ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನುಷ್ಠಾನಕ್ಕೆ ಕೇಂದ್ರ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಚಾಲನೆ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎನ್.ಇ.ಪಿ ಸಹಾಯವಾಣಿ, ಉನ್ನತ ಶಿಕ್ಷಣ ಅಂತರಾಷ್ಟೀಕರಣ
ಸಣ್ಣ ರೈತರನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಕೃಷಿ ಉತ್ಪಾದಕ ಸಂಘ: ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ
ದೇಶದ ಎಲ್ಲಾ ಸಣ್ಣ ರೈತರನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಪ್ರತೀ ತಾಲೂಕಿನಲ್ಲಿ ಕನಿಷ್ಟ ಒಂದು ಕೃಷಿ ಉತ್ಪಾದಕ ಸಂಘ ಆರಂಭಿಸಲಾಗುವುದು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಭಾರತ ಸಣ್ಣ ರೈತರನ್ನೇ ಹೊಂದಿರುವ ದೇಶವಾಗಿದ್ದು, ದೇಶದ ಎಲ್ಲಾ ರೈತರನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕೃಷಿ ಉತ್ಪಾದಕ ಸಂಘವನ್ನು ಆರಂಭಿಸಲು ಸೂಚನೆ ನೀಡಿದ್ದಾರೆ. ದೇಶದ
ಗುರುಪುರ: ಎಸ್‌ಕೆಎಸ್‌ಎಸ್‌ಎಫ್ ಕೈಕಂಬ ವಲಯ ವಿಖಾಯ ವತಿಯಿಂದ ಬ್ರಹತ್ ರಕ್ತದಾನ ಶಿಬಿರ ಹಾಗೂ ಕೊರೊನಾ ವಾರಿಯರ್ಸ್ ಗೆ ಸನ್ಮಾನ ಕಾರ್ಯಕ್ರಮ ಆದಿತ್ಯವಾರ ಗುರುಪುರ ಕೈಕಂಬ ಪ್ರೀಮಿಯರ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಲಯ ಅಧ್ಯಕ್ಷರಾದ ಬಹು: ಜಮಲುದ್ದೀನ್ ದಾರಿಮಿ ಅಧ್ಯಕ್ಷತೆ ವಹಿಸಿದ್ದರು. ಬಹು:ಝುಬೈರ್ ಫೈಝಿ ಅಂಕೋಲಾ ದುಆ: ನೆರವರಿಸಿದರು. ಸಮಸ್ತ ಕೇರಳ ಜಮಿಯತುಲ್ ಉಲೆಮಾ ಕೇಂದ್ರ ಮುಶಾವರ ಸದಸ್ಯರಾದ ಬಾಂಬ್ರಣ ಉಸ್ತಾದ್ ರವರು
ಸಮಾಜ ಸುಧಾರಕ ಬ್ರಹ್ಮ ಶ್ರೀ ನಾಯಾಯಣ ಗುರುಗಳ ಜಯಂತಿಯ ಪ್ರಯುಕ್ತ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಪಾಲಿಕೆ ಸದಸ್ಯರಾದ ಜಯಶ್ರೀ ಕುಡ್ವ, ಸಂಧ್ಯಾ ಮೋಹನ್
ಟು ಆಂಡ್ ಮೀ ಹೆಸ್ರು ಹೇಳುವ ಹಾಗೆ ಇದೊಂದು ಡಿಫರೆಂಟ್ ಮೂವಿ… ಎಲ್.ಎಸ್. ಮೀಡಿಯಾ ಬ್ಯಾನರಡಿಯಲ್ಲಿ ಮೂಡಿ ಬಂದಿದೆ. ಸ್ವರಾಜ್ ಶೆಟ್ಟಿ ಬಹುಭಾಷಾ ಸಿನಿಮಾದಲ್ಲಿ ನಟಿಸಿದ್ದರೂ ಅವರ ಮೊದಲ ನಿರ್ದೇಶನದಲ್ಲಿ ತೆರೆಕಂಡ ಸಿನಿಮಾ ಇದಾಗಿದೆ. ಈಗಾಗಲೇ ವಿ4 ಸ್ಟ್ರೀಮ್‌ನ ಓಟಿಟಿಯಲ್ಲಿ ರಿಲೀಸ್ ಆಗಿರುವ ಟು ಆಂಡ್ ಮೀ ತುಳು ಮೂವಿಗೆ ಸಿನಿ ಪ್ರೇಕ್ಷಕರಿಂದ ಸಖತ್ ರೆಸ್ಪಾನ್ ಸಿಕ್ಕಿದೆ. ಇಬ್ಬರ ಹುಡುಗಿಯರ ನಡುವೆ ಒಬ್ಬ ಪ್ರೇಮಿ ಎನ್ನುವ ಕಥಾ ಹಂದರ ಹೊಂದಿರುವ ಚಿತ್ರವು ಬಹಳ
ಮಂಗಳೂರು ವಿಶ್ವವಿದ್ಯಾನಿಯಲದ ಪ್ರಸಾರಾಂಗದ ಸಂಶೋಧನಾ ಮಾಲಕೆಯ ಕೃತಿ ಪ್ರಕಟನೆಯಲ್ಲಿ ಈ ಹಿಂದೆ ತಿರಸ್ಕೃತವಾಗಿದ್ದ ಪುಸ್ತಕಕ್ಕೆ ಇದೀಗ ವಿಶ್ವವಿದ್ಯಾನಿಲಯದ ಅಧಿಕೃತ ಮುದ್ರೆ ಲಭಿಸುವ ಸಾಧ್ಯತೆ ಕಂಡು ಬಂದಿದೆ. ಮಂಗಳೂರು ನಗರದ ಕಾಲೇಜೊಂದರ ನಿವೃತ್ತ ಉಪನ್ಯಾಸಕ ಡಾ.ಪಿ. ಅನಂತಕೃಷ್ಣ ಭಟ್ ಅವರು ಬರೆದಿರುವ “ಭಾರತ ಸಂವಿಧಾನ ” ಎಂಬ ಕನ್ನಡ ಕೃತಿ ಹಾಗೂ ಆಂಗ್ಲ ಭಾಷೆಯ ” ಇಂಡಿಯನ್ ಕ್ವಾನ್ಸಿಟಿಟ್ಯೂಶನ್ ” ಎಂಬ ಪುಸ್ತಕಕ್ಕೆ
ಆಯುರ್ವೇದ ಚಿಕಿತ್ಸೆಯ ಮೂಲಕ ಮಂಗಳೂರಿನ ಜನತೆಯ ಮನೆ ಮಾತಾಗಿರುವ ವೇದಂಆರೋಗ್ಯ ಆಯುರ್ವೇದ ಹೆಲ್ತ್ ಸೆಂಟರ್‌ನಲ್ಲಿ ಕೇರಳದ ಜನಪ್ರೀಯ ಓಣಂ ಹಬ್ಬವನ್ನು ಆಚರಿಸಲಾಯಿತು. ನಗರದ ವೆಲೆಂಸ್ಸಿಯಾ ಮತ್ತು ಕದ್ರಿಯಲ್ಲಿ ಕಾರ್ಯಚರಿಸುತ್ತಿರುವ ವೇದಂಆರೋಗ್ಯ ಆಯುರ್ವೇದ ಹೆಲ್ತ್ ಸೆಂಟರ್ ಕಳೆದ ಹಲವು ವರ್ಷಗಳಿಂದ ಜನತಗೆ ನಗುಮುಗದ ಸೇವೆಯನ್ನು ನೀಡುತ್ತಾ ಜನತೆಯ ಮನೆಮತಾಗಿದೆ. ಇಂದು ಮುಂಜಾನೆ ಕದ್ರಿಯ ಆಯುರ್ವೇದ ಹೆಲ್ತ್ ಸೆಂಟರ್ ಪೂಕಳಂ ಹಾಕಿ ಸಾಂಪ್ರದಾಯಿಕವಾಗಿ ಓಣಂ ಹಬ್ಬವನ್ನು
ಪ್ರಸ್ತುತ ವಿದ್ಯಾಮಾನದಲ್ಲಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಮುಕ್ಕ ಶ್ರೀನಿವಾಸ್ ವಿಶ್ವವಿದ್ಯಾಲಯ, ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯ, ಮುಕ್ಕ ಇವರ ವತಿಯಿಂದ ಅಣುಕು ಸಿಇಟಿ ಪರೀಕ್ಷೆಯನ್ನು ಆಗಸ್ಟ್ 22 ಮತ್ತು 23 ರಂದು ಏರ್ಪಡಿಸಲಾಗಿದೆ. ಸಿಇಟಿ ಪರೀಕ್ಷೆಯನ್ನು ಎದುರಿಸುವ ಮಾಹಿತಿಯನ್ನು ಕೊಡಲಾಗುವುದೆಂದು ಕಾಲೇಜಿನ ಪ್ರಾಂಶುಪಾಲ ಡಾ. ಥಾಮಸ್ ಪಿಂಟೋ, ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಪರೀಕ್ಷೆಗಳು
ಕರಾವಳಿಯಲ್ಲಿ ಕೆಲವು ವರ್ಷಗಳಿಂದ ಭಯೋತ್ಪಾದಕ ಚಟುವಟಿಕೆ ನಡೆಯುತ್ತಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಚಟುವಟಿಕೆಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ಎನ್‍ಐಎ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಜೊತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು. ಅಪ್ಘಾನಿಸ್ತಾನದಲ್ಲಿ


















