ ಕೆಲವು ಕಾರ್ಮಿಕರಿಗೆ

ದ.ಕ. ಜಿ.ಪಂ.ನಲ್ಲಿ ದ್ರವತ್ಯಾಜ್ಯ ನಿರ್ವಹಣೆ ಕುರಿತ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

ಸ್ವಚ್ಛ ಭಾರತ್ ಮಿಷನ್ (ಗ್ರಾ) ಹಂತ-2ರ ಮಾರ್ಗಸೂಚಿಗಳನ್ವಯ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ದ್ರವತ್ಯಾಜ್ಯ ನಿರ್ವಹಣೆ ಕುರಿತ ತರಬೇತಿ ಕಾರ್ಯಾಗಾರಕ್ಕೆ ಜಿಪಂ ಸಿಇಒ ಡಾ.ಕುಮಾರ್ ಚಾಲನೆ ನೀಡಿದರು.ವೈಜ್ಞಾನಿಕ ದ್ರವತ್ಯಾಜ್ಯ ನಿರ್ವಹಣೆಗೆ ಸೂಕ್ತ ತಂತ್ರಜ್ಞಾನಗಳನ್ನು ಗುರುತಿಸಿ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲು ಮತ್ತು ಅನುಷ್ಠಾನಗೊಳಿಸಲು ಬೆಂಗಳೂರಿನ ಸಿಡಿಡಿ ಸಂಸ್ಥೆಯ ತಾಂತ್ರಿಕ ಸಹಕಾರದೊಂದಿಗೆ ಆ.27ರಿಂದ 29ರವರಗೆ ಜಿಲ್ಲೆಯ ಎಲ್ಲಾ ತಾಂತ್ರಿಕ ವರ್ಗದ

ವಿದ್ಯಾರ್ಥಿನಿ ಮೇಲಿನ ಅತ್ಯಾಚಾರಕ್ಕೆ ಮಂಗಳೂರಿನಲ್ಲಿ ಎನ್‌ಎಸ್‌ಯುಐ ಪ್ರತಿಭಟನೆ

ಮೈಸೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಅನ್ನು ಖಂಡಿಸಿ ಹಾಗೂ ಆರೋಪಿಯನ್ನು ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿ, ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ನೇತೃತ್ವದಲ್ಲಿ ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು. ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ಮುಖಂಡರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಸಾಂಸ್ಕೃತಿಕ

Srinivas College of Physiotherapy || Onam celebration || ಶ್ರೀನಿವಾಸ ವಿವಿ ವತಿಯಿಂದ ಓಣಂ ಆಚರಣೆ

The campus of Srinivas College of Physiotherapy , Srinivas University,wore a festive look as students celebrated the festival of Onam at college campus in Pandeshwar, Mangalore on 25th August , 2021.  The lobby was decorated with pookalam (a traditional flower arrangement), while students came dressed in their best traditional wear. The main attraction of the […]

750 ಗ್ರಾಮಗಳ ದತ್ತು ಯೋಜನೆ – ಅಮೃತ ಸಮುದಾಯ ಅಭಿವೃದ್ಧಿ ಯೋಜನೆ’ ಅನುಷ್ಟಾನಕ್ಕೆ ಸರ್ಕಾರದ ಆದೇಶ – ಸಚಿವ ಡಾ. ನಾರಾಯಣಗೌಡ

ಬೆಂಗಳೂರು:ಸರ್ಕಾರ ಹತ್ತಾರು ಯೋಜನೆ ಘೋಷಣೆ ಮಾಡಿದರೂ ಅದು ಸಮರ್ಪಕವಾಗಿ ಜನರನ್ನು ತಲುಪುವುದು ಕಷ್ಟ. ಹೀಗಾಗಿ ಪ್ರತಿ ವ್ಯಕ್ತಿಗೂ ಯೋಜನೆಯ ಫಲ ಸಿಗಬೇಕು. ಬಡತನ ರೇಖೆಗಿಂತ ಕೆಳಗಿರುವ ಜನರ ಏಳಿಗೆ ಆಗಬೇಕು. ಇದಕ್ಕಾಗಿ ಸರ್ಕಾರದ ಯೋಜನೆ ಪ್ರತಿ ಮನೆ ಮನೆ ತಲುಪಲು `ಅಮೃತ ಸಮುದಾಯ ಅಭಿವೃದ್ಧಿ ಯೋಜನೆ’ಯನ್ನು ಸರ್ಕಾರ ಜಾರಿಗೆ ತಂದಿದ್ದು, ಯೋಜನೆ ಅನುಷ್ಟಾನಕ್ಕೆ ಅನುಮೋದನೆ ನೀಡಲಾಗಿದೆ. ಎನ್‍ಎಸ್‍ಎಸ್‍ನ ಸ್ವಯಂ ಸೇವಕರೇ ಇದರಲ್ಲಿ ಪ್ರಮುಖಪಾತ್ರ ವಹಿಸಲಿದ್ದಾರೆ ಎಂದು

ಆಲೂರಿನ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಾದ ಮದ್ಯ ಮಾರಾಟ: ಗ್ರಾಮಸ್ಥರ ಆಕ್ರೋಶ

ಆಲೂರು : ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿ ಮಾರಾಟವಾಗುತ್ತಿರುವುದರಿಂದ ಮದ್ಯ ಸೇವನೆಯಿಂದ ತಾಲೂಕಿನಲ್ಲಿ ಒಂದೇ ತಿಂಗಳಿಗೆ 3 ಜನ ಅಮಾಯಕರು ಮೃತಪಟ್ಟಿರುವ ಘಟನೆ ತಾಲೂಕಿನ ಕೆ.ಹೊಸಕೋಟೆ ಹೊಬಳಿ ಮಲಗಳಲೆ ಗ್ರಾಮದಲ್ಲಿ ನಡೆದಿದೆ. ಅಬಕಾರಿ ಇಲಾಖೆ ಭ್ರಷ್ಟ ಅಧಿಕಾರಿಗಳ ಹಾಗೂ ಉಳ್ಳವರ ಶಕ್ತಿಯಿಂದ ಮದ್ಯ ಮಾರಾಟ ಮಾಡುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಎಗ್ಗಿಲ್ಲದೆ ಸಾಗುತ್ತಿದ್ದು ಕುಡುಕರು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮದ್ಯ

ಸಾರ್ವಜನಿಕ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡುವಂತೆ ದ.ಕ. ಜಿಲ್ಲಾ ಶ್ರೀರಾಮ ಸೇನೆ ಒತ್ತಾಯ

ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕು. ಸರ್ಕಾರ ಅವಕಾಶ ನೀಡದಿದ್ದರೆ ಬಿಜೆಪಿ ಶಾಸಕರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಶ್ರೀ ರಾಮ ಸೇನೆಯ ಆನಂದ ಶೆಟ್ಟಿ ಅಡ್ಯಾರ್ ಎಚ್ಚರಿಕೆ ನೀಡಿದರು. ನೂರಾರು ವರ್ಷಗಳಿಂದ ನಡೆದು ಬಂದ ಸಾರ್ವಜನಿಕ ಗಣೇಶೋತ್ಸವ ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ನಿಷೇಧ ವಿಧಿಸಿದೆ. ಆದರೆ ಎಲ್ಲರ ಜೀವನ ಸಾಮಾನ್ಯ ಸ್ಥಿತಿಗೆ ಮರಳಿದ್ದರೂ ನಿರ್ಬಂಧ ವಿಧಿಸಿದ್ದು ಖಂಡನಾರ್ಹ. ಈ ಹಬ್ಬವನ್ನೇ ಅವಲಂಬಿಸಿರುವ

ದೇರಳಕಟ್ಟೆಯಲ್ಲಿ ಗೂಡ್ಸ್ ವಾಹನ ಪಲ್ಟಿ: ಚಾಲಕ ಅಪಾಯದಿಂದ ಪಾರು

ದೇರಳಕಟ್ಟೆ: ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿರುವ ಘಟನೆ ಕುತ್ತಾರು ನಿತ್ಯಾನಂದನಗರ ಬಳಿ ಇಂದು ನಡೆದಿದೆ. ದೇರಳಕಟ್ಟೆ ಕಡೆಯಿಂದ ತೊಕ್ಕೊಟ್ಟು ಕಡೆಗೆ ಹಣ್ಣುಹಂಪಲುಗಳನ್ನು ಸಾಗಾಟ ನಡೆಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರಳಿದೆ. ಟೆಂಪೋದಲ್ಲಿ ಚಾಲಕ ಮಾತ್ರ ಇದ್ದು, ಯಾವುದೇ ಗಾಯವಿಲ್ಲದೆ ಪಾರಾಗಿದ್ದಾನೆ. ಸ್ಥಳಕ್ಕೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ,ಅಡ್ಡಿಯುಂಟಾಗಿದ್ದ ರಸ್ತೆ ಸಂಚಾರವನ್ನು