Home Posts tagged #v4stream (Page 48)

ಮಾರ್ಚ್ 5 : ಪಿಲಾರ್ ಪಂಜಂದಾಯ ದೈವದ ನೇಮ

ಉಳ್ಳಾಲ ತಾಲೂಕಿನ ಪಿಲಾರ್ ದಾರಂದಬಾಗಿಲಿನಲ್ಲಿ ಮಾರ್ಚ್ 5 ರ ಭಾನುವಾರದಂದು ಪಂಜಂದಾಯ ದೈವದ ನೇಮ ನಡೆಲಿದೆ.ಕುತ್ತಾರ್ ಪಂಜಂದಾಯ ಮೂಲಸಾನದಿಂದ ಶನಿವಾರ ರಾತ್ರಿ ಭಂಡಾರ ಬಂದು ಭಾನುವಾರ ಬೆಳಗ್ಗಿನಿಂದ ಮಧ್ಯಾಹ್ನ ತನಕ ಪಿಲಾರ್ ದಾರಂದಬಾಗಿಲಿನಲ್ಲಿ ನೇಮ ನಡೆಯಲಿದೆ. ಪಿಲಾರ್ ನೇಮದ ಅಂಗವಾಗಿ ಶನಿವಾರ ರಾತ್ರಿ ಪಿಲಾರ್ ಯುವಕ ಮಂಡಲವು “ಶಿವದೂತೆ ಗುಳಿಗೆ”

ತಾಂಟ್ರೆ ಬಾ ತಾಂಟ್ರೆ ಖ್ಯಾತಿಯ ರಿಯಾಝ್ ಫರಂಗಿಪೇಟೆಗೆ ಉಳ್ಳಾಲದಲ್ಲಿ ಅದ್ಧೂರಿ ಸ್ವಾಗತ

ಉಳ್ಳಾಲ: ಎಸ್‍ಡಿಪಿಐ ಮಂಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ರಿಯಾಝ್ ಫರಂಗಿಪೇಟೆ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಉಳ್ಳಾಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಾರ್ಯಕರ್ತರು ಹಾಗೂ ಮುಖಂಡರು ಸ್ವಾಗತ ಕಾರ್ಯಕ್ರಮ ಹಮ್ಮಿಕೊಂಡರು. ಉಳ್ಳಾಲ ನಗರಸಭೆ ಎದುರುಗಡೆಯಿರುವ ಪಕ್ಷದ ಕಚೇರಿ ಮುಂಭಾಗದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ರಿಯಾಝ್ ಫರಂಗಿಪೇಟೆ ಅವರು ಮಂಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಅವಕಾಶ ಕಲ್ಪಿಸಿದ ಪಕ್ಷದ ಎಲ್ಲಾ

ಸೋಮೇಶ್ವರ : ದೋಣಿ ಮತ್ತು ಮೀನಿನ ಬಲೆ ಬೆಂಕಿಗಾಹುತಿ

ಉಳ್ಳಾಲ: ಸೋಮೇಶ್ವರ ಕಡಲ ಕಿನಾರೆಯಲ್ಲಿಟ್ಟಿದ್ದ ಎರಡು ದೋಣಿಗಳಿಗೆ ಬೆಂಕಿ ತಗುಲಿದ್ದು ದೋಣಿ ಮತ್ತು ಮೀನಿನ ಬಲೆ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು, ಕಿಡಿಗೇಡಿಗಳ ಕೃತ್ಯವೆಂದು ಶಂಕಿಸಲಾಗಿದೆ. ಸೋಮೇಶ್ವರದ ಮೀನುಗಾರರಾದ ಅನಿಲ್ ಮತ್ತು ಶೇಖರ್ ಎಂಬವರಿಗೆ ಸೇರಿದ ನಾಡ ದೋಣಿಗೆ ಗುರುವಾರ ಮದ್ಯಾಹ್ನ ಬೆಂಕಿ ತಗುಲಿದೆ. ಸೋಮೇಶ್ವರ ಬಾಸಿತ್ತಾಯರ ಬೈಲಿನ ಸಮುದ್ರ ಕಿನಾರೆಯಲ್ಲಿ ಮೀನುಗಾರರು ನಾಡ ದೋಣಿಯನ್ನ ನಿಲ್ಲಿಸಿದ್ದರು.ಗುರುವಾರ ಮದ್ಯಾಹ್ನ

ಮಂಗಳೂರು ಜ್ಯುವೆಲ್ಲರಿ ಸಿಬ್ಬಂದಿ ಕೊಲೆ ಪ್ರಕರಣ ಆರೋಪಿ ಬಂಧನ

ಮಂಗಳೂರು ಜ್ಯುವೆಲ್ಲರಿ ಸಿಬ್ಬಂದಿಯ ಕೊಲೆ ಪ್ರಕರಣದ ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ. ಕೋಝಿಕ್ಕೋಡ್ ಕೊಯಿಲಾಂಡಿ ನಿವಾಸಿ ಶಿಫಾಝ್(33) ಬಂಧಿತ ಆರೋಪಿ. ಈತನನ್ನು ಕಾಸರಗೋಡಿನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಪರಿಸರದಲ್ಲಿ ಬಂಧಿಸಲಾಗಿದೆ. ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಚಿನ್ನಾಭರಣದ ಅಂಗಡಿಯ ಸಿಬ್ಬಂದಿ, ಸ್ಥಳೀಯ ಅತ್ತಾವರ ನಿವಾಸಿಯಾಗಿದ್ದ ರಾಘವೇಂದ್ರ ಆಚಾರ್ಯ(50) ಎಂಬುವವರನ್ನು ಫೆಬ್ರವರಿ 3ರಂದು ಅಂಗಡಿಯಲ್ಲೇ ಚೂರಿಯಿಂದು ಕೊಲೆ ಮಾಡಲಾಗಿತ್ತು.

ಮೂಡುಬಿದಿರೆಯ ಉದ್ಯಮಿ ಗಣೇಶ್ ಕಾಮತ್ ನಿಧನ

ಮೂಡುಬಿದಿರೆ : ಮೂಡುಬಿದಿರೆಯ ಜನರಿಗೆ ಚಿರಪರಿಚಿತರಾಗಿದ್ದ ಜಿ.ಕೆ. ಎಂಟರ್‌ಪ್ರೈಸಸ್ ಮಾಲಕ ಜಿ.ಕೆ. ಖ್ಯಾತಿಯ ಗಣೇಶ್ ಕಾಮತ್ ಅವರು ಶುಕ್ರವಾರ ಹೃದಯಾಘಾತದಿಂದ ನಿಧನ ಹೊಂದಿದರು. ವಿದ್ಯುತ್ ಅವಘಡದಿಂದ ತನ್ನೆರಡು ಕೈಗಳನ್ನು ಕಳೆದುಕೊಂಡಿದ್ದರೂ ಛಲಬಿಡದೆ ಜಿ. ಕೆ ಉದ್ಯಮವನ್ನು ಸ್ಥಾಪಿಸಿ ಯಶಸ್ವಿ ಉದ್ಯಮಿ ಎನಿಸಿಕೊಂಡು ಹಲವಾರು ಜನರಿಗೆ ಉದ್ಯೋಗದಾತರಾಗಿದ್ದ ಅವರು ಶುಕ್ರವಾರ ಬೆಳಗಿನ ವೇಳೆ ತನ್ನ ಉದ್ಯಮ ಮಳಿಗೆಗೆ ಬರುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತಗೊಂಡಿದ್ದು

ಕೊಯಿಲ ಫಾರ್ಮ್‍ನ ಹುಲ್ಲುಗಾವಲಿಗೆ ಆಕಸ್ಮಿಕ ಬೆಂಕಿ

ಕಡಬ ತಾಲೂಕಿನ ಕೊಯಿಲ ಪಶು ಸಂಗೋಪನ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಒಣಹುಲ್ಲುಗಳಿಂದ ಆವೃತ್ತವಾದ ಗುಡ್ಡಕ್ಕೆ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಸುಮಾರು 15 ಎಕರೆಯಷ್ಟು ಆವರಿಸಿದ್ದು, ಇದರಿಂದ ಸೃಷ್ಠಿಯಾದ ದಟ್ಟ ಹಿಗೆ ಮುಗಿಲೆತ್ತರಕ್ಕೆ ಚಾಚಿದ್ದು ಭಯಾನಕವಾಗಿತ್ತು. ಹುಲ್ಲುಗಾವಲಿನ ಸುಮಾರು ಹದಿನೈದು ಎಕರೆ ಪ್ರದೇಶಕ್ಕೆ ಬೆಂಕಿ ಆವರಿಸಿ ಸುಟ್ಟು ಕರಕಲಾಗಿದೆ. ಇದರಿಂದಾಗಿ ಅಪಾರ ನಷ್ಟ ಉಂಟಾಗಿದೆ. ಫಾರ್ಮನ ಆನೆಗುಂಡಿ ಭಾಗದಲ್ಲಿ ಕಾಣಿಸಿಕೊಂಡ

ಚಾಲಕನ ನಿಯಂತ್ರಣ ತಪ್ಪಿ ಮರಳು ಲಾರಿ ಅಪಘಾತ

ಮೂಡುಬಿದಿರೆ: ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ಮರಳು ತುಂಬಿಸಿಕೊಂಡು ಬರುತ್ತಿದ್ದ ಲಾರಿಯೊಂದು ರಸ್ತೆಯಲ್ಲಿ ಪಲ್ಟಿ ಹೊಡೆದು ಮರಕ್ಕೆ ಢಿಕ್ಕಿಯಾದ ಘಟನೆ ಮೂಡುಬಿದಿರೆ ತಾಲೂಕಿನ ಗಾಂಧಿನಗರದ ಬಳಿ ನಡೆದಿದೆ. ಮರಳು ತುಂಬಿಸಿಕೊಂಡು ವೇಗದಿಂದ ಬರುತ್ತಿದ್ದ ಲಾರಿ ಗಾಂಧಿನಗರದ ಬಳಿ ಚಾಲಕ ನಿಯಂತ್ರಣ ತಪ್ಪಿ ಬದಿಯಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆದಿದ್ದು, ಈ ಸಂದರ್ಭ ಮರಳು ಲಾರಿಯಿಂದ ರಸ್ತೆಗೆ ಚೆಲ್ಲಿದೆ. ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಯದಿಂದ ಪಾರಾಗಿದ್ದಾರೆ.

ಬಗಂಬಿಲ : ಬಿಜೆಪಿ-ಕಾಂಗ್ರೆಸ್ ಪಕ್ಷಗಳಿಂದ ಒಂದೇ ರಸ್ತೆಯ ಎರಡೆರಡು ಉದ್ಘಾಟನೆ

ಉಳ್ಳಾಲ: ಒಂದು ರಸ್ತೆ, ಒಂದೇ ಅನುದಾನ, ಆದರೆ ಉದ್ಘಾ ಟನೆ ಮಾತ್ರ ಎರಡು ದಿನ! ಹೀಗೊಂದು ವಿಲಕ್ಷಣ ಪ್ರಕರಣ ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು, ಬಿಜೆಪಿ-ಕಾಂಗ್ರೆಸ್ ನಡುವಿನ ರಸ್ತೆ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಕೋಟೆಕಾರ್ ಪಟ್ಟಣ ಪಂಚಾ ಯತ್ ವ್ಯಾಪ್ತಿಯಲ್ಲಿರುವ ಕುಂಪಲ ಬೈಪಾಸ್‌ನಿಂದ ಬಗಂಬಿಲ ಮೂಲಕ ಯೇನಪೋಯ ಆಸ್ಪತ್ರೆಯನ್ನು ಸಂಪರ್ಕಿಸುವ ರಸ್ತೆ ಬಹುತೇಕ ಕಾಂಕ್ರೀಟ್‌ನಿಂದ ಕೂಡಿದೆ. ಈ ರಸ್ತೆಗೆ ವಿವಿಧ ಹಂತದಲ್ಲಿ ಸರಕಾರದಿಂದ

ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ಭುಜಂಗ ಶೆಟ್ಟಿ ಅಂಗಡಿ ಮನೆ ಕೋಣ್ಕಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾಡಾ ಗ್ರಾಮದಲ್ಲಿ ನಡೆದಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಭುಜಂಗ ಶೆಟ್ಟಿ ಅವರಿಗೆ ವಿದ್ಯತ್ ಸ್ಮರ್ಶಿಸಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಶವವನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್‍ಐ

ವಕ್ಫ್ ಸಲಹಾ ಸಮಿತಿ ಅಧ್ಯಕ್ಷರಿಂದ ಅನುದಾನ ಬಿಡುಗಡೆಗೆ ಹಣದ ಬೇಡಿಕೆ: ಗುಲಾಂ ಮುಹಮ್ಮದ್ ಆರೋಪ

ಉಡುಪಿ ಜಿಲ್ಲೆಯ ವಕ್ಫ್ ಸಲಹಾ ಸಮಿತಿಯು ಮಸೀದಿಗಳ ಅನುದಾನ ಬಿಡುಗಡೆಗೆ ಶೇ. 20 ರಷ್ಟು ಮುಂಗಡವಾಗಿ ನಗದು ರೂಪದಲ್ಲಿ ನೀಡಬೇಕು ಎಂದು ಬೇಡಿಕೆ ಇಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಮಾಜಿ ಉಪಾಧ್ಯಕ್ಷ ಗುಲಾಂ ಮುಹಮ್ಮದ್ ಹೆಜಮಾಡಿ ಆರೋಪಿಸಿದ್ದಾರೆ.ಕಾಪು ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ವಕ್ಫ್ ಸಲಹಾ ಸಮಿತಿಯು ಜಿಲ್ಲೆಯಲ್ಲಿರುವ ಮಸೀದಿಗಳ ಮೂಲಸೌಕರ್ಯಗಳ ಅಭಿವೃದ್ಧಿಗೆ ಚಿಂತನೆ ನಡೆಸುವ ಮೂಲಕ