Home Posts tagged #v4stream (Page 298)

ಸಂಪ್ಯದಲ್ಲಿ ನೇಗಿಲು ಹಿಡಿದು ಉಳುಮೆ ಮಾಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು

ಪುತ್ತೂರು: ಪೊರ್ತು ಕಂತ್ಂಡ್ ಓ ಎರು ಮಗನೇ…ಇದು ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪಕ್ಕದಲ್ಲೇ ಹಡೀಲು ಬಿದ್ದ ಗದ್ದೆಯಲ್ಲಿ ಭಾನುವಾರ ಕೇಳಿಬಂದ ಸಂಧಿಯ ಕೆಲವು ಸಾಲು.ಶಾಸಕ ಸಂಜೀವ ಮಠಂದೂರು ಅವರು ಉಟ್ಟಿದ್ದ ಪಂಚೆಯನ್ನು ಎತ್ತಿಕಟ್ಟಿ, ಗದ್ದೆಗೆ ಇಳಿದು, ಎತ್ತುಗಳನ್ನು ಕಟ್ಟಿದ್ದ ನೇಗಿಲನ್ನು ಕೈಗೆ ತೆಗೆದುಕೊಳ್ಳುತ್ತಿದ್ದಂತೆ, ಉಳುಮೆ

ನಾಳೆಯಿಂದ ದೇಗುಲ ಓಪನ್: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸ್ಯಾನಿಟೈಸೇಷನ್ ಕಾರ್ಯ

ರಾಜ್ಯದ್ಯಾಂತ ಜುಲೈ 5ರಿಂದ ಅನ್‌ಲಾಕ್ 3.0 ಜಾರಿಯಲ್ಲಿರಲಿದ್ದು, ದೇವಾಲಯಗಳು ನಾಳೆಯಿಂದ ಓಪನ್ ಆಗಲಿದ್ದು, ಭಕ್ತರ ದರುಶನಕ್ಕೆ ಅವಕಾಶವನ್ನು ಕಲ್ಪಿಸಿ ರಾಜ್ಯ ಸರ್ಕಾರ ಆದೇಶವನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಂಪೂರ್ಣ ಸ್ಯಾನಿಟೈಸೇಷನ್ ಕಾರ್ಯ ಮಾಡಲಾಗುತ್ತಿದೆ. ದೇವಸ್ಥಾನದ ಒಳಾಂಗಣ, ಹೊರಾಂಗಣ, ಅನ್ನಛತ್ರ, ವಸ್ತು ಸಂಗ್ರಹಾಲಯದಲ್ಲಿ ದೇವಳದ ಸಿಬ್ಬಂದಿಯಿಂದ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ. ನಾಳೆಯಿಂದ ಶ್ರೀ ಕ್ಷೇತ್ರ

ಕೊಳ್ನಾಡಿನಲ್ಲಿ ಯುವಕನೊರ್ವನಿಗೆ ನಾಲ್ವರ ತಂಡದಿಂದ ಹಲ್ಲೆ

ವಿಟ್ಲ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನಿಗೆ ನಾಲ್ವರ ತಂಡ ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾದ ಘಟನೆ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಸಂಭವಿಸಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಳ್ನಾಡು ಗ್ರಾಮದ ಕಾಡುಮಠ ನಿವಾಸಿ ಅಬ್ದುಲ್ ಹ್ಯಾರಿಸ್ (29) ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಕಾಡುಮಠ ನಿವಾಸಿಗಳಾದ ಅವಿನಾಶ್, ವಿನೀತ್, ದಿನೇಶ್, ಮತ್ತೊಬ್ಬ ಅಪರಿಚಿತ

ರಾಜ್ಯದಲ್ಲಿ ಜು.5ರಿಂದ 3.0 ಅನ್‌ಲಾಕ್ ಜಾರಿ: ಮತ್ತಷ್ಟು ಸಡಿಲಿಕೆ ಮಾಡಿ ಸರ್ಕಾರ ಆದೇಶ

ರಾಜ್ಯಾದ್ಯಂತ ಜುಲೈ 5ರಿಂದ 3.0 ಅನ್‍ಲಾಕ್ ಜಾರಿಯಾಗಲಿದ್ದು, ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ರದ್ದುಗೊಳಿಸಿ, ಮಾಲ್‍ಗಳ ಓಪನ್ ಗೆ ಗ್ರೀನ್ ಸಿಗ್ನಲ್ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅನ್ ಲಾಕ್ 3.0 ಜಾರಿಯಾಗುವ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಮಹತ್ವದ ಸುದ್ದಿಗೋಷ್ಟಿ ನಡೆಸಿ ಈ ಕುರಿತು ಘೋಷಣೆ ಮಾಡಿದ್ದಾರೆ. ಮಾಲ್‍ಗಳ ಓಪನ್‍ಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ನೀಡಿದೆ. ಮದುವೆ ಸಮಾರಂಭಕ್ಕೆ 100 ಜನರಿಗೆ ಅನುಮತಿ. ವೀಕೆಂಡ್

ನಮಗೆ ಸರ್ಕಾರದ ಹಣ ಬೇಡ, ನಾವು ದುಡಿಯುವ ಜಾಗ ನಮಗೆ ಕೊಡಿ ಸಾಕು..!

ಮಂಗಳೂರಿನ ಮೂಲ ನದಿ ಮೀನುಗಾರರು ಗುರುಪುರ ಹೊಳೆಯಲ್ಲಿ ನಮ್ಮ ಪೂರ್ವಿಕರ ಕಾಲದಿಂದಲೂ ಸಾಂಪ್ರಾದಾಯಿಕ ಮೀನುಗಾರಿಕೆಯನ್ನು ನಡೆಸಿಕೊಂಡು ತಮ್ಮ ಜೀವನವನ್ನು ನಡೆಸುತ್ತಿದ್ದಾರೆ. ನದಿ ಮೀನುಗಾರಿಕೆಯೇ ಅವರ ಜೀವನಾದಾರ ಸಾಂಪ್ರಾದಾಯಿಕವಾದ ವಿವಿಧ ರೀತಿಯ ನದಿ ಮೀನುಗಾರಿಕೆಯನ್ನು ನಡೆಸುತ್ತಾ ಜೀವನ ಸಾಗಿಸುತ್ತಿರುವ ಮೀನುಗಾರರ ಜೀವನ ಈ ಕಷ್ಟವಾಗಿದೆ. ಹೌದು ಸಾಂಪ್ರದಾಯಿಕವಾದ ನದಿ ಮೀನುಗಾರಿಕೆಯನ್ನು ನೀರಿಗೆ ಇಳಿದು ಮೀನುಗಾರಿಕೆ ಮಾಡುವ ಪದ್ದತಿಯಲ್ಲಿ ಬೊಲ್ಪುಬಲೆ ಮತ್ತು

ಕಟ್ಟಡ ಕಾರ್ಮಿಕರಿಗೆ ಗ್ರಾಮ ಮಟ್ಟದಲ್ಲಿ ಆಹಾರ ಕಿಟ್ ನೀಡಬೇಕು ಎಂದು ಕಾರ್ಮಿಕ ಆಯುಕ್ತರಿಗೆ ಮನವಿ

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ನೀಡಲಾಗುವ ಆಹಾರ ಕಿಟ್ ಗಳನ್ನು ಗ್ರಾಮ ಮಟ್ಟದಲ್ಲಿ ನೀಡಬೇಕು ಹಾಗೂ ಶಾಸಕರು ಗಳು ಆಹಾರ ಕಿಟ್ ಗಳಲ್ಲಿ ಹಸ್ತಕ್ಷೇಪ ಮಾಡವುದನ್ನು ಖಂಡಿಸಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಶನ್ .ಸಿ.ಐ.ಟಿ.ಯು ವತಿಯಿಂದ ಬಂಟ್ವಾಳ ಕಾರ್ಮಿಕ ನಿರೀಕ್ಷಕರ ಮುಖಾಂತರ ಕಲ್ಯಾಣ ಮಂಡಳಿ ಕಾರ್ಯದರ್ಶಿ ಯವರಿಗೆ ಹಾಗೂ ಸಹಾಯಕ ಕಾರ್ಮಿಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.ನಿಯೋಗದಲ್ಲಿ ಸಂಘಟನೆಯ ಬಂಟ್ವಾಳ

ಮಂಗಳೂರಿನಲ್ಲಿ ಅನ್‌ಲಾಕ್ ಬಳಿಕ ಟ್ರಾಫಿಕ್ ಜಾಮ್

ಮಂಗಳೂರು ನಗರದಲ್ಲಿ ಲಾಕ್‌ಡೌನ್ ಸಂದರ್ಭ ರಸ್ತೆಯ ದುರಸ್ತಿ ಕಾರ್ಯ ಮಾಡಲು ಸಾಕಷ್ಟು ಸಮಯಾವಕಾಶ ಇದ್ದರೂ, ಇದೀಗ ಅನ್‌ಲಾಕ್ ಆದ ಬಳಿಕ ಹೆದ್ದಾರಿ ಇಲಾಖೆ  ಕೂಳೂರು ಬಳಿ ಇಂಟರ್ ಲಾಕ್ ಕಾಮಗಾರಿಯನ್ನು ನಡೆಸುತ್ತಿದ್ದು, ಟ್ರಾಫಿಕ್ ಜಾಮ್‌ಗೆ ಪ್ರತ್ಯಕ್ಷ ಕಾರಣವಾಯಿತು. ಮಳೆ ನೀರು ನಿಂತು ಸೇತುವೆ ದಕ್ಷಿಣ ಭಾಗದಲ್ಲಿ ರಸ್ತೆ ಸಂಪೂರ್ಣ ಹಾಳಾಗಿದ್ದು, ಇಂದಯ ಇಂಟರ್‌ಲಾಕ್ ಕಾಮಗಾರಿ ನಡೆಸುವ ಉದ್ದೇಶದಿಂದ ಸೇತುವೆ ಬಂದ್ ಮಾಡಲಾಯಿತು. ಇದರಿಂದ ಹೊಸ ಸೇತುವೆಯಲ್ಲಿಯೇ

ಇನ್ಸಿಪಿಯೆನ್ಸ್ ಕಿರುಚಿತ್ರದ ಟೀಸರ್ ಬಿಡುಗಡೆ

ಇನ್ಸಿಪಿಯೆನ್ಸ್ ಎಂಬ ಕಿರು ಚಿತ್ರದ ಟೀಸರ್‌ವು ಇಂದು ಹೈಆನ್‌ಫಿಲ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಲಿದೆ. ಇನ್ಸಿಪಿಯೆನ್ಸ್ ಕಿರು ಚಿತ್ರದಲ್ಲಿ ಹಿರಿಯ ನಟ ಲಕ್ಷ್ಮಣ್ ಮಲ್ಲೂರು, ಸಾಗರ್ ರೈ ನಟಿಸಿದ್ದು, ಪ್ರಿತೇಶ್ ಕುಮಾರ್ ನಿರ್ದೇಶಿಸಿದ್ದಾರೆ. ಸಿನೆಮಾದ ಸಿನಿಮೊಟಾಗ್ರಫಿ ಹಾಗೂ ಸಂಕಲನವನ್ನು ಅನುಶ್ಚಂದ್ರ ಯು. ಮಾಡಿರುತ್ತಾರೆ. ಪ್ರಸಾದ್ ಕೆ. ಶೆಟ್ಟಿ ಸಂಗೀತ ನೀಡಿದ್ದು, ಚಿತ್ರದ ಪೋಸ್ಟರ್ ಡಿಸೈನ್‌ನ್ನು ಅಕ್ಷಯ್ ಮಾಡಿರುತ್ತಾರೆ.

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ನ್ಯೂಟ್ರೀಲೈಟ್ ಕಾರ್ಯಕ್ರಮ

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ಮಕ್ಕಳಲ್ಲಿ ಆರೋಗ್ಯ ಮತ್ತು ಪೋಷಕಾಂಶಯುಕ್ತ ಆಹಾರದ ಬಗ್ಗೆ ಅರಿವು ನೀಡುವ ಉದ್ದೇಶದಿಂದ ಜೂನ್ ತಿಂಗಳಲ್ಲಿ ನ್ಯೂಟ್ರೀಲೈಟ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರಗಿತು. ಈ ಪ್ರಯುಕ್ತ ಆಯೋಜಿಸಿರುವ ವಿವಿಧ ಪ್ರಾಯೋಗಿಕ ಚಟುವಟಿಕೆಗಳಲ್ಲಿ ಮಕ್ಕಳು ಅತ್ಯುತ್ಸಾಹದಿಂದ ಭಾಗವಹಿಸಿದರು. ಚಟುವಟಿಕೆಗಳಲ್ಲಿ ಭಾಗವಹಿಸಿದ ಮಕ್ಕಳ ಪ್ರಾತ್ಯಕ್ಷಿಕೆಗಳ ವಿಡಿಯೋವನ್ನು ಬಿಡುಗಡೆ ಮಾಡುವ ಮೂಲಕ ನ್ಯೂಟ್ರಿಲೈಟ್ 2021 ಸಮಾಪನಗೊಂಡಿತು. ಸಂಸ್ಥೆಯ

ನಿಡ್ಡೋಡಿಯಲ್ಲಿ ಸೀಫುಡ್ ಪಾರ್ಕ್ ನಿರ್ಮಾಣ ಕೈಬಿಡುವಂತೆ ಐವನ್ ಡಿಸೋಜಾ ಒತ್ತಾಯ

ಮೂಡುಬಿದಿರೆ: ಕೃಷಿ ಪ್ರಧಾನವಾದ ನಿಡ್ಡೋಡಿ ಪ್ರದೇಶದಲ್ಲಿ ಸೀಫುಡ್ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರವು ರೈತರ ಹಿತದೃಷ್ಟಿಯನ್ನು ಮರೆತಿದೆ. ಪಾರ್ಕ್ ನಿರ್ಮಾಣದಿಂದಾಗಿ ಕೃಷಿ ಭೂಮಿ ಸಂಪೂರ್ಣ ಹಾನಿಯಾಗಲಿದೆ. ಪರಿಸರ ಕೆಡಿಸಿ ಅಭಿವೃದ್ಧಿ ನಡೆಸುವ ಬದಲು, ಪರಿಸರಕ್ಕೆ ಪೂರಕ ಅಭಿವೃದ್ಧಿ ನಡೆಸಬೇಕು. ನಿಡ್ಡೋಡಿಯಲ್ಲಿ ಸೀಫುಡ್ ಕಾರ್ಖಾನೆಯನ್ನು ಕೈಬಿಡುವಂತೆ ಸರ್ಕಾರಕ್ಕೆ ಪತ್ರ ಬರೆಯಲಿದ್ದು, ಉಸ್ತುವಾರಿ ಸಚಿವರಿಗೆ ಈ ಬಗ್ಗೆ ಒತ್ತಾಯಿಸುತ್ತೇನೆ ಎಂದು