ಮಂಗಳೂರು : ಉರ್ವ ಪೊಲೀಸ್ ಠಾಣೆಗೆ ಬಂದ ಮೂವರು ಅಲ್ಲಿನ ಸಿಬ್ಬಂದಿಯ ಜೊತೆಗೆ ಅನುಚಿತವಾಗಿ ವರ್ತಿಸಿದ್ದು, ಹಲ್ಲೆಗೆ ಯತ್ನಿಸಿದ್ದಾರೆ. ಈ ಪ್ರಕರಣದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳೂರಿನ ಉರ್ವ ಠಾಣೆ ವ್ಯಾಪ್ತಿಯ ಅಪಾರ್ಟ್‍ಮೆಂಟ್‍ನಲ್ಲಿ ನಿರ್ವಹಣೆ ಶುಲ್ಕ ಕೊಡುವುದು ಹಾಗೂ ನೀರಿನ ಸಂಪರ್ಕ
ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪೂರ್ವ ಅರಬ್ಬಿ ಸಮುದ್ರ ಹಾಗೂ ಕಚ್ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆ ಮುಂದುವರೆದಿದೆ. ಉತ್ತರ ಕನ್ನಡ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ,
ಪುತ್ತೂರು ತಾಲೂಕು ಬನ್ನೂರು ಗ್ರಾಮದ ಕಜೆ ಎಂಬಲ್ಲಿಯ ನಿವಾಸಿ ಸಂತೋಷ್ ಎಂಬವರ ಮನೆಯ ದಕ್ಷಿಣ ಭಾಗದ ಮಣ್ಣನ್ನು ಪಕ್ಕದ ಮನೆಯವರು ಅವೈಜ್ಞಾನಿಕವಾಗಿ ಅಗೆದ ಕಾರಣ ವಿಪರೀತ ಮಳೆಯಿಂದ ಮಣ್ಣು ಕುಸಿಯುತ್ತಿದೆ. ಕೆಲವೇ ಅಡಿಗಳ ಅಂತರದಲ್ಲಿ ಸಂತೋಷ್ ಅವರ ಮನೆಯು ಇರುವುದರಿಂದ ಮತ್ತು ಪಕ್ಕದ ಮನೆ ಸುಮಾರು 30 ಅಡಿಗಳಷ್ಟು ಆಳದಲ್ಲಿ ಇರುವುದರಿಂದ ಎರಡೂ ಮನೆಯವರು ಆತಂಕಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿದ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ್
ಮಂಗಳೂರು: ರಾಜ್ಯದ ಕೋವಿಡ್ ಸಂತ್ರಸ್ತರ ಕುಟುಂಬದ 81ಕೋಟಿ ರೂ. ರೈತರ ಸಾಲಮನ್ನಾ ಮಾಡುವ ಗುರಿಯನ್ನು ಸರಕಾರ ಹೊಂದಿದೆ ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿರುವ ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ಬ್ಯಾಂಕ್ ವತಿಯಿಂದ ಹಮ್ಮಿಕೊಂಡ ’ರೈತ ಸ್ಪಂದನ’ ಕಾರ್ಯಕ್ರಮದಲ್ಲಿ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು, ಕೃಷಿಕರಿಗೆ ವಿವಿಧ ರೀತಿಯ ಸಾಲ ವಿತರಿಸಿದರು. ಬಳಿಕ ಮಾತನಾಡಿದ್ರು, ಕೋವಿಡ್ ಸಂತ್ರಸ್ತ
ಬಂಟ್ವಾಳ: ಭಿನ್ನ ಉದ್ದೇಶಗಳಿಗೆ ಪ್ರತಿಭಟನೆ ನಡೆಸಲು ಜಮಾಯಿಸಿದ್ದ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯ ಕರ್ತರ ನಡುವೆ ವಾಗ್ವಾದ ನಡೆದು ಪರಸ್ಪರ ಹೊಯೈ ಕೈ ನಡೆದ ಘಟನೆ ಕಾವಳಕಟ್ಟೆಯಲ್ಲಿ ನಡೆದಿದೆ. ಕಾವಳಮೂಡೂರು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ಸಿದ್ದತೆ ನಡೆಸಿದ್ದರು. ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕಾವಳಮೂಡೂರು ಗ್ರಾ.ಪಂ. ನೀರು ಹಾಗೂ ಮನೆ ತೆರಿಗೆಯನ್ನು ಏಕಾಏಕಿ ಏರಿಕೆಯನ್ನು
ಮೂಡುಬಿದಿರೆ: ಜುಲೈ 23ರಿಂದ ಜಪಾನಿನ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟ ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆಳ್ವಾಸ್‌ನ ಕ್ರೀಡಾ ವಿಭಾಗ ದತ್ತು ಶಿಕ್ಷಣದ ಅಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ಧನಲಕ್ಷಿ ಹಾಗೂ ಶುಭ ಇವರು 4*400 ಮಿಕ್ಸಡ್ ರಿಲೇಯಲ್ಲಿ ದೇಶದ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಉಳ್ಳಾಲ: ಮಂಗಳೂರಿನ ನಿಟ್ಟೆ ಶಂಕರ್ ಅಡ್ಯಂತಾಯ ಸ್ಮಾರಕ ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಪಿಲಾರು ಇರ್ನೂರು ಗುತ್ತು ಗದ್ದೆಯಲ್ಲಿ ಭತ್ತದ ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡರು. ಕಾಲೇಜಿನ ಎನ್‍ಸಿಸಿ ವಿಭಾಗದ ಹಲವು ವಿದ್ಯಾರ್ಥಿಗಳು ಭತ್ತದ ನಾಟಿಯಲ್ಲಿ ತಮ್ಮನ್ನು ತೊಡಗಿಸಿದ್ದು, ಕೃಷಿ ಚಟುವಟಿಕೆಗಳನ್ನು ಮತ್ತೆ ನೆನಪಿಸಿಕೊಂಡರು. ಮಾಜಿ ಶಾಸಕ ಜಯರಾಮ ಶೆಟ್ಟಿ ಕೆ. ಭಾಗವಹಿಸಿ ಮಾತನಾಡಿ ಕೃಷಿ ಕ್ಷೇತ್ರ ಆಧುನೀಕರಣಗೊಳ್ಳಬೇಕು, ಬದಲಾವಣೆಗಳಾಗಬೇಕು ಅನ್ನುವ
ಮೂಡುಬಿದಿರೆ : ವಿವಿಧ ಕೆಲಸ ಕಾರ್ಯಗಳ ಮೂಲಕ ಒಂದಲ್ಲ ಒಂದು ರೀತಿಯಲ್ಲಿ ಗಮನ ಸೆಳೆಯುತ್ತಿರುವ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮತ್ತು ಯುವಕರು ಕೃಷಿಯತ್ತ ಒಲವು ತೋರಿಸಬೇಕೆಂಬ ಉದ್ದೇಶದಿಂದ ಮಂಗಳವಾರದಂದು ಮೂಡುಬಿದಿರೆಯ ಜೈನ್ ಪೇಟೆಯ ಬಳಿ ಇರುವ ಆಸಿಸ್ ಪಿಂಟೋ ಗದ್ದೆಯಲ್ಲಿ ಕೋಣ ಮತ್ತು ಟಿಲ್ಲರ್‌ನಲ್ಲಿ ಉಳುವೆ ಮಾಡುವ ಮೂಲಕ ಯುವಕರಿಗೆ ಮಾದರಿಯಾದರು. ಬ್ಲಾಕ್ ಕಾಂಗ್ರೆಸ್ ಮತ್ತು ಕಿಸಾನ್ ಘಟಕದ ವತಿಯಿಂದ ಈ
ಕೊರೊನಾ ಪಾಸಿಟೀವ್ ಪ್ರಕರಣಗಳು ರಾಜ್ಯಲ್ಲಿ ಕೊಂಚ ಇಳಿಮುಖವಾಗುತ್ತಿರುವ ನಡುವೆಯೇ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲೂ ಪ್ರಯತ್ನಗಳು ಆರಂಭಗೊಂಡಿದೆ. ಒಂದು ವೇಳೆ ಶಾಲೆ ಪ್ರಾರಂಭವಾದಲ್ಲಿ ತನ್ನ ಮಗುವಿಗೆ ಹೇಗೆ ಶಿಕ್ಷಣ ನೀಡಲಿ ಎನ್ನುವ ತಳಮಳದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಬಡ ತಾಯಿಯೊಬ್ಬರಿದ್ದಾರೆ. ಈಕೆಯ ಮನೆ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ವಾಸಕ್ಕೆ ಯೋಗ್ಯವಲ್ಲದ ಸ್ಥಿತಿಗೆ ತಲುಪಿದೆ. ಕೂಲಿ-ನಾಲಿ ಮಾಡಿ ತನ್ನ ಅನಾರೋಗ್ಯ ಪೀಡಿತ ಮಗುವಿನೊಂದಿಗೆ
ಮಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ದುರ್ಬಲ ಆರ್ಥಿಕ ನೀತಿಯಿಂದಾಗಿ ದೇಶದ ಅರ್ಥ ವ್ಯವಸ್ಥೆ ಅಧಪತನದತ್ತ ಸಾಗುತ್ತಿದೆ. ತಪ್ಪು ಆರ್ಥಿಕ ನೀತಿಯಿಂದಾಗಿ ಅಕ್ರಮಗಳೇ ಬಿಜೆಪಿ ಸರಕಾರದ ನೀತಿಗಳಾಗುತ್ತಿವೆ. ಹಾಗಾಗಿ ಭ್ರಷ್ಟಾಚಾರ ಪ್ರಕರಣ ಹೊರಬರುತ್ತಿಲ್ಲ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.ಅವರು ಇಂದು ಹಳೆ ಬಂದರು ಸಗಟು ಮಾರುಕಟ್ಟೆಯ ಗೋಳಿಕಟ್ಟೆ ವೃತ್ತದ ಬಳಿ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಪೆಟ್ರೋಲ್,

















