Home Posts tagged #vitla

ಬಾಲವಿಕಾಸದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ವಿಟ್ಲ : ಜನವರಿ 26 : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವದ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ ಶೆಟ್ಟಿ ಜೆ ಧ್ವಜಾರೋಹಣವನ್ನು ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಗಣ್ಯರು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ

*ವಿಟ್ಲ: ಮಹಾತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ: ಶ್ರೀದೇವರ ದರ್ಶನ ಬಲಿಸೇವೆ

ವಿಟ್ಲ: ಮಹಾತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ಇಂದು ಶ್ರೀ ಕ್ಷೇತ್ರದಲ್ಲಿ ದರ್ಶನ ಬಲಿಸೇವೆಯು ನಡೆಯಿತು. ಜನವರಿ 14 ರಂದು ಧ್ವಜರೋಹಣ ಮೂಲಕ ವರ್ಷಾವಧಿ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಗಿತ್ತು. ಅದೇ ದಿನ ರಾತ್ರಿ ಲಕ್ಷದೀಪೋತ್ಸವ, ಉತ್ಸವ ಬಲಿ, ಪ್ರತಿನಿತ್ಯ ರಾತ್ರಿ ನಿತ್ಯೋತ್ಸವ ನಡೆಯುತ್ತಿದೆ. 18ರಂದು ಕೇಪುನಿಂದ ಶ್ರೀ ಮಲರಾಯ ದೈವದ ಭಂಡಾರ ಆಗಮಿಸಿ, ರಾತ್ರಿ ಬಯ್ಯದ ಬಲಿ ನಡೆದಿದೆ. ಜ.20ರಂದು ಹೂತೇರು

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ- ಆರು ಮಂದಿಗೆ ಗಾಯ

ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಟಿ.ಟಿ ವಾಹನ ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಆರು ಮಂದಿ ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ. ಶಬರಿಮಲೆಯಿಂದ ವಿಟ್ಲ ರಸ್ತೆ ಮೂಲಕ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಚಂದಳಿಕೆ ಅಪಾಯಕಾರಿ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಟಿ.ಟಿ ವಾಹನದಲ್ಲಿದ್ದ ಆರು ಮಂದಿ ಮಾಲಾಧಾರಿಗಳು ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಉಜಿರೆ ನಿವಾಸಿಗಳೆಂದು ತಿಳಿದುಬಂದಿದೆ. ಶಬರಿಮಲೆ

ವಿಟ್ಲ: ಪಾಳು ಬಾವಿಗೆ ಬಿದ್ದ ನರಿಯ ರಕ್ಷಣೆ

ವಿಟ್ಲ: ಪುಣಚ ಸಮೀಪದ ತೋರಣಕಟ್ಟೆಯಲ್ಲಿ ಪಾಳು ಬಾವಿಯೊಂದಕ್ಕೆ ನರಿ ಬಿದ್ದಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳೀಯರ ನೆರವಿನೊಂದಿಗೆ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ನಿರುಪಯುಕ್ತವಾದ ಬಾವಿಯ ಒಳಗೆ ಆಹಾರ ಅರಸಿಕೊಂಡು ಬಂದ ನರಿ ಬಿದ್ದಿದ್ದು, ಅದರ ಕೂಗು ಕೇಳಿ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದಾರೆ. ಸಹಾಯಕ ವಲಯ ಅರಣ್ಯಾಧಿಕಾರಿ ಸೀತಾರಾಮ ನೇತೃತ್ವದಲ್ಲಿ ಸ್ಥಳೀಯ ನಿವಾಸಿ ವಾಮನ್ ನಾಯಕ್ ಎಂಬರು ಬಾವಿಗೆ ಇಳಿದು ನರಿಯನ್ನು ಗೋಣಿಗೆ

ವಿಟ್ಲ: ದ್ವಿಚಕ್ರ ವಾಹನ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ: ಆಟೋದಲ್ಲಿದ್ದ ಪ್ರಯಾಣಿಕ ಮೃತ್ಯು

ಸ್ಕೂಟಿ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ನಡೆದಿದೆ.ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟಿ ಮತ್ತು ಆಟೋರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ಆಟೋ ಪ್ರಯಾಣಿಕ ಪೆರುವೋಡಿ ನಿವಾಸಿ ನಾಗೇಶ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ

ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ. ಪುಣಚ ಚೆಕ್ಕುತ್ತಿ ನಿವಾಸಿ ಶ್ರೀ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಶ್ರೀ ಕೃಷ್ಣ ಸೆಂಟ್ರಿoಗ್ ಕೆಲಸ ನಿರ್ವಹಿಸುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಾರ್ಬಲ್‌ ತುಂಬಿಕೊಂಡಿದ್ದ ಲಾರಿ ಪಲ್ಟಿ : ನಾಲ್ಕು ಜನ ಗಂಭೀರ

ವಿಟ್ಲ: ಮಾರ್ಬಲ್‌ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿ ನಡೆದಿದೆ. ಲಾರಿ ಪಲ್ಟಿಯಾಗಿ ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದ್ದು, ಗಂಭೀರ ಗಾಯಗೊಂಡ ಗಾಯಾಳುಗಳನ್ನು ನಾಲ್ಕು ಆಂಬ್ಯುಲೆನ್ಸ್‌ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಾಯಾಳುಗಳನ್ನು ಉತ್ತರ ಭಾರತದ ಮೂಲದವರು ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿನೆ

ವಿಟ್ಲ : ಜನ್ಮದಿನೋತ್ಸವ, ಗ್ರಾಮೋತ್ಸವ-2023 ಗುರುವಂದನ-ಸೇವಾ ಸಂಭ್ರಮ

ತಾನು ಯಾರೆಂದು ಅರಿತು ಬಾಳಿದಾಗ ಅದು ನಿಜವಾದ ಬದುಕಾಗುತ್ತದೆ. ನಮ್ಮೊಳಗಿನ ಕೆಟ್ಟದ್ದನ್ನು ಬಿಡಬೇಕು. ಸಮಾಜದ ಋಣ ನಮ್ಮ ಮೇಲಿದೆ. ಅದನ್ನು ತೀರಿಸುವ ಕೆಲಸವಾಗಬೇಕು. ಹಿರಿಯರಿಗೆ ಗೌರವ ಕೊಡುವ ಮನಸ್ಸು ನಮ್ಮದಾಗಬೇಕು. ಸನಾತನವನ್ನು ಮರೆಯದಿರೋಣ. ಹಿರಿಯರನ್ನು ಮರೆತರೆ ಅಪಾಯ ಖಂಡಿತ. ಜನ್ಮದಿನೋತ್ಸವದ ಆಚರಣೆ ರಾಷ್ಟ್ರೋತ್ತಾನಕ್ಕೆ ಮುನ್ನುಡಿ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಆ.8ರಂದು ಒಡಿಯೂರು ಶ್ರೀ

ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ 5ನೇ ಆರೋಪಿಯ ಬಂಧನ

ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ 5ನೇ ಆರೋಪಿಯನ್ನು ವಿಟ್ಲ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಕೇರಳದ ಬಾಯಾರು ಬಳ್ಳೂರು ನಿವಾಸಿ ರಾಜ ಯಾನೆ ರಾಜೇಶ್(26) ಬಂಧಿತ ಆರೋಪಿಯಾಗಿದ್ದಾನೆ. ನೊಂದ ಯುವತಿ ಐದು ಮಂದಿಯ ಹೆಸರನ್ನು ಹೇಳಿದ್ದು, ಅಕ್ಷಯ್ ದೇವಾಡಿಗ, ಸುಕುಮಾರ ಬೆಳ್ಚಡ, ಜಯಪ್ರಕಾಶ್, ಮತ್ತು ಕಮಲಾಕ್ಷ ಎಂಬವರನ್ನು ಬಂಧಿಸಲಾಗಿತ್ತು. ತಲೆಮರೆಸಿಕೊಂಡಿದ್ದ ರಾಜನನ್ನು ಮಂಗಳವಾರ ಬಂಧಿಸಿದ್ದು, ಈ ಪ್ರಕರಣದಲ್ಲಿ ಒಟ್ಟು ಐದು

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಸರಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಶಾಂತ್ ಮೇಗಿನಪೇಟೆ ( 30) ಮೃತರು. ಕೌಟುಂಬಿಕ ಕಿರಿಕಿರಿ ಹಿನ್ನೆಲೆ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಮೃತರು ಪತ್ನಿ, ಮಗು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.