ಮಂಗಳೂರು: ನಗರದ ನೀರುಮಾರ್ಗದ ಜಂಕ್ಷನ್ ಸಮೀಪದಲ್ಲಿರುವ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರಕ್ಕೆ ನುಗ್ಗಿದ ಇಬ್ಬರು ಕಳ್ಳರು ಕಾಣಿಕೆ ಡಬ್ಬಿ ಕಳವುಗೈದಿರುವ ಘಟನೆ ಬುಧವಾರ ನಸುಕಿನ ವೇಳೆ ನಡೆದಿದೆ. ಇದರ ಸಂಪೂರ್ಣ ದೃಶ್ಯ ಭಜನಾ ಮಂದಿರದ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಭಜನಾ ಮಂದಿರದ ಮುಂಭಾಗಕ್ಕೆ ನಸುಕಿನ ವೇಳೆ 1.45ರ ಸುಮಾರಿಗೆ ಆಗಮಿಸಿರುವ ಕಳ್ಳರು ಮುಂಬಾಗಿಲಿನ
ನರಗುಂದ ನವಲಗುಂದ ರೈತ ಬಂಡಾಯದ 41 ನೇ ವರ್ಷಾಚರಣೆ ಹಾಗೂ ರೈತ ಹುತಾತ್ಮರ ದಿನಾಚಣೆ ಹಾಗೂ ರೈತ ಸಮಾವೇಶ ಗದಗ ಜಿಲ್ಲೆಯ ನರಗುಂದದಲ್ಲಿ ನಡೆಯಿತು. ಇಲ್ಲಿನ ರೈತ ಸಂಪರ್ಕ ಕೇಂದ್ರದ ಸಮೀಪ , ರೈತ ನಾಯಕ ದಿವಂಗತ ಬಾಬಾ ಗೌಡ ಪಾಟೀಲ್ ವೇದಿಕೆಯಲ್ಲಿ ಸಮಾವೇಶ ನಡೆಯಿತು. ಸಮಾವೇಶಕ್ಕಿಂತ ಮೊದಲು ಹುತಾತ್ಮ ರೈತ ಹೋರಾಟಗಾರರ ಪ್ರತಿಮೆಗೆ ರೈತ ಮುಖಂಡರು ಗೌರವ ಸಲ್ಲಿಸಿದರು. ಬಳಿಕ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ರೈತ ಸಮಾವೇಶ ನಡೆಯಿತು. ಸಮಾವೇಶದಲ್ಲಿ ದಿಲ್ಲಿ ರೈತ ಹೋರಾಟದ
ಚೀನಾದಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದ ಇದುವರೆಗೂ 12 ಮಂದಿ ಸಾವನ್ನಪ್ಪಿದ್ದು, ಒಂದು ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಹೆನ್ನಾನ್ ಪ್ರಾಂತ್ಯದ ಝೆಂಗ್ಜು ಪ್ರದೇಶದಲ್ಲಿ ಕೇವಲ ಒಂದು ಗಂಟೆಯ ಅವಧಿಯಲ್ಲಿ 201.9 ಮಿ,ಮೀ ಮಳೆಯಾಗಿದೆ. ಝೆಂಗ್ಜು ಪ್ರದೇಶದ ತಗ್ಗುಪ್ರದೇಶಗಳಿಗೆ ನೀರು ಹರಿಯುತ್ತಿದ್ದು, ನೂರಾರು ಮನೆ ಮಠಗಳು ನಾಶವಾಗಿವೆ. ಇದುವರೆಗೂ 12 ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದು, ಮುಂಜಾಗೃತಾ
ಉಡುಪಿ : ಕರಾವಳಿಯನ್ನೇ ಬೆಚ್ಚಿಬೀಳಿಸಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣವನ್ನು ಒಂದೇ ವಾರದಲ್ಲಿ ಬೇಧಿಸುವಲ್ಲಿ ಉಡುಪಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಪತ್ನಿಯ ಜೊತೆಯಲ್ಲಿದ್ದಾಗಲೇ ಪತಿ ರಾಮಕೃಷ್ಣ ವಿಶಾಲ ಗಾಣಿಗ ಹತ್ಯೆಗೆ ಸುಫಾರಿ ಕೊಟ್ಟಿದ್ದ. ಅಲ್ಲದೇ ಮನೆಗೆ ಹಣದ ಪಾರ್ಸೆಲ್ ಕಳುಹಿಸಿ ಪತ್ನಿಯನ್ನು ಕೊಂದು ಮುಗಿಸಿದ್ದಾನೆ. ಉಡುಪಿ ಜಿಲ್ಲೆಯ ಉಪ್ಪಿನಕೋಟೆಯಲ್ಲಿರುವ ಅಪಾರ್ಟ್‍ಮೆಂಟ್ ನಲ್ಲಿ ಜುಲೈ 12ರಂದು ಕೊಲೆಯಾಗಿದ್ದ ವಿಶಾಲ ಗಾಣಿಗ ಕೊಲೆಯನ್ನು ಪತಿಯೇ
ಗಾಂಧಿ ಪಥ ಗ್ರಾಮ ಪಥ (ನಮ್ಮ ಗ್ರಾಮ ನಮ್ಮ ರಸ್ತೆ) ಯೋಜನೆಯಡಿಯಲ್ಲಿ ಕಾಪು ತಾಲೂಕಿನ ಪಲಿಮಾರು ಅವರಾಲು ಮಟ್ಟುವಿನಿಂದ ಮುಲ್ಕಿಗೆ ಸಂಪರ್ಕ ಹೊಂದಿರುವ ಸೇತುವೆಯಲ್ಲಿ ಉದ್ಘಾಟನೆಗೆ ಮುನ್ನವೇ ಬಿರುಕು ಕಾಣಿಸಿದ್ದು, ಬಾಲಗ್ರಹ ಪೀಡೆಗೆ ಒಳಗಾಗಿದೆ. ಈ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ಸ್ಥಳೀಯ ಪಲಿಮಾರು ಗ್ರಾ.ಪಂ. ಸದಸ್ಯ ಶಿವರಾಮ್ ಎಂಬವರು, ಜನರ ಬಲು ಬೇಡಿಕೆಯ ಸೇತುವೆ ಇದಾಗಿದ್ದು, ಇದರ ಉಸ್ತುವಾರಿಯನ್ನು ಪಂಚಾಯತ್ ರಾಜ್ಯ ಇಂಜಿನಿಯರ್ ಇಲಾಖೆ, ಉಡುಪಿ.
ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸಚಿವ ಅರವಿಂದ ಲಿಂಬಾವಳಿ ಸೂಚಿಸುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ತುಳು ಭಾಷೆಗೆ ಮಾನ್ಯತೆ ಪಡೆಯುವಲ್ಲಿ ದಿಟ್ಟ ಹೆಜ್ಜೆಯಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಸಂತಸ ವ್ಯಕ್ತ ಪಡಿಸಿದ್ದಾರೆ. ಅವರು ಮಂಗಳೂರಿನ ಪ್ರೆಸ್‌ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈ ಪ್ರಕ್ರಿಯೆಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸುವುದಾಗಿ
ಕೊಂಚಾಡಿಯ ಕೆನರಾ ಅಪಾರ್ಟ್ಮೆಂಟ್ ನವರು ಸಾರ್ವಜನಿಕ ರಸ್ತೆಗೆ ಮಲ ಮಿಶ್ರಿತ ಗಲೀಜು ನೀರನ್ನು ಬಿಡುತ್ತಿರುವ ಬಗ್ಗೆ ಹಲವಾರು ಬಾರಿ ದೂರು, ಮನವಿಗಳನ್ನು ನೀಡಿದರು, ಕ್ರಮ ಕೈಗೊಳ್ಳದ ನಗರ ಪಾಲಿಕೆಯ ವಿರುದ್ಧ ಪ್ರತಿಭಟನಾ ಕಾರ್ಯಕ್ರಮ ನಡೆಸಿದ ನಂತರವೂ ಮತ್ತದೇ ರೀತಿಯಲ್ಲಿ ಗಲೀಜು ನೀರು ಸಾರ್ವಜನಿಕ ರಸ್ತೆಗೆ ಬಿಡುತ್ತಿರುವ ವಿರುದ್ಧ ಇಲ್ಲಿನ ಜನಪರ ಸಂಘಟನೆಗಳು ನಗರ ಪಾಲಿಕೆಯವರೇ ಗಲೀಜು ನೀರನ್ನು ಸಾರ್ವಜನಿಕ ರಸ್ತೆಗೆ ಬಿಡಲು ಸಹಕರಿಸುತ್ತಿದ್ದಾರೆಂದು ಆರೋಪಿಸಿ
ಬೆಂಗಳೂರು: ರಾಜ್ಯದ ಜನರ ಬೆಂಬಲ ಹಾಗೂ ಪ್ರಧಾನಿ ಭೇಟಿ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಅವರೊಂದಿಗಿನ ಸಾಮರಸ್ಯ ನೋಡಿದರೆ ಸದ್ಯಕ್ಕೆ ಬದಲಾವಣೆ ಇಲ್ಲ ಎಂದೆನಿಸುತ್ತದೆ. ಆದರೆ, ಮುಂದಿನದು ಬಿಜೆಪಿ ರಾಷ್ಟ್ರೀಯ ನಾಯಕರ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣ ಎಂದರೆ ಹೀಗೆ ದಿನಕ್ಕೊಂದು ತಿರುವುಗಳು ಸಣ್ಣಪುಟ್ಟ ವ್ಯತ್ಯಾಸಗಳು ಆಗುತ್ತಿರುತ್ತವೆ. ನನಗೆ ತಿಳಿದ
ಕಾಂಗ್ರೆಸ್ ಹಿರಿಯ ಮುಖಂಡ ಅಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿ, ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಕಣ್ಣೀರು ಹಾಕಿದ್ದಾರೆ. ಅಸ್ಕರ್ ಫೆರ್ನಾಂಡಿಸ್ ಅವರು ಯೋಗ ಮಾಡುವ ವೇಳೆ ಜಾರಿ ಬಿದ್ದು ಗಾಯಗೊಂಡು ಮಂಗಳೂರಿನ ಯೆನೆಪೊಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಕಾಂಗ್ರೆಸ್‌ನ ಹಲವು ಮುಖಂಡರು ಅಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ಜನಾರ್ದನ ಪೂಜಾರಿ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ
ಕಾಂಗ್ರೆಸ್ ಹಿರಿಯ ಮುಖಂಡ ಅಸ್ಕರ್ ಫೆರ್ನಾಂಡಿಸ್ ಯೋಗ ಮಾಡುವ ವೇಳೆ ಜಾರಿ ಬಿದ್ದು ಗಾಯಗೊಂಡು ಮಂಗಳೂರಿನ ಯೆನೆಪೊಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.ಬುಧವಾರದಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಅಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯವನ್ನು ವಿಚಾರಿಸಿದರು. ತದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಸ್ಕರ್ ಅವರಿಗೆ ಸದ್ಯ ಪರಿಣಿತ ತಜ್ಞ ವೈದ್ಯರ ತಂಡ ಚಿಕಿತ್ಸೆ ಕೊಡ್ತಾ ಇದ್ದಾರೆ.ಮಣಿಪಾಲ್ ವೈದ್ಯರು

















